ಜುಲೈ ಮೂರನೇ ವಾರದಲ್ಲಿ ಕೇಂದ್ರ ಬಜೆಟ್ ಮಂಡನೆ ಸಾಧ್ಯತೆ

Date:

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಹಣಕಾಸು ಸಚಿವಾಲಯದ ಜವಾಬ್ದಾರಿಯನ್ನು ಬುಧವಾರ ವಹಿಸಿಕೊಂಡಿದ್ದು, ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಕೇಂದ್ರ ಬಜೆಟ್ 2024-2025ರ ಸಿದ್ಧತೆಯನ್ನು ಪ್ರಾರಂಭಿಸಲು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

- Advertisement -

ನಿಖರವಾದ ಯೋಜನೆ ಮತ್ತು ಸಮಗ್ರ ವಿಶ್ಲೇಷಣೆಯ ಅಗತ್ಯವನ್ನು ಒತ್ತಿ ಹೇಳಿದ ಕೇಂದ್ರ ವಿತ್ತ ಸಚಿವೆ ಬಜೆಟ್ ಸಿದ್ಧಪಡಿಸುವ ಪ್ರಕ್ರಿಯೆಯನ್ನು ಪ್ರಾರಂಭಿಸಲು ಅಧಿಕಾರಿಗೆ ನಿರ್ದೇಶಿಸಿದ್ದಾರೆ ಎಂದು ಎಎನ್‌ಐ ವರದಿ ಮಾಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬಿಯಾಂಡ್ ಬೆಂಗಳೂರು: ಡಿಜಿಟಲ್ ಆರ್ಥಿಕತೆಯಲ್ಲಿ ರಾಯಚೂರಿಗೆ ಸಿಗುವುದೇ ಪ್ರತ್ಯೇಕ...

ಕರ್ನಾಟಕದ ಅಭಿವೃದ್ಧಿ ಬೆಂಗಳೂರಿಗೆ ಮಾತ್ರ ಸೀಮಿತವಾಗದೆ ರಾಜ್ಯದ ವಿವಿಧ ನಗರಗಳಿಗೂ ತಲುಪಬೇಕು ಎಂಬ ಉದ್ದೇಶದಿಂದ ರಾಜ್ಯ ಸರ್ಕಾರದ ಕರ್ನಾಟಕ ಡಿಜಿಟಲ್ ಎಕಾನಮಿ ಮಿಷನ್ (KDEM) ‘Beyond Bengaluru’ ಯೋಜನೆಯನ್ನು ಜಾರಿಗೊಳಿಸಿದೆ. ಐಟಿ, ಐಟಿಇಎಸ್,...

ಸ್ಥಳೀಯ ಸಂಸ್ಥೆ ಚುನಾವಣೆ: ಆಕಾಂಕ್ಷಿಗಳ ಲೆಕ್ಕಾಚಾರ ತಲೆಕೆಳಗು, ಬಂಡಾಯದ...

ಜಿಲ್ಲಾ ಪಂಚಾಯತ್‌ ಮತ್ತು ತಾಲೂಕು ಪಂಚಾಯಿತಿ ಕ್ಷೇತ್ರಗಳ ಕರಡು ಮೀಸಲಾತಿ ಪ್ರಕಟವಾಗುತ್ತಿದ್ದಂತೆ ರಾಯಚೂರು ಜಿಲ್ಲೆಯಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣಾ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಮೀಸಲಾತಿ ಬದಲಾವಣೆಯಿಂದ ಕೆಲವರ ಸ್ಪರ್ಧೆಯ ಲೆಕ್ಕಾಚಾರ ತಲೆಕೆಳಗಾಗಿದ್ದರೆ, ಮತ್ತೊಂದೆಡೆ...

ಹೊಸ ಓದು | ನಟರಾಜ್ ಹುಳಿಯಾರ್ ಅವರ ‘ಡಾಕ್ಟರ್...

ಇತ್ತೀಚೆಗೆ ಲೋಕಾರ್ಪಣೆಗೊಂಡ ನಟರಾಜ್ ಹುಳಿಯಾರ್ ಅವರ 'ಡಾಕ್ಟರ್ ಸಾಹೇಬ್- ರಾಮಮನೋಹರ ಲೋಹಿಯಾ ಜೀವನಯಾನ' ಕೃತಿಯಿಂದ ಆಯ್ದ 'ಲೋಹಿಯಾ ಮತ್ತು ಕರ್ನಾಟಕ' ಅಧ್ಯಾಯ, ಭಾನುವಾರದ ವಿರಾಮದ ಓದಿಗಾಗಿ... 'ಮಾರ್ಕ್ಸ್, ಗಾಂಧಿ ಅಂಡ್ ಸೋಷಲಿಸಂ' ಪುಸ್ತಕಕ್ಕೆ ಮುನ್ನುಡಿ...

ಜುಲೈ ಮೂರನೇ ವಾರದಲ್ಲಿ ಕೇಂದ್ರ ಬಜೆಟ್ ಸಂಸತ್ತಿನಲ್ಲಿ ಮಂಡನೆಯಾಗುವ ಸಾಧ್ಯತೆ ಇದೆ. ಇದು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಮೂರನೇ ಅವಧಿಯ ಸರ್ಕಾರ ಅಧಿಕಾರ ಸ್ವೀಕರಿಸಿದ ಬಳಿಕ ಮಂಡಿಸಲಾಗುವ ಮೊದಲ ಬಜೆಟ್ ಆಗಿದೆ.


ಇದಲ್ಲದೆ, ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ನೇತೃತ್ವದ ಸರಕು ಮತ್ತು ಸೇವಾ ತೆರಿಗೆ (ಜಿಎಸ್‌ಟಿ) ಕೌನ್ಸಿಲ್‌ನ ಸಭೆಯು ಜೂನ್ 22ರಂದು ರಾಷ್ಟ್ರ ರಾಜಧಾನಿಯಲ್ಲಿ ನಡೆಯಲಿದೆ. ಕೊನೆಯದಾಗಿ 2023ರ ಅಕ್ಟೋಬರ್‌ನಲ್ಲಿ ಜಿಎಸ್‌ಟಿ ಕೌನ್ಸಿಲ್ ಸಭೆಯು ನಡೆದಿದೆ.

“ಜಿಎಸ್‌ಟಿ ಕೌನ್ಸಿಲ್‌ನ 53ನೇ ಸಭೆಯು ಜೂನ್ 22 ರಂದು ನವದೆಹಲಿಯಲ್ಲಿ ನಡೆಯಲಿದೆ” ಎಂದು ಜಿಎಸ್‌ಟಿ ಕೌನ್ಸಿಲ್‌ನ ಅಧಿಕೃತ ಎಕ್ಸ್ ಹ್ಯಾಂಡಲ್‌ನಲ್ಲಿ ಗುರುವಾರ ಪೋಸ್ಟ್ ಮಾಡಲಾಗಿದೆ.

ಎಂದಿನಂತೆ ಈ ಜಿಎಸ್‌ಟಿ ಕೌನ್ಸಿಲ್‌ನ 53ನೇ ಸಭೆಯ ಅಧ್ಯಕ್ಷತೆಯನ್ನು ಕೂಡಾ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ವಹಿಸಿಕೊಳ್ಳಲಿದ್ದಾರೆ. ಎಲ್ಲ ರಾಜ್ಯಗಳ ಹಣಕಾಸು ಸಚಿವರುಗಳು ಈ ಸಭೆಯಲ್ಲಿ ಭಾಗಿಯಾಗಲಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಆತ್ಮಹತ್ಯೆ ಪ್ರಕರಣ: ರಾಖಿ ಸಾವಂತ್ ವಿರುದ್ಧ ಜಾಮೀನು ರಹಿತ ವಾರೆಂಟ್ ಜಾರಿ

ಬಾಲಿವುಡ್ ನಟಿ ರಾಖಿ ಸಾವಂತ್‌ಗೆ ಮತ್ತೊಮ್ಮೆ ಕಾನೂನು ಸಂಕಷ್ಟ ಎದುರಾಗಿದೆ. 2010ರ...

ರಷ್ಯಾದ ಇಂಧನದಿಂದ ಭಾರತ ದೂರ ಸರಿಯುವುದು ಅಸಾಧ್ಯ: ಅಮೆರಿಕ

ರಷ್ಯಾದ ತೈಲ ಖರೀದಿಸುವ ರಾಷ್ಟ್ರಗಳ ಮೇಲಿನ ದಿಗ್ಬಂಧನ ಮತ್ತು ಆಮದು ಸುಂಕದ...

ಫುಟ್‌ಪಾತ್ ನಿರ್ಮಿಸದಿದ್ರೆ, ನಾವೇ ಧರಣಿ‌ ಕೂರ್ತೀವಿ; BJP ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ವಾರ್ನಿಂಗ್!

ದೆಹಲಿ ಹೈಕೋರ್ಟ್ ಮತ್ತು ಸುಪ್ರೀಂ ಕೋರ್ಟ್ ಸಮೀಪದ ಮಥುರಾ ರಸ್ತೆಯಲ್ಲಿ ಪಾದಚಾರಿಗಳು...