ಕೇಂದ್ರ ಬಜೆಟ್ | ತೆರಿಗೆ ಬದಲಾವಣೆ ಘೋಷಿಸುತ್ತಾರಾ ನಿರ್ಮಲಾ ಸೀತಾರಾಮನ್?

Date:

ಉದ್ಯೋಗ ಮತ್ತು ಬೆಲೆ ಏರಿಕೆ ಕುರಿತು ಪ್ರತಿಪಕ್ಷಗಳ ಕಠಿಣ ಪ್ರಶ್ನೆಗಳ ನಡುವೆ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಂಗಳವಾರ ಮೋದಿ 3.0ರ ಮೊದಲ ಕೇಂದ್ರ ಬಜೆಟ್ ಅನ್ನು ಮಂಡಿಸಲಿದ್ದಾರೆ. ಈಗಾಗಲೇ 2025ರ ಆರ್ಥಿಕ ವರ್ಷದಲ್ಲಿ ಶೇಕಡ 6.5-7 ಬೆಳವಣಿಗೆಯನ್ನು ಬಜೆಟ್ ಪೂರ್ವ ಆರ್ಥಿಕ ಸಮೀಕ್ಷೆಯು ಮುನ್ಸೂಚನೆ ನೀಡಿದೆ.

- Advertisement -

ನಿರ್ಮಲಾ ಸೀತಾರಾಮನ್ ಅವರ ಏಳನೇ ಕೇಂದ್ರ ಬಜೆಟ್ ಇದಾಗಿದ್ದು, ಹೊಸ ಉತ್ಪಾದನಾ ಸೌಲಭ್ಯಗಳಿಗೆ ತೆರಿಗೆ ಪ್ರೋತ್ಸಾಹವನ್ನು ನೀಡುವ ಸಾಧ್ಯತೆಯಿದೆ. ನಿರುದ್ಯೋಗ ಹೆಚ್ಚಳದಿಂದಾಗಿ ವಿಪಕ್ಷಗಳ ವಾಗ್ದಾಳಿಗೆ ಗುರಿಯಾಗುತ್ತಿರುವ ಕೇಂದ್ರ ಸರ್ಕಾರ ಈ ಬಾರಿಯಾದರೂ ಉದ್ಯೋಗ ಸೃಷ್ಟಿ ಕಡೆ ಹೆಚ್ಚಿನ ಗಮನ ಹರಿಸುವುದು ಅನಿವಾರ್ಯವಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಅಸ್ಸಾಂ, ಬಿಹಾರ ಕತ್ತಲಲ್ಲಿ ಮುಳುಗಿದಾಗ ಮೋದಿಗೆ ‘ಆಶೀರ್ವಾದ್ ಕಾ...

ದೆಹಲಿಯಲ್ಲಿ ಕಟ್ಟಡ ಕುಸಿದು ವಿದ್ಯಾರ್ಥಿಗಳು ಹೆಣವಾದಾಗ, ಪ್ರಶ್ನೆ ಪತ್ರಿಕೆ ಸೋರಿಕೆಯಿಂದ ಆಘಾತಗೊಂಡು ಎಳೆ ಜೀವಗಳು ಸಾವಿನ ದಾರಿ ಹಿಡಿದಾಗ, ತಮ್ಮ ಹಕ್ಕುಗಳಿಗಾಗಿ ದೇಶದ ಯುವಜನ ಬೀದಿಗಿಳಿದಾಗ, ಕೊನೆಗೆ ನೈಸರ್ಗಿಕ ವಿಕೋಪದಿಂದ ದೇಶದ ಜನ...

ಚುನಾವಣಾ ಕಳ್ಳತನ: ಎದುರಾಳಿಗಳೇ ಮಾಯವಾದರೆ! ನಂದಿಗ್ರಾಮದ ಟ್ರೇಲರ್ –...

ಮತದಾನಕ್ಕೂ ಮುನ್ನ ಎದುರಾಳಿಯೇ ಕಣದಿಂದ ಮಾಯವಾದರೆ, ಅದನ್ನು ಚುನಾವಣೆ ಎನ್ನಬಹುದೇ? ನಂದಿಗ್ರಾಮದ ಬೆಳವಣಿಗೆಗಳು 2027ರ ಉತ್ತರ ಪ್ರದೇಶ ಚುನಾವಣೆಗೂ ಗಂಭೀರ ಸವಾಲು ಒಡ್ಡುವಂತಿವೆ ಪಶ್ಚಿಮ ಬಂಗಾಳದ ನಂದಿಗ್ರಾಮ ವಿಧಾನಸಭಾ ಕ್ಷೇತ್ರಕ್ಕೆ ಉಪಚುನಾವಣೆ ನಡೆಯುತ್ತಿದೆ. ನಂದಿಗ್ರಾಮದ...

ಡಿಜಿಟಲ್ ಇಂಡಿಯಾಕ್ಕೆ ಹಿನ್ನಡೆ; ಮೋದಿ ನೀತಿಯಿಂದ ಮತ್ತೆ ನಗದಿನತ್ತ...

ಸರ್ಕಾರದ ಈ ನಿರ್ಧಾರ ಜನಸಾಮಾನ್ಯರಿಗೆ ಎಷ್ಟು ಕಿರಿಕಿರಿ ಉಂಟುಮಾಡಿದೆ ಎಂಬುದನ್ನು 'ಲೋಕಲ್ ಸರ್ಕಲ್ಸ್' (Local Circles) ನಡೆಸಿದ 32,000ಕ್ಕೂ ಹೆಚ್ಚು ಜನರ ಸಮೀಕ್ಷೆ ಬಟಾಬಯಲು ಮಾಡಿದೆ. ಸಮೀಕ್ಷೆಯ ಪ್ರಕಾರ, ಕೇವಲ ಶೇ.17ರಷ್ಟು ವರ್ತಕರು...

ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಬಿಜೆಪಿಯು ಲೋಕಸಭೆ ಚುನಾವಣೆಯಲ್ಲಿ ಸ್ವಂತವಾಗಿ ಬಹುಮತವನ್ನು ಗಳಿಸಲು ವಿಫಲವಾಗಿ, ಮಿತ್ರಪಕ್ಷಗಳ ಬೆಂಬಲದಿಂದ ಎನ್‌ಡಿಎ ಸರ್ಕಾರವನ್ನು ರಚಿಸಬೇಕಾಯಿತು. ಬಿಜೆಪಿ ಬಹುಮತವೂ ಕೂಡಾ ಲಭಿಸದಿರಲೂ ಪ್ರಮುಖ ಕಾರಣ ಜನರಲ್ಲಿ ಉದ್ಯೋಗಾವಕಾಶ ವಿಚಾರದಲ್ಲಿ ಬಿಜೆಪಿಯೊಂದಿಗಿರುವ ಅಸಮಾಧಾನವಾಗಿದೆ ಎಂದು ಹಲವಾರು ಸಮೀಕ್ಷಾ ವರದಿಗಳು ಹೇಳಿದೆ.

ಇದನ್ನು ಓದಿದ್ದೀರಾ?   ಕೇಂದ್ರ ಬಜೆಟ್ | ‘ಎಕನಾಮಿಕ್ ಸರ್ವೇ’ ಗಾಳಿ ಬಂದತ್ತ ತೂರಿಕೊಳ್ಳುವ ಪ್ಲಾನ್ ಇರಬಹುದೇ?

ಈ ನಡುವೆ ಸೀತಾರಾಮನ್ ಅವರು ಮಧ್ಯಮ ವರ್ಗದವರಿಗೆ ತೆರಿಗೆ ವಿನಾಯಿತಿಯನ್ನು ಘೋಷಿಸುತ್ತಾರೆಯೇ? ಈ ಮೂಲಕ ಮಧ್ಯಮ ವರ್ಗವನ್ನು ಸೆಳೆಯುವ ಪ್ರಯತ್ನ ಮಾಡುತ್ತಾರೆಯೇ ಎಂದು ಕಾದುನೋಡಬೇಕಿದೆ.

ಚುನಾವಣಾ ಪೂರ್ವ ಮಧ್ಯಂತರ ಬಜೆಟ್‌ನಲ್ಲಿ ಚುನಾವಣೆ ಸಮೀಪವಿರುವ ಕಾರಣ ಮಧ್ಯಮ ವರ್ಗಕ್ಕೆ ತಕ್ಕುದಾದ ಬಜೆಟ್ ಇರಲಿದೆ ಎಂಬ ಭರವಸೆಯಿತ್ತು. ಆದರೆ ಕೇಂದ್ರ ಸರ್ಕಾರ ಈ ಭರವಸೆಯನ್ನು ಹುಸಿಗೊಳಿಸಿತ್ತು. ಮಧ್ಯಂತರ ಬಜೆಟ್‌ನಲ್ಲಿ ಮಧ್ಯಮ ವರ್ಗಕ್ಕೆ ಯಾವುದೇ ಲಾಭ ಉಂಟಾಗುವ ಬದಲಾವಣೆ ಘೋಷಿಸಲಾಗಿಲ್ಲ. ಇದು ಮಧ್ಯಮ ವರ್ಗದ ಜನರಲ್ಲಿ ಅಸಮಾಧಾನ ಉಂಟು ಮಾಡಿರುವುದು ಅಲ್ಲಗಳೆಯುವಂತಿಲ್ಲ.

ಕೇಂದ್ರ ಬಜೆಟ್ 2024 ಜುಲೈ 30ರಂದು ಅಂಗೀಕಾರವಾಗುವ ಸಾಧ್ಯತೆಯಿದೆ. ವಿರೋಧ ಪಕ್ಷದ ನಾಯಕರು ಈಗಾಗಲೇ ಬೆಲೆ ಏರಿಕೆ, ನಿರುದ್ಯೋಗ, ಪ್ರಮುಖ ಕ್ಷೇತ್ರಗಳಲ್ಲಿನ ಬೆಳವಣಿಗೆಯ ಕೊರತೆ ಮತ್ತು ಕೃಷಿ ಸಂಕಷ್ಟದ ಪ್ರಸ್ತಾಪ ಮಾಡಿ ಸರ್ಕಾರವನ್ನು ಮೂಲೆಗುಂಪು ಮಾಡಲು ನಿರ್ಧರಿಸಿದ್ದಾರೆ.

?s=150&d=mp&r=g
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಸ್ತುವನ್ನು ಸುಡುವುದರಿಂದಷ್ಟೇ ‘ಚರಸ್’ ಎಂದು ಸಾಬೀತುಪಡಿಸಲಾಗದು: 22 ವರ್ಷಗಳ ಬಳಿಕ ಇಬ್ಬರು ಖುಲಾಸೆ

ವಶಪಡಿಸಿಕೊಂಡ ವಸ್ತುವಿನ ಒಂದು ಸಣ್ಣ ಭಾಗವನ್ನು ಸುಟ್ಟು ನೋಡುವುದರಿಂದ ಮಾತ್ರವೇ ಅದು...

ಲಕ್ಷ್ಮಣ್ @ 89: ‘ಅಚಲ’ ಆಶಾವಾದಿ – ಹಸಿರು ಕಾವಲುಗಾರನ ಕಥನ

89ನೇ ವಸಂತಕ್ಕೆ ಕಾಲಿಡುತ್ತಿರುವ ಎ.ಸಿ. ಲಕ್ಷ್ಮಣ್ ಅವರು ಭರವಸೆ ಮತ್ತು ಆಶಾವಾದದ...

ವಲಸೆ ತಡೆಗೆ ‘ರುದ್ರಾಕ್ಷಿ ಕೃಷಿ’ ಯೋಜನೆಗೆ ಮುಂದಾದ ಉತ್ತರಾಖಂಡ ಸರ್ಕಾರ; 1.5 ಲಕ್ಷ ಉದ್ಯೋಗ ಸೃಷ್ಟಿ ಸಾಧ್ಯವೇ?

ಉತ್ತರಾಖಂಡದ ಗುಡ್ಡಗಾಡು ಪ್ರದೇಶಗಳಿಂದ ಜನರು ನೌಕರಿ ಮತ್ತು ಜೀವನೋಪಾಯ ಅರಸಿ ನಗರಗಳಿಗೆ...