ಭಾನುವಾರ ಕೇಂದ್ರ ಬಜೆಟ್ ಮಂಡನೆ; ಇತಿಹಾಸದಲ್ಲಿ ಇದೇ ಮೊದಲು!

Date:

ಆರ್ಥಿಕ ವರ್ಷ 2026-27ರ ಕೇಂದ್ರ ಬಜೆಟ್‌ಅನ್ನು ಫೆಬ್ರವರಿ 1ರಂದು ಮಂಡನೆ ಮಾಡಲು ಕೇಂದ್ರ ಸರ್ಕಾರ ನಿರ್ಧರಿಸಿದೆ ಎಂದು ವರದಿಯಾಗಿದೆ. ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಬಜೆಟ್‌ಅನ್ನು ಭಾನುವಾರ ಮಂಡಿಸಲಾಗುತ್ತಿದೆ.

- Advertisement -

ಜನವರಿ 28ರಂದು ರಾಷ್ಟ್ರಪತಿ ಅವರು ಸಂಸತ್ತಿನ ಉಭಯ ಸದನಗಳನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಅವರ ಭಾಷಣದೊಂದಿಗೆ ಬಜೆಟ್‌ ಅಧಿವೇಶನ ಆರಂಭವಾಗಲಿದೆ. ಫೆಬ್ರವರಿ 1ರಂದು ಬಜೆಟ್‌ ಮಂಡನೆಯಾಗುವ ಕುರಿತು ಚರ್ಚೆಗಳು ನಡೆಯುತ್ತಿವೆ. ಇಂದು (ಬುಧವಾರ) ನಡೆಯಲಿರುವ ಸಂಪುಟ ಸಮಿತಿಯು ಅಂತಿಮ ನಿರ್ಧಾರ ತೆಗೆದುಕೊಳ್ಳಲಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

2017ರಿಂದ ಫೆಬ್ರವರಿ 1ರಂದು ಬಜೆಟ್‌ ಮಂಡಿಸುವುದನ್ನು ಕೇಂದ್ರ ಸರ್ಕಾರವು ವಾಡಿಕೆಯಾಗಿ ಮಾಡಿಕೊಂಡಿದೆ. ಹೀಗಾಗಿ, ಈ ಬಾರಿಯೂ ಫೆಬ್ರವರಿ 1ರಂದೇ ಬಜೆಟ್ ಮಂಡನೆಗೆ ನಿರ್ಧರಿಸುವ ಸಾಧ್ಯತೆ ಇದೆ. ಅಂದೇ ಬಜೆಟ್‌ ಮಂಡಿಸುವುದು ಅಂತಿಮವಾದರೆ, ಇದೇ ಮೊದಲ ಬಾರಿಗೆ ಭಾನುವಾರ ಬಜೆಟ್‌ ಮಂಡನೆಯಾಗಲಿದೆ.

ಈ ಬಾರಿಯ ಬಜೆಟ್‌ ಅಧಿವೇಶನವು ಮೂರು ವಾರಗಳ ಕಾಲ ನಡೆಯಲಿದ್ದು, ಜನವರಿ 28ರಂದು ರಾಷ್ಟ್ರಪತಿ ಭಾಷಣ, ಜನವರಿ 29ರಂದು ಆರ್ಥಿಕ ಸಮೀಕ್ಷೆ ಪ್ರಕಟ, ಜನವರಿ 30 ಮತ್ತು 31 ರಜಾದಿನ, ಫೆಬ್ರವರಿ 1ರಂದು ಬಜೆಟ್‌ ಮಂಡನೆಗೆ ನಿರ್ಧರಿಸಲಾಗುತ್ತಿದೆ ಎಂದು ವರದಿಯಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅ. 10ರ ಜಂತರ್ ಮಂತರ್ ಪ್ರತಿಭಟನೆಗೆ ಅನುಮತಿ ನಿರಾಕರಿಸಿದ ದೆಹಲಿ ಪೊಲೀಸ್; ಕಠಿಣ ಕ್ರಮದ ಎಚ್ಚರಿಕೆ

ಮುಖ್ಯ ಚುನಾವಣಾ ಆಯುಕ್ತರ (CEC) ಹೊಣೆಗಾರಿಕೆ ಪ್ರಶ್ನಿಸಿ 'ಕಾಕ್ರೋಚ್ ಜನತಾ ಪಾರ್ಟಿ'...

ಪಂಜಾಬ್ ಸಿಎಂ ಕಚೇರಿ ಭ್ರಷ್ಟಾಚಾರದ ಸಿಬಿಐ ತನಿಖೆ ವಿಚಾರಣೆಯಿಂದ ಹಿಂದೆ ಸರಿದ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ

ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಅವರ ಕಚೇರಿಗೆ ಸಂಬಂಧಿಸಿದ ಭ್ರಷ್ಟಾಚಾರದ ಆರೋಪಗಳ...

ಪಶ್ಚಿಮ ಬಂಗಾಳ ಉಪಚುನಾವಣೆ ವೇಳೆ ಅಕ್ರಮದ ಆರೋಪ; ಮರುಮತದಾನಕ್ಕೆ ವಿಪಕ್ಷಗಳ ಆಗ್ರಹ

ಪಶ್ಚಿಮ ಬಂಗಾಳದ ನಂದಿಗ್ರಾಮ ಮತ್ತು ರೇಜಿನಗರ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯ ಮತ...