ಕೇಂದ್ರ ಸಂಪುಟ ಪುನಾರಚನೆ ಕಸರತ್ತು ಚುರುಕು: ದೆಹಲಿಯಲ್ಲಿ ಮೋಶಾ ಸಮಾಲೋಚನೆ

Date:

ಸಂಸತ್ತಿನ ಮುಂಗಾರು ಅಧಿವೇಶನ ಆರಂಭಕ್ಕೆ ದಿನಗಣನೆ ಬಾಕಿ ಇರುವಂತೆಯೇ, ರಾಜಧಾನಿ ದೆಹಲಿಯಲ್ಲಿ ಕೇಂದ್ರ ಸಚಿವ ಸಂಪುಟ ಪುನಾರಚನೆಯ ಮತ್ತು ಬಿಜೆಪಿಯಲ್ಲಿ ಸಾಂಸ್ಥಿಕ ಬದಲಾವಣೆಯ ಮಹತ್ವದ ರಾಜಕೀಯ ಬೆಳವಣಿಗೆಗಳು ತೆರೆಮರೆಯಲ್ಲಿ ವೇಗ ಪಡೆದುಕೊಂಡಿವೆ. ಮುಂಬರುವ ಪ್ರಮುಖ ರಾಜ್ಯಗಳ ವಿಧಾನಸಭಾ ಚುನಾವಣೆಗಳು ಹಾಗೂ ಸರ್ಕಾರದ ಮುಂದಿನ ಆಡಳಿತಾತ್ಮಕ ಕಾರ್ಯತಂತ್ರವನ್ನು ಗಮನದಲ್ಲಿಟ್ಟುಕೊಂಡು ಈ ಕಸರತ್ತು ನಡೆಸಲಾಗುತ್ತಿದೆ.

- Advertisement -

ಬುಧವಾರ ದೆಹಲಿಯಲ್ಲಿ ಹಿರಿಯ ನಾಯಕರ ದೀರ್ಘಾವಧಿಯ ಸಮಾಲೋಚನಾ ಸಭೆ ನಡೆದಿದೆ. ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ನಡೆದ ಈ ಉನ್ನತ ಮಟ್ಟದ ಸಭೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ, ಬಿಜೆಪಿಯ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಹಾಗೂ ಪಕ್ಷದ ನೂತನ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್ ಪಾಲ್ಗೊಂಡಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಲೈಂಗಿಕ ಕಿರುಕುಳ ಆರೋಪಕ್ಕೆ ಜಾತಿದೌರ್ಜನ್ಯ ಗುರಾಣಿಯೇ? ಸಂತ್ರಸ್ತೆಯ ವಿರುದ್ಧ...

ಸಿಇಸಿ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್ ಸಮೀಪ ನಡೆದ ಪ್ರತಿಭಟನೆಯಲ್ಲಿ ಮೂವರು ಮಹಿಳಾ ಪತ್ರಕರ್ತೆಯರಿಗೆ ಲೈಂಗಿಕ ಕಿರುಕುಳ ನೀಡಿದ ಗಂಭೀರ ಆರೋಪ ಎದುರಿಸುತ್ತಿರುವ ದೆಹಲಿ ಪೊಲೀಸ್ ಸಹಾಯಕ ಆಯುಕ್ತ (ಎಸಿಪಿ)...

ಚಿಕ್ಕಬಳ್ಳಾಪುರ ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಫೋಟ: ಶಾಸಕ ಪ್ರದೀಪ್ ಈಶ್ವರ್...

ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರು ತಾವು ರಾಜಕೀಯಕ್ಕೆ ಬರಲು ಮತ್ತು ಟಿಕೆಟ್ ಪಡೆಯಲು ಚಿಂತಾಮಣಿ ಶಾಸಕ ಹಾಗೂ ಮಾಜಿ ಸಚಿವ ಡಾ. ಎಂ.ಸಿ. ಸುಧಾಕರ್ ಅವರೇ ಕಾರಣ ಎಂದು ಬಹಿರಂಗವಾಗಿ ಹಲವಾರು...

ಬೆವರಿನ ಹಣಕ್ಕೆ ಮೋದಿ ಸರ್ಕಾರದ ಕಂಟಕ: ಹೊಸ ಪಿಎಫ್...

ತಮ್ಮದೇ ಬೆವರಿನ ಗಳಿಕೆ, ತುರ್ತು ಬದುಕಿನ ಆಸರೆ ಪಿಎಫ್. ಆದರೆ ಇಂದು ಆ ಹಣವನ್ನು ಪಡೆಯಲಾಗದೆ ಗಾರ್ಮೆಂಟ್ಸ್ ಕಾರ್ಮಿಕರು ಕಣ್ಣೀರು ಹಾಕುವಂತಾಗಿದೆ. ಬಟ್ಟೆ ಕಾರ್ಖಾನೆಗಳ ಶ್ರಮಿಕರ ಬದುಕಿಗೆ ಕೇಂದ್ರದ ಮೋದಿ ಸರ್ಕಾರದ ಹೊಸ...

ಇದನ್ನೂ ಓದಿ: ‘ಒಂದು ದೇಶ- ಒಂದು ಚುನಾವಣೆ’ಗೆ ಕೇಂದ್ರ ಸಚಿವ ಸಂಪುಟ ಅಸ್ತು

ಪ್ರಸ್ತುತ ಹಲವು ಪ್ರಮುಖ ಖಾತೆಗಳನ್ನು ನಿಭಾಯಿಸುತ್ತಿರುವ ಹಿರಿಯ ಸಚಿವರ ಮೇಲಿನ ಹೊರೆಯನ್ನು ತಗ್ಗಿಸಿ, ಸಚಿವ ಸಂಪುಟದಲ್ಲಿ ಯುವ ನಾಯಕರಿಗೆ ಹೆಚ್ಚಿನ ಪ್ರಾತಿನಿಧ್ಯ ನೀಡಿ ಯುವ ಮತದಾರರನ್ನು ಸೆಳೆಯುವ ತಂತ್ರ ಇರುವಂತೆ ತೋರುತ್ತಿದೆ. ಒಂದಕ್ಕಿಂತ ಹೆಚ್ಚು ಮಹತ್ವದ ಖಾತೆಗಳನ್ನು ಹೊಂದಿರುವ ಸಚಿವರಿಂದ ಕೆಲವು ಜವಾಬ್ದಾರಿಗಳನ್ನು ಹಿಂಪಡೆದು, ಹೊಸ ಮುಖಗಳಿಗೆ ಹಂಚಿಕೆ ಮಾಡಲು ಸಭೆಯಲ್ಲಿ ಚರ್ಚಿಸಲಾಗಿದೆ ಎಂದೂ ವರದಿಯಾಗಿದೆ.

ಮುಖ್ಯವಾಗಿ ಮುಂಬರುವ ದಿನಗಳಲ್ಲಿ ಚುನಾವಣೆ ಎದುರಿಸಲಿರುವ ರಾಜ್ಯಗಳಿಗೆ ಕೇಂದ್ರ ಸಂಪುಟದಲ್ಲಿ ಸೂಕ್ತ ಆದ್ಯತೆ ಮತ್ತು ಹೆಚ್ಚಿನ ಪ್ರಾತಿನಿಧ್ಯ ನೀಡುವ ಕುರಿತು ನಾಯಕರು ಸುದೀರ್ಘ ಚರ್ಚೆ ನಡೆಸಿದ್ದಾರೆ.

ಬಿಜೆಪಿಯ ನೂತನ ರಾಷ್ಟ್ರೀಯ ಅಧ್ಯಕ್ಷರಾಗಿ ನಿತಿನ್ ನಬಿನ್ ಅವರು ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಈ ಸಭೆ ನಡೆದಿರುವುದು ಭಾರೀ ಕುತೂಹಲ ಮೂಡಿಸಿದೆ. ಕೇವಲ ಸರ್ಕಾರದ ಸಚಿವ ಸಂಪುಟ ಮಾತ್ರವಲ್ಲದೆ, ಪಕ್ಷದ ರಾಷ್ಟ್ರೀಯ ಸಾಂಸ್ಥಿಕ ಮಟ್ಟದಲ್ಲೂ ಪ್ರಮುಖ ಬದಲಾವಣೆಗಳನ್ನು ತರಲು ನಾಯಕರು ರೂಪುರೇಷೆ ಸಿದ್ಧಪಡಿಸಿದ್ದಾರೆ ಎಂದು ಹೇಳಲಾಗಿದೆ. ಸರ್ಕಾರದಲ್ಲಿ ಸುದೀರ್ಘ ಕಾಲ ಸೇವೆ ಸಲ್ಲಿಸಿದ ಕೆಲವು ಹಿರಿಯ ಸಚಿವರಿಗೆ ಬಿಜೆಪಿಯ ಸಂಘಟನಾ ಜವಾಬ್ದಾರಿಗಳಿಗೆ ಬಳಸಿಕೊಳ್ಳುವ ಸಾಧ್ಯತೆಗಳೂ ದಟ್ಟವಾಗಿವೆ.

ಇದೇ ವೇಳೆ ಪ್ರಧಾನಿ ನರೇಂದ್ರ ಮೋದಿ ಹಾಗೂ ಗೃಹ ಸಚಿವ ಅಮಿತ್ ಶಾ ಅವರು ಇತ್ತೀಚೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿರುವುದು ಸಂಪುಟ ಪುನಾರಚನೆಯ ವದಂತಿಗಳಿಗೆ ಮತ್ತಷ್ಟು ಪುಷ್ಟಿ ನೀಡಿದೆ. ವಿವಿಧ ರಾಜ್ಯಗಳ ರಾಜಕೀಯ ಲೆಕ್ಕಾಚಾರಗಳು, ಪಕ್ಷದ ಆಡಳಿತಾತ್ಮಕ ಸುಧಾರಣೆಗಳು ಹಾಗೂ ಮುಂದಿನ ಸಾರ್ವತ್ರಿಕ ಚುನಾವಣೆಯ ದೃಷ್ಟಿಯಿಂದ ಈ ಬಾರಿಯ ‘ಟೀಮ್ ಮೋದಿ’ ಪುನಾರಚನೆ ಅತ್ಯಂತ ನಿರ್ಣಾಯಕ ಎನ್ನಲಾಗುತ್ತಿದ್ದು, ಶೀಘ್ರದಲ್ಲೇ ಅಂತಿಮ ಪಟ್ಟಿ ಹೊರಬೀಳುವ ನಿರೀಕ್ಷೆಯಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಐಡಿಬಿಐ ಬ್ಯಾಂಕ್ ಮಾರಾಟಕ್ಕೆ ಕೇಂದ್ರ ಸಂಪುಟ ಅಸ್ತು: ₹52,878 ಕೋಟಿಗೆ ಫೇರ್‌ಫ್ಯಾಕ್ಸ್ ತೆಕ್ಕೆಗೆ

ಐಡಿಬಿಐ (IDBI) ಬ್ಯಾಂಕ್‌ನ ‘ಕಾರ್ಯತಂತ್ರದ ಪುನರ್‌ರಚನೆ’ಗೆ (Strategic Restructuring) ಕೇಂದ್ರ ಸಚಿವ...

ಬೀದರ್‌ | ಜಿಪಂ, ತಾಪಂ ಚುನಾವಣೆ: ಸಾಮಾಜಿಕ ಜಾಲತಾಣದಲ್ಲಿ ಆಕಾಂಕ್ಷಿಗಳ ಪ್ರಚಾರ ಜೋರು!

ರಾಜ್ಯದಲ್ಲಿ ಜಿಲ್ಲಾ ಹಾಗೂ ತಾಲ್ಲೂಕು ಪಂಚಾಯಿತಿ ಕ್ಷೇತ್ರವಾರು ಮೀಸಲಾತಿ ಪ್ರಕಟವಾಗುತ್ತಿದ್ದಂತೆ, ಬೀದರ್‌...

ಸಿಜೆಪಿ ನಾಯಕರ ಬಂಧನಕ್ಕೆ ತೀವ್ರ ಖಂಡನೆ: ತಕ್ಷಣ ರಾಂಕಾ, ಸೌರವ್ ಬಿಡುಗಡೆಗೆ ವಿಪಕ್ಷಗಳ ಆಗ್ರಹ

ಏಕಪಕ್ಷೀಯ ನಿರ್ಧಾರ ಕೈಗೊಂಡ ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್...

ಪತಿಯನ್ನು ಕೊಂದು ಕಾಂಕ್ರೀಟ್ ಡ್ರಮ್‌ನಲ್ಲಿ ಹೂತಿಟ್ಟ ಪ್ರಕರಣ: ಪತ್ನಿ, ಪ್ರಿಯಕರನಿಗೆ ಗಲ್ಲು ಶಿಕ್ಷೆ

ಮರ್ಚೆಂಟ್ ನೇವಿ ಅಧಿಕಾರಿ ಸೌರಭ್ ರಜಪೂತ್ ಅವರನ್ನು ಬರ್ಬರವಾಗಿ ಹತ್ಯೆಗೈದು, ಮೃತದೇಹವನ್ನು...