ಕೇಂದ್ರ ಸಚಿವ ಸಂಪುಟ ಪುನರ್‍ರಚನೆ: ನಿರ್ಮಲಾ ಔಟ್, ಶಕ್ತಿಕಾಂತ್ ಇನ್?

Date:

ಕೇಂದ್ರ ಸಚಿವ ಸಂಪುಟ ಪುನರ್‌ರಚನೆಯಾಗಲಿದೆ, ಬಿಜೆಪಿಯಲ್ಲಿ ಸಾಂಸ್ಥಿಕ ರಚನೆಯಲ್ಲಿ ಭಾರಿ ಬದಲಾವಣೆಗಳು ನಡೆಯಲಿವೆ ಎಂಬ ಚರ್ಚೆಗಳು ರಾಜಕೀಯ ವಲಯದಲ್ಲಿ ತೀವ್ರಗೊಂಡಿವೆ. ರಾಜಕೀಯ ಮೂಲಗಳ ಪ್ರಕಾರ, ಸಂಸತ್ತಿನ ಮುಂಬರುವ ಮಳೆಗಾಲದ ಅಧಿವೇಶನಕ್ಕೂ ಮುನ್ನವೇ ಕೇಂದ್ರ ಸಚಿವ ಸಂಪುಟ ಪುನರ್‌ರಚನೆ ಪ್ರಕ್ರಿಯೆ ಅಧಿಕೃತವಾಗಿ ನಡೆಯುವ ಸಾಧ್ಯತೆ ಇದೆ ಎನ್ನಲಾಗಿದೆ.

- Advertisement -

ಸಂಪುಟ ಪುನರ್‌ರಚನೆಯಾದರೆ, ಕೇಂದ್ರ ಹಣಕಾಸು ಖಾತೆಯನ್ನು ನಿರ್ಮಲಾ ಸೀತಾರಾಮನ್‌ ಅವರಿಂದ ಕಸಿದುಕೊಂಡು, ಆ ಖಾತೆಗೆ ಭಾರತೀಯ ರಿಸರ್ವ್ ಬ್ಯಾಂಕ್‌ (RBI) ಮಾಜಿ ಗವರ್ನರ್ ಶಕ್ತಿಕಾಂತ ದಾಸ್ ಅವರನ್ನು ನೇಮಿಸುವ ಸಾಧ್ಯತೆಗಳಿವೆ. ನಿರ್ಮಲಾ ಅವರನ್ನು ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವಾಲಯಕ್ಕೆ (HRD) ವರ್ಗಾಯಿಸುವ ಬಗ್ಗೆ ಚರ್ಚೆಗಳು ನಡೆಯುತ್ತಿವೆ ಎಂದು ತಿಳಿದುಬಂದಿದೆ. ಆದಾಗ್ಯೂ, ಈ ರಾಜಕೀಯ ಬದಲಾವಣೆಗಳ ಕುರಿತು ಕೇಂದ್ರ ಸರ್ಕಾರವಾಗಲಿ ಅಥವಾ ಬಿಜೆಪಿ ಪಕ್ಷವಾಗಲಿ ಇನ್ನು ಯಾವುದೇ ಅಧಿಕೃತ ದೃಢೀಕರಣ ನೀಡಿಲ್ಲ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕಲಬುರಗಿ | ‘ನಮ್ಮನ್ನ ಎಲ್ಲಿಗೆ ಕಳುಹಿಸುತ್ತೀರಿ?’: ತಗ್ಗಿನ ಬೇಲಿಯ...

92ಕ್ಕೂ ಅಧಿಕ ಸ್ಲಂ ಕುಟುಂಬಗಳ ಬದುಕು ಕೇವಲ ಜಮೀನಿನ ಹಕ್ಕಿನ ಪ್ರಶ್ನೆಯಲ್ಲ; ಅವರ ಸುರಕ್ಷಿತ ಓಡಾಟ, ಕುಡಿಯುವ ನೀರು ಹಾಗೂ ನಿತ್ಯದ ಬದುಕಿನ ಹಕ್ಕಿನ ಪ್ರಶ್ನೆಯೂ ಹೌದು. ನ್ಯಾಯಾಲಯದ ವಿಚಾರಣೆ ಅಂತಿಮಗೊಳ್ಳುವವರೆಗೆ ಯಾವುದೇ...

ಚುನಾವಣಾ ಆಯೋಗದ ಸಭೆ: ಪರಿಹಾರವಲ್ಲ, ತೇಪೆ ಹಚ್ಚುವ ಕಾರ್ಯಕ್ರಮ

ಅವೈಜ್ಞಾನಿಕ 'SIR' ಪ್ರಕ್ರಿಯೆ ಮತ್ತು ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಸಾರ್ವಜನಿಕವಾಗಿ ಬಯಲಾದ ಬೆನ್ನಲ್ಲೇ ಬಿಡುಗಡೆಯಾದ ಚುನಾವಣಾ ಆಯೋಗದ ಪತ್ರಿಕಾ ಪ್ರಕಟಣೆ, ತಪ್ಪುಗಳನ್ನು ತಿದ್ದುವ ಬದಲು ವ್ಯವಸ್ಥೆಯ ಲೋಪಗಳಿಗೆ ತೇಪೆ ಹಚ್ಚುವ ಯತ್ನದಂತೆ ಕಾಣುತ್ತಿದೆ. ದೇಶದ ಇತಿಹಾಸದಲ್ಲೇ...

ಹೊರಟ್ಟಿ ಅವರ ಹೋರಾಟದ ಬದುಕು ಮತ್ತು ಅವರ ಭಕ್ತ...

ಗ್ಯಾರಂಟಿ ಯೋಜನೆಗಳಿಂದ ಕೂಲಿ ಕಾರ್ಮಿಕರು ಸಿಗುತ್ತಿಲ್ಲವೆಂಬ ಬಸವರಾಜ ಹೊರಟ್ಟಿ ಅವರ ಹೇಳಿಕೆ ಮತ್ತು ಅದಕ್ಕೆ ಸಿಕ್ಕ ಸಾರ್ವಜನಿಕ ಚಪ್ಪಾಳೆಗಳು, ಕೇವಲ ಹಸಿವನ್ನೇ ಶ್ರಮದ ಇಂಧನವನ್ನಾಗಿ ನೋಡುವ ಸಮಾಜದ ಕ್ರೂರ ಮನಸ್ಥಿತಿಯನ್ನು ಅನಾವರಣಗೊಳಿಸುತ್ತವೆ. ಬಸವರಾಜ ಹೊರಟ್ಟಿ...

ಶಕ್ತಿಕಾಂತ ದಾಸ್ ಅವರು 2018 ರಿಂದ 2024 ರವರೆಗೆ ರಿಸರ್ವ್ ಬ್ಯಾಂಕ್‌ನ 25ನೇ ಗವರ್ನರ್ ಆಗಿ ಕಾರ್ಯನಿರ್ವಹಿಸಿದ್ದರು. ಅದಕ್ಕೂ ಮುನ್ನ ಅವರು 15ನೇ ಹಣಕಾಸು ಆಯೋಗದ ಸದಸ್ಯರಾಗಿ ಮತ್ತು ಜಿ-20 ಶೃಂಗಸಭೆಯಲ್ಲಿ ಭಾರತವನ್ನು ಪ್ರತಿನಿಧಿಸಿದ್ದರು.

ಹಣಕಾಸು ಸಚಿವಾಲಯದಲ್ಲಿಯೂ ಸೇವೆ ಸಲ್ಲಿಸಿದ್ದ ಶಕ್ತಿಕಾಂತ ದಾಸ್ ಅವರು ಎಂಟು ಕೇಂದ್ರ ಬಜೆಟ್‌ಗಳ ತಯಾರಿಕೆಯಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಅಲ್ಲದೆ, ದೇಶದ ಮೇಲೆ ಹೇರಲಾದ ನೋಟು ಅಮಾನ್ಯೀಕರಣದ ಅವಧಿಯಲ್ಲಿ ಆರ್ಥಿಕ ವ್ಯವಹಾರಗಳ ಇಲಾಖೆಯ ಹಿರಿಯ ಅಧಿಕಾರಿಯಾಗಿ ಕೆಲಸ ಮಾಡಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚುನಾವಣಾ ಆಯೋಗದ ಸಭೆ: ಪರಿಹಾರವಲ್ಲ, ತೇಪೆ ಹಚ್ಚುವ ಕಾರ್ಯಕ್ರಮ

ಅವೈಜ್ಞಾನಿಕ 'SIR' ಪ್ರಕ್ರಿಯೆ ಮತ್ತು ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಸಾರ್ವಜನಿಕವಾಗಿ ಬಯಲಾದ ಬೆನ್ನಲ್ಲೇ...

ಮಳೆ ಅಬ್ಬರ: ಉತ್ತರ ಪ್ರದೇಶದಲ್ಲಿ 10 ಮಂದಿ ಸಾವು; ಒಡಿಶಾದಲ್ಲಿ ಪ್ರವಾಹ

ದೇಶದ ಹಲವು ರಾಜ್ಯಗಳಲ್ಲಿ ಮುಂಗಾರು ಮಳೆಯ ಆರ್ಭಟ ಮುಂದುವರಿದಿದ್ದು, ಉತ್ತರ ಪ್ರದೇಶ...

26 ಬಾರಿ ಸೋತರೂ ಕುಗ್ಗದ ಛಲ; 59ನೇ ವಯಸ್ಸಿನಲ್ಲಿ ಸರ್ಕಾರಿ ಶಿಕ್ಷಕ ಹುದ್ದೆ ಪಡೆದ ವೃದ್ಧ

ಸರಿಯಾದ ಪ್ರಯತ್ನ ಮತ್ತು ಛಲವಿದ್ದರೆ ವಯಸ್ಸು ಕೇವಲ ಒಂದು ಸಂಖ್ಯೆಯಷ್ಟೇ ಎಂಬುದನ್ನು...

1,870 ಕೋಟಿ ರೂ. ದೇಣಿಗೆ ದಂಧೆ ಆರೋಪ: ಗುಜರಾತ್‌ನ 3 ರಾಜಕೀಯ ಪಕ್ಷಗಳ ಅಕ್ರಮ ಬಯಲು

ಗುಜರಾತ್‌ನಲ್ಲಿ ನೋಂದಾಯಿತವಾಗಿದ್ದ, ಆದರೆ ಮಾನ್ಯತೆ ಪಡೆಯದ ಮೂರು ರಾಜಕೀಯ ಪಕ್ಷಗಳು ಆದಾಯ...