18 ವರ್ಷಕ್ಕಿಂತ ಕಡಿಮೆ ವಯಸ್ಸಿನವರಿಗೆ ಸಾಮಾಜಿಕ ಜಾಲತಾಣ ಬಳಕೆಯನ್ನು ಸಂಪೂರ್ಣವಾಗಿ ನಿಷೇಧಿಸುವ ಅಥವಾ ನಿರ್ಬಂಧಿಸುವ ಚಿಂತನೆ ನಡೆಸುತ್ತಿದೆ ಎಂಬ ಸುದ್ದಿ ಸದ್ಯ ಹರಿದಾಡುತ್ತಿದೆ. ಈ ಸಂಬಂಧ ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದೆ. ಇಂತಹ ಯೋಜನೆ ನಮ್ಮಲ್ಲಿಲ್ಲ ಎಂದು ಕೇಂದ್ರ ಸರ್ಕಾರ ಹೇಳಿಕೊಂಡಿದೆ.
ಇತ್ತೀಚೆಗೆ ‘ಜಸ್ಟ್ ರೈಟ್ಸ್ ಫಾರ್ ಚಿಲ್ಡ್ರನ್ ಅಲೈಯನ್ಸ್’ ಎಂಬ ಎನ್‌ಜಿಒ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್, ಡಿಜಿಟಲ್ ಲೋಕದಲ್ಲಿ ಮಕ್ಕಳ ಸುರಕ್ಷತೆ ಮತ್ತು ಭಾರತೀಯ ಒಪ್ಪಂದ ಕಾಯ್ದೆಯಡಿ ಮಕ್ಕಳ ಕಾನೂನಾತ್ಮಕ ಅರ್ಹತೆಗಳ ಬಗ್ಗೆ ಸರ್ಕಾರಕ್ಕೆ ಕೆಲವು ಸೂಚನೆಗಳನ್ನು ನೀಡಿತ್ತು. ಸಂಸತ್ತಿನಲ್ಲಿ ಸಂಸದರೊಬ್ಬರು 16 ವರ್ಷದೊಳಗಿನ ಮಕ್ಕಳಿಗೆ ಸೋಶಿಯಲ್ ಮೀಡಿಯಾ ಖಾತೆ ತೆರೆಯಲು ನಿರ್ಬಂಧಿಸುವ ಖಾಸಗಿ ವಿಧೇಯಕವನ್ನು ಪ್ರಸ್ತಾಪಿಸಿದ್ದರು.
ಇದನ್ನೂ ಓದಿ: ಆಲೂರು | ಸಾರ್ವಜನಿಕ ಆಸ್ಪತ್ರೆ: ಔಷಧಿಗಳಿಲ್ಲವೆಂದು ಅಪಪ್ರಚಾರ ಮಾಡಿದ್ದಾರೆ; ವೈದ್ಯಾಧಿಕಾರಿಗಳು
ಸುಪ್ರೀಂ ಕೋರ್ಟ್‌ನಲ್ಲಿ ನಡೆಯುತ್ತಿರುವ ವಿಚಾರಣೆ ಹಾಗೂ ಕೆಲವು ಖಾಸಗಿ ವಿಧೇಯಕಗಳ ಕುರಿತಾದ ಚರ್ಚೆಗಳ ಬೆನ್ನಲ್ಲೇ, “ಸರ್ಕಾರ ೧8 ವರ್ಷದೊಳಗಿನವರಿಗೆ ಸೋಶಿಯಲ್ ಮೀಡಿಯಾ ಬ್ಯಾನ್ ಮಾಡಲಿದೆ” ಎಂಬ ವರದಿಗಳು ಹರಿದಾಡುತ್ತಿದ್ದವು. ಆಸ್ಟ್ರೇಲಿಯಾ ಹಾಗೂ ಫ್ರಾನ್ಸ್ ದೇಶಗಳು ಮಕ್ಕಳಿಗಾಗಿ ಕೈಗೊಂಡಿರುವ ಸೋಶಿಯಲ್ ಮೀಡಿಯಾ ನಿಯಮಗಳ ಮಾದರಿಯಲ್ಲೇ ಭಾರತದಲ್ಲೂ ಬ್ಯಾನ್ ಬರಲಿದೆ ಎಂಬ ಊಹಾಪೋಹಗಳು ಹರಿದಾಡಿದ್ದವು.
This video cannot be played in your browser. Open the video directly
ಆದರೆ, ಭಾರತದಲ್ಲಿ ಪ್ರಸ್ತುತ ಇಂತಹ ಯಾವುದೇ ಸಾರ್ವತ್ರಿಕ ಬ್ಯಾನ್ ಹೇರುವ ಪ್ರಸ್ತಾಪ ಸರ್ಕಾರದ ಮುಂದೆ ಇಲ್ಲ ಎಂದು ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ. ಈ ವರದಿಗಳು ಸಂಪೂರ್ಣ ಸುಳ್ಳು ಮತ್ತು ಆಧಾರರಹಿತ ಎಂದು ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದೆ.
ಬದಲಿಗೆ, ಕೇಂದ್ರ ಸರ್ಕಾರವು ‘ಡಿಜಿಟಲ್ ಪರ್ಸನಲ್ ಡೇಟಾ ಪ್ರೊಟೆಕ್ಷನ್ (ಡಿಪಿಡಿಪಿ) ಕಾಯ್ದೆ’ಯಡಿ ಪೋಷಕರ ಸಮ್ಮತಿ ಪಡೆಯುವುದು ಹಾಗೂ ಆನ್‌ಲೈನ್‌ನಲ್ಲಿ ಮಕ್ಕಳ ಸುರಕ್ಷತೆಯನ್ನು ಹೆಚ್ಚಿಸುವ ನಿಯಮಗಳ ಮೇಲೆ ಸರ್ಕಾರ ಗಮನ ಹರಿಸುತ್ತಿದೆ ಎಂದು ವರದಿಯಾಗಿದೆ.





