ಲಿಂಗತ್ವ ಅಲ್ಪಸಂಖ್ಯಾತರ ಕಾಯ್ದೆ ವಿರುದ್ಧದ ಅರ್ಜಿಗಳನ್ನು ಹೈಕೋರ್ಟ್‌ಗಳಿಂದ ವರ್ಗಾಯಿಸಿ: ಸುಪ್ರೀಂ ಕೋರ್ಟ್‌ಗೆ ಕೇಂದ್ರ ಮನವಿ

Date:

ವಿವಿಧ ಹೈಕೋರ್ಟ್‌ಗಳಲ್ಲಿ ಬಾಕಿ ಇರುವ ಲಿಂಗತ್ವ ಅಲ್ಪಸಂಖ್ಯಾತರ ಕಾಯ್ದೆ (ತಿದ್ದುಪಡಿ) ವಿರುದ್ಧದ ಅರ್ಜಿಗಳನ್ನು ಸುಪ್ರೀಂ ಕೋರ್ಟ್‌ಗೆ ವರ್ಗಾಯಿಸುವಂತೆ ಕೇಂದ್ರವು ಬುಧವಾರ ಸುಪ್ರೀಂ ಕೋರ್ಟ್‌ನಲ್ಲಿ ಮನವಿ ಮಾಡಿದೆ. ಒಂದೇ ವಿಷಯದಲ್ಲಿ ಬೇರೆ ಬೇರೆ ನ್ಯಾಯಾಲಯಗಳಲ್ಲಿ ವಿಚಾರಣೆಯು ಸಂಘರ್ಷದ ತೀರ್ಪುಗಳಿಗೆ ಕಾರಣವಾಗಬಹುದು ಎಂದು ಕೇಂದ್ರ ಸರ್ಕಾರ ವಾದಿಸಿದೆ.

- Advertisement -

ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರು ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಮತ್ತು ನ್ಯಾಯಮೂರ್ತಿ ಜೋಯ್ಮಲ್ಯ ಬಾಗ್ಚಿ ನೇತೃತ್ವದ ಪೀಠದ ಮುಂದೆ ಈ ಪ್ರಸ್ತಾಪವನ್ನು ಮಾಡಿದ್ದಾರೆ. ಶುಕ್ರವಾರ ಈ ಅರ್ಜಿಗಳ ತುರ್ತು ವಿಚಾರಣೆ ನಡೆಸುವಂತೆ ಮನವಿ ಮಾಡಿದ್ದಾರೆ. “ಅರ್ಜಿಯ ವಿಚಾರವನ್ನು ಶುಕ್ರವಾರ ನಡೆಸಿದರೆ ನಾವು ಹೈಕೋರ್ಟ್‌ಗಳು ವಿಚಾರಣೆಯನ್ನು ಮುಂದೂಡವಂತೆ ವಿನಂತಿಸಬಹುದು” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಶಿಕ್ಷಣ ಮಾರಾಟ ಮಾಡಿದ ಶಾಲೆಗಳೇ ಈಗ ಮಾರಾಟಕ್ಕೆ!

ಕರ್ನಾಟಕದಲ್ಲಿ ಖಾಸಗಿ ಶಾಲೆಗಳು ಮುಚ್ಚುವ ಹಂತಕ್ಕೆ ತಲುಪಿದ್ದು, ಮಾರಾಟಕ್ಕೆ ಸಜ್ಜಾಗಿವೆ. ಕೋವಿಡ್-19 ಆಕ್ರಮಣದ ನಂತರದಲ್ಲಿ ಖಾಸಗಿ ಶಾಲೆಗಳಲ್ಲಿ ದಾಖಲಾತಿಯಲ್ಲಿ ಭಾರೀ ಕುಸಿತ, ಪ್ರತಿಷ್ಠಿತ ಶಾಲೆಗಳ ಜೊತೆಗೆ ಪೈಪೋಟಿ, ಮೂಲಭೂತ ಸೌಕರ್ಯಕ್ಕೆ ತಕ್ಕಂತೆ ಲಾಭದ...

ಬಿಗಿದ ತುಟಿಯ ದೃಶ್ಯಭಾಷೆ: ನಿರ್ಬಂಧಗಳ ನೆರಳಲ್ಲಿ ರೂಪಕಗಳ ಪ್ರತಿರೋಧ

ಸಿನೆಮಾವನ್ನು ನಿಯಂತ್ರಿಸಲು ಅಧಿಕಾರಶಾಹಿ ಸದಾ ಹೊಸ ಕಟ್ಟುಪಾಡುಗಳನ್ನು ಸೃಷ್ಟಿಸುತ್ತಲೇ ಇರುತ್ತದೆ; ಆದರೆ ಕಲೆಗೆ ಇರುವ ಶಕ್ತಿಯೆಂದರೆ, ಅದು ನಿರ್ಬಂಧಗಳ ಗೋಡೆಗಳನ್ನೇ ಹೊಸ ನೋಟದ ಕಿಟಕಿಗಳನ್ನಾಗಿಸಿಕೊಳ್ಳುತ್ತದೆ. ನೇರ ಮಾತನ್ನು ಕಸಿದುಕೊಂಡಷ್ಟೂ ರೂಪಕಗಳ ನಡಿಗೆ ಬಿಗಿಯಾಗುತ್ತದೆ,...

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಇದನ್ನು ಓದಿದ್ದೀರಾ? ಲಿಂಗತ್ವ ಅಲ್ಪಸಂಖ್ಯಾತರ ತಿದ್ದುಪಡಿ ಮಸೂದೆ ಪ್ರಶ್ನಿಸಿ ಅರ್ಜಿ: ಕೇಂದ್ರಕ್ಕೆ ಕರ್ನಾಟಕ ಹೈಕೋರ್ಟ್ ನೋಟಿಸ್

2019ರ ಕಾಯ್ದೆಯ ಸೆಕ್ಷನ್ 4(2) ಅಡಿಯಲ್ಲಿ ಒಬ್ಬ ವ್ಯಕ್ತಿಯು ತನ್ನ ಲಿಂಗವನ್ನು ಸ್ವತಃ ಗುರುತಿಸಿಕೊಳ್ಳುವ ಹಕ್ಕು ಇದೆ. ಆದರೆ ಈ ಹಕ್ಕನ್ನು ತಿದ್ದುಪಡಿ ಮಸೂದೆಯಲ್ಲಿ ತೆಗೆದುಹಾಕಲಾಗಿದೆ. ಇದು ಸಮುದಾಯದಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ.

ಇನ್ನು ಈ ತಿದ್ದುಪಡಿ ಪ್ರಕಾರ ‘ಲಿಂಗತ್ವ ಅಲ್ಪಸಂಖ್ಯಾತರು’ ಎಂದರೆ ಕೇವಲ ಜೈವಿಕ ವ್ಯತ್ಯಾಸಗಳು ಉಳ್ಳವರು (inter sex) ಮತ್ತು ಹಿಜ್ರಾ, ಕಿನ್ನರ್, ಅರವಾಣಿ, ಜೋಗತಿ ಮೊದಲಾದ ನಿರ್ದಿಷ್ಟ ಸಮುದಾಯಗಳಿಗೆ ಸೇರಿದವರು. ಅಂದರೆ ಈ ಸಮುದಾಯಕ್ಕೆ ಸೇರಿಲ್ಲದಿದ್ದರೆ ವ್ಯಕ್ತಿ ಲಿಂಗತ್ವ ಅಲ್ಪಸಂಖ್ಯಾತರಾಗಿದ್ದರೂ ಯಾವುದೇ ಹಕ್ಕುಗಳು ಇರುವುದಿಲ್ಲ. ಹಾಗೆಯೇ ಲಿಂಗತ್ವ ಅಲ್ಪಸಂಖ್ಯಾತ ಮಹಿಳೆ, ಲಿಂಗತ್ವ ಅಲ್ಪಸಂಖ್ಯಾತ ಪುರುಷ, ಜೆಂಡರ್ ಕ್ವೀರ್ ಎಂಬ ಮೊದಲಾದ ವ್ಯಕ್ತಿಗಳನ್ನು ಈ ‘ಲಿಂಗತ್ವ ಅಲ್ಪಸಂಖ್ಯಾತರು’ ಎಂಬ ವ್ಯಾಖ್ಯಾನದಿಂದ ಹೊರಗಿಡಲಾಗಿರುವುದು ತೀವ್ರ ಆತಂಕಕ್ಕೆ ಕಾರಣವಾಗಿದೆ. ಹೀಗೆ ಹಲವು ವಿಚಾರಗಳು ಲಿಂಗತ್ವ ಅಲ್ಪಸಂಖ್ಯಾತರ ರಕ್ಷಣೆಗೆ ವಿರುದ್ಧವಾಗಿದೆ.

ಈ ವಿಚಾರದಲ್ಲಿ ಹಲವು ಹೈಕೋರ್ಟ್‌ಗಳಲ್ಲಿ ಅರ್ಜಿ ಸಲ್ಲಿಕೆಯಾಗಿದೆ. ಇತ್ತೀಚೆಗೆ ಕೇಂದ್ರ ಸರ್ಕಾರವು ಜಾರಿಗೆ ತಂದಿರುವ ಲಿಂಗತ್ವ ಅಲ್ಪಸಂಖ್ಯಾತರ ತಿದ್ದುಪಡಿ ಮಸೂದೆಯ ಸಾಂವಿಧಾನಿಕ ಸಿಂಧುತ್ವವನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್ ಕೇಂದ್ರ ಸರ್ಕಾರಕ್ಕೆ ನೋಟಿಸ್ ನೀಡಿದೆ.

ಇದನ್ನು ಓದಿದ್ದೀರಾ?  ಲಿಂಗತ್ವ ಅಲ್ಪಸಂಖ್ಯಾತರ ಅಸ್ಮಿತೆಯನ್ನೇ ಅಳಿಸುವ ಮಸೂದೆ: ಆತ್ಮಗೌರವಕ್ಕೆ ಕೊಡಲಿಪೆಟ್ಟು

ಈ ಎಲ್ಲ ಅರ್ಜಿಗಳ ವಿಚಾರಣೆಯನ್ನು ಸುಪ್ರೀಂ ಕೋರ್ಟ್‌ಗೆ ವರ್ಗಾಯಿಸಬೇಕು ಎಂದು ಕೇಂದ್ರ ಸರ್ಕಾರದ ಮನವಿಯಾಗಿದೆ. ಆದರೆ ಸುಪ್ರೀಂ ಕೋರ್ಟ್‌ ಇದಕ್ಕೆ ಒಪ್ಪಿಗೆ ಸೂಚಿಸಿಲ್ಲ. ಸಾಂವಿಧಾನಿಕ ನ್ಯಾಯಾಲಯಗಳು ನೀಡುವ ಅಭಿಪ್ರಾಯಗಳು ಹೆಚ್ಚಾಗಿ ಸುಪ್ರೀಂ ಕೋರ್ಟ್‌ನ ಸ್ವಂತ ತೀರ್ಪಿಗೆ ಸಹಾಯ ಮಾಡುತ್ತವೆ ಎಂದು ಸುಪ್ರೀಂ ಕೋರ್ಟ್ ಹೇಳಿದೆ. “ಕೆಲವೊಮ್ಮೆ ನಾವು ಹೈಕೋರ್ಟ್ ದೃಷ್ಟಿಕೋನದಿಂದ ಪ್ರಯೋಜನ ಪಡೆಯಬಹುದು” ಎಂದು ಸಿಜೆಐ ಹೇಳಿದ್ದಾರೆ. ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ತಮ್ಮ ವಾದವನ್ನು ಪುನರುಚ್ಚರಿಸಿದ್ದು, ಈ ವೇಳೆ ಮುಖ್ಯ ನ್ಯಾಯಮೂರ್ತಿಗಳು “ನೋಡುತ್ತೇವೆ” ಎಂದು ಸಂಕ್ಷಿಪ್ತವಾಗಿ ಪ್ರತಿಕ್ರಿಯಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸುಪ್ರೀಂ ಆದೇಶ ಉಲ್ಲಂಘನೆ: ಕಾನೂನುಬಾಹಿರ ವಶಕ್ಕೆ ತಡೆ ಇದ್ದರೂ 100ಕ್ಕೂ ಹೆಚ್ಚು ಪ್ರತಿಭಟನಾಕಾರರ ಬಂಧನ!

ರಾಜಧಾನಿ ದೆಹಲಿಯಲ್ಲಿ ಕನ್ಹಾಟ್ ಪ್ಲೇಸ್ ಹಾಗೂ ಜಂತರ್ ಮಂತರ್ ಸುತ್ತಮುತ್ತ ನಡೆಯುತ್ತಿರುವ...

ಗ್ಯಾನೂ ವಿರುದ್ಧ ಪ್ರತಿಭಟನೆ: ವಿದ್ಯಾರ್ಥಿ ನಾಯಕಿ ನೇಹಾ ಬೋರಾ ಬಂಧನ

ದೆಹಲಿಯಲ್ಲಿ ಚುನಾವಣಾ ಆಯೋಗ ಮತ್ತು ಕೇಂದ್ರ ಸರ್ಕಾರದ ವಿರುದ್ಧದ ಪ್ರತಿಭಟನೆಗಳು ಭಾನುವಾರವೂ...

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿ, ಯುವತಿಯರ ಮೇಲೆ ಹಲ್ಲೆ; ನಾಲ್ವರು RSS ಗೂಂಡಾಗಳ ಬಂಧನ

ದೆಹಲಿಯಲ್ಲಿ ನಡೆದ 'ಕಾಕ್ರೋಚ್ ಜನತಾ ಪಾರ್ಟಿ' (CJP) ಪ್ರತಿಭಟನೆಯ ಸಂದರ್ಭದಲ್ಲಿ ವಿದ್ಯಾರ್ಥಿಗಳು...