ಸುಪ್ರೀಂ ಕೋರ್ಟ್‌ಗೆ ಐವರು ನ್ಯಾಯಮೂರ್ತಿಗಳ ನೇಮಕಾತಿಗೆ ಕೇಂದ್ರ ಅಸ್ತು: ಜಡ್ಜ್‌ಗಳ ಸಂಖ್ಯೆ 37ಕ್ಕೆ ಏರಿಕೆ

Date:

ಕೇಂದ್ರ ಸರ್ಕಾರವು ಸೋಮವಾರ ಸುಪ್ರೀಂ ಕೋರ್ಟ್‌ಗೆ ಹೊಸದಾಗಿ ಐವರು ನ್ಯಾಯಮೂರ್ತಿಗಳನ್ನು ನೇಮಿಸಿದೆ. ಇದರಿಂದಾಗಿ ಸುಪ್ರೀಂ ಕೋರ್ಟ್‌ನ ಕಾರ್ಯನಿರ್ವಹಣಾ ಬಲ ಈಗ 37ಕ್ಕೆ ಏರಿದೆ. ಹೊಸದಾಗಿ ಅನುಮೋದಿತ ಸಾಮರ್ಥ್ಯ 38 ಆಗಿದೆ. ನ್ಯಾಯಮೂರ್ತಿಗಳು ಪ್ರಮಾಣವಚನ ಸ್ವೀಕರಿಸಿ ಔಪಚಾರಿಕವಾಗಿ ಅಧಿಕಾರ ವಹಿಸಿಕೊಂಡ ನಂತರ ಈ ನೇಮಕಾತಿಗಳು ಜಾರಿಗೆ ಬರಲಿವೆ.

- Advertisement -

ಕೇಂದ್ರ ಕಾನೂನು ಸಚಿವಾಲಯ ಹೊರಡಿಸಿದ ಪ್ರತ್ಯೇಕ ಅಧಿಸೂಚನೆಗಳ ಪ್ರಕಾರ, ಹಿರಿಯ ವಕೀಲೆ ವೆಂಕಿತಾ ಸುಬ್ರಮಣಿ ಮೋಹನ, ಬಾಂಬೆ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಚಂದ್ರಶೇಖರ್, ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಶೀಲ್ ನಾಗು, ಮಧ್ಯಪ್ರದೇಶ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಸಂಜೀವ್ ಸಚ್‌ದೇವ, ಜಮ್ಮು ಮತ್ತು ಕಾಶ್ಮೀರ, ಲಡಾಖ್ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ನ್ಯಾಯಮೂರ್ತಿ ಅರುಣ್ ಪಲ್ಲಿ ಸುಪ್ರೀಂ ಕೋರ್ಟ್‌ಗೆ ಬಡ್ತಿ ಪಡೆದಿದ್ದಾರೆ. ಮೇ 27ರಂದು ಸುಪ್ರೀಂ ಕೋರ್ಟ್ ಕೊಲಿಜಿಯಂ ಐವರ ಹೆಸರುಗಳನ್ನು ಶಿಫಾರಸು ಮಾಡಿತ್ತು, ಕೇಂದ್ರವು ನಾಲ್ಕು ದಿನಗಳಲ್ಲಿ ನೇಮಕಾತಿಗಳನ್ನು ಅನುಮೋದಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಇದನ್ನು ಓದಿದ್ದೀರಾ? ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳ ಸಂಖ್ಯೆ 33ರಿಂದ 37ಕ್ಕೆ ಏರಿಸುವ ಸುಗ್ರೀವಾಜ್ಞೆಗೆ ರಾಷ್ಟ್ರಪತಿ ಅಂಕಿತ

ಸುಪ್ರೀಂ ಕೋರ್ಟ್‌ನಲ್ಲಿ ನ್ಯಾಯಮೂರ್ತಿಗಳ ಸಂಖ್ಯೆಯನ್ನು ತಕ್ಷಣವೇ 33ರಿಂದ 37ಕ್ಕೆ ಏರಿಸುವ ಸುಗ್ರೀವಾಜ್ಞೆಯನ್ನು ಕೇಂದ್ರ ಸರ್ಕಾರ ಕಳೆದ ತಿಂಗಳು ಹೊರಡಿಸಿದ್ದು, ರಾಷ್ಟ್ರಪತಿ ದ್ರೌಪದಿ ಮುರ್ಮು ಮೇ 16ರಂದು ಸಹಿ ಹಾಕುವ ಮೂಲಕ ಸುಗ್ರೀವಾಜ್ಞೆಗೆ ಸಮ್ಮತಿಸಿದ್ದರು. “ಸುಪ್ರೀಂ ಕೋರ್ಟ್ (ನ್ಯಾಯಮೂರ್ತಿಗಳ ಸಂಖ್ಯೆ) ಕಾಯಿದೆ, 1956ರ ಸೆಕ್ಷನ್ 2ರಲ್ಲಿ, ‘ಮೂವತ್ತಮೂರು’ ಪದಕ್ಕೆ ಬದಲಾಗಿ, ‘ಮೂವತ್ತೇಳು’ ಪದವನ್ನು ಬದಲಿಸಬೇಕು” ಎಂದು ಸುಗ್ರೀವಾಜ್ಞೆ ಹೇಳುತ್ತದೆ. 37ರಲ್ಲಿ ಮುಖ್ಯ ನ್ಯಾಯಮೂರ್ತಿಗಳು ಸೇರಿಲ್ಲ. ಅಂದರೆ ಮುಖ್ಯ ನ್ಯಾಯಮೂರ್ತಿಗಳನ್ನು ಸೇರಿಸಿ ಒಟ್ಟಾರೆಯಾಗಿ 38 ನ್ಯಾಯಮೂರ್ತಿಗಳ ಬಲ ಸುಪ್ರೀಂ ಕೋರ್ಟ್‌ನಲ್ಲಿ ಇರಬಹುದಾಗಿದೆ.

1960ರಲ್ಲಿ ಕಾಯ್ದೆಯ ತಿದ್ದುಪಡಿ ಮೂಲಕ ನ್ಯಾಯಮೂರ್ತಿಗಳ ಸಂಖ್ಯೆಯನ್ನು 13ಕ್ಕೆ ಮತ್ತು 1977ರ ತಿದ್ದುಪಡಿ ಮೂಲಕ 17ಕ್ಕೆ ಹೆಚ್ಚಿಸಲಾಗಿದೆ. 1979ರ ಅಂತ್ಯದವರೆಗೆ ದೇಶದ ಮುಖ್ಯ ನ್ಯಾಯಮೂರ್ತಿಗಳನ್ನು ಹೊರತುಪಡಿಸಿ 15 ನ್ಯಾಯಮೂರ್ತಿಗಳಿಗೆ ಸೀಮಿತಿಗೊಳಿಸಲಾಗಿತ್ತು. ನಂತರ ಮುಖ್ಯ ನ್ಯಾಯಮೂರ್ತಿಗಳ ಮನವಿ ಮೇರೆಗೆ ಈ ನಿರ್ಬಂಧವನ್ನು ತೆಗೆದುಹಾಕಲಾಗಿತ್ತು.

1986ರಲ್ಲಿ, ಸುಪ್ರೀಂ ಕೋರ್ಟ್‌ನಲ್ಲಿ ನ್ಯಾಯಮೂರ್ತಿಗಳ ಬಲವನ್ನು 17ರಿಂದ 25 ಕ್ಕೆ ಮತ್ತು 2008 ರಲ್ಲಿ 25ರಿಂದ 30ಕ್ಕೆ ಹೆಚ್ಚಿಸಲು ಕಾನೂನು ತಿದ್ದುಪಡಿ ಮಾಡಲಾಯಿತು. ಅದಾದ ಬಳಿಕ ಸುಪ್ರೀಂ ಕೋರ್ಟ್ (ನ್ಯಾಯಮೂರ್ತಿಗಳ ಸಂಖ್ಯೆ) ತಿದ್ದುಪಡಿ ಕಾಯ್ದೆ, 2019 ಮೂಲಕ ಕೊನೆಯದಾಗಿ 30ರಿಂದ 33 ಕ್ಕೆ ಹೆಚ್ಚಿಸಲಾಗಿತ್ತು. ಈಗ 33ರಿಂದ 37ಕ್ಕೆ ಏರಿಸಲಾಗಿದೆ. ಹೆಚ್ಚಳದೊಂದಿಗೆ, ಸುಪ್ರೀಂ ಕೋರ್ಟ್‌ನಲ್ಲಿ ಎರಡು ಮೊದಲೇ ಅಸ್ತಿತ್ವದಲ್ಲಿದ್ದ ಖಾಲಿ ಹುದ್ದೆಗಳು ಸೇರಿದಂತೆ ಆರು ಖಾಲಿ ಹುದ್ದೆಗಳಿತ್ತು. ಸೋಮವಾರದ ನೇಮಕಾತಿಗಳ ನಂತರ, ಸುಪ್ರೀಂ ಕೋರ್ಟ್‌ನಲ್ಲಿ ಕೇವಲ ಒಂದು ಹುದ್ದೆ ಖಾಲಿ ಉಳಿದಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಈ ದಿನ ಸಂಪಾದಕೀಯ | ಅಂಕಿತಾ ಹತ್ಯೆ ಶಂಕಿತರಿಗೆ ಸಾಂವಿಧಾನಿಕ ಹುದ್ದೆ ಸರಿಯೇ?

ಅಂಕಿತಾ ಭಂಡಾರಿ ಕೊಲೆ ಪ್ರಕರಣದಲ್ಲಿದ್ದ ವಿಐಪಿ ದುಶ್ಯಂತ್‌ ಅವರ ಮೇಲಿನ...

‘ಮೋದಿಯನ್ನು ದೇವರನ್ನಾಗಿಸುವ ಯತ್ನ’: ಬಿಹಾರ ಸಿಎಂ ಹೇಳಿಕೆಗೆ ಪ್ರಶಾಂತ್ ಕಿಶೋರ್ ಕಿಡಿ

ಪ್ರಧಾನಿ ನರೇಂದ್ರ ಮೋದಿ ಅವರು ಶ್ರೀರಾಮನಿಗೂ ಮನೆ ಒದಗಿಸಿದರು ಎಂಬ ಬಿಹಾರ...

ಬಾಗಲಕೋಟೆ | ಎಸ್‌ಐಆರ್ ಪ್ರಕ್ರಿಯೆ ಸ್ಥಗಿತಕ್ಕೆ ಒತ್ತಾಯಿಸಿ ದಲಿತ ಸಂಘರ್ಷ ಸಮಿತಿ ಪ್ರತಿಭಟನೆ

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಜಾಗೊಳಿಸಿ, ಅವರ ವಿರುದ್ಧ ಕ್ರಿಮಿನಲ್...

ಬೆಳಗಾವಿ | ಚೂನಪ್ಪ ಪೂಜೇರಿ, ನಾನು ಸತ್ತರೂ ಒಂದೇ ಗೋರಿಯಲ್ಲಿ ಮಣ್ಣಾಗಬೇಕು: ಶಶಿಕಾಂತ ಗುರೂಜಿ

ಕಬ್ಬು ಬೆಳೆಗಾರರ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಬೆಳಗಾವಿ ಜಿಲ್ಲೆಯ ಹತ್ತರಗಿ...