ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷ ಮತ್ತು ಕೇಂದ್ರ ಸಚಿವ ಜೆಪಿ ನಡ್ಡಾ ಅವರು ಸೋಮವಾರ ರಾಜ್ಯಸಭೆಯ ಸಭಾನಾಯಕರಾಗಿ ಆಯ್ಕೆಯಾಗಿದ್ದಾರೆ.
ಈ ತಿಂಗಳ ಆರಂಭದಲ್ಲಿ, ನಡ್ಡಾ ಅವರು ಕೇಂದ್ರ ಆರೋಗ್ಯ ಸಚಿವರಾಗಿ ಅಧಿಕಾರ ಸ್ವೀಕರಿಸಿದ್ದಾರೆ. ಹಾಗೆಯೇ ರಾಸಾಯನಿಕ ಮತ್ತು ರಸಗೊಬ್ಬರ ಸಚಿವಾಲಯವೂ ಕೂಡಾ ನಡ್ಡಾ ಕೈ ಸೇರಿದೆ. ಪಿಯೂಷ್ ಗೋಯಲ್ ಅವರಿಂದ ಅಧಿಕಾರವನ್ನು ಜೆಪಿ ನಡ್ಡಾ ಪಡೆದುಕೊಂಡಿದ್ದಾರೆ.
ಕೇಂದ್ರ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ನಂತರ ಜೆಪಿ ನಡ್ಡಾ ಅವರು ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಯುತ್ತಾರೆ ಎಂದು ನಿರೀಕ್ಷಿಸಲಾಗಿತ್ತು. ಆದರೆ ನಡ್ಡಾ ಅವರು ಬಿಜೆಪಿ ಅಧ್ಯಕ್ಷ ಸ್ಥಾನವನ್ನು ಕೂಡಾ ಉಳಿಸಿಕೊಳ್ಳುವಂತಿದೆ.
ಇದನ್ನು ಓದಿದ್ದೀರಾ? ಸಚಿವ ಸಂಪುಟದಲ್ಲಿ ಜೆಪಿ ನಡ್ಡಾ; ಮುಂದಿನ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಯಾರು?
2020ರಲ್ಲಿ ಜೆಪಿ ನಡ್ಡಾ ಅವರು ಪ್ರಸ್ತುತ ಕೇಂದ್ರ ಗೃಹ ಸಚಿವರಾದ ಅಮಿತ್ ಶಾ ಅವರಿಂದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಸ್ಥಾನವನ್ನು ಪಡೆದುಕೊಂಡರು.
ಬಿಜೆಪಿ ನಿಯಮದ ಪ್ರಕಾರ ಎಲ್ಲಾ ರಾಜ್ಯಗಳಲ್ಲಿ ಶೇಕಡ 50ರಷ್ಟು ಸಂಸ್ಥೆಗಳ ಚುನಾವಣೆಗಳು ಪೂರ್ಣವಾದ ನಂತರವೇ ರಾಷ್ಟ್ರೀಯ ಅಧ್ಯಕ್ಷರನ್ನು ಆಯ್ಕೆ ಮಾಡಲಾಗುತ್ತದೆ. ಇದಕ್ಕೆ ಸುಮಾರು ಆರು ತಿಂಗಳ ಸಮಯ ಬೇಕಾಗಬಹುದು ಎಂದು ವರದಿಯಾಗಿದೆ.
Union Minister and BJP National President JP Nadda has been appointed as the Leader of the House of the Rajya Sabha.
(File Photo) pic.twitter.com/nd8f5BtUu4
— ANI (@ANI) June 24, 2024