ಕೇಂದ್ರ ಸಚಿವೆಯ ಪುತ್ರಿಗೆ ದುಷ್ಕರ್ಮಿಗಳಿಂದ ಕಿರುಕುಳ: ದೂರು ದಾಖಲು

Date:

ಮಹಾರಾಷ್ಟ್ರದ ಜಲಗಾಂವ್ ಜಿಲ್ಲೆಯ ಮುಕ್ತೈನಗರ ಪ್ರದೇಶದಲ್ಲಿ ನಡೆದ ಜಾತ್ರೆಯೊಂದರಲ್ಲಿ ಕೇಂದ್ರ ಯುವಜನ ವ್ಯವಹಾರ ಮತ್ತು ಕ್ರೀಡಾ ಇಲಾಖೆ ರಾಜ್ಯ ಸಚಿವೆ ರಕ್ಷಾ ಖಡ್ಸೆ ಅವರ ಪುತ್ರಿಗೆ ಕಿರುಕುಳ ನೀಡಿರುವ ಆರೋಪ ಕೇಳಿ ಬಂದಿದೆ.

- Advertisement -

ಈ ಕುರಿತು ಸಚಿವೆ ರಕ್ಷಾ ಖಡ್ಸೆ ಮುಕ್ತಾನಗರದ ಪೊಲೀಸರಿಗೆ ದೂರು ನೀಡಿದ್ದಾರೆ. ಮಹಾಶಿವರಾತ್ರಿ ಪ್ರಯುಕ್ತ ಹಮ್ಮಿಕೊಂಡ ಯಾತ್ರೆ ವೇಳೆ ತನ್ನಪುತ್ರಿಗೆ ಕಿರುಕುಳ ನೀಡಲಾಗಿದೆ ಎಂದು ಸಚಿವರು ಆರೋಪಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹಮ್ ಔರತೇನ್ ಆಜಾದ್ ಹೈ: ಸುರಕ್ಷತೆಯ ಹೆಸರಲ್ಲಿ ಕಡಿವಾಣ...

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಹಿಳೆಯರು ಮತ್ತು ಅಪ್ರಾಪ್ತೆಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳಿಗೆ ಕಡಿವಾಣ ಇಲ್ಲದಂತಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಅಭದ್ರತೆಯ ವಾತಾವರಣವಿರುವಾಗ ಈ ಲೋಪಗಳನ್ನು ಸರಿಪಡಿಸದೆಯೇ ದೌರ್ಜನ್ಯಕ್ಕೆ ಒಳಗಾಗುತ್ತಿರುವ ಸ್ರೀ ಸಮುದಾಯದ ಉಡುವ,...

ತಮ್ಮ ವಿರುದ್ಧ ತಾವೇ’ಆರೋಪಪಟ್ಟಿ’ ಸಿದ್ಧಪಡಿಸಿಕೊಂಡ ಗ್ಯಾನೇಶ್ ಕುಮಾರ್: ಪ್ರೆಸ್...

ಚುನಾವಣಾ ಆಯೋಗದ ಇತ್ತೀಚಿನ ನಡೆಗಳು ಮತ್ತು ಸಾಂವಿಧಾನಿಕ ವೈಫಲ್ಯದ ಅಸಲಿಯತ್ತನ್ನು ಸ್ವರಾಜ್ ಇಂಡಿಯಾ ಸದಸ್ಯ ಹಾಗೂ ‘ಭಾರತ್ ಜೋಡೊ ಅಭಿಯಾನ’ದ ರಾಷ್ಟ್ರೀಯ ಸಂಚಾಲಕ ಯೋಗೇಂದ್ರ ಯಾದವ್ ಅವರು 'ದಿ ಇಂಡಿಯನ್ ಎಕ್ಸ್‌ಪ್ರೆಸ್' ಪತ್ರಿಕೆಯಲ್ಲಿ...

SIR | ‘ಫಾರ್ಮ್ 7’ ದುರ್ಬಳಕೆ – ಅಕ್ರಮ:...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕನಿಗೆ ಇರುವ ಅತ್ಯಂತ ಮೂಲಭೂತ ಮತ್ತು ಶಕ್ತಿಶಾಲಿ ಅಸ್ತ್ರ - ಮತದಾನದ ಹಕ್ಕು. ಆದರೆ, ಇತ್ತೀಚಿನ ದಿನಗಳಲ್ಲಿ ಚುನಾವಣಾ ಆಯೋಗದ ನಿರ್ಲಜ್ಜತನ ಮತ್ತು ನಿಯಮಗಳಲ್ಲಿನ ಲೋಪದೋಷಗಳನ್ನು ಬಳಸಿಕೊಂಡು, ಮತದಾರರ ಪಟ್ಟಿಯಿಂದ...

ಈ ಕುರಿತು ಪ್ರತಿಕ್ರಿಯಿಸಿದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವಿಸ್, ಘಟನೆಗೆ ಸಂಬಂಧಿಸಿ ಪೊಲೀಸರು ಪ್ರಕರಣವನ್ನು ದಾಖಲಿಸಿಕೊಂಡಿದ್ದಾರೆ. ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.

ಪೊಲೀಸ್‌ ಠಾಣೆಗೆ ದೂರು ನೀಡಿದ ನಂತರ ಮಾತನಾಡಿದ ರಕ್ಷಾ ಖಡ್ಸೆ, ಶಿವರಾತ್ರಿ ಹಬ್ಬದ ಪ್ರಯುಕ್ತ ಮುಕ್ತೈನಗರ ಪ್ರದೇಶದ ಕೋಥಾಲಿಯಲ್ಲಿ ಪ್ರತಿ ವರ್ಷ ಯಾತ್ರೆಯನ್ನು ಆಯೋಜಿಸಲಾಗುತ್ತದೆ. ಎರಡು ದಿನಗಳ ಹಿಂದೆ ನನ್ನ ಮಗಳು ಜಾತ್ರೆಗೆ ಆಗಮಿಸಿದ್ದಾಳೆ. ಕೆಲವು ಹುಡುಗರು ಆಕೆಗೆ ಲೈಂಗಿಕ ಕಿರುಕುಳ ನೀಡಿದ್ದಾರೆ. ನಾನು ಸಂಸದೆ ಹಾಗೂ ಕೇಂದ್ರ ಸಚಿವೆಯಾಗಿ ಬಾರದೆ ಒಬ್ಬ ತಾಯಿಯಾಗಿ ನ್ಯಾಯ ಪಡೆಯಲು ಬಂದಿದ್ದೇನೆ. ನಾನು ಗುಜರಾತಿನಲ್ಲಿದ್ದಾಗ, ನನ್ನ ಮಗಳು ಕರೆ ಮಾಡಿ ಜಾತ್ರೆಯಿಂದ ಮನೆಗೆ ಹೋಗುವುದಾಗಿ ತಿಳಿಸಿದಳು. ನಾನು ಭದ್ರತಾ ಸಿಬ್ಬಂದಿಯೊಂದಿಗೆ ತೆರಳುವಂತೆ ಸೂಚಿಸಿದೆ. ನನ್ನ ಮಗಳು ಹಾಗೂ ಆಕೆಯ ಸ್ನೇಹಿತೆಯರು ವಾಪಸ್‌ ತೆರಳುತ್ತಿದ್ದಾಗ ಒಂದಷ್ಟು ಹುಡುಗರು ಆಕೆಯನ್ನು ಹಿಂಬಾಲಿಸಿ ತಳ್ಳಿ ಕಿರುಕುಳ ನೀಡಿದ್ದಾರೆ. ಫೋಟೊ ಹಾಗೂ ವಿಡಿಯೋಗಳನ್ನು ತೆಗೆದುಕೊಂಡಿದ್ದಾರೆ. ನಮ್ಮ ಭದ್ರತಾ ಸಿಬ್ಬಂದಿ ಪ್ರಶ್ನಿಸಿದಾಗ ಹುಡುಗರು ಕೆಟ್ಟದಾಗಿ ವರ್ತಿಸಿದ್ದಾರೆ. 30 ರಿಂದ 40 ಜನರ ದುಷ್ಕರ್ಮಿಗಳ ಗುಂಪು ಸ್ಥಳದಲ್ಲಿತ್ತು” ಎಂದು ತಿಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಮೋದಿಯ ‘ಗುಜರಾತ್ ಮಾಡೆಲ್’ ಬಚ್ಚಿಟ್ಟ ಸತ್ಯಗಳು!

ಮುಕ್ತೈನಗರ ಉಪವಿಭಾಗೀಯ ಪೊಲೀಸ್ ಅಧಿಕಾರಿ ಕೃಷ್ಣತ್ ಪಿಂಗಳೆ ಈ ಕುರಿತು ಪ್ರತಿಕ್ರಿಯಿಸಿ, 2025ರ ಫೆಬ್ರವರಿ 28ರಂದು ಕೊತ್ತಲಿ ಗ್ರಾಮದಲ್ಲಿ ಯಾತ್ರೆ ನಡೆದಿತ್ತು. ಯಾತ್ರೆಯಲ್ಲಿ ಅನಿಕೇತ್ ಘುಯಿ ಮತ್ತು ಆತನ 6 ಮಂದಿ ಸ್ನೇಹಿತರು ಬಾಲಕಿಯರಿಗೆ ಕಿರುಕುಳ ನೀಡಿದ್ದಾರೆ. ನಾವು ಆರೋಪಿಗಳ ವಿರುದ್ಧ ಪೋಕ್ಸೊ ಕಾಯ್ದೆ ಮತ್ತು ಐಟಿ ಕಾಯ್ದೆಯ ವಿವಿಧ ಸೆಕ್ಷನ್‌ಗಳಡಿ ಪ್ರಕರಣವನ್ನು ದಾಖಲಿಸಿದ್ದೇವೆ. ಓರ್ವ ಆರೋಪಿಯನ್ನು ಬಂಧಿಸಲಾಗಿದ್ದು, ಉಳಿದ ಆರು ಮಂದಿ ಆರೋಪಿಗಳಿಗಾಗಿ ಶೋಧ ಕಾರ್ಯ ನಡೆಯುತ್ತಿದೆ ಎಂದು ಹೇಳಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬಳಿಕ ಬಂಧನವಾಗಿದ್ದ ಕಾಂಗ್ರೆಸ್‌ ಅಭ್ಯರ್ಥಿ ಪ್ರಧಾನ್‌ಗೆ ಮಧ್ಯಂತರ ಜಾಮೀನು

2007ರ ನಂದಿಗ್ರಾಮ್ ಭೂಸ್ವಾಧೀನ ವಿರೋಧಿ ಹೋರಾಟಕ್ಕೆ ಸಂಬಂಧಿಸಿದ ಕೊಲೆ ಪ್ರಕರಣಗಳಲ್ಲಿ ಆರೋಪಿಯಾಗಿ...

1929ರ ಸೈಮನ್ ವಿರುದ್ಧದ ಹೋರಾಟದಂತೆ ‘SIR ಗೋ ಬ್ಯಾಕ್’ ಆಂದೋಲನ ನಡೆಯಬೇಕು: ಸಿಎಂ ರೇವಂತ್ ರೆಡ್ಡಿ ಕರೆ

ಮತದಾರರ ಪಟ್ಟಿಯ ಮೇಲೆ ಮೋದಿ-ಶಾ ಜೋಡಿ ಮತ್ತು ಗ್ಯಾನೇಶ್‌ ಕುಮಾರ್‌ ನಡೆಸುತ್ತಿರುವ...

‘ನಥಿಂಗ್ ನೈಸ್’: ಸಿಎಂ ವಿರುದ್ಧ ಎಚ್.ಡಿ. ಕುಮಾರಸ್ವಾಮಿ ಭೂಕಬಳಿಕೆ ಆರೋಪ

ಕೇಂದ್ರ ಸಚಿವ ಹಾಗೂ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ಮುಖ್ಯಮಂತ್ರಿ...

ಅಮೇಥಿ ಸೋಲಿನ ಬಳಿಕ ಯುಪಿ ರಾಜ್ಯಸಭೆ ರೇಸ್‌ನಲ್ಲಿ ಸ್ಮೃತಿ ಇರಾನಿ; ಸಂಭಾವ್ಯ ಪಟ್ಟಿಯಲ್ಲಿ ಯಾರ್ಯಾರಿದ್ದಾರೆ?

ಉತ್ತರ ಪ್ರದೇಶದಿಂದ ಅಕ್ಟೋಬರ್ 16ರಂದು ನಡೆಯಲಿರುವ 10 ರಾಜ್ಯಸಭಾ ಸ್ಥಾನಗಳ ಚುನಾವಣೆಗೆ...