ರಾಜ್ಯಸಭಾ ಚುನಾವಣೆ: ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟ, ಇಬ್ಬರು ಕೇಂದ್ರ ಸಚಿವರಿಗೆ ಕೊಕ್

Date:

ಉತ್ತರ ಪ್ರದೇಶದಿಂದ ತೆರವಾಗಲಿರುವ ಎಂಟು ರಾಜ್ಯಸಭಾ ಸ್ಥಾನಗಳಿಗೆ ಬಿಜೆಪಿ ಸೋಮವಾರ (ಅ. 5) ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿದೆ. ಅಚ್ಚರಿಯ ಬೆಳವಣಿಗೆಯಲ್ಲಿ, ಕೇಂದ್ರ ಸಚಿವರಾದ ಹರ್ದೀಪ್ ಸಿಂಗ್ ಪುರಿ ಮತ್ತು ಬಿ.ಎಲ್. ವರ್ಮಾ ಅವರಿಗೆ ಈ ಬಾರಿ ಟಿಕೆಟ್ ನಿರಾಕರಿಸಲಾಗಿದೆ. ಮುಂದಿನ ತಿಂಗಳು ಇವರಿಬ್ಬರ ರಾಜ್ಯಸಭಾ ಸದಸ್ಯತ್ವದ ಅವಧಿ ಮುಕ್ತಾಯಗೊಳ್ಳಲಿದೆ.

- Advertisement -

​ಇಬ್ಬರೂ ಹಿರಿಯ ನಾಯಕರು ಹಾಗೂ ಕೇಂದ್ರ ಸಚಿವರಿಗೆ ಮರು ಆಯ್ಕೆಯ ಅವಕಾಶ ನೀಡದಿರುವುದು, ಶೀಘ್ರದಲ್ಲೇ ಕೇಂದ್ರ ಸಚಿವ ಸಂಪುಟ ಪುನರ್‌ರಚನೆಯಾಗುವ ಸಾಧ್ಯತೆಗಳ ಬಗ್ಗೆ ದಟ್ಟ ಸುಳಿವು ನೀಡಿದೆ ಎಂದು ವಿಶ್ಲೇಷಿಸಲಾಗುತ್ತಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ...

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ ಕಥೆಯ ಕನಸು ಕಾಣುತ್ತಿದ್ದ ಭಾರತೀಯ ಚಿತ್ರರಂಗದ ಅಪ್ರತಿಮ ದಾರ್ಶನಿಕ ಸಿಂಗೀತಂ ಶ್ರೀನಿವಾಸರಾವ್ ನಮ್ಮೊಂದಿಗಿಲ್ಲ. ಆರು ದಶಕಗಳ ಕಾಲ ತಮ್ಮ ಅನಂತ...

ಸಂಪತ್ತು ಮತ್ತು ಮನುಷ್ಯನ ನೈತಿಕತೆ: ಅರ್ಥಶಾಸ್ತ್ರದ ಇಗ್ ನೊಬೆಲ್...

ಪ್ರತಿವರ್ಷ ನೊಬೆಲ್ ಪ್ರಶಸ್ತಿ ಘೋಷಣೆಯಾಗುವ ಕೆಲವೇ ದಿನಗಳ ಮೊದಲು ಹಾರ್ವರ್ಡ್ ವಿಶ್ವವಿದ್ಯಾಲಯದಲ್ಲಿ ನೊಬೆಲ್ ಪುರಸ್ಕೃತರ ಸಮ್ಮುಖದಲ್ಲೇ ಇಗ್ ನೊಬೆಲ್ ಪ್ರಶಸ್ತಿಗಳನ್ನು ಪ್ರದಾನ ಮಾಡಲಾಗುತ್ತದೆ. "ಮೊದಲು ಜನರನ್ನು ನಗಿಸಬೇಕು, ನಂತರ ಅವರನ್ನು ಆಳವಾಗಿ ಯೋಚಿಸುವಂತೆ...

​ಬಿಜೆಪಿ ಬಿಡುಗಡೆ ಮಾಡಿರುವ ಪಟ್ಟಿಯಲ್ಲಿ ಮುಂಬರುವ ಚುನಾವಣೆಗಳ ದೃಷ್ಟಿಯಿಂದ ಜಾತಿ ಸಮೀಕರಣಕ್ಕೆ ಒತ್ತು ನೀಡಲಾಗಿದ್ದು; ಮೂವರು ಒಬಿಸಿ (ಇತರೆ ಹಿಂದುಳಿದ ವರ್ಗ), ಇಬ್ಬರು ಬ್ರಾಹ್ಮಣರು, ಇಬ್ಬರು ದಲಿತರು ಹಾಗೂ ಒಬ್ಬ ಠಾಕೂರ್ ಸಮುದಾಯದ ಅಭ್ಯರ್ಥಿಗೆ ಮಣೆ ಹಾಕಲಾಗಿದೆ.

​ಒಬಿಸಿ ಸಮುದಾಯಕ್ಕೆ ಮೂರು ಸ್ಥಾನ:

ಒಬಿಸಿ ಕೋಟಾದಡಿ ಯೋಗಿ ಆದಿತ್ಯನಾಥ್ ಸರ್ಕಾರದಲ್ಲಿ ಪಶುಸಂಗೋಪನೆ ಮತ್ತು ಹೈನುಗಾರಿಕೆ ಸಚಿವರಾಗಿರುವ, ಬರೇಲಿ ಜಿಲ್ಲೆಯ ಅಯೋನ್ಲಾ ಕ್ಷೇತ್ರದ ಶಾಸಕ ಧರಂಪಾಲ್ ಸಿಂಗ್ ಅವರಿಗೆ ಅವಕಾಶ ನೀಡಲಾಗಿದೆ. ಇವರು ‘ಲೋಧ್’ (Lodh) ಸಮುದಾಯಕ್ಕೆ ಸೇರಿದವರಾಗಿದ್ದು, ಇದೇ ಸಮುದಾಯದವರಾದ ಬಿ.ಎಲ್. ವರ್ಮಾ ಅವರ ಬದಲಿಗೆ ಇವರನ್ನು ಆಯ್ಕೆ ಮಾಡಲಾಗಿದೆ ಎನ್ನಲಾಗಿದೆ. ಉತ್ತರ ಪ್ರದೇಶದ ಬುಂದೇಲ್‌ಖಂಡ್ ಮತ್ತು ರೋಹಿಲ್‌ಖಂಡ್ ಪ್ರದೇಶಗಳಲ್ಲಿ ಪ್ರಭಾವಿಯಾಗಿರುವ ಲೋಧ್ ಸಮುದಾಯವು ಸಾಂಪ್ರದಾಯಿಕವಾಗಿ ಬಿಜೆಪಿಯ ಬೆಂಬಲಿಗ ವೋಟ್‌ಬ್ಯಾಂಕ್ ಆಗಿದೆ. ಮಾಜಿ ಮುಖ್ಯಮಂತ್ರಿ ದಿವಂಗತ ಕಲ್ಯಾಣ್ ಸಿಂಗ್ ಅವರ ಕಾಲದಿಂದಲೂ ಈ ಸಮುದಾಯವು ಪಕ್ಷದ ಜೊತೆ ಭದ್ರವಾಗಿ ಗುರುತಿಸಿಕೊಂಡಿದೆ.

​ಒಬಿಸಿ ವರ್ಗದ ಇನ್ನುಳಿದ ಇಬ್ಬರು ಅಭ್ಯರ್ಥಿಗಳೆಂದರೆ; ಕಾನ್ಪುರ ಜಿಲ್ಲೆಯವರಾದ ರಾಜ್ಯ ಬಿಜೆಪಿ ಒಬಿಸಿ ಮೋರ್ಚಾ ಅಧ್ಯಕ್ಷ ಪ್ರಕಾಶ್ ಪಾಲ್ ಹಾಗೂ ಬರೇಲಿಯ ಶ್ರುತಿ ಗಂಗ್ವಾರ್. ಶ್ರುತಿ ಅವರು ಜಾರ್ಖಂಡ್ ರಾಜ್ಯಪಾಲ ಹಾಗೂ ಮಾಜಿ ಕೇಂದ್ರ ಸಚಿವ ಸಂತೋಷ್ ಗಂಗ್ವಾರ್ ಅವರ ಪುತ್ರಿಯಾಗಿದ್ದಾರೆ. ಈ ಹಿಂದೆ ಬರೇಲಿಯ ಬಹೇರಿ ಕ್ಷೇತ್ರದಿಂದ ವಿಧಾನಸಭಾ ಟಿಕೆಟ್‌ಗೆ ಶ್ರುತಿ ಆಕಾಂಕ್ಷಿಯಾಗಿದ್ದರು ಎಂದು ಮೂಲಗಳು ತಿಳಿಸಿವೆ.

​ಇಬ್ಬರು ಬ್ರಾಹ್ಮಣ ಅಭ್ಯರ್ಥಿಗಳು:

ಪ್ರಯಾಗ್‌ರಾಜ್‌ನ ವಕೀಲ ಹಾಗೂ ಮಾಜಿ ಸಚಿವ ಶಿವಕಾಂತ್ ಓಜಾ ಅವರ ಕಿರಿಯ ಸಹೋದರ ರಾಧಾಕಾಂತ್ ಓಜಾ ಮತ್ತು ಪಕ್ಷದ ಕಿಸಾನ್ ಹಾಗೂ ಯುವ ಮೋರ್ಚಾಗಳಲ್ಲಿ ಕೆಲಸ ಮಾಡಿರುವ ಕಾನ್ಪುರದ ಗೋಪಿ ಕೃಷ್ಣ ಪಾಂಡೆ ಅವರಿಗೆ ಬ್ರಾಹ್ಮಣ ಕೋಟಾದಡಿ ರಾಜ್ಯಸಭಾ ಟಿಕೆಟ್ ನೀಡಲಾಗಿದೆ.

​ದಲಿತ ಮತ್ತು ಠಾಕೂರ್ ಅಭ್ಯರ್ಥಿಗಳು:

ದಲಿತ ಸಮುದಾಯದಿಂದ ಬಾರಾಬಂಕಿಯ ಮಾಜಿ ಸಂಸದೆ ಹಾಗೂ ಪ್ರಸ್ತುತ ರಾಜ್ಯ ಬಿಜೆಪಿ ಉಪಾಧ್ಯಕ್ಷೆಯಾಗಿರುವ ಪ್ರಿಯಾಂಕಾ ಸಿಂಗ್ ರಾವತ್ ಮತ್ತು ಜೌನ್‌ಪುರದ ವಿದ್ಯಾ ಸಾಗರ್ ಸೋಂಕರ್ ಅವರನ್ನು ಕಣಕ್ಕಿಳಿಸಲಾಗಿದೆ. ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿದ್ದ ವಿದ್ಯಾ ಸಾಗರ್ ಅವರು ಈ ಹಿಂದೆ ವಿಧಾನ ಪರಿಷತ್ (ಎಂಎಲ್ಸಿ) ಸದಸ್ಯರಾಗಿಯೂ ಸೇವೆ ಸಲ್ಲಿಸಿದ್ದರು.

​ಇನ್ನು, ಎಂಟನೇ ಅಭ್ಯರ್ಥಿಯಾಗಿ ಆಗ್ರಾದವರಾದ, ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ರಾಮ್ ಪ್ರತಾಪ್ ಸಿಂಗ್ ಚೌಹಾಣ್ ಅವರನ್ನು ಠಾಕೂರ್ ಸಮುದಾಯದ ಪ್ರತಿನಿಧಿಯಾಗಿ ನಾಮನಿರ್ದೇಶನ ಮಾಡಲಾಗಿದೆ. ಪಕ್ಷದ ಹಲವು ಪ್ರಮುಖ ಚುನಾವಣಾ ಪ್ರಚಾರ ಕಾರ್ಯಗಳ ಉಸ್ತುವಾರಿಯನ್ನು ಇವರು ಯಶಸ್ವಿಯಾಗಿ ನಿಭಾಯಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನರಮಂಡಲ ಮತ್ತು ಭಾವನೆಗಳ ನಂಟು: ಮೂವರು ವಿಜ್ಞಾನಿಗಳಿಗೆ ಒಲಿದ ವೈದ್ಯಕೀಯ ನೊಬೆಲ್ ಪ್ರಶಸ್ತಿ

'ಆಪ್ಟೊಜೆನೆಟಿಕ್ಸ್' (Optogenetics) ಕ್ಷೇತ್ರದಲ್ಲಿ ಮಾಡಿದ ಮಹತ್ತರ ಸಂಶೋಧನೆಗಾಗಿ ಅಮೆರಿಕದ ಮನೋವೈದ್ಯ ಮತ್ತು...

ನೀವು ಮತ್ತು ನಿಮ್ಮ ಪೊಲೀಸರು ಮಹಿಳೆಯರಿಗೆ ಹೆದರುವುದೇಕೆ: ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ವೇಳೆ ಮಹಿಳಾ ಪತ್ರಕರ್ತರು ಹಾಗೂ ಮಹಿಳಾ...

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ: ಜನಸಾಮಾನ್ಯರ ನಿರೀಕ್ಷೆಗಳೇನು?–ಭಾಗ 3

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ,...

AI ಗೆ ಸಂಪೂರ್ಣ ನಿಯಂತ್ರಣ ಬೇಡ, ಕೆಲ ಅಪಾಯಗಳನ್ನು ಸ್ವೀಕರಿಸೋಣ: ಸ್ಯಾಮ್ ಆಲ್ಟ್‌ಮನ್

AI ತಂತ್ರಜ್ಞಾನದಿಂದ ಉಂಟಾಗಬಹುದಾದ ಕೆಲವು ಅಪಾಯಗಳನ್ನು ಒಪ್ಪಿಕೊಂಡರೂ, ಅದರ ಮೂಲಕ ದೊರೆಯುವ...