ದೆಹಲಿ | ಅಸಾದುದ್ದೀನ್ ಒವೈಸಿ ಮನೆ ಮೇಲೆ ಕಪ್ಪು ಮಸಿ ಎಸೆದ ದುಷ್ಕರ್ಮಿಗಳು; ‘ಹೆದರಲ್ಲ’ ಎಂದ ಸಂಸದ

Date:

18ನೇ ಲೋಕಸಭೆಯಲ್ಲಿ ಪ್ರಮಾಣ ವಚನ ಸ್ವೀಕರಿಸುವ ಸಂದರ್ಭದಲ್ಲಿ “ಜೈ ಭೀಮ್, ಜೈ ಮೀಮ್, ಜೈ ಪ್ಯಾಲೆಸ್ತೀನ್” ಎಂದು ಘೋಷಣೆ ಕೂಗಿದ್ದಕ್ಕಾಗಿ ಬಲಪಂಥೀಯರ ಕೆಂಗಣ್ಣಿಗೆ ಗುರಿಯಾಗಿರುವ ಎಐಎಂಐಎಂ ಅಧ್ಯಕ್ಷ ಹಾಗೂ ಹೈದರಾಬಾದ್‌ನ ಸಂಸದ ಅಸಾದುದ್ದೀನ್‌ ಒವೈಸಿ ಅವರ ದೆಹಲಿಯ ಮನೆ ಮೇಲೆ ಕಪ್ಪು ಶಾಯಿ ಎಸೆದಿರುವ ಘಟನೆ ಗುರುವಾರ ತಡರಾತ್ರಿ ನಡೆದಿದೆ.

- Advertisement -

ದೆಹಲಿಯ ಅಶೋಕ ರಸ್ತೆಯಲ್ಲಿರುವ ಸಂಸದರ ಮನೆ ಬಳಿ ಬಂದಿದ್ದ ಇಬ್ಬರು ಈ ಕೃತ್ಯ ಎಸಗಿರುವುದಾಗಿ ವರದಿಯಾಗಿದ್ದು, ಘಟನೆಯ ಬಳಿಕ ದೆಹಲಿ ಪೊಲೀಸರೇ ಎದುರು ನಿಂತು ಶಾಯಿಯನ್ನು ನೀರಿನಿಂದ ಸ್ವಚ್ಛಗೊಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ನೊಬೆಲ್‌ ಪ್ರಶಸ್ತಿ ಸರಣಿ | ಭಾರತೀಯ ಮೂಲದ ದಕ್ಷಿಣ...

ಈ ಬಾರಿಯ ಶಾಂತಿ ನೊಬೆಲ್‌ ಪ್ರಶಸ್ತಿಯನ್ನು ಶಾಂತಿ ಮತ್ತು ಅಂತಾರಾಷ್ಟ್ರೀಯ ಕಾನೂನನ್ನು ಉತ್ತೇಜಿಸುವ ನಿಟ್ಟಿನಲ್ಲಿ ನಡೆಸಿದ ಪ್ರಯತ್ನಗಳಿಗಾಗಿ, ಮಾನವ ಹಕ್ಕುಗಳ ರಕ್ಷಣೆಗಾಗಿ ಜೀವನವನ್ನೇ ಮುಡಿಪಾಗಿಟ್ಟ ಭಾರತೀಯ ಮೂಲದ ದಕ್ಷಿಣ ಆಫ್ರಿಕಾದ ಡಾ. ನವನೀತಮ್‌...

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಈ ಬಗ್ಗೆ ತಮ್ಮ ಟ್ವಿಟ್ಟರ್ ಖಾತೆಯಲ್ಲಿ ವಿಡಿಯೋ ಹಂಚಿಕೊಂಡಿರುವ ಅಸಾದುದ್ದೀನ್ ಒವೈಸಿ, “ಕೆಲವು ಅಪರಿಚಿತ ದುಷ್ಕರ್ಮಿಗಳು ಇಂದು ನನ್ನ ಮನೆಯ ಮೇಲೆ ಕಪ್ಪು ಶಾಯಿಯಿಂದ ದಾಳಿ ಮಾಡಿದ್ದಾರೆ. ನನ್ನ ದೆಹಲಿ ನಿವಾಸವನ್ನು ಎಷ್ಟು ಬಾರಿ ಗುರಿಪಡಿಸಲಾಗಿದೆ ಎಂಬ ಲೆಕ್ಕಾಚಾರವನ್ನು ನಾನು ಈಗ ಕಳೆದುಕೊಂಡಿದ್ದೇನೆ” ಎಂದು ತಿಳಿಸಿದ್ದಾರೆ.

“ನಿಮ್ಮ ಮೂಗಿನ ನೇರಕ್ಕೆ ಇದು ಹೇಗೆ ನಡೆಯುತ್ತಿದೆ ಎಂದು ದೆಹಲಿ ಪೊಲೀಸ್ ಅಧಿಕಾರಿಗಳನ್ನು ಕೇಳಿದಾಗ ಅಸಹಾಯಕತೆ ವ್ಯಕ್ತಪಡಿಸಿದ್ದಾರೆ. ಅಮಿತ್ ಶಾ ಅವರೇ, ಇದು ನಿಮ್ಮ ಮೇಲ್ವಿಚಾರಣೆಯಲ್ಲಿ ನಡೆಯುತ್ತಿದೆಯೇ?” ಎಂದು ಒವೈಸಿ ಪ್ರಶ್ನಿಸಿದ್ದಾರೆ.

ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರನ್ನೂ ಕೂಡ ಟ್ಯಾಗ್ ಮಾಡಿರುವ ಹೈದರಾಬಾದ್‌ನ ಸಂಸದ, “ಸಂಸದರ ಸುರಕ್ಷತೆಯನ್ನು ಖಾತರಿಪಡಿಸಲಾಗುತ್ತದೆಯೇ ಅಥವಾ ಇಲ್ಲವೇ ಎಂಬುದನ್ನು ದಯವಿಟ್ಟು ನಮಗೆ ತಿಳಿಸಿ” ಎಂದು ಪ್ರಶ್ನಿಸಿದ್ದು, “ಸಾವರ್ಕರ್ ಮಾದರಿಯ ಈ ರೀತಿಯ ಹೇಡಿತನವನ್ನು ನಿಲ್ಲಿಸಿ ಮತ್ತು ನನ್ನನ್ನು ಎದುರಿಸುವಷ್ಟು ಪುರುಷರಾಗಿರಿ. ಇಂಥದ್ದಕ್ಕೆಲ್ಲ ನಾನು ಹೆದರುವುದಿಲ್ಲ” ಎಂದು ಅಸಾದುದ್ದೀನ್‌ ಒವೈಸಿ ತಿಳಿಸಿದ್ದಾರೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಜೆಪಿ ಪ್ರತಿಭಟನೆ ತಡೆಯಲು ಮೆಟ್ರೋ, ರೈಲು ಬಂದ್: ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದ ಸಿಪಿಐಎಂ ನಾಯಕ ಎಂ ಎ ಬೇಬಿ

ಅಕ್ಟೋಬರ್ 10ರಂದು ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಮತ್ತು ವಿವಿಧ ಪ್ರತಿಪಕ್ಷಗಳು...

ಅ. 10ರ ಜಂತರ್ ಮಂತರ್ ಪ್ರತಿಭಟನೆಗೆ ಅನುಮತಿ ನಿರಾಕರಿಸಿದ ದೆಹಲಿ ಪೊಲೀಸ್; ಕಠಿಣ ಕ್ರಮದ ಎಚ್ಚರಿಕೆ

ಮುಖ್ಯ ಚುನಾವಣಾ ಆಯುಕ್ತರ (CEC) ಹೊಣೆಗಾರಿಕೆ ಪ್ರಶ್ನಿಸಿ 'ಕಾಕ್ರೋಚ್ ಜನತಾ ಪಾರ್ಟಿ'...

ಪಂಜಾಬ್ ಸಿಎಂ ಕಚೇರಿ ಭ್ರಷ್ಟಾಚಾರದ ಸಿಬಿಐ ತನಿಖೆ ವಿಚಾರಣೆಯಿಂದ ಹಿಂದೆ ಸರಿದ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ

ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಅವರ ಕಚೇರಿಗೆ ಸಂಬಂಧಿಸಿದ ಭ್ರಷ್ಟಾಚಾರದ ಆರೋಪಗಳ...