ಉನ್ನಾಂವ್ ಅತ್ಯಾಚಾರ ಕಾಂಡ: ಕುಲದೀಪ್ ಸೆಂಗರ್ ಶಿಕ್ಷೆ ಅಮಾನತಿಗೆ ತಡೆ ಕೋರಿ ಸುಪ್ರೀಂಗೆ ಅರ್ಜಿ

Date:

2017ರ ಉನ್ನಾವೊ ಅತ್ಯಾಚಾರ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಉಚ್ಚಾಟಿತ ಬಿಜೆಪಿ ನಾಯಕ ಕುಲದೀಪ್ ಸಿಂಗ್ ಸೆಂಗಾರ್ ಗೆ ನೀಡಿರುವ ಶಿಕ್ಷೆ ಅಮಾನತಿನ ಆದೇಶವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಲಾಗಿದೆ.

- Advertisement -

ಸೆಂಗಾರ್ ನ ಜೈಲು ಶಿಕ್ಷೆಯನ್ನು ಅಮಾನತುಗೊಳಿಸಿದ್ದ ದೆಹಲಿ ಹೈಕೋರ್ಟ್ ಆದೇಶಕ್ಕೆ ತಡೆ ನೀಡುವಂತೆ ಅರ್ಜಿದಾರರು ಮನವಿ ಮಾಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕಲಬುರಗಿ | ‘ನಮ್ಮನ್ನ ಎಲ್ಲಿಗೆ ಕಳುಹಿಸುತ್ತೀರಿ?’: ತಗ್ಗಿನ ಬೇಲಿಯ...

92ಕ್ಕೂ ಅಧಿಕ ಸ್ಲಂ ಕುಟುಂಬಗಳ ಬದುಕು ಕೇವಲ ಜಮೀನಿನ ಹಕ್ಕಿನ ಪ್ರಶ್ನೆಯಲ್ಲ; ಅವರ ಸುರಕ್ಷಿತ ಓಡಾಟ, ಕುಡಿಯುವ ನೀರು ಹಾಗೂ ನಿತ್ಯದ ಬದುಕಿನ ಹಕ್ಕಿನ ಪ್ರಶ್ನೆಯೂ ಹೌದು. ನ್ಯಾಯಾಲಯದ ವಿಚಾರಣೆ ಅಂತಿಮಗೊಳ್ಳುವವರೆಗೆ ಯಾವುದೇ...

ಚುನಾವಣಾ ಆಯೋಗದ ಸಭೆ: ಪರಿಹಾರವಲ್ಲ, ತೇಪೆ ಹಚ್ಚುವ ಕಾರ್ಯಕ್ರಮ

ಅವೈಜ್ಞಾನಿಕ 'SIR' ಪ್ರಕ್ರಿಯೆ ಮತ್ತು ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಸಾರ್ವಜನಿಕವಾಗಿ ಬಯಲಾದ ಬೆನ್ನಲ್ಲೇ ಬಿಡುಗಡೆಯಾದ ಚುನಾವಣಾ ಆಯೋಗದ ಪತ್ರಿಕಾ ಪ್ರಕಟಣೆ, ತಪ್ಪುಗಳನ್ನು ತಿದ್ದುವ ಬದಲು ವ್ಯವಸ್ಥೆಯ ಲೋಪಗಳಿಗೆ ತೇಪೆ ಹಚ್ಚುವ ಯತ್ನದಂತೆ ಕಾಣುತ್ತಿದೆ. ದೇಶದ ಇತಿಹಾಸದಲ್ಲೇ...

ಹೊರಟ್ಟಿ ಅವರ ಹೋರಾಟದ ಬದುಕು ಮತ್ತು ಅವರ ಭಕ್ತ...

ಗ್ಯಾರಂಟಿ ಯೋಜನೆಗಳಿಂದ ಕೂಲಿ ಕಾರ್ಮಿಕರು ಸಿಗುತ್ತಿಲ್ಲವೆಂಬ ಬಸವರಾಜ ಹೊರಟ್ಟಿ ಅವರ ಹೇಳಿಕೆ ಮತ್ತು ಅದಕ್ಕೆ ಸಿಕ್ಕ ಸಾರ್ವಜನಿಕ ಚಪ್ಪಾಳೆಗಳು, ಕೇವಲ ಹಸಿವನ್ನೇ ಶ್ರಮದ ಇಂಧನವನ್ನಾಗಿ ನೋಡುವ ಸಮಾಜದ ಕ್ರೂರ ಮನಸ್ಥಿತಿಯನ್ನು ಅನಾವರಣಗೊಳಿಸುತ್ತವೆ. ಬಸವರಾಜ ಹೊರಟ್ಟಿ...

ವಕೀಲರಾದ ಅಂಜಲೆ ಪಟೇಲ್ ಮತ್ತು ಪೂಜಾ ಶಿಲ್ಪ್ಕರ್ ಸಲ್ಲಿಸಿರುವ ಅರ್ಜಿಯಲ್ಲಿ, ವಿಚಾರಣಾ ನ್ಯಾಯಾಲಯವು ಸೆಂಗಾರ್ ತನ್ನ ಸಹಜ ಜೀವನದುದ್ದಕ್ಕೂ ಜೈಲಿನಲ್ಲೇ ಇರಬೇಕೆಂದು ಸ್ಪಷ್ಟವಾಗಿ ದಾಖಲಿಸಿದ್ದರೂ, ಆ ಅಂಶವನ್ನು ಪರಿಗಣಿಸದೇ ಹೈಕೋರ್ಟ್ ಶಿಕ್ಷೆ ಅಮಾನತುಗೊಳಿಸಿರುವುದು ಕಾನೂನು ಮತ್ತು ವಾಸ್ತವಾಂಶಗಳ ದೃಷ್ಟಿಯಿಂದ ಗಂಭೀರ ದೋಷವಾಗಿದೆ ಎಂದು ವಾದಿಸಲಾಗಿದೆ.

ಅತ್ಯಾಚಾರದಂತಹ ಘೋರ ಅಪರಾಧದಲ್ಲಿ ದೋಷಾರೋಪಿತನಾಗಿರುವ ಸೆಂಗಾರ್ ನ ಕ್ರಿಮಿನಲ್ ಹಿನ್ನೆಲೆ, ಪ್ರಾಸಿಕ್ಯೂಷನ್ ಮಂಡಿಸಿದ್ದ ವಸ್ತುನಿಷ್ಠ ಸಾಕ್ಷ್ಯಗಳು ಹಾಗೂ ಆರೋಪಿಯ ಕ್ರೌರ್ಯವನ್ನು ಹೈಕೋರ್ಟ್ ಸಮರ್ಪಕವಾಗಿ ಮೌಲ್ಯಮಾಪನ ಮಾಡಿಲ್ಲ ಎಂದು ಅರ್ಜಿಯಲ್ಲಿ ಹೇಳಲಾಗಿದೆ. ಸಂತ್ರಸ್ತೆಯ ತಂದೆ ನ್ಯಾಯಾಂಗ ಬಂಧನದಲ್ಲಿದ್ದಾಗಲೂ ಅವರನ್ನು ಸುಮ್ಮನಾಗಿಸುವ ಉದ್ದೇಶದಿಂದ ಹತ್ಯೆ ನಡೆಸಲು ಸಂಚು ರೂಪಿಸಲಾಗಿದೆ ಎಂಬ ಅಂಶವನ್ನೂ ಗಮನಕ್ಕೆ ತೆಗೆದುಕೊಳ್ಳಲಾಗಿಲ್ಲ ಎಂದು ಆರೋಪಿಸಲಾಗಿದೆ.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಪ್ರಜಾಪ್ರಭುತ್ವ ಪೊರೆದ ಅಮೆರಿಕ; ಪುಡಿಗಟ್ಟುತ್ತಿರುವ ಭಾರತ

ಸೆಂಗಾರ್ ಈಗಾಗಲೇ ಏಳು ವರ್ಷ ಐದು ತಿಂಗಳು ಜೈಲು ಶಿಕ್ಷೆ ಅನುಭವಿಸಿದ್ದಾನೆ ಎಂಬ ಕಾರಣ ನೀಡಿ, ಉನ್ನಾವೊ ಅತ್ಯಾಚಾರ ಪ್ರಕರಣದಲ್ಲಿನ ಶಿಕ್ಷೆಯನ್ನು ಡಿಸೆಂಬರ್ 23ರಂದು ದೆಹಲಿ ಹೈಕೋರ್ಟ್ ಅಮಾನತುಗೊಳಿಸಿತ್ತು. ವಿಚಾರಣಾ ನ್ಯಾಯಾಲಯವು ಡಿಸೆಂಬರ್ 2019ರಲ್ಲಿ ನೀಡಿದ್ದ ತೀರ್ಪನ್ನು ಪ್ರಶ್ನಿಸಿ ಸೆಂಗಾರ್ ಸಲ್ಲಿಸಿರುವ ಮೇಲ್ಮನವಿಯ ಅಂತಿಮ ತೀರ್ಪು ಹೊರಬರುವವರೆಗೆ ಈ ಅಮಾನತು ಜಾರಿಯಲ್ಲಿರುತ್ತದೆ ಎಂದು ಹೈಕೋರ್ಟ್ ತಿಳಿಸಿತ್ತು.

ಆದರೆ, ಸಂತ್ರಸ್ತೆಯ ತಂದೆಯ ಕಸ್ಟಡಿ ಸಾವು ಪ್ರಕರಣದಲ್ಲಿ ಸೆಂಗಾರ್ ಗೆ ವಿಧಿಸಲಾದ 10 ವರ್ಷದ ಜೈಲು ಶಿಕ್ಷೆ ಇನ್ನೂ ಜಾರಿಯಲ್ಲಿರುವುದರಿಂದ ಹಾಗೂ ಆ ಪ್ರಕರಣದಲ್ಲಿ ಜಾಮೀನು ದೊರಕದ ಕಾರಣ, ಸೆಂಗಾರ್ ಜೈಲಿನಲ್ಲೇ ಮುಂದುವರೆಯಬೇಕಾಗಿದೆ.

ಶಿಕ್ಷೆ ಅಮಾನತಿಗೆ ಸಂಬಂಧಿಸಿ ಹೈಕೋರ್ಟ್ ಹಲವು ಷರತ್ತುಗಳನ್ನು ವಿಧಿಸಿದೆ. ಸೆಂಗಾರ್ 15 ಲಕ್ಷ ರೂಪಾಯಿ ವೈಯಕ್ತಿಕ ಬಾಂಡ್ ಹಾಗೂ ಅದೇ ಮೊತ್ತದ ಮೂರು ಜಾಮೀನುಗಳನ್ನು ಸಲ್ಲಿಸಬೇಕು. ದೆಹಲಿಯಲ್ಲಿರುವ ಸಂತ್ರಸ್ತೆಯ ನಿವಾಸದ 5 ಕಿ.ಮೀ ವ್ಯಾಪ್ತಿಗೆ ಪ್ರವೇಶಿಸಬಾರದು ಮತ್ತು ಸಂತ್ರಸ್ತೆಗೂ ಆಕೆಯ ತಾಯಿಗೂ ಯಾವುದೇ ರೀತಿಯ ಬೆದರಿಕೆ ಹಾಕಬಾರದು ಎಂದು ನಿರ್ದೇಶಿಸಲಾಗಿದೆ. ಷರತ್ತುಗಳ ಉಲ್ಲಂಘನೆಯಾದಲ್ಲಿ ಜಾಮೀನು ರದ್ದುಪಡಿಸಲಾಗುವುದು ಎಂದು ಹೈಕೋರ್ಟ್ ಸ್ಪಷ್ಟಪಡಿಸಿದೆ.

ಉನ್ನಾವೊ ಅತ್ಯಾಚಾರ ಪ್ರಕರಣ ಹಾಗೂ ಸಂಬಂಧಿತ ಇತರ ಪ್ರಕರಣಗಳನ್ನು 2019ರ ಆಗಸ್ಟ್ 1ರಂದು ಸುಪ್ರೀಂ ಕೋರ್ಟ್ ನಿರ್ದೇಶನದಂತೆ ಉತ್ತರ ಪ್ರದೇಶದ ನ್ಯಾಯಾಲಯಗಳಿಂದ ದೆಹಲಿಗೆ ವರ್ಗಾಯಿಸಲಾಗಿತ್ತು. ಇದೇ ವೇಳೆ, ಸಂತ್ರಸ್ತೆಯ ತಂದೆಯ ಕಸ್ಟಡಿ ಸಾವು ಪ್ರಕರಣದಲ್ಲಿ ವಿಧಿಸಿರುವ ಶಿಕ್ಷೆಯನ್ನು ಪ್ರಶ್ನಿಸಿ ಸೆಂಗಾರ್ ಸಲ್ಲಿಸಿರುವ ಮೇಲ್ಮನವಿಯೂ ಇನ್ನೂ ಬಾಕಿಯಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೋದಿ ಜನ್ಮದಿನದ ನಾಟಕದಲ್ಲಿ ಅಭಿನಯಿಸಲು ನಕಾರ; ವಿದ್ಯಾರ್ಥಿಗೆ ‘ಅಂಕ ಕಡಿತ’ದ ಬೆದರಿಕೆ

ಪ್ರಧಾನಿ ಮೋದಿ ಜನ್ಮದಿನದ ಅಂಗವಾಗಿ ಆಯೋಜಿಸಲಾಗಿರುವ ನಾಟಕದಲ್ಲಿ ಅಭಿನಯಿಸಲು ನಿರಾಕರಿಸಿದ ವಿದ್ಯಾರ್ಥಿಗಳಿಗೆ...

ಕುಟುಂಬ ನ್ಯಾಯಾಲಯಗಳ ಮೇಲಿನ ಹೊರೆ ತಗ್ಗಿಸಲು ಮಧ್ಯಸ್ಥಿಕೆಗೆ ಆದ್ಯತೆ ನೀಡಿ: ಸುಪ್ರೀಂ ನ್ಯಾಯಮೂರ್ತಿ ನಾಗರತ್ನ

ದೇಶದ ಕೌಟುಂಬಿಕ ನ್ಯಾಯಾಲಯಗಳಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಪ್ರಕರಣಗಳ ಹೊರೆಯನ್ನು ಕಡಿಮೆ...

ಯುದ್ಧದ ಕರಾಳ ನೆರಳು: ರಷ್ಯಾ ಕನಸು ನಚ್ಚುನೂರಾಗಿ ಉಕ್ರೇನ್‌ನಲ್ಲಿ ಬಂಧಿಯಾದ ಭಾರತೀಯ ಯುವಕ!

ಉತ್ತಮ ಜೀವನ ರೂಪಿಸಿಕೊಳ್ಳಬೇಕು, ದೇಶ ವಿದೇಶ ಸುತ್ತಿ ಆರ್ಥಿಕವಾಗಿ ಕುಟುಂಬವನ್ನು ಬೆಂಬಲಿಸಬೇಕು...