‘ಅತ್ಯಾಚಾರ ಸಂತ್ರಸ್ತೆ ಮೇಲೆ‌ ಪೊಲೀಸ್ ದೌರ್ಜನ್ಯ; ಭಾರತ ಸತ್ತ ಸಮಾಜವೂ ಆಗುತ್ತಿದೆ’

Date:

ಉನ್ನಾವೋ‌ ಅತ್ಯಾಚಾರ ಪ್ರಕರಣದ ಅಪರಾಧಿ,ಮಾಜಿ ಬಿಜೆಪಿ ಶಾಸಕ ಕುಲದೀಪ್ ಸಿಂಗ್ ಸೆಂಗಾರ್‌ಗೆ ವಿಧಿಸಲಾಗಿದ್ದ ಜೈಲು ಶಿಕ್ಷೆಯನ್ನು ದೆಹಲಿ ಹೈಕೋರ್ಟ್ ಅಮಾನತುಗೊಳಿಸಿದೆ. ಹೈಕೋರ್ಟ್ ಆದೇಶದ ವಿರುದ್ಧ ದೆಹಲಿಯಲ್ಲಿ ಉನ್ನಾವ್ ಅತ್ಯಾಚಾರ ಸಂತ್ರಸ್ತೆ ಮತ್ತು ಆಕೆಯ ತಾಯಿ ಸೇರಿದಂತೆ ಹಲವರು ಪ್ರತಿಭಟನೆ ನಡೆಸಿದ್ದು, ಪ್ರತಿಭಟನಾಕಾರರ ಮೇಲೆ ಪೊಲೀಸರು ದೌರ್ಜನ್ಯ ಎಸಗಿದ್ದಾರೆ. ಈ ದೌರ್ಜನ್ಯವನ್ನು ಖಂಡಿಸಿರುವ ಕಾಂಗ್ರೆಸ್ ನಾಯಕ ರಾಹುಲ್‌ ಗಾಂಧಿ‌, ಭಾರತ ಕೇವಲ ಸತ್ತ ಆರ್ಥಿಕತೆಯಲ್ಲ, ಸತ್ತ ಸಮಾಜವೂ ಆಗುತ್ತಿದೆ ಎಂದು ಕಿಡಿ ಕಾರಿದ್ದಾರೆ.

- Advertisement -

“ಪ್ರತಿಭಟನೆ ನಡೆಸುತ್ತಿದ್ದ ಅತ್ಯಾಚಾರ ಸಂತ್ರಸ್ತೆ ಮೇಲೆ ದೌರ್ಜನ್ಯ ಮತ್ತು ಭಯವನ್ನುಂಟುಮಾಡುವ ಬದಲು ಗೌರವದಿಂದ ನಡೆಸಿಕೊಳ್ಳಬೇಕು ಮತ್ತು ನ್ಯಾಯವನ್ನು ಖಚಿತಪಡಿಸಿಕೊಳ್ಳಬೇಕು” ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

History Repeats | ರೋಮ್‌ ಉರಿಯುತ್ತಿದ್ದಾಗ ಪಿಟೀಲು ನುಡಿಸಿದ...

ದೇಶದ ಪ್ರಜಾಪ್ರಭುತ್ವದ ಆಧಾರಸ್ತಂಭಗಳು ಒಂದೊಂದಾಗಿ ಕುಸಿಯುತ್ತಾ, ಚುನಾವಣಾ ವ್ಯವಸ್ಥೆಯೇ ಅಕ್ರಮ ಎಸಗುತ್ತಿರುವಾಗ, ನಿರುದ್ಯೋಗ-ಬೆಲೆ ಏರಿಕೆಯ ಭಾರದಿಂದ ಜನ ಹೈರಾಣಾಗಿರುವಾಗ ಭಾರತದ ಪ್ರಧಾನಿ ಭಜನೆ ಮಾಡುತ್ತಿದ್ದಾರೆ. ರೋಂ ಹೊತ್ತಿ ಉರಿಯುತ್ತಿದ್ದಾಗ ನೀರೋ ಪಿಟೀಲು...

ಅಪರಾಧಿಗಳ ಪರ ಬಿ ಸಿ ರೋಡ್ ಚಲೋ: ಎಂದಿನಂತೆ...

ಕೊಲೆಯಂತಹ ಗಂಭೀರ ಅಪರಾಧ ಎಸಗಿದ ಆರೋಪ ಹೊತ್ತವರ ಪರವಾಗಿ ಸಂಘಪರಿವಾರ ಬೀದಿಗಿಳಿಯುತ್ತಿರುವುದು ಇದೇ ಮೊದಲೇನಲ್ಲ. ಕರಾವಳಿಯ ಜನತೆ ಇಂತಹ ಪ್ರಚೋದನಾತ್ಮಕ ನಡೆಗಳನ್ನು ತಿರಸ್ಕರಿಸಿ, ಸತ್ಯ ಮತ್ತು ನ್ಯಾಯದ ಪರವಾಗಿ ನಿಲ್ಲಬೇಕಾಗಿದೆ. ಕರಾವಳಿ ಕರ್ನಾಟಕವಾಗಲಿ...

14 ಆಕ್ಷೇಪಗಳಿಂದ SIT ಬೇಡಿಕೆಯವರೆಗೆ: ಗ್ಯಾನೇಶ್‌ ಕುಮಾರ್ ಸುತ್ತ...

ಚುನಾವಣಾ ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಬಹಿರಂಗಗೊಂಡ ಬೆನ್ನಲ್ಲೇ ಎಸ್‌ಐಆರ್‌ ವಿವಾದ ಹೊಸ ತಿರುವು ಪಡೆದುಕೊಂಡಿದೆ. ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್‌ ಕುಮಾರ್ ಅವರ ನಿರ್ಧಾರಗಳ ಕುರಿತು ಚುನಾವಣಾ ಆಯುಕ್ತರಾದ ಸುಖಬೀರ್‌ ಸಿಂಗ್‌ ಸಂಧು ಮತ್ತು...

“ಸಾಮೂಹಿಕ ಅತ್ಯಾಚಾರ ಸಂತ್ರಸ್ತೆಯನ್ನು ಈ ರೀತಿ ನಡೆಸಿಕೊಳ್ಳುವುದು ಸೂಕ್ತವೇ? ನ್ಯಾಯಕ್ಕಾಗಿ ಧ್ವನಿ ಎತ್ತುವ ಧೈರ್ಯ ಹೊಂದಿರುವುದು ಆಕೆಯ ‘ತಪ್ಪೇ? ವಿಶೇಷವಾಗಿ ಸಂತ್ರಸ್ತೆ ಪದೇ ಪದೇ ಕಿರುಕುಳಕ್ಕೊಳಗಾಗುತ್ತಿರುವಾಗ ಮತ್ತು ಭಯದ ನೆರಳಿನಲ್ಲಿ ಬದುಕುತ್ತಿರುವಾಗ ಅಪರಾಧಿ(ಮಾಜಿ ಬಿಜೆಪಿ ಶಾಸಕ ಸೆಂಗಾರ್)ಯ ಶಿಕ್ಷೆ ಅಮಾನತುಗೊಳಿಸಿ, ಜಾಮೀನು ನೀಡಲಾಗಿದೆ ಎಂಬುದು ಅತ್ಯಂತ ನಿರಾಶಾದಾಯಕ ಮತ್ತು ನಾಚಿಕೆಗೇಡಿನ ಸಂಗತಿ” ಎಂದು ಲೋಕಸಭೆಯ ವಿರೋಧ ಪಕ್ಷದ ನಾಯಕ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದ್ದಾರೆ.

“ಅತ್ಯಾಚಾರಿಗಳಿಗೆ ಜಾಮೀನು ಮತ್ತು ಸಂತ್ರಸ್ತೆಯನ್ನು ಅಪರಾಧಿಗಳಂತೆ ನಡೆಸಿಕೊಳ್ಳುವುದು – ಇದು ಯಾವ ರೀತಿಯ ನ್ಯಾಯ?” “ಇಂತಹ ಅಮಾನವೀಯ ಘಟನೆಗಳಿಂದ ನಾವು ಕೇವಲ ಸತ್ತ ಆರ್ಥಿಕತೆ ಮಾತ್ರವಲ್ಲ, ಸತ್ತ ಸಮಾಜದತ್ತ ಸಾಗುತ್ತಿದ್ದೇವೆ” ಎಂದು ಅವರು ಹೇಳಿದರು.

ಪ್ರಜಾಪ್ರಭುತ್ವದಲ್ಲಿ, ಭಿನ್ನಾಭಿಪ್ರಾಯದ ಧ್ವನಿ ಎತ್ತುವುದು ಅವರ ಹಕ್ಕು ಮತ್ತು ಅದನ್ನು ನಿಗ್ರಹಿಸುವುದು ಅಪರಾಧ ಎಂದು ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.

“ಸಂತ್ರಸ್ತರಿಗೆ ಗೌರವ, ಸುರಕ್ಷತೆ ಮತ್ತು ನ್ಯಾಯ ಬೇಕು – ಅಸಹಾಯಕತೆ, ಭಯ ಮತ್ತು ಅನ್ಯಾಯವಲ್ಲ” ಎಂದು ಹೇಳಿದ್ದಾರೆ.

2017 ರ ಉನ್ನಾವೋ ಅತ್ಯಾಚಾರ ಸಂತ್ರಸ್ತೆ ಬುಧವಾರ, ಉಚ್ಚಾಟಿತ ಬಿಜೆಪಿ ನಾಯಕ ಸೆಂಗಾರ್ ಅವರ ಜೈಲು ಶಿಕ್ಷೆಯನ್ನು ಅಮಾನತುಗೊಳಿಸಿದ ದೆಹಲಿ ಹೈಕೋರ್ಟ್ ಆದೇಶದ ವಿರುದ್ಧ ಸುಪ್ರೀಂ ಕೋರ್ಟ್‌ಗೆ ಹೋಗುವುದಾಗಿ ಹೇಳಿದ್ದಾರೆ.

ಸೆಂಗಾರ್‌ಗೆ ಜಾಮೀನು ನೀಡಿದ ತೀರ್ಪಿನ ವಿರುದ್ಧ ಅತ್ಯಾಚಾರ ಸಂತ್ರಸ್ತೆ ಮತ್ತು ಆಕೆಯ ತಾಯಿ ಇಂದು ಮಂಡಿ ಹೌಸ್ ಬಳಿ ಪ್ರತಿಭಟನೆ ನಡೆಸಿದರು. ಈ ವೇಳೆ ಪೊಲೀಸರು ಬಲಪ್ರಯೋಗ ಮಾಡಿದ್ದು, ತಮ್ಮ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ ಕಳ್ಳತನ | ಪ್ರಜಾಪ್ರಭುತ್ವದ ಕೊಲೆಗಡುಕರಿಗೆ ‘ಫಾರ್ಮ್-7’ ಮಾರಕ ಅಸ್ತ್ರ!

ಭಾರತೀಯ ಪ್ರಜಾಪ್ರಭುತ್ವದ ಬೆನ್ನೆಲುಬನ್ನೇ ಮುರಿಯುವ, ಪ್ರಜೆಗಳ ಪವಿತ್ರವಾದ ಮತದಾನದ ಹಕ್ಕನ್ನೇ ಕಸಿದುಕೊಳ್ಳುವ...

ಪದ್ಮಭೂಷಣ ಸಣ್ಣ ವಿಷಯ, ಅವರನ್ನೇ ಪಿಎಂ ಮಾಡಿ: ಗ್ಯಾನೇಶ್‌ರನ್ನು ಹೊಗಳಿಸಿ ಬಿಜೆಪಿ ನಾಯಕರಿಗೆ ಕಾಂಗ್ರೆಸ್ ತಿರುಗೇಟು

ಮುಖ್ಯ ಚುನಾವಣೆ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರ ಕಾರ್ಯವೈಖರಿಯನ್ನು ಪಶ್ಚಿಮ...

ನಾಗಾಲ್ಯಾಂಡ್‌ನಲ್ಲಿ ಕಳ್ಳಭಟ್ಟಿ ಹಾವಳಿ; 19 ಮಂದಿ ಬಲಿ, 3 ಸಾವಿರ ಬಾಟಲಿ ವಶ

ಕಳ್ಳಭಟ್ಟಿ ಸೇವಿಸಿ ಕನಿಷ್ಠ 19 ಮಂದಿ ಮೃತಪಟ್ಟಿರುವ ಆಘಾತಕಾರಿ ಘಟನೆ ನಾಗಾಲ್ಯಾಂಡ್‌ನಲ್ಲಿ...

CEC ಗ್ಯಾನೇಶ್‌ ಕುಮಾರ್‌ ವಿರುದ್ಧ ತನಿಖೆಗೆ ಸುಪ್ರೀಂನಲ್ಲಿ ಅರ್ಜಿ; ಆಯೋಗದ ಡೇಟಾಬೇಸ್‌ ಆಡಿಟ್‌ಗೆ ಮನವಿ

ಮುಖ್ಯ ಚುನಾವಣಾ ಆಯುಕ್ತ (CEC) ಗ್ಯಾನೇಶ್ ಕುಮಾರ್ ವಿರುದ್ಧದ ಆರೋಪಗಳ ತನಿಖೆಗೆ...