ಪತ್ನಿಯೊಂದಿಗೆ ಅಸ್ವಾಭಾವಿಕ ಸೆಕ್ಸ್‌ – ಒಪ್ಪಿಗೆ ಇಲ್ಲದಿದ್ದರೂ ಅತ್ಯಾಚಾರವಲ್ಲ: ಮಧ್ಯಪ್ರದೇಶ ಹೈಕೋರ್ಟ್‌

Date:

“ಪತ್ನಿಗೆ ಒಪ್ಪಿಗೆ ಇಲ್ಲದಿದ್ದರೂ, ಆಕೆಯೊಂದಿಗೆ ಅಸ್ವಾಭಾವಿಕ ಲೈಂಗಿಕತೆಯಲ್ಲಿ ತೊಡಗುವುದನ್ನು ಅತ್ಯಾಚಾರ ಎಂದು ಪರಿಗಣಿಸಲಾಗುವುದಿಲ್ಲ” ಎಂದು ಮಧ್ಯಪ್ರದೇಶದ ಹೈಕೋರ್ಟ್ ತೀರ್ಪು ನೀಡಿದೆ.

- Advertisement -

ಪತಿಯು ತನ್ನ ಪತ್ನಿಯೊಂದಿಗೆ ಗುದ ಸಂಭೋಗ ಮಾಡುವುದು ಅತ್ಯಾಚಾರವಲ್ಲ. ಆಕೆಗೆ ಒಪ್ಪಿಗೆಯಿಲ್ಲದಿದ್ದರೂ ಕೂಡ ಅದನ್ನು ಅತ್ಯಾಚಾರ ಎನ್ನಲಾಗುವುದಿಲ್ಲ” ಎಂದು ನ್ಯಾಯಾಧೀಶರು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

“ಐಪಿಸಿಯ ಸೆಕ್ಷನ್ 375ರ ಅಡಿಯಲ್ಲಿ ‘ಅತ್ಯಾಚಾರ’ ಕುರಿತ ತಿದ್ದುಪಡಿ ವ್ಯಾಖ್ಯಾನದ ಪ್ರಕಾರ, ಮಹಿಳೆಯ ಗುದ ಸಂಭೋಗವು ಅತ್ಯಾಚಾರ ಎಂದು ಹೇಳಲಾಗಿದೆ. ಅದಾಗ್ಯೂ, ಪತಿಯು 15 ವರ್ಷ ವಯಸ್ಸಿಗಿಂತ ಮೇಲ್ಪಟ್ಟ ತನ್ನ ಪತ್ನಿಯೊಂದಿಗೆ ನಡೆಸುವ ಯಾವುದೇ ಲೈಂಗಿಕ ಸಂಭೋಗ ಅಥವಾ ಲೈಂಗಿಕ ಕ್ರಿಯೆಯು ಅತ್ಯಾಚಾರವಲ್ಲ. ಈ ಸಂದರ್ಭಗಳಲ್ಲಿ, ಅಸಹಜ ಕೃತ್ಯಕ್ಕೆ ಹೆಂಡತಿಯ ಒಪ್ಪಿಗೆಯ ಅನುಪಸ್ಥಿತಿ ಕೂಡ ಪ್ರಾಮುಖ್ಯತೆ ಕಳೆದುಕೊಳ್ಳುತ್ತದೆ. ವೈವಾಹಿಕ ಅತ್ಯಾಚಾರವನ್ನು ಇಲ್ಲಿಯವರೆಗೆ ಗುರುತಿಸಲಾಗಿಲ್ಲ” ಎಂದು ಏಕಸದಸ್ಯ ಪೀಠದ ನ್ಯಾಯಮೂರ್ತಿ ಗುರ್ಪಾಲ್ ಸಿಂಗ್ ಅಹ್ಲುವಾಲಿಯಾ ಹೇಳಿದ್ದಾರೆ. ಅಲ್ಲದೆ, ಮಹಿಳೆಯೊಬ್ಬರು ತನ್ನ ಪತಿ ವಿರುದ್ಧ ದಾಖಲಿಸಿದ್ದ ಎಫ್‌ಐಆರ್‌ಅನ್ನು ರದ್ದುಗೊಳಿಸಿದ್ದಾರೆ.

“ಕ್ಷುಲ್ಲಕ ಆರೋಪಗಳ ಆಧಾರದ ಮೇಲೆ ಎಫ್‌ಐಆರ್ ದಾಖಲಿಸಲಾಗಿದೆಯೇ ಎಂಬುದರ ಕುರಿತು ಹೆಚ್ಚಿನ ಚರ್ಚೆಯ ಅಗತ್ಯವಿಲ್ಲ” ಎಂದು ನ್ಯಾಯಾಲಯ ಹೇಳಿರುವುದಾಗಿ ಬಾರ್ ಮತ್ತು ಬೆಂಚ್ ವರದಿ ಮಾಡಿದೆ.

ಇದೇ ರೀತಿಯ ಪ್ರಕರಣದಲ್ಲಿ, 2023ರ ಸೆಪ್ಟೆಂಬರ್ 24 ರಂದು, ಮಧ್ಯಪ್ರದೇಶದ ಹೈಕೋರ್ಟ್ ಕಾಂಗ್ರೆಸ್ ಶಾಸಕ ಉಮಂಗ್ ಸಿಂಘಾರ್ ವಿರುದ್ಧ ಅಸಹಜ ಲೈಂಗಿಕತೆ ಆರೋಪದ ಮೇಲೆ ಅವರ ಪತ್ನಿ ದಾಖಲಿಸಿದ ಎಫ್‌ಐಆರ್‌ಅನ್ನು ರದ್ದುಗೊಳಿಸಿತ್ತು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಾಲಾ ಸಮಸ್ಯೆಗಳ ಕುರಿತು ಗ್ರಾಮ ಸಭೆಯಲ್ಲಿ ಧ್ವನಿ ಎತ್ತಿದ ವಿದ್ಯಾರ್ಥಿಗಳು; ಅಧಿಕಾರಿಗಳ ಮೆಚ್ಚುಗೆ-ಭರವಸೆ

ಸರ್ಕಾರಿ ಶಾಲಾ ವಿದ್ಯಾರ್ಥಿಗಳು ‘ವಿಶೇಷ ಗ್ರಾಮ ಸಭೆ’ಗಳಲ್ಲಿ ಪಾಲ್ಗೊಂಡು, ಪಂಚಾಯತ್ ಪ್ರತಿನಿಧಿಗಳು...

ಉತ್ತರಾಖಂಡ SIR ಅಂತಿಮ ಮತದಾರರ ಪಟ್ಟಿ ಪ್ರಕಟ: ಆದರೆ ಮುಗಿದಿಲ್ಲ ನೋಂದಣಿ ಪ್ರಕ್ರಿಯೆ

ಉತ್ತರಾಖಂಡ ರಾಜ್ಯದಲ್ಲಿ ನಡೆದ 'ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ' (ಎಸ್‌ಐಆರ್)...

ವಾಹನ ದಟ್ಟಣೆಯ ಸುಳಿಯಲ್ಲಿ ಮನಾಲಿ; ಪ್ರವಾಸೋದ್ಯಮದ ಒತ್ತಡಕ್ಕೆ ನಲುಗುತ್ತಿವೆಯೇ ಬೆಟ್ಟಗಳು?

ಮುಂಗಾರು ಮಳೆ ಕಡಿಮೆಯಾಗುತ್ತಿದ್ದಂತೆ ಹಿಮಾಚಲ ಪ್ರದೇಶದ ಪ್ರವಾಸಿ ತಾಣಗಳಿಗೆ ಪ್ರವಾಸಿಗರ ಆಗಮನ...