ಬಸ್‌ನ ಡ್ಯಾಶ್‌ಬೋರ್ಡ್‌ನಲ್ಲಿ ‘ಫ್ಯಾಮಿಲಿ ಫೋಟೋ’ ಇರಿಸಲು ಯುಪಿ ಚಾಲಕರಿಗೆ ಮನವಿ!

Date:

ರಸ್ತೆ ಅಪಘಾತಗಳ ಸಂಖ್ಯೆಯನ್ನು ಕಡಿಮೆ ಮಾಡಲು ಉತ್ತರ ಪ್ರದೇಶ ಸಾರಿಗೆ ಇಲಾಖೆ ಹೊಸ ತಂತ್ರವನ್ನು ರೂಪಿಸಿದ್ದು, ಬಸ್‌ನ ಡ್ಯಾಶ್‌ಬೋರ್ಡ್‌ನಲ್ಲಿ ‘ಫ್ಯಾಮಿಲಿ ಫೋಟೋ’ (ಕುಟುಂಬದ ಚಿತ್ರ) ಇರಿಸಲು ಬಸ್ ಚಾಲಕರಿಗೆ ತಿಳಿಸಲಾಗಿದೆ.

- Advertisement -

ಎಲ್ಲಾ ವಾಣಿಜ್ಯ ವಾಹನಗಳು ಮತ್ತು ರಾಜ್ಯ ಬಸ್‌ಗಳ ಚಾಲಕರು ತಮ್ಮ ಕುಟುಂಬಸ್ಥರ ಚಿತ್ರವನ್ನು ಡ್ಯಾಶ್‌ಬೋರ್ಡ್‌ನಲ್ಲಿ ಇರಿಸುವಂತೆ ಸಾರಿಗೆ ಆಯುಕ್ತ ಚಂದ್ರಭೂಷಣ್ ಸಿಂಗ್ ಮನವಿ ಮಾಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

“ಈ ಕಾರ್ಯವನ್ನು ಮೊದಲು ಆಂಧ್ರಪ್ರದೇಶ ಮಾಡಲಾಗಿದೆ. ನಾವು ಆಂಧ್ರಪ್ರದೇಶದಂತಹ ಕ್ರಮವನ್ನು ಈಗ ಕೈಗೊಳ್ಳಲು ಮುಂದಾಗಿದ್ದೇವೆ” ಎಂದು ಎಂದು ಸಾರಿಗೆ ಪ್ರಧಾನ ಕಾರ್ಯದರ್ಶಿ ಎಲ್.ವೆಂಕಟೇಶ್ವರ್‌ ಹೇಳಿದ್ದಾರೆ.

ಇದನ್ನು ಓದಿದ್ದೀರಾ?  ರಾಜ್ಯದಲ್ಲಿ ದಿನನಿತ್ಯ 34 ಮಂದಿ ರಸ್ತೆ ಅಪಘಾತದಲ್ಲಿ ಸಾವು: ಅಲೋಕ್ ಕುಮಾರ್

ಚಾಲಕರ ಮುಂದೆ ತನ್ನ ಕುಟುಂಬಸ್ಥರ ಫೋಟೋ ಇರುವುದರಿಂದ ಅವರು ಬಸ್ ಚಲಾಯಿಸುವಾಗ ಸುರಕ್ಷತೆಗೆ ಅಧಿಕ ಆದ್ಯತೆ ನೀಡುತ್ತಾರೆ. ಕುಟುಂಬವನ್ನು ನೋಡಿ ಅಂತ ಭಾವನೆ ಅವರು ಬೆಳೆಸುವ ಗುರಿಯನ್ನು ನಾವು ಹೊಂದಿದ್ದೇವೆ ಎಂದು ಎಲ್.ವೆಂಕಟೇಶ್ವರ್‌ ತಿಳಿಸಿದ್ದಾರೆ.

“ಬಸ್ ಚಲಾಯಿಸುವಾಗ ಕುಟುಂಬಸ್ಥರ ಚಿತ್ರ ಎದುರಲ್ಲೇ ಇದ್ದರೆ ಚಾಲಕರಿಗೆ ತಮ್ಮ ಕುಟುಂಬದ ನೆನೆಪಾಗುತ್ತದೆ ಮತ್ತು ಇದು ಸುರಕ್ಷಿತವಾಗಿ ಬಸ್ ಚಲಾಯಿಸಲು ಇನ್ನಷ್ಟು ಪ್ರೋತ್ಸಾಹವನ್ನು ನೀಡಿದಂತಾಗುತ್ತದೆ” ಎಂದು ಅಧಿಕಾರಿ ಅಭಿಪ್ರಾಯಿಸಿದ್ದಾರೆ.

ಆಯುಕ್ತರ ಪ್ರಕಾರ, ಈ ಕ್ರಮವು ಆಂಧ್ರಪ್ರದೇಶದಲ್ಲಿ ರಸ್ತೆ ಅಪಘಾತಗಳನ್ನು ಯಶಸ್ವಿಯಾಗಿ ಕಡಿಮೆ ಮಾಡಿದೆ. ಇನ್ನು ಉತ್ತರ ಪ್ರದೇಶದಲ್ಲಿ 2022 ರಲ್ಲಿ 22,596 ರಸ್ತೆ ಅಪಘಾತ ಪ್ರಕರಣಗಳು ದಾಖಲಾಗಿದ್ದು, 2023 ರಲ್ಲಿ 23,652ಕ್ಕೆ ರಸ್ತೆ ಅಪಘಾತ ಪ್ರಕರಣಗಳ ಪ್ರಮಾಣ ಹೆಚ್ಚಳವಾಗಿದೆ. ಈ ನಿಟ್ಟಿನಲ್ಲಿ ಇಲಾಖೆಯು ನವೀನ ಕ್ರಮಕ್ಕೆ ಮುಂದಾಗಿದೆ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನ್ಯಾಯಾಂಗದ ಮೇಲೆ ಗೌರವವಿದೆ, ತಪ್ಪಾಗಿದ್ದರೆ ಕ್ಷಮೆಯಾಚಿಸುವೆ: ಸಂಜಯ್ ರಾವತ್

ಸುಪ್ರೀಂ ಕೋರ್ಟ್ ಕುರಿತು ತಾವು ನೀಡಿರುವ ಹೇಳಿಕೆಗಳು ಸೂಕ್ತವಲ್ಲ ಅಥವಾ ಅನುಚಿತ...

ವಿರಳಾತಿ ವಿರಳ ಪ್ರಕರಣ: ಮಾಲೆಗಾಂವ್ ಅಪ್ರಾಪ್ತೆಯ ಅತ್ಯಾಚಾರ, ಕೊಲೆ ಅಪರಾಧಿಗೆ ಮರಣದಂಡನೆ ಶಿಕ್ಷೆ

ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ಮಾಲೆಗಾಂವ್ ತಾಲೂಕಿನ ಡೋಂಗರಾಳೆ ಗ್ರಾಮದಲ್ಲಿ ಸಾಡೇನಾಲ್ಕು ವರ್ಷದ...

ತಿರಂಗಾ ಮಾರ್ಚ್ ನಡೆಸದಂತೆ ಅಭಿಜೀತ್ ದೀಪ್ಕೆಗೆ ದೆಹಲಿ ಪೊಲೀಸರಿಂದ ನೋಟಿಸ್: ಮನೆಯ ಬಳಿ ಬಿಗಿ ಭದ್ರತೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರು ದೆಹಲಿಯ...

​ಪ್ರತಿಭಟನೆಗಳ ವರದಿಗಾರಿಕೆಗೆ ಭಾರತೀಯ ಪ್ರೆಸ್ ಕೌನ್ಸಿಲ್‌ನಿಂದ ನೂತನ ಮಾರ್ಗದರ್ಶಿ ಸೂತ್ರಗಳ ಬಿಡುಗಡೆ

ಪ್ರತಿಭಟನೆಗಳು ಮತ್ತು ಧರಣಿ ಸತ್ಯಾಗ್ರಹಗಳ ಸಂದರ್ಭದಲ್ಲಿ ಪತ್ರಕರ್ತರ ಸುರಕ್ಷತೆಯನ್ನು ಕಾಯ್ದುಕೊಳ್ಳಲು, ಜವಾಬ್ದಾರಿಯುತ...