‘ಮೀನು ಸೇವನೆ’ ಆರೋಪ: ಸಿಎಂ ಆದಿತ್ಯನಾಥ್ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿದ ಯುಪಿ ಕಾಂಗ್ರೆಸ್ ಅಧ್ಯಕ್ಷ ಅಜಯ್ ರಾಯ್

Date:

ಅಯೋಧ್ಯೆಯಲ್ಲಿ ಮೀನು ಸೇವನೆ ಮಾಡಿದ್ದರೆ, ಮೀನಿನ ಔಟಣಕೂಟ ಮಾಡಿದ್ದಾರೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ವಿರುದ್ಧ ಉತ್ತರ ಪ್ರದೇಶ ಕಾಂಗ್ರೆಸ್ ಸಮಿತಿ (UPCC) ಅಧ್ಯಕ್ಷ ಅಜಯ್ ರಾಯ್ ಮಂಗಳವಾರ ಲಖನೌದ ಹೆಚ್ಚುವರಿ ಮುಖ್ಯ ಜುಡಿಷಿಯಲ್ ಮ್ಯಾಜಿಸ್ಟ್ರೇಟ್ (MP-MLA) ನ್ಯಾಯಾಲಯದಲ್ಲಿ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದಾರೆ.

- Advertisement -

ಸಿಎಂ ಯೋಗಿ ಆದಿತ್ಯನಾಥ್ ಅವರ ಹೇಳಿಕೆಯು ‘ಸತ್ಯಕ್ಕೆ ದೂರವಾದದ್ದು ಮತ್ತು ಆಕ್ಷೇಪಾರ್ಹ’ ಎಂದು ಕರೆದಿರುವ ಅಜಯ್ ರಾಯ್, ಈ ಆರೋಪದಿಂದ ತಮ್ಮ ಧಾರ್ಮಿಕ ಭಾವನೆಗೆ ಧಕ್ಕೆಯಾಗಿದೆ ಮತ್ತು ಸಮಾಜದಲ್ಲಿ ಗೌರವಕ್ಕೆ ಕುಂದು ಉಂಟಾಗಿದೆ ಎಂದು ನ್ಯಾಯಾಲಯದ ಮೊರೆ ಹೋಗಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಇದನ್ನೂ ಓದಿ: ಕಾವಡ್ ಯಾತ್ರಾ ಮಾರ್ಗದಲ್ಲಿ ಮಾಂಸಾಹಾರ ಮಾರಾಟ: ನಾಲ್ವರನ್ನು ವಶಕ್ಕೆ ಪಡೆದ ಯುಪಿ ಪೊಲೀಸ್, ಅಂಗಡಿ ತೆರವು

ಆಗಸ್ಟ್ 23 ರಂದು ಅಯೋಧ್ಯೆಯಲ್ಲಿ ಕಾಂಗ್ರೆಸ್ ಮುಖಂಡ ರಾಮ್ ನಿಹಾಲ್ ನಿಶಾದ್ ಅವರು ಆಯೋಜಿಸಿದ್ದ ನಿಶಾದ್ ಸಮುದಾಯದ ಕಾರ್ಯಕ್ರಮವೊಂದರಲ್ಲಿ ಅಜಯ್ ರಾಯ್ ಭಾಗವಹಿಸಿದ್ದರು. ಈ ಕಾರ್ಯಕ್ರಮದ ನಂತರ ನಿಶಾದ್ ಸಮುದಾಯದ ಸಂಪ್ರದಾಯದಂತೆ ಮೀನಿನ ಊಟವನ್ನು ಆಯೋಜಿಸಲಾಗಿತ್ತು.

ಆಗಸ್ಟ್ 24ರಂದು ರಾಯ್‌ಬರೇಲಿಯಲ್ಲಿ ನಡೆದ ಸಾರ್ವಜನಿಕ ಸಭೆಯಲ್ಲಿ ಮಾತನಾಡಿದ್ದ ಸಿಎಂ ಯೋಗಿ ಆದಿತ್ಯನಾಥ್, “ಕಾಂಗ್ರೆಸ್ ರಾಜ್ಯಾಧ್ಯಕ್ಷರು ಅಯೋಧ್ಯೆಯ ಹನುಮಾನ್ ಗಢಿ ದೇವಾಲಯಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದ ನಂತರ ಹೊರಗೆ ಬಂದು ಮೀನಿನ ಔಟಣಕೂಟದಲ್ಲಿ ಭಾಗವಹಿಸಿದ್ದಾರೆ. ಇಂತಹ ದ್ವಿಮುಖ ನೀತಿಯನ್ನು ಅನುಸರಿಸುವವರು ಊಸರವಳ್ಳಿಯನ್ನೂ ನಾಚಿಸುವಂತಿದ್ದಾರೆ” ಎಂದು ದೂರಿದ್ದರು. ಸಾಕ್ಷಾತ್ ಶ್ರಾವಣ ಮಾಸದಲ್ಲಿ ಅಯೋಧ್ಯೆಯಲ್ಲಿ ಮೀನು ಸೇವನೆ ಮಾಡುವ ಮೂಲಕ ಸನಾತನ ಧರ್ಮಕ್ಕೆ ಅಪಮಾನ ಮಾಡಲಾಗಿದೆ ಎಂದು ಬಿಜೆಪಿ ನಾಯಕರು ಆರೋಪಿಸಿದ್ದರು.

ಈ ಆರೋಪಗಳನ್ನು ಸಂಪೂರ್ಣವಾಗಿ ತಳ್ಳಿಹಾಕಿರುವ ಅಜಯ್ ರಾಯ್, “ನಾನು ಸಂಪೂರ್ಣ ಸಸ್ಯಾಹಾರಿ, ಶ್ರದ್ಧಾವಂತ ಸನಾತನಿ ಹಾಗೂ ಕಾಶಿ ವಿಶ್ವನಾಥನ ಅನನ್ಯ ಭಕ್ತ. ನಾನು ಯಾವುದೇ ಮಾಂಸಾಹಾರ ಸೇವಿಸುವುದಿಲ್ಲ” ಎಂದು ಸ್ಪಷ್ಟಪಡಿಸಿದ್ದಾರೆ.

ಹಾಗೆಯೇ ತಮ್ಮ ವಿರುದ್ಧ ಹೊರಿಸಲಾದ ಆರೋಪಕ್ಕೆ ಸಾಕ್ಷಿ ನೀಡುವಂತೆ ಸಿಎಂ ಯೋಗಿ ಆದಿತ್ಯನಾಥ್ ಅವರಿಗೆ ಸವಾಲು ಹಾಕಿದ್ದ ರಾಯ್, “ನಾನು ಮೀನು ತಿನ್ನುತ್ತಿರುವ ಒಂದೇ ಒಂದು ಅಧಿಕೃತ ಫೋಟೋ ಅಥವಾ ವೀಡಿಯೊ ಸಾಕ್ಷ್ಯವನ್ನು ತೋರಿಸಿದರೆ ನಾನು ರಾಜಕೀಯದಿಂದಲೇ ನಿವೃತ್ತಿ ಹೊಂದುತ್ತೇನೆ” ಎಂದು ಆಗ್ರಹಿಸಿದ್ದರು. ಯಾವುದೇ ಸಾಕ್ಷಿ ನೀಡದ ಹಿನ್ನೆಲೆಯಲ್ಲಿ ಈಗ ನ್ಯಾಯಾಲಯದ ಮೂಲಕ ಕಾನೂನು ಹೋರಾಟಕ್ಕಿಳಿದಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಈ ದಿನ ಸಂಪಾದಕೀಯ | ಅಂಕಿತಾ ಹತ್ಯೆ ಶಂಕಿತರಿಗೆ ಸಾಂವಿಧಾನಿಕ ಹುದ್ದೆ ಸರಿಯೇ?

ಅಂಕಿತಾ ಭಂಡಾರಿ ಕೊಲೆ ಪ್ರಕರಣದಲ್ಲಿದ್ದ ವಿಐಪಿ ದುಶ್ಯಂತ್‌ ಅವರ ಮೇಲಿನ...

‘ಮೋದಿಯನ್ನು ದೇವರನ್ನಾಗಿಸುವ ಯತ್ನ’: ಬಿಹಾರ ಸಿಎಂ ಹೇಳಿಕೆಗೆ ಪ್ರಶಾಂತ್ ಕಿಶೋರ್ ಕಿಡಿ

ಪ್ರಧಾನಿ ನರೇಂದ್ರ ಮೋದಿ ಅವರು ಶ್ರೀರಾಮನಿಗೂ ಮನೆ ಒದಗಿಸಿದರು ಎಂಬ ಬಿಹಾರ...

ಬಾಗಲಕೋಟೆ | ಎಸ್‌ಐಆರ್ ಪ್ರಕ್ರಿಯೆ ಸ್ಥಗಿತಕ್ಕೆ ಒತ್ತಾಯಿಸಿ ದಲಿತ ಸಂಘರ್ಷ ಸಮಿತಿ ಪ್ರತಿಭಟನೆ

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಜಾಗೊಳಿಸಿ, ಅವರ ವಿರುದ್ಧ ಕ್ರಿಮಿನಲ್...

ಬೆಳಗಾವಿ | ಚೂನಪ್ಪ ಪೂಜೇರಿ, ನಾನು ಸತ್ತರೂ ಒಂದೇ ಗೋರಿಯಲ್ಲಿ ಮಣ್ಣಾಗಬೇಕು: ಶಶಿಕಾಂತ ಗುರೂಜಿ

ಕಬ್ಬು ಬೆಳೆಗಾರರ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಬೆಳಗಾವಿ ಜಿಲ್ಲೆಯ ಹತ್ತರಗಿ...