ಸುಳ್ಳು ಅತ್ಯಾಚಾರ ಆರೋಪ | ಮಹಿಳೆಗೆ ದಂಡ ಸಹಿತ 1653 ದಿನಗಳ ಜೈಲು ಶಿಕ್ಷೆ ವಿಧಿಸಿದ ಉತ್ತರ ಪ್ರದೇಶ ನ್ಯಾಯಾಲಯ

Date:

ಉತ್ತರ ಪ್ರದೇಶದಲ್ಲಿ ಪುರುಷನೋರ್ವನ ಮೇಲೆ ಮಹಿಳೆಯೊಬ್ಬರು ಅತ್ಯಾಚಾರದ ಸುಳ್ಳು ಆರೋಪ ಹೊರಿಸಿದ್ದಕ್ಕಾಗಿ ನ್ಯಾಯಾಲಯವು ತಪ್ಪಿತಸ್ಥ ಮಹಿಳೆಯನ್ನು ದೋಷಿ ಎಂದು ತೀರ್ಪು ನೀಡಿ ಆದೇಶ ಹೊರಡಿಸಿರುವುದ್ದಲ್ಲದೇ, ದಂಡ ಸಹಿತ 1653 ದಿನಗಳ ಜೈಲು ಶಿಕ್ಷೆ ವಿಧಿಸಿದ ಬಗ್ಗೆ ವರದಿಯಾಗಿದೆ.

- Advertisement -

2018ರಲ್ಲಿ ಅತ್ಯಾಚಾರದ ಆರೋಪದ ಮೇಲೆ ಅಜಯ್ ಕುಮಾರ್  ಎಂಬುವವರ ವಿರುದ್ಧ ಮಹಿಳೆಯೋವರು ಅತ್ಯಾಚಾರ ನಡೆಸಿರುವ ಆರೋಪ ಹೊರಿಸಿ, ದೂರು ನೀಡಿದ್ದರು. ಆದರೆ, ಈ ದೂರಿಗೆ ಬೇಕಾದ ಪುರಾವೆಗಳನ್ನು ಸಲ್ಲಿಸಲು ವಿಫಲವಾದುದನ್ನು ಮನಗಂಡ ನ್ಯಾಯಾಲಯವು ಮಹಿಳೆಯು ಸುಳ್ಳು ದೂರು ದಾಖಲಿಸಿರುವನ್ನು ಗಮನಿಸಿದೆ. ನ್ಯಾಯಾಲಯದಲ್ಲಿ ಸುಳ್ಳು ಆರೋಪಗಳನ್ನು ಮಾಡಿದ್ದಕ್ಕಾಗಿ ಸೆಕ್ಷನ್ 195 ಐಪಿಸಿ (ಸುಳ್ಳು ಪುರಾವೆಗಳನ್ನು ನೀಡುವುದು ಅಥವಾ ನಿರ್ಮಿಸುವುದು) ಅಡಿಯಲ್ಲಿ ಮಹಿಳೆಯನ್ನು ದೋಷಿ ಎಂದು ಉತ್ತರ ಪ್ರದೇಶದ ಬರೇಲಿ ಜಿಲ್ಲಾ ನ್ಯಾಯಾಲಯವು ತೀರ್ಪು ನೀಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಹೆಚ್ಚುವರಿ ಜಿಲ್ಲಾ ನ್ಯಾಯಾಧೀಶ ಜ್ಞಾನೇಂದ್ರ ತ್ರಿಪಾಠಿ ಅವರು ಮಹಿಳೆಗೆ 4 ವರ್ಷ, 6 ತಿಂಗಳು ಮತ್ತು 8 ದಿನಗಳ ಕಾಲ (1,653 ದಿನಗಳು) ಜೈಲು ಶಿಕ್ಷೆ ವಿಧಿಸಿದ್ದಾರೆ. ಇದು ಸುಳ್ಳು ಆರೋಪಕ್ಕೆ ಗುರಿಯಾಗಿದ್ದ ಅಜಯ್ ಕುಮಾರ್ ಅಷ್ಟು ದಿನಗಳ ಕಾಲ ಜೈಲಿನಲ್ಲಿ ಶಿಕ್ಷೆ ಅನುಭವಿಸಿದ್ದ ಹಿನ್ನೆಲೆಯಲ್ಲಿ ಅಷ್ಟೇ ದಿನಗಳ ಶಿಕ್ಷೆಯನ್ನು ನ್ಯಾಯಾಧೀಶರು ಮಹಿಳೆಗೂ ವಿಧಿಸಿದ್ದಾರೆ. ಅಲ್ಲದೇ, ಹೆಚ್ಚುವರಿಯಾಗಿ, ದೋಷಿ ಮಹಿಳೆಗೆ ಸುಮಾರು ₹ 5,88,822 ದಂಡ ಕೂಡ ವಿಧಿಸಿರುವ ನ್ಯಾಯಾಧೀಶರು, ದಂಡದ ಮೊತ್ತವನ್ನು ಅಜಯ್ ಕುಮಾರ್ ಅವರಿಗೆ ಪಾವತಿಸುವಂತೆ ತಿಳಿಸಿದ್ದಾರೆ.

ಕೌಶಲ್ಯವಿಲ್ಲದ ಕಾರ್ಮಿಕರಿಗೆ ಉತ್ತರ ಪ್ರದೇಶ ಸರ್ಕಾರ ನಿಗದಿಪಡಿಸಿದ ವೇತನವನ್ನು ಆಧರಿಸಿ ಮೊತ್ತವನ್ನು ಲೆಕ್ಕ ಹಾಕಿ, ಈ ದಂಡ ವಿಧಿಸಲಾಗಿದೆ ಎಂದು ತೀಪು ನೀಡುವಾಗ ನ್ಯಾಯಾಧೀಶರು ಉಲ್ಲೇಖಿಸಿದ್ದಾರೆ.ಈ ಪ್ರಕರಣದ ಬಗ್ಗೆ ತೀರ್ಪು ಪ್ರಕಟಿಸುವ ವೇಳೆ ನ್ಯಾಯಾಲಯವು, ಈ ಪ್ರಕರಣದ ಬಗ್ಗೆ ಅಭಿಪ್ರಾಯ ವ್ಯಕ್ತಪಡಿಸುತ್ತಾ, ಇದು ಅತ್ಯಂತ ಗಂಭೀರ ಪ್ರಕರಣ ಎಂದು ತಿಳಿಸಿದೆ.

“ಮಹಿಳೆಯು ತನ್ನ ರಕ್ಷಣೆಗಾಗಿ ಜಾರಿಗೊಳಿಸಲಾಗಿರುವ ಕಾನೂನನ್ನು ಅಕ್ರಮ ಉದ್ದೇಶಕ್ಕಾಗಿ ಬಳಸಿಕೊಂಡಿದ್ದಾರೆ. ಪೊಲೀಸ್ ಇಲಾಖೆ ಮತ್ತು ನ್ಯಾಯಾಲಯವನ್ನು ದುರುಪಯೋಗಪಡಿಸಿಕೊಂಡಿದ್ದಾರೆ. ಹಾಗಾಗಿ, ಇದು ಸಮಾಜದಲ್ಲಿ ಪುನರಾವರ್ತನೆಯಾಗಬಾರದು. ಕಾನೂನುಗಳ ಮೂಲಕ ಮಹಿಳೆಯರ ಸುರಕ್ಷತೆಯನ್ನು ಖಾತ್ರಿಪಡಿಸುವುದು ಸೂಕ್ತ ಮತ್ತು ನಿರೀಕ್ಷಿತವಾಗಿದ್ದರೂ, ಅನ್ಯಾಯದ ಲಾಭವನ್ನು ಪಡೆಯುವ ಮಹಿಳೆಯರಿಗೆ ಪುರುಷರ ಹಿತಾಸಕ್ತಿಗಳ ಮೇಲೆ ದಾಳಿ ಮಾಡುವ ಸ್ವಾತಂತ್ರ್ಯವನ್ನು ನೀಡಲಾಗುತ್ತದೆ ಎಂದು ಅರ್ಥವಲ್ಲ” ಎಂದು ನ್ಯಾಯಾಲಯವು ತೀರ್ಪು ನೀಡುವ ವೇಳೆ ತಿಳಿಸಿದೆ.

“ಈ ಪ್ರಕರಣದಲ್ಲಿ ತಪ್ಪಿತಸ್ಥ ಮಹಿಳೆಯ ನಡೆಯಿಂದಾಗಿ ನಿಜವಾದ ಬಲಿಪಶು ಮಹಿಳೆಯರಿಗೆ ಹಾನಿಯಾಗುವ ಸಾಧ್ಯತೆಯಿದೆ. ಹೀಗಾಗಿ ಸುಳ್ಳು ದೂರು ನೀಡಿದ ಮಹಿಳೆಗೆ ಶಿಕ್ಷೆ ವಿಧಿಸಲಾಗಿದೆ” ಎಂದು 16 ಪುಟಗಳ ತೀರ್ಪಿನಲ್ಲಿ ನ್ಯಾಯಾಧೀಶರು ಉಲ್ಲೇಖಿಸಿದ್ದಾರೆ.

ಇದನ್ನು ಓದಿದ್ದೀರಾ? ಪ್ರಜ್ವಲ್ ಪ್ರಕರಣ | ಎಸ್‌ಐಟಿ ತನಿಖೆಯಲ್ಲಿ ರಾಜ್ಯ ಸರ್ಕಾರ ಸೂಜಿಯಷ್ಟೂ ಮಧ್ಯಪ್ರವೇಶಿಸಲ್ಲ: ಸಿಎಂ ಸಿದ್ದರಾಮಯ್ಯ

ಯಾವುದೇ ಅತ್ಯಾಚಾರ ಅಥವಾ ಅಪಹರಣದ ಅಪರಾಧ ನಡೆಯದಿದ್ದಾಗ ಸಂತ್ರಸ್ತೆ ಮಹಿಳೆಯು ಪುರುಷನ ವಿರುದ್ಧ ಸುಳ್ಳು ಆರೋಪಗಳನ್ನು ಮಾಡಿದ್ದಾರೆ ಎಂದು ನ್ಯಾಯಾಲಯವು ಕಂಡು ಹಿಡಿದಿದೆ ಮತ್ತು ಆಕೆಯ ಸುಳ್ಳು ಹೇಳಿಕೆಯಿಂದಾಗಿ, ಪುರುಷನು 4 ವರ್ಷಗಳಿಗಿಂತ ಹೆಚ್ಚು ಕಾಲ ಜೈಲಿನಲ್ಲಿ ಇರಬೇಕಾಗಿತ್ತು ಎಂಬುದನ್ನು ಗಮನಿಸಿತು. ಹೀಗಾಗಿ, ಸುಳ್ಳು ದೂರು ನೀಡಿದ್ದ ಮಹಿಳೆಗೆ 1653 ದಿನಗಳ ಜೈಲು ಶಿಕ್ಷೆ ಮತ್ತು ರೂ. 5.8 ಲಕ್ಷ ದಂಡವನ್ನು ವಿಧಿಸಿದೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಸ್ಸಾಂ ಉಪಚುನಾವಣೆ ಅಖಾಡ: ಸಿಎಂ ಶರ್ಮಾ ಮತ್ತು ಕಾಂಗ್ರೆಸ್ ಸಂಸದರ ನಡುವೆ ‘ಬಿರಿಯಾನಿ vs ರಸ್ಕ್’ ವಾಕ್ಸಮರ!

ಅಸ್ಸಾಂನ ನಗಾಂವ್ ಲೋಕಸಭಾ ಕ್ಷೇತ್ರಕ್ಕೆ ನಡೆಯಲಿರುವ ಉಪಚುನಾವಣೆಯ ಪ್ರಚಾರ ಕಣದಲ್ಲಿ ರಾಜಕೀಯ...

ಶಾಲಾ ಸಮಸ್ಯೆಗಳ ಕುರಿತು ಗ್ರಾಮ ಸಭೆಯಲ್ಲಿ ಧ್ವನಿ ಎತ್ತಿದ ವಿದ್ಯಾರ್ಥಿಗಳು; ಅಧಿಕಾರಿಗಳ ಮೆಚ್ಚುಗೆ-ಭರವಸೆ

ಸರ್ಕಾರಿ ಶಾಲಾ ವಿದ್ಯಾರ್ಥಿಗಳು ‘ವಿಶೇಷ ಗ್ರಾಮ ಸಭೆ’ಗಳಲ್ಲಿ ಪಾಲ್ಗೊಂಡು, ಪಂಚಾಯತ್ ಪ್ರತಿನಿಧಿಗಳು...

ಉತ್ತರಾಖಂಡ SIR ಅಂತಿಮ ಮತದಾರರ ಪಟ್ಟಿ ಪ್ರಕಟ: ಆದರೆ ಮುಗಿದಿಲ್ಲ ನೋಂದಣಿ ಪ್ರಕ್ರಿಯೆ

ಉತ್ತರಾಖಂಡ ರಾಜ್ಯದಲ್ಲಿ ನಡೆದ 'ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ' (ಎಸ್‌ಐಆರ್)...