ಯುಪಿ | ಗಾಜಿಯಾಬಾದ್‌ನಲ್ಲಿ ಮಾರಕಾಸ್ತ್ರ ಹಂಚಿಕೆ; 6 ಮಂದಿ ಹಿಂದುತ್ವ ಕೋಮುವಾದಿಗಳ ಬಂಧನ

Date:

ಬಾಂಗ್ಲಾದೇಶದಂತಹ ಪರಿಸ್ಥಿತಿ ಎದುರಾದರೆ, ಹೋರಾಡಲು ಎಲ್ಲ ಹಿಂದುಗಳು ಕತ್ತಿ ಹೊಂದಿರಬೇಕೆಂದು ಹಿಂದುತ್ವವಾದಿ ಸಂಘಟನೆ ‘ಹಿಂದು ರಕ್ಷಾ ದಳ’ದ ಕಾರ್ಯಕರ್ತರು ಪ್ರಚೋದನಾಕಾರಿ ಹೇಳಿಕೆ ನೀಡಿದ್ದಾರೆ. ಉತ್ತರ ಪ್ರದೇಶದ ಗಾಜಿಯಾಬಾದ್‌ನಲ್ಲಿ ಕತ್ತಿಗಳನ್ನು ವಿತರಣೆ ಮಾಡಿದ್ದಾರೆ. ಕತ್ತಿ ಹಂಚಿದ ಆರೋಪದಲ್ಲಿ ಆರು ಮಂದಿ ಹಿಂದುತ್ವವಾದಿಗಳನ್ನು ಪೊಲೀಸರು ಬಂಧಿಸಿದ್ದಾರೆ.

- Advertisement -

ಗಾಜಿಯಾಬಾದ್‌ನ ಶಾಲಿಮಾರ್ ಗಾರ್ಡನ್ ಕಾಲೋನಿಯಲ್ಲಿ ಸುಮಾರು 25ಕ್ಕೂ ಹೆಚ್ಚು ಕತ್ತಿಗಳನ್ನು ಹಿಂದುತ್ವ ಕೋಮುವಾದಿ ಕಾರ್ಯಕರ್ತರು ಹಂಚಿಕೆ ಮಾಡಿದ್ದಾರೆ. ಪ್ರಕರಣದಲ್ಲಿ ಹಿಂದು ರಕ್ಷಾ ದಳದ ಅಧ್ಯಕ್ಷ ಭೂಪೇಂದ್ರ ಚೌಧರಿ (ಪಿಂಕಿ) ಸೇರಿದಂತೆ 17 ಪದಾಧಿಕಾರಿಗಳ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ. ಭೂಪೇಂದ್ರ ಪರಾರಿಯಾಗಿದ್ದಾರೆ ಎಂದು ಉಪ ಪೊಲೀಸ್ ಆಯುಕ್ತ ನಿಮಿಷ್ ಪಾಟೀಲ್ ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ಆರೋಪಿಗಳ ವಿರುದ್ಧ ಗಲಭೆಗೆ ಸಂಚು, ಮಾರಕಾಸ್ತ್ರ ಹೊಂದಿರುವುದುಕ್ಕೆ ಸಂಬಂಧಿಸಿದಂತೆ ಭಾರತೀಯ ನ್ಯಾಯ ಸಂಹಿತಾ (ಬಿಎನ್‌ಎಸ್‌) ಸೆಕ್ಷನ್ 191(2), 191(3), 127(2) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಅವರು ಹೇಳಿದ್ದಾರೆ.

ಶಾಲಿಮಾರ್ ಗಾರ್ಡನ್ ಕಾಲೋನಿಯಲ್ಲಿ ಮೆರವಣಿಗೆ ನಡೆಸಿರುವ ಗುಂಪು, ಹಿಂದುತ್ವವಾಗಿ ಮತ್ತು ಮುಸ್ಲಿಂ ವಿರೋಧಿ ಘೋಷಣೆಗಳನ್ನು ಕೂಗಿದ್ದಾರೆ. ಅಲ್ಲಿನ ಮನೆಗಳಿಗೆ ತೆರಳಿ ಶಸ್ತ್ರಾಸ್ತ್ರಗಳನ್ನು ವಿತರಿಸಿದ್ದಾರೆ. ಸಾಮರಸ್ಯ ಮತ್ತು ಕಾನೂನು ಸುವ್ಯವಸ್ಥೆಯನ್ನು ಕದಡಲು ಯಾವುದೇ ಸಂಘಟನೆಗಳಿಗೂ ಅವಕಾಶ ನೀಡುವುದಿಲ್ಲ. ಹೆಸರಿಸಲಾದ ಮತ್ತು ಹೆಸರಿಸದ ಎಲ್ಲ ಆರೋಪಿಗಳನ್ನು ಶೀಘ್ರದಲ್ಲೇ ಬಂಧಿಸಲಾಗುವುದು” ಎಂದು ಪಾಟೀಲ್ ಹೇಳಿದ್ದಾರೆ.

ಈ ಲೇಖನ ಓದಿದ್ದೀರಾ?: ಉನ್ನಾಂವ್ ಅತ್ಯಾಚಾರ ಹಗರಣ: ಕುಲದೀಪ್ ಸೆಂಗರ್‌ನ ಹೀನಕೃತ್ಯ; ಬಿಜೆಪಿ ನೈತಿಕ ದಿವಾಳಿತನ

ಪ್ರಚೋದನಾಕಾರಿ ಹೇಳಿಕೆ ನೀಡಿರುವ ಭೂಪೇಂದ್ರ ಅವರ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಅದರಲ್ಲಿ; “ಹಿಂದು ಕುಟುಂಬಗಳ ಮೇಲೆ ದಾಳಿ ಮಾಡುವ ಮತ್ತು ಹಿಂದು ಹುಡುಗಿಯರು ಮತ್ತು ಮಹಿಳೆಯರಿಗೆ ಕಿರುಕುಳ ನೀಡುವ ಮುಸ್ಲಿಮರನ್ನು ಎದುರಿಸಲು ಜನರಿಗೆ 250 ಶಸ್ತ್ರಾಸ್ತ್ರಗಳನ್ನು ವಿತರಿಸಲಾಗಿದೆ. ಮುಸ್ಲಿಮರ ವಿರುದ್ಧ ಹೋರಾಡಲು ಹಿಂದುಗಳು ಶಸ್ತ್ರಾಸ್ತ್ರಗಳನ್ನು ಹೊಂದಿರಬೇಕು. ಹಿಂದು ರಕ್ಷಾ ದಳವು ಹಿಂದು ಸಮುದಾಯಕ್ಕೆ ಸಹಾಯ ಮಾಡುತ್ತದೆ” ಎಂದು ಹೇಳಿರುವುದು ಕಂಡುಬಂದಿದೆ.

ಅಲ್ಲದೆ, “ಇತ್ತೀಚಿನ ದಿನಗಳಲ್ಲಿ, ಬಾಂಗ್ಲಾದೇಶದಲ್ಲಿ ಹಿಂದುಗಳ ಸ್ಥಿತಿ ತುಂಬಾ ಶೋಚನೀಯವಾಗಿದೆ. ಅಲ್ಲಿ ಹಿಂದುಗಳನ್ನು ಕೊಲ್ಲಲಾಗುತ್ತಿದೆ. ಬಾಂಗ್ಲಾದೇಶದ ಹಿಂದುಗಳಂತೆ ಭಾರತದ ಹಿಂದುಗಳ ಪರಿಸ್ಥಿತಿ ಆಗಲು ನಾವು ಬಿಡುವುದಿಲ್ಲ” ಎಂದು ಹೇಳಿರುವುದು ಕಾಣುತ್ತದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

22 ನಿಮಿಷದ ಜಾಹೀರಾತು, 75 ಸಾವಿರ ದಂಡ! ಸಿನಿಪ್ಲೆಕ್ಸ್‌ ಕಿವಿಹಿಂಡಿದ ಗ್ರಾಹಕ ವೇದಿಕೆ

ಸಿನಿಮಾ ಶುರುವಾಗುವ ಮುನ್ನ 22 ನಿಮಿಷಗಳ ಕಾಲ ವಾಣಿಜ್ಯ ಜಾಹೀರಾತುಗಳು ಮತ್ತು...

ಸಿಇಸಿ ಗ್ಯಾನೇಶ್‌ ಕುಮಾರ್‌ ವಿರುದ್ಧ ದೇಶವ್ಯಾಪಿ ಪ್ರತಿಭಟನೆ; ಹೈದರಾಬಾದ್‌ನಲ್ಲಿ ‘ಸಿಜೆಪಿ’ ಮಹತ್ವದ ಸಭೆ

ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ...

ಜಮ್ಮು-ಕಾಶ್ಮೀರಕ್ಕೆ ಪೂರ್ಣ ರಾಜ್ಯ ಸ್ಥಾನಮಾನದ ನಿರ್ಣಯ ಅಂಗೀಕಾರ; ಸದನದಲ್ಲಿ ಬಿಜೆಪಿ ಗದ್ದಲ

ಜಮ್ಮು-ಕಾಶ್ಮೀರಕ್ಕೆ ತುರ್ತಾಗಿ ಪೂರ್ಣ ರಾಜ್ಯದ ಸ್ಥಾನಮಾನವನ್ನು ಮರುಸ್ಥಾಪಿಸಬೇಕು ಎಂದು ಆಗ್ರಹಿಸುವ ನಿರ್ಣಯವನ್ನು...

ಅಕ್ಟೋಬರ್ 8ರೊಳಗೆ ಪಶ್ಚಿಮ ಬಂಗಾಳ ಶಾಸಕರ ಅನರ್ಹತೆ ಅರ್ಜಿಗಳ ವಿಲೇವಾರಿಗೆ ಸ್ಪೀಕರ್​ಗೆ ಸುಪ್ರೀಂ ಸೂಚನೆ

ಪಕ್ಷಾಂತರ ನಿಷೇಧ ಕಾಯ್ದೆ ಹಾಗೂ ಸಂವಿಧಾನದ ಹತ್ತನೇ ಶೆಡ್ಯೂಲ್‌ನ ಅಡಿಯಲ್ಲಿ, ರಿತಬ್ರತಾ...