ಯುಪಿ ಚುನಾವಣೆ-2027: ವಿವಾದಾತ್ಮಕ ಹೇಳಿಕೆ ನೀಡದಂತೆ ಬಿಜೆಪಿಗೆ ಆರ್‌ಎಸ್‌ಎಸ್‌ ‘ಪಾಠ’!

Date:

ಉತ್ತರ ಪ್ರದೇಶದಲ್ಲಿ 2027ರಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಗೆ ಆರ್‌ಎಸ್‌ಎಸ್‌ ಈಗಿನಿಂದಲೇ ತಯಾರಿ ಆರಂಭಿಸಿದೆ. ರಾಜ್ಯದ ಬಿಜೆಪಿ ನಾಯಕರು ಮತ್ತು ಸಚಿವರಿಗೆ ಕಟ್ಟುನಿಟ್ಟಿನ ಎಚ್ಚರಿಕೆಗಳನ್ನು ನೀಡಿದೆ. “ವಿವಾದಾತ್ಮಕ ಹೇಳಿಕೆಗಳಿಂದ ದೂರವಿರಿ ಮತ್ತು ಕಾರ್ಯಶೈಲಿಯನ್ನು ಸುಧಾರಿಸಿಕೊಳ್ಳಿ” ಎಂದು ಯೋಗಿ ಆದಿತ್ಯನಾಥ್ ಸರ್ಕಾರದ ಸಚಿವರು ಮತ್ತು ಶಾಸಕರಿಗೆ ಆರ್‌ಎಸ್‌ಎಸ್‌ ಪಾಠ ಹೇಳಿದೆ.

- Advertisement -

ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ನಿವಾಸದಲ್ಲಿ ನಡೆದ ಸಮನ್ವಯ ಸಭೆಯಲ್ಲಿ ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್ ಭಾಗವತ್ ಬಿಜೆಪಿಗರಿಗೆ ಪಾಠ ಹೇಳಿದ್ದಾರೆ. “ಸರ್ಕಾರ ಮತ್ತು ಸಂಘಟನೆಯ ನಡುವೆ ಯಾವುದೇ ಭಿನ್ನಾಭಿಪ್ರಾಯಗಳು ಮೂಡದಂತೆ ಎಚ್ಚರಿಕೆ ವಹಿಸಬೇಕು. ಸಚಿವರು ಮತ್ತು ಶಾಸಕರ ನಡುವಿನ ಸಮನ್ವಯದ ಕೊರತೆಯು ಪಕ್ಷದ ಸಂಘಟನಾ ಶಕ್ತಿಯನ್ನು ಕುಂದಿಸುತ್ತಿದೆ” ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕಲಬುರಗಿ | ‘ನಮ್ಮನ್ನ ಎಲ್ಲಿಗೆ ಕಳುಹಿಸುತ್ತೀರಿ?’: ತಗ್ಗಿನ ಬೇಲಿಯ...

92ಕ್ಕೂ ಅಧಿಕ ಸ್ಲಂ ಕುಟುಂಬಗಳ ಬದುಕು ಕೇವಲ ಜಮೀನಿನ ಹಕ್ಕಿನ ಪ್ರಶ್ನೆಯಲ್ಲ; ಅವರ ಸುರಕ್ಷಿತ ಓಡಾಟ, ಕುಡಿಯುವ ನೀರು ಹಾಗೂ ನಿತ್ಯದ ಬದುಕಿನ ಹಕ್ಕಿನ ಪ್ರಶ್ನೆಯೂ ಹೌದು. ನ್ಯಾಯಾಲಯದ ವಿಚಾರಣೆ ಅಂತಿಮಗೊಳ್ಳುವವರೆಗೆ ಯಾವುದೇ...

ಚುನಾವಣಾ ಆಯೋಗದ ಸಭೆ: ಪರಿಹಾರವಲ್ಲ, ತೇಪೆ ಹಚ್ಚುವ ಕಾರ್ಯಕ್ರಮ

ಅವೈಜ್ಞಾನಿಕ 'SIR' ಪ್ರಕ್ರಿಯೆ ಮತ್ತು ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಸಾರ್ವಜನಿಕವಾಗಿ ಬಯಲಾದ ಬೆನ್ನಲ್ಲೇ ಬಿಡುಗಡೆಯಾದ ಚುನಾವಣಾ ಆಯೋಗದ ಪತ್ರಿಕಾ ಪ್ರಕಟಣೆ, ತಪ್ಪುಗಳನ್ನು ತಿದ್ದುವ ಬದಲು ವ್ಯವಸ್ಥೆಯ ಲೋಪಗಳಿಗೆ ತೇಪೆ ಹಚ್ಚುವ ಯತ್ನದಂತೆ ಕಾಣುತ್ತಿದೆ. ದೇಶದ ಇತಿಹಾಸದಲ್ಲೇ...

ಹೊರಟ್ಟಿ ಅವರ ಹೋರಾಟದ ಬದುಕು ಮತ್ತು ಅವರ ಭಕ್ತ...

ಗ್ಯಾರಂಟಿ ಯೋಜನೆಗಳಿಂದ ಕೂಲಿ ಕಾರ್ಮಿಕರು ಸಿಗುತ್ತಿಲ್ಲವೆಂಬ ಬಸವರಾಜ ಹೊರಟ್ಟಿ ಅವರ ಹೇಳಿಕೆ ಮತ್ತು ಅದಕ್ಕೆ ಸಿಕ್ಕ ಸಾರ್ವಜನಿಕ ಚಪ್ಪಾಳೆಗಳು, ಕೇವಲ ಹಸಿವನ್ನೇ ಶ್ರಮದ ಇಂಧನವನ್ನಾಗಿ ನೋಡುವ ಸಮಾಜದ ಕ್ರೂರ ಮನಸ್ಥಿತಿಯನ್ನು ಅನಾವರಣಗೊಳಿಸುತ್ತವೆ. ಬಸವರಾಜ ಹೊರಟ್ಟಿ...

“ಮುಂಬರುವ ಚುನಾವಣೆಯಲ್ಲಿ ಜಾತಿ ರಾಜಕಾರಣದ ಬದಲು ‘ರಾಷ್ಟ್ರೀಯತೆ’ಯನ್ನು ಪ್ರಮುಖ ಅಸ್ತ್ರವನ್ನಾಗಿ ಮಾಡಿಕೊಳ್ಳಬೇಕು. ನಾಯಕರು ಜಾತಿ ಸಂಬಂಧಿತ ಸೂಕ್ಷ್ಮ ವಿಷಯಗಳ ಬಗ್ಗೆ ಮಾತನಾಡಿ ವಿವಾದ ಸೃಷ್ಟಿಸಬಾರದು” ಎಂದು ಸೂಚಿಸಿದ್ದಾರೆ.

ಈ ಲೇಖನ ಓದಿದ್ದೀರಾ?: ಮೋದಿಯ ಸಣ್ಣತನವನ್ನು ದೊಡ್ಡತನದಿಂದ ಸೋಲಿಸಿದ ಇರಾನ್‌!

ಕಳೆದ ಎರಡು ತಿಂಗಳುಗಳಿಂದ ಉತ್ತರ ಪ್ರದೇಶದಾದ್ಯಂತ ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಪ್ರವಾಸ ನಡೆಸುತ್ತಿದ್ದಾರೆ. ಅಲ್ಲಿನ ಬಿಜೆಪಿ ಕಾರ್ಯಕರ್ತರ ಮನಸ್ಥಿತಿಯನ್ನು ಅರಿತಿದ್ದಾರೆ. ಪಕ್ಷದ ತಳಮಟ್ಟದ ಕಾರ್ಯಕರ್ತರಲ್ಲಿರುವ ಅಸಮಾಧಾನವನ್ನು ಹೋಗಲಾಡಿಸುವುದು ತಮ್ಮ ಉದ್ದೇಶವೆಂದು ಹೇಳಿಕೊಂಡಿದ್ದಾರೆ.

ಲವ್ ಜಿಹಾದ್, ಅಕ್ರಮ ಮತಾಂತರದಂತಹ ವಿಷಯಗಳ ಜೊತೆಗೆ ನೇಪಾಳ ಗಡಿಗೆ ಹೊಂದಿಕೊಂಡಿರುವ ಜಿಲ್ಲೆಗಳಲ್ಲಿ ಹೆಚ್ಚಿನ ಜಾಗರೂಕತೆ ವಹಿಸುವಂತೆ ಸರ್ಕಾರಕ್ಕೆ ಭಾಗವತ್ ಸೂಚನೆ ನೀಡಿದ್ದಾರೆ.

ಉತ್ತರ ಪ್ರದೇಶದ ಅವಧ್, ಕಾಶಿ, ಬ್ರಜ್, ಕಾನ್ಪುರ ಸೇರಿದಂತೆ ವಿವಿಧ ಪ್ರಾಂತ್ಯಗಳ ಬಿಜೆಪಿ ಪದಾಧಿಕಾರಿಗಳು ಸಭೆಯಲ್ಲಿ ತಮ್ಮ ಅಭಿಪ್ರಾಯ ಹಂಚಿಕೊಂಡಿದ್ದಾರೆ. ಕೆಲವು ಸಚಿವರ ವರ್ತನೆಯಿಂದಾಗಿ ಪಕ್ಷದ ವರ್ಚಸ್ಸಿಗೆ ಧಕ್ಕೆಯಾಗುತ್ತಿದೆ ಎಂಬ ದೂರುಗಳು ಕೇಳಿಬಂದಿವೆ ಎಂದು ವರದಿಯಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡಿನಲ್ಲಿ ತೀವ್ರ ವಿರೋಧ: ‘ಆರ್‌ಟಿಐ ವಿನಾಯಿತಿ’ ನಿರ್ಧಾರದಿಂದ ಹಿಂದೆ ಸರಿದ ವಿಜಯ್ ಸರ್ಕಾರ

ತಮಿಳುನಾಡಿನ ಮುಖ್ಯಮಂತ್ರಿ ಸಿ. ಜೋಸೆಫ್ ವಿಜಯ್ ನೇತೃತ್ವದ 'ತಮಿಳಗ ವೆಟ್ರಿ ಕಳಗಂ'...

ಗಾಜಾದಲ್ಲಿ ಮೃತರ ಸಂಖ್ಯೆ 74,000 ದಾಟಿದೆ: ಆರೋಗ್ಯ ಸಚಿವಾಲಯ

ಇಸ್ರೇಲ್ ನಡೆಸುತ್ತಿರುವ ದೀರ್ಘಕಾಲದ ಕ್ರೌರ್ಯದಿಂದಾಗಿ ಗಾಜಾ ಪಟ್ಟಿಯಲ್ಲಿ ಮೃತರ ಸಂಖ್ಯೆ 74,000...

ಅಸ್ಸಾಂ ಸರ್ಕಾರದ ವೈಫಲ್ಯಗಳನ್ನು ಮುಚ್ಚಿಡಲು ನಮ್ಮ ಬಂಧನ: ಸಿಜೆಪಿ ನಾಯಕ ಅಶುತೋಷ್ ರಂಕಾ ಆರೋಪ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಹ-ಸಂಚಾಲಕ ಅಶುತೋಷ್ ರಂಕಾ ಮತ್ತು ಅವರ...