ಯುಪಿ ಚುನಾವಣೆ: ಎಸ್‌ಪಿ ಜೊತೆ ಮೈತ್ರಿಗೆ ವಿಳಂಬ ಬೇಡ, ರಾಹುಲ್‌ಗೆ ಕಾಂಗ್ರೆಸ್ ಸಂಸದರ ಒತ್ತಾಯ

Date:

ಉತ್ತರ ಪ್ರದೇಶದಲ್ಲಿ 2027ರಲ್ಲಿ ನಡೆಯುವ ವಿಧಾನಸಭೆ ಚುನಾವಣೆಗೆ ಸಂಬಂಧಿಸಿದಂತೆ ಸಮಾಜವಾದಿ ಪಕ್ಷದ (ಎಸ್‌ಪಿ) ಜೊತೆಗೆ ಆದಷ್ಟು ಶೀಘ್ರವಾಗಿ ಮೈತ್ರಿ ಒಪ್ಪಂದವನ್ನು ಅಂತಿಮಗೊಳಿಸುವಂತೆ ಆ ರಾಜ್ಯದ ಕಾಂಗ್ರೆಸ್ ಸಂಸದರು ಪಕ್ಷದ ವರಿಷ್ಠರಿಗೆ ಸಲಹೆ ನೀಡಿದ್ದಾರೆ. ಸ್ಥಳೀಯ ಮಟ್ಟದಲ್ಲಿ ಉಭಯ ಪಕ್ಷಗಳ ಮುಖಂಡರ ನಡುವಿನ ಹೇಳಿಕೆಗಳ ಸಮರವು ಕಾರ್ಯಕರ್ತರಿಗೆ ತಪ್ಪು ಸಂದೇಶ ರವಾನಿಸುತ್ತಿರುವ ಹಿನ್ನೆಲೆಯಲ್ಲಿ, ಮೈತ್ರಿಯನ್ನು ಬೇಗನೆ ಖಚಿತಪಡಿಸುವುದು ಸೂಕ್ತ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

- Advertisement -

ಮೂಲಗಳ ಪ್ರಕಾರ, ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಮಂಗಳವಾರ ಉತ್ತರ ಪ್ರದೇಶದ ಕಾಂಗ್ರೆಸ್ ಸಂಸದರ ಸಭೆ ಕರೆದಿದ್ದರು. ಮುಂಬರುವ ವಿಧಾನಸಭೆ ಚುನಾವಣೆ ಕುರಿತು ರಾಜ್ಯಸಭೆ ಹಾಗೂ ಲೋಕಸಭಾ ಸದಸ್ಯರ ಅಭಿಪ್ರಾಯಗಳನ್ನು ಅವರು ಆಲಿಸಿದ್ದು, ಈ ಮಹತ್ವದ ಸಭೆಯಲ್ಲಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಕೂಡ ಉಪಸ್ಥಿತರಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಸುಪ್ರೀಂ ಆದೇಶವಿದ್ದರೂ ರಂಗೋಲಿ ಕೆಳಗೆ ತೂರುವ ಪೊಲೀಸರು: ಬಂಧಿತರ...

ಬಂಧಿಸಿದ 24 ಗಂಟೆಗಳ ಒಳಗಾಗಿ ಆರೋಪಿಯನ್ನು ನ್ಯಾಯಾಧೀಶರ ಮುಂದೆ ಹಾಜರುಪಡಿಸುವುದು ಸಂವಿಧಾನ ಬದ್ಧ ಹಕ್ಕು. ವಿಳಂಬವಾದರೆ ಬಿಡುಗಡೆ ಕಡ್ಡಾಯವೆಂದು ಸುಪ್ರೀಂ ಕೋರ್ಟ್ ಆದೇಶವಿದೆ. ಆದರೆ ಗಡಿಯಾರ ಟಿಕ್ ಟಿಕ್ ಅನ್ನುತ್ತಿದ್ದರೂ, ದಾಖಲೆಗಳಲ್ಲಿ ಸಮಯವನ್ನು...

ಕೊಪ್ಪಳ | 3 ವರ್ಷದಲ್ಲಿ 35,302 ಜಾನುವಾರುಗಳ ಸಾವು;...

ರೋಗಬಾಧೆ, ಅಪಘಾತ ಹಾಗೂ ವಿವಿಧ ಆಕಸ್ಮಿಕ ಕಾರಣಗಳಿಂದ ಕೊಪ್ಪಳ ಜಿಲ್ಲೆಯಲ್ಲಿ ಜಾನುವಾರುಗಳ ಸಾವಿನ ಪ್ರಕರಣಗಳು ಹೆಚ್ಚುತ್ತಿದ್ದು, ಜಾನುವಾರು ಕಳೆದುಕೊಂಡ ರೈತರು ಒಂದೆಡೆ ಆರ್ಥಿಕ ಸಂಕಷ್ಟ ಎದುರಿಸುತ್ತಿದ್ದರೆ, ಮತ್ತೊಂದೆಡೆ ಸರ್ಕಾರದ ಪರಿಹಾರಕ್ಕಾಗಿ ಕಚೇರಿಗಳಿಗೆ ಅಲೆದಾಡುವಂತಾಗಿದೆ. ಕೊಪ್ಪಳ...

ಕೊಪ್ಪಳ | 8 ತಿಂಗಳಿನಿಂದ ಕಿಟ್‌ ವಿತರಣೆಯಿಲ್ಲ, ಮಲಗಲು...

ಕೊಪ್ಪಳ ನಗರದ ಡಾ.ಬಿ ಆರ್‌ ಅಂಬೇಡ್ಕರ್ ಸರಕಾರಿ ಮೆಟ್ರಿಕ್‌ ನಂತರದ ಬಾಲಕರ ವೃತ್ತಿಪರ ವಸತಿ (ಪರಿಶಿಷ್ಟ ಜಾತಿ) ನಿಲಯದಲ್ಲಿ ಮೂಲಭೂತ ಸೌಲಭ್ಯಗಳ ಕೊರತೆಯಿಂದ ವಿದ್ಯಾರ್ಥಿಗಳು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ. ಕಳೆದ ಸುಮಾರು...

ಸಭೆಯಲ್ಲಿ ಪಾಲ್ಗೊಂಡಿದ್ದ ಪ್ರಮೋದ್ ತಿವಾರಿ, ರಾಜೀವ್ ಶುಕ್ಲಾ, ಇಮ್ರಾನ್ ಪ್ರತಾಪ್‌ಗಢಿ, ಕಿಶೋರಿ ಲಾಲ್ ಶರ್ಮಾ, ಉಜ್ವಲ್ ರಮಣ್ ಸಿಂಗ್, ರಾಜೇಶ್ ರಾಥೋಡ್, ತನುಜ್ ಪುನಿಯಾ ಮತ್ತು ಇಮ್ರಾನ್ ಮಸೂದ್ ಸೇರಿದಂತೆ ಎಲ್ಲಾ ಸಂಸದರು ಎಸ್‌ಪಿ ಜೊತೆಗಿನ ಮೈತ್ರಿಗೆ ಒಕ್ಕೊರಲಿನ ಬೆಂಬಲ ವ್ಯಕ್ತಪಡಿಸಿದ್ದಾರೆ. 2024ರ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಹಾಗೂ ಸಮಾಜವಾದಿ ಪಕ್ಷಗಳು ಜೊತೆಯಾಗಿ ಎದುರಿಸಿ ಆಡಳಿತರೂಢ ಬಿಜೆಪಿಗೆ ಪ್ರಬಲ ಪೈಪೋಟಿ ನೀಡಿದ್ದನ್ನು ಇಲ್ಲಿ ಸ್ಮರಿಸಬಹುದು. ಆದರೆ, ಕೇವಲ ‘ಹೆಚ್ಚಿನ ಸಂಖ್ಯೆಯ’ ಕ್ಷೇತ್ರಗಳನ್ನು ಕೇಳುವ ಬದಲು ‘ಗೆಲ್ಲುವ ಸಾಮರ್ಥ್ಯವಿರುವ ಅತ್ಯುತ್ತಮ ಕ್ಷೇತ್ರಗಳನ್ನು’ ಎಸ್‌ಪಿಯಿಂದ ಪಡೆದುಕೊಳ್ಳಲು ವರಿಷ್ಠರು ಆದ್ಯತೆ ನೀಡಬೇಕು ಎಂದು ಸಂಸದರು ಒತ್ತಾಯಿಸಿದ್ದಾರೆ.

ಸಭೆಯಲ್ಲಿ ಮಾತನಾಡಿದ ಸಂಸದರೊಬ್ಬರು ಬಿಹಾರದ 2015 ಮತ್ತು 2021ರ ಚುನಾವಣೆಗಳ ಉದಾಹರಣೆ ನೀಡಿ, 2015ರಲ್ಲಿ ಕಾಂಗ್ರೆಸ್ ಕಡಿಮೆ ಸ್ಥಾನಗಳಲ್ಲಿ ಸ್ಪರ್ಧಿಸಿದರೂ ಹೆಚ್ಚಿನ ಸೀಟುಗಳನ್ನು ಗೆದ್ದುಕೊಂಡಿತ್ತು, ಆದರೆ ಐದು ವರ್ಷಗಳ ಬಳಿಕ ಹೆಚ್ಚು ಸ್ಥಾನಗಳಲ್ಲಿ ಸ್ಪರ್ಧಿಸಿದರೂ ಗೆದ್ದ ಸೀಟುಗಳ ಸಂಖ್ಯೆ ತೀರಾ ಕಡಿಮೆಯಾಗಿತ್ತು ಎಂಬುದನ್ನು ವಿವರಿಸಿ ಗೆಲ್ಲುವ ಕ್ಷೇತ್ರಗಳ ಆಯ್ಕೆಯ ಮಹತ್ವವನ್ನು ಒತ್ತಿಹೇಳಿದರು.

ಸಮಾಜವಾದಿ ಪಕ್ಷದೊಂದಿಗಿನ ಸೀಟು ಹಂಚಿಕೆ ಮಾತುಕತೆ ಯಾವ ರೀತಿ ಇರಲಿದೆ ಅಥವಾ ಕಾಂಗ್ರೆಸ್ ಎಷ್ಟು ಸ್ಥಾನಗಳನ್ನು ನಿರೀಕ್ಷಿಸುತ್ತಿದೆ ಎಂಬುದರ ಬಗ್ಗೆ ರಾಹುಲ್ ಗಾಂಧಿ ಅವರು ಸಭೆಯಲ್ಲಿ ಯಾವುದೇ ನಿರ್ದಿಷ್ಟ ಸುಳಿವು ನೀಡಿಲ್ಲ ಎಂದು ಮೂಲಗಳು ತಿಳಿಸಿವೆ. ಬಹುತೇಕ ಸಂಸದರ ಒಲವು ಗಮನಿಸಿದರೆ, ಎಸ್‌ಪಿ ಜೊತೆಗಿನ ಮೈತ್ರಿ ಶೀಘ್ರದಲ್ಲೇ ಅಂತಿಮಗೊಳ್ಳುವ ಮತ್ತು ಸೀಟು ಹಂಚಿಕೆ ಮಾತುಕತೆಗಳು ಗಂಭೀರವಾಗಿ ಆರಂಭವಾಗುವ ಲಕ್ಷಣಗಳು ಗೋಚರಿಸುತ್ತಿವೆ.

ಉತ್ತರ ಪ್ರದೇಶದ ಕಾಂಗ್ರೆಸ್ ಉಸ್ತುವಾರಿಯಾಗಿ ಹೊಸದಾಗಿ ನೇಮಕಗೊಂಡಿರುವ ರಾಜೇಂದ್ರ ಪಾಲ್ ಗೌತಮ್ ಅವರು ಈಗಾಗಲೇ ಕ್ಷೇತ್ರಗಳ ಪರಿಶೀಲನಾ ಕಾರ್ಯವನ್ನು ಆರಂಭಿಸಿದ್ದಾರೆ. ಪ್ರತಿಯೊಂದು ವಿಧಾನಸಭೆ ಕ್ಷೇತ್ರದಲ್ಲಿ ಪಕ್ಷದ ನೈಜ ಬಲವನ್ನು ಅಳೆಯಲು ಕಾಂಗ್ರೆಸ್ ಆಂತರಿಕ ಸಮೀಕ್ಷೆಗೂ ಆದೇಶಿಸಿದೆ. ಕಳೆದ ಜೂನ್‌ನಲ್ಲಿ ನಡೆದ ‘ಇಂಡಿಯಾ’ (INDIA) ಮೈತ್ರಿಕೂಟದ ಸಭೆಯಲ್ಲಿ ಎಸ್‌ಪಿ ಮುಖ್ಯಸ್ಥ ಅಖಿಲೇಶ್ ಯಾದವ್ ಅವರು, ರಾಜ್ಯಗಳ ಮಟ್ಟದಲ್ಲಿ ಪ್ರಾದೇಶಿಕ ಪಕ್ಷಗಳ ತೀರ್ಮಾನಗಳನ್ನು ನಂಬಿ ಕಾಂಗ್ರೆಸ್ ‘ವಿಶಾಲ ಹೃದಯ’ ಪ್ರದರ್ಶಿಸಬೇಕು ಎಂದು ಹೇಳಿದ್ದನ್ನು ಈ ಸಂದರ್ಭದಲ್ಲಿ ಸ್ಮರಿಸಬಹುದು.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಈ ದಿನ ಸಂಪಾದಕೀಯ | ಬಡವರನ್ನು ಸುಟ್ಟ ಬೆಲೆಯೇರಿಕೆ ಬಿಸಿ ಸರ್ಕಾರಗಳನ್ನೂ ಸುಟ್ಟೀತು

ಮಹಿಳೆಯರಿಗೆ ಉಚಿತ ಪ್ರಯಾಣ ಯೋಜನೆ ನೀಡಿ, ಟಿಕೆಟ್‌ ದರ ಹೆಚ್ಚಿಸುವುದು ಪುರುಷರ...

ಮುಂಬರುವ ಚುನಾವಣೆಯಲ್ಲಿ ಬಿಜೆಪಿ ವಿರುದ್ಧ ಮತದ ಮೂಲಕ ಆಕ್ರೋಶ ಹೊರಹಾಕಿ: ಕಾಂಗ್ರೆಸ್ ಕರೆ

ದೇಶದಲ್ಲಿ ನಿರಂತರವಾಗಿ ಬೆಲೆ ಏರಿಕೆಯಾಗುತ್ತಿದೆ, ಇದರಿಂದ ಸಾಲದ ಸುಳಿಯಲ್ಲಿ ಸಿಲುಕಿ ಸಾಮಾನ್ಯ...

ಮೋದಿ ಸರ್ಕಾರದಿಂದ ‘ಮತ ಕಳ್ಳತನ’ದ ನಂತರ ‘ಹಕ್ಕುಗಳ ಕಳ್ಳತನ’ ಶುರು: ರಾಹುಲ್ ಗಾಂಧಿ ಆಕ್ರೋಶ

ಕೇಂದ್ರ ಪಂಚಾಯತ್ ರಾಜ್ ಸಚಿವಾಲಯದ ಕಲ್ಯಾಣ ಯೋಜನೆಗಳ ಫಲಾನುಭವಿಗಳನ್ನು ಗುರುತಿಸಲು ಆಧಾರ್...

ಕೊಪ್ಪಳ | 3 ವರ್ಷದಲ್ಲಿ 35,302 ಜಾನುವಾರುಗಳ ಸಾವು; ರೂ.264.61 ಲಕ್ಷ ಪರಿಹಾರ ಬಾಕಿ!

ರೋಗಬಾಧೆ, ಅಪಘಾತ ಹಾಗೂ ವಿವಿಧ ಆಕಸ್ಮಿಕ ಕಾರಣಗಳಿಂದ ಕೊಪ್ಪಳ ಜಿಲ್ಲೆಯಲ್ಲಿ ಜಾನುವಾರುಗಳ...