ಯುಪಿ ಚುನಾವಣೆ | ಎಸ್‌ಪಿಯಿಂದ 26 ಸ್ಥಾನಗಳ ಆಫರ್‌; ‘ನಾವೇನು ಭಿಕ್ಷುಕರೇ?’ ಎಂದ ಕಾಂಗ್ರೆಸ್

Date:

ಮುಂಬರುವ 2027ರ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಗೆ ಇನ್ನೂ ಸಮಯವಿರುವಾಗಲೇ, ‘ಇಂಡಿಯಾ’ ಮೈತ್ರಿಕೂಟದ ಪ್ರಮುಖ ಮಿತ್ರಪಕ್ಷಗಳಾದ ಸಮಾಜವಾದಿ ಪಕ್ಷ (ಎಸ್‌ಪಿ) ಮತ್ತು ಕಾಂಗ್ರೆಸ್ ನಡುವೆ ಸೀಟು ಹಂಚಿಕೆ ವಿಚಾರವಾಗಿ ಬಹಿರಂಗ ಸಂಘರ್ಷ ಆರಂಭವಾಗಿದೆ. 403 ಸದಸ್ಯ ಬಲದ ಉತ್ತರ ಪ್ರದೇಶ ವಿಧಾನಸಭೆಯಲ್ಲಿ ತನಗೆ 120 ಸ್ಥಾನಗಳನ್ನು ಬಿಟ್ಟುಕೊಡುವಂತೆ ಕಾಂಗ್ರೆಸ್ ಪಟ್ಟು ಹಿಡಿದಿದ್ದರೆ, ಸಮಾಜವಾದಿ ಪಕ್ಷವು ಕೇವಲ 26 ಸ್ಥಾನಗಳ ಪ್ರಸ್ತಾವನೆಯನ್ನು ಮುಂದಿಟ್ಟಿರುವುದು ಕೈ ನಾಯಕರ ತೀವ್ರ ಅಸಮಾಧಾನಕ್ಕೆ ಕಾರಣವಾಗಿದೆ.

- Advertisement -

ಸೀಟು ಹಂಚಿಕೆ ಮಾತುಕತೆ ಇನ್ನೂ ಅಪೂರ್ಣವಾಗಿರುವಾಗಲೇ, ಎಸ್‌ಪಿ ಮಂಗಳವಾರ ತನ್ನ ಮೊದಲ ಹಂತದ 5 ಅಭ್ಯರ್ಥಿಗಳ ಪಟ್ಟಿಯನ್ನು ಏಕಪಕ್ಷೀಯವಾಗಿ ಬಿಡುಗಡೆ ಮಾಡಿದೆ. ಈ ಬೆಳವಣಿಗೆ ಮತ್ತು 26 ಸ್ಥಾನಗಳ ಆಫರ್ ಕುರಿತು ತೀವ್ರ ಕಿಡಿಕಾರಿರುವ ಕಾಂಗ್ರೆಸ್ ಸಂಸದ ಇಮ್ರಾನ್ ಮಸೂದ್, “ಮೈತ್ರಿಯಲ್ಲಿ ಪರಸ್ಪರ ಸಹಕಾರವಿರಬೇಕೇ ಹೊರತು, ನಾವೇನು ಇಲ್ಲಿ ಭಿಕ್ಷೆ ಬೇಡಲು ಕುಳಿತಿಲ್ಲ” ಎಂದು ಖಾರವಾಗಿ ಪ್ರತಿಕ್ರಿಯಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಪಂಜಾಬ್ ಚುನಾವಣೆ | 6 ವರ್ಷಗಳ ಬಳಿಕ ಮತ್ತೆ...

2020ರ ಐತಿಹಾಸಿಕ ರೈತ ಹೋರಾಟದ ವೇಳೆ ಮುರಿದುಬಿದ್ದಿದ್ದ ಶಿರೋಮಣಿ ಅಕಾಲಿ ದಳ (SAD) ಮತ್ತು ಬಿಜೆಪಿ  ಮೈತ್ರಿ ಆರು ವರ್ಷಗಳ ಬಳಿಕ ಮತ್ತೆ ಜೀವ ಪಡೆದುಕೊಂಡಿದೆ. 2027ರ ಪಂಜಾಬ್ ವಿಧಾನಸಭಾ ಚುನಾವಣೆಗೆ ಮುನ್ನ...

ರೇಣುಕಾಸ್ವಾಮಿ ಕೊಲೆ ಪ್ರಕರಣ: ಸಾಕ್ಷಿಗಳು ಉಲ್ಟಾ ಹೊಡೆದ ಮಾತ್ರಕ್ಕೆ...

ಪಟ್ಟಣಗೆರೆ ಶೆಡ್‌ನಲ್ಲಿದ್ದ ನಾಲ್ವರು ಪ್ರಮುಖ ಸಾಕ್ಷಿಗಳು ನ್ಯಾಯಾಲಯದಲ್ಲಿ ಉಲ್ಟಾ ಹೊಡೆದಿರುವುದು ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಹೊಸ ತಿರುವು ನೀಡಿದೆ. ಪ್ರತ್ಯಕ್ಷದರ್ಶಿಗಳು ಉಲ್ಟಾ ಹೊಡೆದ ಮಾತ್ರಕ್ಕೆ ದರ್ಶನ್‌ಗೆ ಕಾನೂನು ಕುಣಿಕೆಯಿಂದ ಮುಕ್ತಿ ಸಿಗುತ್ತದೆಯೇ? ಪೊಲೀಸರು...

ರಾಯಚೂರು | ಅವ್ಯವಸ್ಥೆಯ ಆಗರವಾದ ವಸತಿ ನಿಲಯ: ಜೀವ...

ಡಾ. ಬಿ.ಆರ್ ಅಂಬೇಡ್ಕರ್ ಮೆಟ್ರಿಕ್ ಪೂರ್ವ ಬಾಲಕರ ವಸತಿ ನಿಲಯದಲ್ಲಿ ಮೂಲಸೌಕರ್ಯಗಳ ಕೊರತೆ ತೀವ್ರವಾಗಿದ್ದು, ವಿದ್ಯಾರ್ಥಿಗಳು ಪ್ರತಿದಿನ ತೊಂದರೆ ಅನುಭವಿಸುವಂತಾಗಿದೆ. ವಿದ್ಯಾರ್ಥಿಗಳ ಸುರಕ್ಷತೆ ಮತ್ತು ಕನಿಷ್ಠ ಅಗತ್ಯಗಳ ಬಗ್ಗೆಯೂ ಸಂಬಂಧಪಟ್ಟ ಅಧಿಕಾರಿಗಳು ನಿರ್ಲಕ್ಷ್ಯ...

ಇದನ್ನೂ ಓದಿ: ಯುಪಿ ಚುನಾವಣೆ 2027 |ಸೀಟು ಹಂಚಿಕೆ ಮಾತುಕತೆ ನಡುವೆಯೇ ಎಸ್‌ಪಿ ಐದು ಅಭ್ಯರ್ಥಿಗಳ ಪಟ್ಟಿ ಪ್ರಕಟ

ಮತ್ತೊಂದೆಡೆ, ಉತ್ತರ ಪ್ರದೇಶದ ಎಐಸಿಸಿ ಉಸ್ತುವಾರಿ ರಾಜೇಂದ್ರ ಪಾಲ್ ಗೌತಮ್ ಅವರು ಕೂಡ 26 ಸ್ಥಾನಗಳ ಪ್ರಸ್ತಾವನೆಯನ್ನು ತಳ್ಳಿಹಾಕಿದ್ದು, “ಕೇವಲ 26 ಸ್ಥಾನಗಳ ಬಗ್ಗೆ ಚರ್ಚೆ ನಡೆಯುತ್ತಿಲ್ಲ, ಬದಲಾಗಿ ಎಲ್ಲಾ 403 ಕ್ಷೇತ್ರಗಳ ಕುರಿತು ಗೌರವಯುತ ಒಪ್ಪಂದಕ್ಕಾಗಿ ಮಾತುಕತೆ ನಡೆಯುತ್ತಿದೆ” ಎಂದು ಸ್ಪಷ್ಟಪಡಿಸಿದ್ದಾರೆ.

ದೆಹಲಿಯ ಕಾಂಗ್ರೆಸ್ ಹಿರಿಯ ನಾಯಕ ಪ್ರಮೋದ್ ತಿವಾರಿ ಅವರ ನಿವಾಸದಲ್ಲಿ ನಡೆದ ಮೊದಲ ಸುತ್ತಿನ ಸಭೆಯ ಬಳಿಕ ಮಾತನಾಡಿದ ಎಸ್‌ಪಿ ಸಂಧಾನ ಸಮಿತಿಯ ಮುಖ್ಯಸ್ಥ ರಾಮ್‌ಗೋಪಾಲ್ ಯಾದವ್, ಕಾಂಗ್ರೆಸ್‌ಗೆ 26 ಸ್ಥಾನಗಳ ಪ್ರಸ್ತಾವನೆ ನೀಡಿರುವುದನ್ನು ಖಚಿತಪಡಿಸಿದ್ದಾರೆ.

“ನಾವು ಪ್ರಸ್ತಾಪಿಸಿರುವ 26 ಸ್ಥಾನಗಳಲ್ಲಿ 20 ಕ್ಷೇತ್ರಗಳು ಕಳೆದ ಚುನಾವಣೆಯಲ್ಲಿ ಎಸ್‌ಪಿ 60 ರಿಂದ 70 ಸಾವಿರ ಮತಗಳನ್ನು ಪಡೆದು, ಕಾಂಗ್ರೆಸ್ ಕೇವಲ 2 ಸಾವಿರ ಮತಗಳನ್ನು ಪಡೆದಿದ್ದ ಕ್ಷೇತ್ರಗಳಾಗಿವೆ. ಗೆಲ್ಲುವ ಸಾಮರ್ಥ್ಯ ಮತ್ತು ಪಿಡಿಎ (PDA – ಹಿಂದುಳಿದ, ದಲಿತ, ಅಲ್ಪಸಂಖ್ಯಾತ) ಸಮೀಕರಣದ ಆಧಾರದ ಮೇಲೆ ಉಳಿದ ಕ್ಷೇತ್ರಗಳ ಬಗ್ಗೆ ಮುಂದಿನ ಸುತ್ತಿನಲ್ಲಿ ಚರ್ಚಿಸಲಾಗುವುದು” ಎಂದು ರಾಮ್‌ಗೋಪಾಲ್ ಯಾದವ್ ತಿಳಿಸಿದ್ದಾರೆ.

2024ರ ಲೋಕಸಭಾ ಚುನಾವಣೆಯಲ್ಲಿ ಎಸ್‌ಪಿ ಮತ್ತು ಕಾಂಗ್ರೆಸ್ ಮೈತ್ರಿಕೂಟವು ಉತ್ತರ ಪ್ರದೇಶದ 80 ಸ್ಥಾನಗಳ ಪೈಕಿ 43 ಸ್ಥಾನಗಳನ್ನು (ಎಸ್‌ಪಿ 37, ಕಾಂಗ್ರೆಸ್ 6) ಗೆಲ್ಲುವ ಮೂಲಕ ಭರ್ಜರಿ ಪ್ರದರ್ಶನ ನೀಡಿತ್ತು. ಈ ಯಶಸ್ಸಿನ ಉತ್ಸಾಹದಲ್ಲಿರುವ ಕಾಂಗ್ರೆಸ್, ಗಾಂಧಿ ಕುಟುಂಬದ ಭದ್ರಕೋಟೆಗಳಾದ ಅಮೇಠಿ ಮತ್ತು ರಾಯ್‌ಬರೇಲಿ ಸೇರಿದಂತೆ ಸುಮಾರು 120 ಕ್ಷೇತ್ರಗಳ ಪಟ್ಟಿಯನ್ನು ಎಸ್‌ಪಿ ಮುಂದಿಟ್ಟಿದೆ. ಇನ್ನು 2017ರ ವಿಧಾನಸಭಾ ಚುನಾವಣೆಯಲ್ಲಿ ಈ ಎರಡೂ ಪಕ್ಷಗಳು ಮೈತ್ರಿ ಮಾಡಿಕೊಂಡಾಗ ಕಾಂಗ್ರೆಸ್ 105 ಸ್ಥಾನಗಳಲ್ಲಿ ಸ್ಪರ್ಧಿಸಿತ್ತು.

ಸದ್ಯ ಮೊದಲ ಸುತ್ತಿನ ಮಾತುಕತೆ ಅಪೂರ್ಣಗೊಂಡಿದ್ದು, ಮುಂದಿನ ದಿನಗಳಲ್ಲಿ ಎರಡನೇ ಸುತ್ತಿನ ಸಭೆ ನಡೆಯಲಿದೆ. ಆದರೆ ಆರಂಭದಲ್ಲೇ ಉಭಯ ಪಕ್ಷಗಳ ನಾಯಕರ ನಡುವಿನ ಬಹಿರಂಗ ವಾಕ್ಸಮರವು ಮೈತ್ರಿಕೂಟದ ಒಗ್ಗಟ್ಟಿನ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹೊನಗನಹಳ್ಳಿ ಸಮೀಪ ಅಪರಿಚಿತ ವ್ಯಕ್ತಿಯ ಶವ ಪತ್ತೆ!

ವಿಜಯಪುರ ಜಿಲ್ಲೆಯ ಹುಬ್ಬಳ್ಳಿ ರಸ್ತೆಯ ಹೊನಗನಹಳ್ಳಿ ಗ್ರಾಮದ ಸಮೀಪದ ಜಮೀನಿನಲ್ಲಿ ಅಪರಿಚಿತ...

ಬಾಗಲಕೋಟೆ |ಎಣ್ಣೆಕಾಳು, ದ್ವಿದಳ ಧಾನ್ಯ ಸಂಸ್ಕರಣಾ ಘಟಕ ಸ್ಥಾಪನೆಗೆ ಶೇ.೩೩ರಷ್ಟು ಸಹಾಯಧನ

ರೈತರು ಹಾಗೂ ಕೃಷಿ ಆಧಾರಿತ ಸಂಸ್ಥೆಗಳಿಗೆ ಉತ್ತೇಜನ ನೀಡುವ ಉದ್ದೇಶದಿಂದ ೨೦೨೬-೨೭ನೇ...

ಐಪಿಎಲ್ ಹರಾಜು 2027: ವಿದೇಶಿ ಆಟಗಾರರ ರೇಸ್‌ನಲ್ಲಿ ಆಸೀಸ್, ಆಫ್ರಿಕಾ ಕ್ರಿಕೆಟಿಗರೇ ಟಾಪ್!

ಬಹುನಿರೀಕ್ಷಿತ 2027ರ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಮಿನಿ ಹರಾಜಿಗೆ ವೇದಿಕೆ...