ನೋಟಿಸ್ ನೀಡದೆ ಮಸೀದಿ ಬಂದ್: ಯುಪಿ ಸರ್ಕಾರದ ಪ್ರತಿಕ್ರಿಯೆ ಕೇಳಿದ ಅಲಹಾಬಾದ್ ಹೈಕೋರ್ಟ್

Date:

ನೋಟಿಸ್ ನೀಡದೆಯೇ ಮಸೀದಿ ಬಂದ್ ಮಾಡಿಸಿದ ಉತ್ತರ ಪ್ರದೇಶ ಸರ್ಕಾರಕ್ಕೆ ಅಲಹಾಬಾದ್ ಹೈಕೋರ್ಟ್ ನೋಟಿಸ್ ನೀಡಿದೆ. ಯಾವುದೇ ನೋಟಿಸ್ ನೀಡದೆಯೇ ಅಥವಾ ಆಸ್ತಿ ಮಾಲೀಕರಿಗೆ ವಿಚಾರಣೆಗೆ ಅವಕಾಶ ನೀಡದೆಯೇ ಪೂಜಾ ಸ್ಥಳವನ್ನು ಸೀಲ್ ಮಾಡಬಹುದೇ ಎಂದು ಹೈಕೋರ್ಟ್ ಪ್ರಶ್ನಿಸಿದೆ.

- Advertisement -

ಮುಜಫರ್‌ನಗರದಲ್ಲಿ ಮಸೀದಿಯನ್ನು ಮುಚ್ಚಿಸಿದರ ವಿರುದ್ಧ ಅಹ್ಸಾನ್ ಅಲಿ ಎಂಬವರು ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. ಈ ರಿಟ್ ಅರ್ಜಿಯನ್ನು ವಿಚಾರಣೆ ನಡೆಸಿದ ನ್ಯಾಯಮೂರ್ತಿ ಅತುಲ್ ಶ್ರೀಧರನ್ ಮತ್ತು ನ್ಯಾಯಮೂರ್ತಿ ಸಿದ್ಧಾರ್ಥ್ ನಂದನ್ ಅವರನ್ನೊಳಗೊಂಡ ದ್ವಿಸದಸ್ಯ ಪೀಠವು ಸರ್ಕಾರದ ಪ್ರತಿಕ್ರಿಯೆಯನ್ನು ಕೇಳಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಗಾಂಧಿಯ ಆರ್ಥಿಕ ಸಾಮಾಜಿಕ ಸಂಕೇತಗಳು: ಉಪ್ಪು, ಖಾದಿ, ಚರಕ...

ಗ್ರಾಮೀಣ ಭಾರತದ ಆರ್ಥಿಕತೆ ಮನಗಂಡಿದ್ದ ಗಾಂಧಿ ಹಾಲಿನ ಬಗೆಗಿನ ಕಠೋರ ನಿಲುವನ್ನು ನಿರಾಕರಿಸಿ ತನ್ನನ್ನು ತಾನು ಮೇಕೆಯ ಮಮಕಾರದ ಹಾಲಿಗೆ ಕೊಟ್ಟುಕೊಂಡಿದ್ದರು. ಈಗಿನ ಪಶುಪಾಲಕ ಸಮುದಾಯಗಳ ಸಾವಯವ ಬದುಕಿನ ರೀತಿ ನೀತಿ ಗಮನಿಸಿ......

ಇದನ್ನು ಓದಿದ್ದೀರಾ? ಹಿಂದೂಗಳ ವಿವಾಹ ‘ಪವಿತ್ರವಾದುದ್ದು’ ವರ್ಷದಲ್ಲೇ ರದ್ದುಗೊಳಿಸಲಾಗದು: ಅಲಹಾಬಾದ್ ಹೈಕೋರ್ಟ್

“ಪೂರ್ವ ಸೂಚನೆ ನೀಡದೆಯೇ ಅಥವಾ ಅರ್ಜಿದಾರರಿಗೆ ವಿಚಾರಣೆಗೆ ಅವಕಾಶ ನೀಡದೆ ನಿರ್ಮಾಣ ಹಂತದಲ್ಲಿರುವ ಪೂಜಾ ಸ್ಥಳವನ್ನು ಸೀಲ್ ಮಾಡಲು ಕಾನೂನಿನಡಿಯಲ್ಲಿ ಯಾವುದೇ ಅಧಿಕಾರವಿದೆಯೇ” ಎಂದು ಕೋರ್ಟ್ ಮಾರ್ಚ್ 18ರಂದು ಹೊರಡಿಸಿದ ತನ್ನ ಆದೇಶದಲ್ಲಿ ಪ್ರಶ್ನಿಸಿದೆ.

ಇದರ ಜೊತೆಗೆ, ಪೂಜಾ ಸ್ಥಳದ ಆವರಣದಲ್ಲಿ ನಿರ್ಮಾಣ ಇತ್ಯಾದಿಗಳನ್ನು ಮಾಡುವ ಜಾಗದ ಮಾಲೀಕರು ರಾಜ್ಯ ಸರ್ಕಾರದ ಪೂರ್ವಾನುಮತಿ ಪಡೆಯುವ ಅಗತ್ಯವಿದೆಯೇ ಎಂದೂ ಕೇಳಿದೆ.

ಇನ್ನು ಅಹ್ಸಾನ್ ಅಲಿ ಅವರು ಭೂಮಿಯ ಕಾನೂನುಬದ್ಧ ಮಾಲೀಕ ಎಂದು ಅರ್ಜಿಯಲ್ಲಿ ತಿಳಿಸಿದ್ದಾರೆ. 2019ರಲ್ಲಿ ಪ್ರವೀಣ್ ಕುಮಾರ್ ಜೈನ್ ಎಂಬವರಿಂದ ನೋಂದಾಯಿತ ಮಾರಾಟ ಪತ್ರದ ಮೂಲಕ ಭೂಮಿಯನ್ನು ಖರೀದಿಸಿದ್ದರು. ಮಾಲೀಕ ಅಲಿ ಸುತ್ತಲೂ ಕಾಂಪೌಂಡ್ ಗೋಡೆಗಳನ್ನು ನಿರ್ಮಿಸಲು ಪ್ರಾರಂಭಿಸಿದ ನಂತರ ಅಧಿಕಾರಿಗಳು ನಿರ್ಮಿಸಲಾದ ಮಸೀದಿಗೆ ಬೀಗ ಹಾಕಿಸಿದ್ದಾರೆ. ನಿರ್ಮಾಣವು ಕಾನೂನುಬಾಹಿರವಾಗಿದೆ ಮತ್ತು ಸಕ್ಷಮ ಪ್ರಾಧಿಕಾರದಿಂದ ಯಾವುದೇ ಪೂರ್ವಾನುಮತಿ ಪಡೆಯಲಾಗಿಲ್ಲ ಎಂದು ಅಧಿಕಾರಿಗಳು ದೂರಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಏಷ್ಯನ್ ಗೇಮ್ಸ್: 4 ದಶಕಗಳ ಬಳಿಕ ಮಹಿಳಾ ಹಾಕಿಯಲ್ಲಿ ಭಾರತಕ್ಕೆ ಒಲಿದ ಸುವರ್ಣ ಪದಕ

ಜಪಾನಿನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ ಭಾರತೀಯ ಮಹಿಳಾ ಹಾಕಿ...

ಬಾಗಲಕೋಟೆ | ಗಾಂಧಿ ಜಯಂತಿ ನಿಮಿತ್ತ ಕಾಂಗ್ರೆಸ್‌ನಿಂದ ಸ್ವಚ್ಛತಾ ಅಭಿಯಾನ

ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಜಯಂತಿ ಅಂಗವಾಗಿ ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ...

ಧರ್ಮಸ್ಥಳದ ಸಾವಿನ ಪ್ರಮಾಣದಲ್ಲಿ ವ್ಯತ್ಯಾಸ; ನಿಜ ಪತ್ತೆಗೆ ಎಸ್‌ಐಟಿಗೆ ಸರ್ಕಾರದಿಂದ ಪೂರಕ ಬೆಂಬಲ ಅಗತ್ಯ: ಮಹಿಳಾ ಆಯೋಗದ ಅಧ್ಯಕ್ಷೆ

ಧರ್ಮಸ್ಥಳ ಅಸಹಜ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಸಾವುಗಳು...

ಅಮೆರಿಕದ ಗುಪ್ತಚರರಿಗೇ ಸುಳಿವು ನೀಡದೆ ಉಪಗ್ರಹ ಹೊಡೆದುರುಳಿಸಿದ್ದ ಭಾರತದ ಕ್ಷಿಪಣಿ

ದಶಕಗಳ ಬಳಿಕ, 2019ರಲ್ಲಿ 'ಮಿಷನ್ ಶಕ್ತಿ' ಕಾರ್ಯಾಚರಣೆಯ ಮೂಲಕ ಉಪಗ್ರಹ...