ಉತ್ತರ ಪ್ರದೇಶ: ದಲಿತ ಬಾಲಕನಿಗೆ ಹಲ್ಲೆ ನಡೆಸಿ ಮೂತ್ರ ಕುಡಿಯುವಂತೆ ಒತ್ತಾಯ

Date:

ಹದಿನಾಲ್ಕು ವರ್ಷದ ದಲಿತ ಸಮುದಾಯದ ಬಾಲಕನೊಬ್ಬನಿಗೆ ಅಮಾನುಷವಾಗಿ ಹಲ್ಲೆ ನಡೆಸಿ ಮೂತ್ರ ಕುಡಿಯುವಂತೆ ಒತ್ತಾಯಿಸಿದ ಘಟನೆ ಉತ್ತರ ಪ್ರದೇಶದ ಜೌನ್‌ಪುರ್ ಜಿಲ್ಲೆಯ ಸುಜಂಗಂಜ್ ಪೊಲೀಸ್ ಠಾಣಾ ವ್ಯಾಪ್ತಿಯ ಗ್ರಾಮವೊಂದರಲ್ಲಿ ನಡೆದಿದೆ.

- Advertisement -

ತಮ್ಮ ಕುಟುಂಬದ ಬಾಲಕಿಗೆ ತೊಂದರೆ ಮಾಡಿದ್ದಾನೆಂದು ಶಂಕಿಸಿ ಇಬ್ಬರು ಸವರ್ಣೀಯ ಸಮುದಾಯದವರು ದಲಿತ ಸಮುದಾಯದ ಬಾಲಕನಿಗೆ ಥಳಿಸಿ ಮೂತ್ರ ಕುಡಿಯುವಂತೆ ಒತ್ತಾಯಿಸಿದ್ದಾರೆ. ಅಲ್ಲದೆ ಬಾಲಕನ ಕಣ್ಣಿನ ಹುಬ್ಬುಗಳನ್ನು ಸಹ ಬೋಳಿಸಿದ್ದಾರೆ ಎಂದು ಪೊಲೀಸರಿಗೆ ಬಾಲಕನ ತಂದೆ ದೂರು ನೀಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೀಗರೂಟ ಬಂದ್ ಮಾಡಿ ಸುದ್ದಿಯಾದ ಹರಗಿ ಗ್ರಾಮದಲ್ಲಿ ಸಮಸ್ಯೆಗಳದ್ದೇ...

ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನಲ್ಲಿರುವ ಕಟ್ಟೆ ಕಡೆಯ ಕುಗ್ರಾಮ ಎಂದು ಹೇಳಬಹುದಾದ ಹರಗಿ ಗ್ರಾಮ ಇಡೀ ರಾಜ್ಯದ ಗಮನ ಸೆಳೆಯುತ್ತಿದೆ ಬೀಗರೂಟ ಹಾಕಿಸಿದರೆ ದಂಡ ವಿಧಿಸುತ್ತೇವೆ ಎಂದು ಗ್ರಾಮಸ್ಥರು ನಿರ್ಧಾರಕ್ಕೆ ಬಂದು ಬಡ...

ಮೋದಿ ಪರವಿದ್ದ ಯುವಜನರು ತಿರುಗಿಬಿದ್ದಿದ್ದು ಹೇಗೆ?

ಚುನಾವಣಾ ಆಯೋಗದಲ್ಲಿ ಎಸ್‌ಐಆರ್‌ ಮತ್ತು ಚುನಾವಣಾ ಪ್ರಕ್ರಿಯೆಗಳ ಕುರಿತು ಮುಖ್ಯಚುನಾವಣಾ ಆಯುಕ್ತ ಗ್ಯಾನೇಶ್‌ ಕುಮಾರ್‌ ಅವರು ಸರ್ವಾಧಿಕಾರಿಯಂತೆ, ಏಕಪಕ್ಷೀಯವಾಗಿ ನಿರ್ಧಾರಗಳ ತೆಗೆದುಕೊಂಡು, ಜಾರಿ ಮಾಡುತ್ತಿದ್ದಾರೆ ಎಂಬ ತನಿಖಾ ವರದಿ ದೇಶಾದ್ಯಂತ ಭಾರೀ ಚರ್ಚೆ...

ಕ್ರೀಡೆ, ವ್ಯಾಪಾರ ಮತ್ತು ಮೌನ: ಲಿಯೋನೆಲ್ ಮೆಸ್ಸಿ ಎಂಬ...

2013ರ ಪ್ರವಾಸದ ವೇಳೆ ಅವರು ಇಸ್ರೇಲ್‌ನ ವೆಸ್ಟರ್ನ್ ವಾಲ್‌ನಲ್ಲಿ 'ಕಿಪ್ಪಾ' (ಯಹೂದಿಗಳ ಸಾಂಪ್ರದಾಯಿಕ ಟೋಪಿ) ಧರಿಸಿ ನಿಂತಿದ್ದ ಚಿತ್ರವು, ಅವರ ಇಸ್ರೇಲ್ ಪರ ಒಲವಿಗೆ ಅಳಿಸಲಾಗದ ಸಾಕ್ಷಿಯಾಗಿ ಉಳಿದುಕೊಂಡಿದೆ. ಶಾಂತಿ ಪ್ರವಾಸದ ಹೆಸರಿನಲ್ಲಿ...

ಸುಜಂಗಂಜ್ ಪೊಲೀಸ್ ಠಾಣಾ ವ್ಯಾಪ್ತಿಯ ಪ್ರದೇಶದಲ್ಲಿ ಗುರುವಾರ ಈ ಘಟನೆ ನಡೆದಿದ್ದು, ಜೌನ್‌ಪುರ ಎಸ್‌ಪಿ ಅಜಯ್ ಪಾಲ್ ಶರ್ಮಾ ಅವರ ಮಧ್ಯಸ್ಥಿಕೆಯ ನಂತರ ಶನಿವಾರ ಸಂಜೆ ಎಫ್‌ಐಆರ್ ದಾಖಲಿಸಲಾಗಿದೆ.

“ತನ್ನ ಮಗ ಗುರುವಾರ ಆಮಿ ಪ್ರದೇಶದಿಂದ ಮನೆಗೆ ಹಿಂದಿರುಗುತ್ತಿದ್ದಾಗ ದುಷ್ಕರ್ಮಿಗಳು ಆತನನ್ನು ಹಿಡಿದು ಥಳಿಸಿದ್ದಾರೆ. ನಂತರ ಬಲವಂತವಾಗಿ ಮಣ್ಣು ಮತ್ತು ಮೂತ್ರ ಸೇವಿಸುವಂತೆ ಒತ್ತಾಯಿಸಿ ಆತನ ಕಣ್ಣುಗಳ ಹುಬ್ಬುಗಳನ್ನು ಬೋಳಿಸಿದ್ದಾರೆ” ಎಂದು ಬಾಲಕನ ತಂದೆ ದೂರಿನಲ್ಲಿ ತಿಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ರಾಜಸ್ಥಾನ ಚುನಾವಣೆಗೆ ಕರ್ನಾಟಕ ರೈಲು: ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಪ್ರಭಾವ?

ಹಲ್ಲೆ ನಡೆಸಿದವರು ಬಾಲಕನ ತಂದೆಗೆ ಕರೆ ಮಾಡಿ ಪೊಲೀಸರಿಗೆ ದೂರು ನೀಡಬೇಡಿ ಎಂದು ಬೆದರಿಸಿದ್ದರು. ಸುಜಂಗಂಜ್ ಠಾಣಾ ಪೊಲೀಸರು ಸಹ ದೂರನ್ನು ಸ್ವೀಕರಿಸಿರಲಿಲ್ಲ. ಬಾಲಕನ ತಂದೆ ಎಸ್‌ಪಿಯನ್ನು ಭೇಟಿಯಾದ ನಂತರ ದೂರು ದಾಖಲಾಗಿದೆ.

“ನಾವು ಶುಕ್ರವಾರ ದೂರನ್ನು ಸ್ವೀಕರಿಸಿದ್ದೇವೆ ಮತ್ತು ಶನಿವಾರ ಎಫ್‌ಐಆರ್ ದಾಖಲಿಸಿದ್ದೇವೆ. ಆದಾಗ್ಯೂ, ಹಲ್ಲೆಕೋರರು ಬಾಲಕನಿಗೆ ಬಲವಂತವಾಗಿ ಮೂತ್ರ ಕುಡಿಸಿರುವುದು ಇನ್ನೂ ಸಾಬೀತಾಗಿಲ್ಲ” ಎಂದು ಠಾಣಾಧಿಕಾರಿ ತಿಳಿಸಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಗ್ರಾಮದ ಇಬ್ಬರ ವಿರುದ್ಧ ಐಪಿಸಿ ಸೆಕ್ಷನ್ 323 (ಸ್ವಯಂಪ್ರೇರಿತವಾಗಿ ನೋವುಂಟುಮಾಡುವುದು), 504 (ಉದ್ದೇಶಪೂರ್ವಕ ಅವಮಾನ), 506 (ಕ್ರಿಮಿನಲ್ ಬೆದರಿಕೆ) ಮತ್ತು ಎಸ್‌ಸಿ/ಎಸ್‌ಟಿ ಕಾಯ್ದೆಯ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಬಾಲಕನನ್ನು ವೈದ್ಯಕೀಯ ಪರೀಕ್ಷೆಗೆ ಕರೆದುಕೊಂಡು ಹೋಗಲಾಗಿದೆ.

ಈ ನಡುವೆ, ಬಾಲಕನನ್ನು ಥಳಿಸಿದ ವ್ಯಕ್ತಿಗಳು ತಮ್ಮ ಕುಟುಂಬದ ಹುಡುಗಿಗೆ ಲೈಂಗಿಕ ಕಿರುಕುಳ ನೀಡಿದ್ದಾನೆಂದು ಆರೋಪಿಸಿ ದಲಿತ ಹುಡುಗನ ವಿರುದ್ಧವೂ ದೂರು ನೀಡಿದ್ದಾರೆ. ಪೊಲೀಸರು ಈ ಪ್ರಕರಣದಲ್ಲಿಯೂ ಎಫ್‌ಐಆರ್‌ ದಾಖಲಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗ್ಯಾನೇಶ್ ಕುಮಾರ್ ರಾಜೀನಾಮೆ ನೀಡಿದರೂ CEC ವಿರುದ್ಧ ಪ್ರತಿಭಟನೆ ಮುಂದುವರೆಯುತ್ತದೆ: CJP

ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ವಿರುದ್ಧದ ಪ್ರತಿಭಟನೆ ರಾಜೀನಾಮೆಯಿಂದ ಅಂತ್ಯಗೊಳ್ಳುವುದಿಲ್ಲ....

ತನ್ನ ಕಾದಂಬರಿಗಳ ಪಾತ್ರಗಳಂತೆಯೇ ಜೀವಿಸಿದ್ದ ಜನಪ್ರಿಯ ಕಾದಂಬರಿಕಾರ ಜೆಫ್ರಿ ಆರ್ಚರ್!

ಜನಪ್ರಿಯ ಕಾದಂಬರಿಕಾರ ಜೆಫ್ರಿ ಆರ್ಚರ್, ತಮ್ಮ 86ನೇ ವಯಸ್ಸಿನಲ್ಲಿ ನಿಧನರಾಗಿದ್ದಾರೆ. ಸೇನೆ,...