ಚಲಿಸುತ್ತಿದ್ದ ಕಾರಿನಲ್ಲಿ ಅಪ್ರಾಪ್ತೆಯ ಸಾಮೂಹಿಕ ಅತ್ಯಾಚಾರ; ರಸ್ತೆಗೆ ತಳ್ಳಿದ್ದರಿಂದ ಸಂತ್ರಸ್ತೆಯ ಸ್ನೇಹಿತೆ ಸಾವು

Date:

ಚಲಿಸುತ್ತಿದ್ದ ಕಾರಿನಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿದ್ದು, ಈ ವೇಳೆ ಆಕೆಯ ಸ್ನೇಹಿತೆಯನ್ನು ಕಾರಿನಿಂದ ಕೆಳಕ್ಕೆ ತಳ್ಳಿದ್ದರಿಂದ, ಆಕೆ ಮೃತಪಟ್ಟಿರುವ ಘಟನೆ ಉತ್ತರ ಪ್ರದೇಶದ ಬುಲಂದ್‌ಶಹರ್‌ನಲ್ಲಿ ನಡೆದಿದೆ.

- Advertisement -

ನಂತರ, ಕಾರಿನಿಂದ ತಪ್ಪಿಸಿಕೊಂಡಿರುವ ಸಂತ್ರಸ್ತ ಬಾಲಕಿಯು, ಈ ಘಟನೆಯನ್ನು ಪೊಲೀಸರಿಗೆ ತಿಳಿಸಿದ್ದಾಳೆ. ಘಟನೆ ಸಂಬಂಧ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. ಉದ್ಯೋಗ ಕೊಡಿಸುವ ಭರವಸೆ ನೀಡಿ ಹಾಗೂ ಲಖನೌಗೆ ಕಾರಿನಲ್ಲಿ ಬಿಡುತ್ತೇವೆ ಎಂದು ಹೇಳಿ ಮಂಗಳವಾರ ಸಂಜೆ ನನ್ನನ್ನು ಹಾಗೂ ನನ್ನ ಸ್ನೇಹಿತೆಯನ್ನು ಆರೋಪಿಗಳು ಕಾರಿನಲ್ಲಿ ಕರೆದೊಯ್ದರು ಎಂದು ಸಂತ್ರಸ್ತ ಬಾಲಕಿಯು ಪೊಲೀಸರಿಗೆ ತಿಳಿಸಿದ್ದಾಳೆ. ಈ ವೇಳೆ ಆರೋಪಿಗಳು ಕಾರಿನಲ್ಲೇ ಮದ್ಯಪಾನ ಮಾಡುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಗ್ರೇಟರ್ ನೊಯ್ಡಾ ನಿವಾಸಿಗಳಾದ ಸಂದೀಪ್ ಮತ್ತು ಅಮಿತ್ ಹಾಗೂ ಘಾಝಿಯಾಬಾದ್ ನಿವಾಸಿಯಾದ ಗೌರವ್ ಮತ್ತು ಸಂತ್ರಸ್ತ ಬಾಲಕಿಯ ನಡುವೆ ಈ ಕುರಿತು ಜಗಳ ಪ್ರಾರಂಭವಾದಾಗ, ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಬಾಲಕಿಯ ಸ್ನೇಹಿತೆಯನ್ನು ಮೀರತ್ ಜಿಲ್ಲೆಯಲ್ಲಿ ಕಾರಿನಿಂದ ತಳ್ಳಲಾಗಿದೆ. ಇದರಿಂದ ಗಂಭೀರವಾಗಿ ಗಾಯಗೊಂಡಿದ್ದ ಸ್ನೇಹಿತೆ ಮೃತಪಟ್ಟಿದ್ದಾರೆ.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಶಿಮ್ಲಾ ಒಪ್ಪಂದದತ್ತ ಕಣ್ಣು ಹಾಯಿಸಬೇಕಿದೆ ಭಾರತ-ಪಾಕ್

ಆಗ ಕಾರಿನಲ್ಲಿಯೇ ಇದ್ದ ಸಂತ್ತಸ್ತ ಬಾಲಕಿಯ ಮೇಲೆ ಆರೋಪಿಗಳು ಸಾಮೂಹಿಕ ಅತ್ಯಾಚಾರ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ. ಆಕೆ ಮೀರತ್ ನಿಂದ ಸುಮಾರು 100 ಕಿಮೀ ದೂರವಿರುವ ಬುಲಂದ್‌ಶಹರ್ ಜಿಲ್ಲೆಯ ಖುರ್ಜಾ ಬಳಿ ಕಾರಿನಿಂದ ತಪ್ಪಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾಳೆ. ನಂತರ, ಸಂತ್ರಸ್ತೆ ನೀಡಿದ ಮಾಹಿತಿಯನ್ನಾಧರಿಸಿ, ಆಲಿಗಢ-ಬುಲಂದ್ ಶಹರ್ ಹೆದ್ದಾರಿಯಲ್ಲಿ ಆರೋಪಿಗಳ ಕಿಯಾ ಸೆಲ್ಟೋಸ್ ಕಾರನ್ನು ಪೊಲೀಸರು ತಡೆದಿದ್ದಾರೆ. ಈ ವೇಳೆ ಆರೋಪಿಗಳಾದ ಗೌರವ್ ಹಾಗೂ ಸಂದೀಪ್ ಕಾಲಿಗೆ ಗುಂಡಿಕ್ಕಿ ಬಂಧಿಸಿಲಾಯಿತು.

ಆರೋಪಿಗಳಿಂದ ಎರಡು ಅಕ್ರಮ ಪಿಸ್ತೂಲ್ ಗಳು, ಜೀವಂತ ಹಾಗೂ ಖಾಲಿ ಕಾರ್ಟ್ರಿಡ್ಜ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಬುಲಂದ್ ಶಹರ್ ವಿಶೇಷ ಪೊಲೀಸ್ ವರಿಷ್ಠಾಧಿಕಾರಿ ದಿನೇಶ್ ಕುಮಾರ್ ಸಿಂಗ್ ತಿಳಿಸಿದ್ದಾರೆ. ಈ ಘಟನೆಯ ಸಂಬಂಧ ಬುಧವಾರದಂದು ಖುರ್ಜಾ ಪೊಲೀಸ್ ಠಾಣೆಯಲ್ಲಿ ಭಾರತೀಯ ನ್ಯಾಯ ಸಂಹಿತೆಯ ವಿವಿಧ ಸೆಕ್ಷನ್‌ಗಳಡಿ ಎಫ್ಐಆರ್ ದಾಖಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೆಹಲಿ ಪ್ರತಿಭಟನೆ ವೇಳೆ ಪೊಲೀಸರಿಂದ ಲೈಂಗಿಕ ಕಿರುಕುಳ: ಮೂವರು ಪತ್ರಕರ್ತೆಯರ ಆರೋಪ

ದೇಶದ ರಾಜಧಾನಿ ದೆಹಲಿಯ ಜಂತರ್ ಮಂತರ್ ಬಳಿ ನಡೆದ ಪ್ರತಿಭಟನೆಯ ವರದಿಗಾರಿಕೆಯಲ್ಲಿ...

ಹಳೆಯ ಪ್ರಕರಣ: ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ವಿರುದ್ಧ ವಿಜಿಲೆನ್ಸ್ ತನಿಖೆಗೆ ಕೇರಳ ಸರ್ಕಾರ ಆದೇಶ

20೦6ರ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಹಾಲಿ ಮುಖ್ಯ ಚುನಾವಣಾ ಆಯುಕ್ತ (CEC) ಗ್ಯಾನೇಶ್...

ಗಣೇಶ ವಿಸರ್ಜನೆ ಮುಗಿಯಿತು, ಇನ್ನು ಸಿಇಸಿ ಗ್ಯಾನೇಶ್ ಕುಮಾರ್ ವಿಸರ್ಜನೆ ಬಾಕಿ: ನಟ ಪ್ರಕಾಶ್ ರಾಜ್

ದೇಶಾದ್ಯಂತ ಗಣೇಶ ವಿಸರ್ಜನೆ ಪ್ರಕ್ರಿಯೆ ಪೂರ್ಣಗೊಂಡಿದ್ದು, ಈಗ ಮುಖ್ಯ ಚುನಾವಣಾ ಆಯುಕ್ತ...

ಜಿಎಸ್‌ಟಿ ದಸ್ತಗಿರಿ ಅಧಿಕಾರ ಹಿಂಪಡೆಯುವ ಪ್ರಸ್ತಾಪ: ಆಡಂಬರದ ಜಾರಿಯೂ ಇಂದಿನ ಭ್ರಮನಿರಸನವೂ….

2017ರ ಜೂನ್ 30ರ ಮಧ್ಯರಾತ್ರಿ ಭಾರತದ ಸಂಸತ್ತಿನಲ್ಲಿ ವಿಶೇಷ ಅಧಿವೇಶನ ಕರೆಯಾಗಿತ್ತು....