ಗೂಗಲ್ ಮ್ಯಾಪ್ ನಂಬಿ ಸೇತುವೆಯಿಂದ ನದಿಗೆ ಬಿದ್ದ ಕಾರು: ಮೂವರು ಸಾವು

Date:

ಮದುವೆ ಕಾರ್ಯಕ್ರಮದಲ್ಲಿ ಭಾಗಿಯಾಗಲು ಗೂಗಲ್ ಮ್ಯಾಪ್ ನಂಬಿ ಹೊರಟ ಕಾರೊಂದು ನಿರ್ಮಾಣ ಹಂತದ ಸೇತುವೆಯ ಮೇಲಿಂದ ನದಿಗೆ ಬಿದ್ದು ಮೂವರು ಮೃತಪಟ್ಟಿರುವ ಘಟನೆ ಉತ್ತರ ಪ್ರದೇಶದಲ್ಲಿ ಶನಿವಾರ ರಾತ್ರಿ ಸಂಭವಿಸಿದೆ. ಘಟನೆಯಲ್ಲಿ ಮೃತಪಟ್ಟವರನ್ನು ವಿವೇಕ್ ಮತ್ತು ಅಮಿತ್ ಎನ್ನಲಾಗಿದ್ದು ಇನ್ನೊಬ್ಬರ ಗುರುತು  ಪತ್ತೆಯಾಗಿಲ್ಲ.

- Advertisement -

ವಿವೇಕ್ ಹಾಗೂ ಅಮಿತ್ ಮದುವೆ ಸಮಾರಂಭವೊಂದರಲ್ಲಿ ಭಾಗಿಯಾಗಲು ಶನಿವಾರ ಬಾಡಿಗೆ ಕಾರೊಂದನ್ನು ಗೊತ್ತುಪಡಿಸಿ ಗುರುಗ್ರಾಮದಿಂದ ಉತ್ತರಪ್ರದೇಶದ ಬರೇಲಿಗೆ ಹೊರಟಿದ್ದರು. ಈ ವೇಳೆ ಮಾರ್ಗ ಸರಿಯಾಗಿ ಗೊತ್ತಿರದ ಕಾರಣ ಚಾಲಕ ಗೂಗಲ್ ಮ್ಯಾಪ್ ಮೊರೆ ಹೋಗಿದ್ದು ಅದರಂತೆ ಬರೇಲಿ ಸಮೀಪದ ನಿರ್ಮಾಣ ಹಂತದ ಸೇತುವೆಯ ದಾರಿ ತೋರಿಸಿದೆ ಅದರಂತೆ ಕಾರು ಚಾಲಕ ಅದೇ ಮಾರ್ಗವನ್ನು ಅನುಸರಿಸಿಕೊಂಡು ಹೋಗಿದ್ದಾನೆ. ಆದರೆ ಸೇತುವೆ ಅಪೂರ್ಣಗೊಂಡಿದ್ದರಿಂದ ಚಾಲಕನ ನಿಯಂತ್ರಣ ತಪ್ಪಿದ ಕಾರು ಸುಮಾರು ಐವತ್ತು ಅಡಿ ಆಳದ ರಾಮಗಂಗಾ ನದಿಗೆ ಬಿದ್ದಿದೆ ಅಷ್ಟೋತ್ತಿಗಾಗಲೇ ರಾತ್ರಿಯಾಗಿದ್ದ ಕಾರಣ ವಿಚಾರ ಯಾರಿಗೂ ಗೊತ್ತಾಗಿಲ್ಲ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ನೊಬೆಲ್‌ ಪ್ರಶಸ್ತಿ ಸರಣಿ | ಭಾರತೀಯ ಮೂಲದ ದಕ್ಷಿಣ...

ಈ ಬಾರಿಯ ಶಾಂತಿ ನೊಬೆಲ್‌ ಪ್ರಶಸ್ತಿಯನ್ನು ಶಾಂತಿ ಮತ್ತು ಅಂತಾರಾಷ್ಟ್ರೀಯ ಕಾನೂನನ್ನು ಉತ್ತೇಜಿಸುವ ನಿಟ್ಟಿನಲ್ಲಿ ನಡೆಸಿದ ಪ್ರಯತ್ನಗಳಿಗಾಗಿ, ಮಾನವ ಹಕ್ಕುಗಳ ರಕ್ಷಣೆಗಾಗಿ ಜೀವನವನ್ನೇ ಮುಡಿಪಾಗಿಟ್ಟ ಭಾರತೀಯ ಮೂಲದ ದಕ್ಷಿಣ ಆಫ್ರಿಕಾದ ಡಾ. ನವನೀತಮ್‌...

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಈ ಸುದ್ದಿ ಓದಿದ್ದೀರಾ? ಡೆಲ್ಲಿ ಕ್ಯಾಪಿಟಲ್ಸ್‌ ಮುನ್ನಡೆಸುವ ಆಟಗಾರರ ಹೆಸರು ಘೋಷಣೆ

ಮರುದಿನ ಭಾನುವಾರ ಬೆಳಿಗ್ಗೆ ಅಲ್ಲಿನ ಸ್ಥಳೀಯರು ನದಿಗೆ ಬಿದ್ದಿರುವ ಕಾರೊಂದನ್ನು ಗಮನಿಸಿದ್ದಾರೆ ಬಳಿಕ ಕಾರಿನ ಬಳಿ ತೆರಳಿದ್ದಾರೆ ಈ ವೇಳೆ ಕಾರಿನಲ್ಲಿ ಮೂವರು ಮೃತಪಟ್ಟಿರುವುದು ಗಮನಕ್ಕೆ ಬಂದಿದೆ. ಕೂಡಲೇ ಪೊಲೀಸರಿಗೆ ಮಾಹಿತಿಯನ್ನು ನೀಡಿದ್ದಾರೆ ವಿಚಾರ ತಿಳಿದು ಸ್ಥಳಕ್ಕೆ ಆಗಮಿಸಿದ ಪೊಲೀಸರು ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ಸಾಗಿಸಿದ್ದಾರೆ.

ಈ ನಡುವೆ ಅಮಿತ್ ಹಾಗೂ ವಿವೇಕ್ ಕುಟುಂಬ ಸದಸ್ಯರು ಘಟನಾ ಸ್ಥಳಕ್ಕೆ ಧಾವಿಸಿ ಸೇತುವೆ ನಿರ್ಮಾಣ ಅಧಿಕಾರಿಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸೇತುವೆಗೆ ಬ್ಯಾರಿಕೇಡ್ ಇಡದೆ ಈ ದುರಂತ ಸಂಭವಿಸಿದೆ ಎಂದು ಅಧಿಕಾರಿಯನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪ್ರತಿಭಟನೆ ಹಿನ್ನೆಲೆ ಮೆಟ್ರೋ ಬಂದ್; ‘ನೊಣ ಕೊಲ್ಲೋಕೆ ಸುತ್ತಿಗೆ ಬೇಡ’ – ಮಾರ್ಮಿಕವಾಗಿ ನುಡಿದ ಸುಪ್ರೀಂ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಜಂತರ್ ಮಂತರ್‌ನಲ್ಲಿ ಆಯೋಜಿಸಿರುವ ಪ್ರತಿಭಟನೆಯನ್ನು ತಡೆಯಲು...

CJP ಪ್ರೊಟೆಸ್ಟ್‌ ಎಫೆಕ್ಟ್ | ಅ.10ರಂದು ದೆಹಲಿಗೆ ತೆರಳುವ ಹಲವು ರೈಲುಗಳು ರದ್ದು

ದೆಹಲಿಯಲ್ಲಿ ಅಕ್ಟೋಬರ್‌ 10ರಂದು ನಡೆಯಲಿರುವ ಕಾಕ್ರೋಚ್‌ ಜನತಾ ಪಾರ್ಟಿ (CJP) ಪ್ರತಿಭಟನೆಯ...

ಸಿಜೆಪಿ ಪ್ರತಿಭಟನೆ ತಡೆಯಲು ಮೆಟ್ರೋ, ರೈಲು ಬಂದ್: ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದ ಸಿಪಿಐಎಂ ನಾಯಕ ಎಂ ಎ ಬೇಬಿ

ಅಕ್ಟೋಬರ್ 10ರಂದು ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಮತ್ತು ವಿವಿಧ ಪ್ರತಿಪಕ್ಷಗಳು...

ಅ. 10ರ ಜಂತರ್ ಮಂತರ್ ಪ್ರತಿಭಟನೆಗೆ ಅನುಮತಿ ನಿರಾಕರಿಸಿದ ದೆಹಲಿ ಪೊಲೀಸ್; ಕಠಿಣ ಕ್ರಮದ ಎಚ್ಚರಿಕೆ

ಮುಖ್ಯ ಚುನಾವಣಾ ಆಯುಕ್ತರ (CEC) ಹೊಣೆಗಾರಿಕೆ ಪ್ರಶ್ನಿಸಿ 'ಕಾಕ್ರೋಚ್ ಜನತಾ ಪಾರ್ಟಿ'...