ಕಾವಡ್ ಯಾತ್ರಾ ಮಾರ್ಗದಲ್ಲಿ ಮಾಂಸಾಹಾರ ಮಾರಾಟ: ನಾಲ್ವರನ್ನು ವಶಕ್ಕೆ ಪಡೆದ ಯುಪಿ ಪೊಲೀಸ್, ಅಂಗಡಿ ತೆರವು

Date:

ಉತ್ತರ ಪ್ರದೇಶದ ​ಬರೇಲಿಯಲ್ಲಿ ‘ಶ್ರಾವಣ’ ಮಾಸದಲ್ಲಿ ನಡೆಯುವ ಪವಿತ್ರ ಕಾವಡ್ ಯಾತ್ರೆಯ ಮಾರ್ಗದಲ್ಲಿ ಮಾಂಸಾಹಾರ ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ಉತ್ತರ ಪ್ರದೇಶ ಪೊಲೀಸರು ನಾಲ್ವರನ್ನು ವಶಕ್ಕೆ ಪಡೆದಿದ್ದಾರೆ. ಅಲ್ಲದೆ, ನಿಯಮ ಉಲ್ಲಂಘಿಸಿ ವ್ಯಾಪಾರ ನಡೆಸುತ್ತಿದ್ದ ಅಂಗಡಿಯೊಂದನ್ನು ಸ್ಥಳೀಯ ಆಡಳಿತವು ಜೆಸಿಬಿ ಬಳಸಿ ಧ್ವಂಸಗೊಳಿಸಿದೆ.

- Advertisement -

​ಶನಿವಾರ (ಆಗಸ್ಟ್ 8) ಸಂಜೆ ಬಹೇಡಿಯ ಹಳೆಯ ರಸ್ತೆ ಸಾರಿಗೆ (ರೋಡ್‌ವೇಸ್) ಬಸ್ ನಿಲ್ದಾಣದ ಬಳಿ ಚಿಕನ್ ಬಿರಿಯಾನಿ ಮಾರಾಟ ಮಾಡಲಾಗುತ್ತಿದೆ ಎಂಬ ಮಾಹಿತಿ ಪೊಲೀಸರಿಗೆ ಲಭಿಸಿತ್ತು. ತಕ್ಷಣವೇ ಸ್ಥಳಕ್ಕೆ ಧಾವಿಸಿದ ಪೊಲೀಸರು, ಅಂಗಡಿ ನಡೆಸುತ್ತಿದ್ದ ಇಬ್ಬರನ್ನು ವಶಕ್ಕೆ ಪಡೆದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

50ನೇ ವರ್ಷಕ್ಕೆ ದಾಪುಗಾಲು | ಜನಮಾನಸ ಗೆದ್ದ ‘ಜನತಾ...

ಹಾಸನದ ಸಮಾನಾಸಕ್ತ ಗೆಳೆಯರು 1977ರಲ್ಲಿ ಹುಟ್ಟುಹಾಕಿದ ಜನತಾ ಮಾಧ್ಯಮ ಪತ್ರಿಕೆ, ತನ್ನ ನಿಲುವಿನಲ್ಲಿ ಎಂದೂ ರಾಜಿ ಮಾಡಿಕೊಳ್ಳದೆ, ಜನಪರ ಧೋರಣೆಯನ್ನು ಉಳಿಸಿಕೊಂಡು ಬಂದಿದೆ. ಸಾರ್ಥಕ 49 ವರ್ಷಗಳನ್ನು ಪೂರೈಸಿ, ಈಗ 50ನೇ ವರ್ಷಕ್ಕೆ...

ಮುಂದುವರೆದ ಕಬ್ಬು ಬೆಳೆಗಾರರ ಹೋರಾಟ: ರಾಜ್ಯಾದ್ಯಂತ ಏಕರೂಪ ಬೆಲೆಗೆ...

ಕರುನಾಡಲ್ಲಿ ಕಳೆದ ಒಂದು ತಿಂಗಳಿನಿಂದ ನಡೆಯುತ್ತಿರುವ ರೈತರ ಬಹು ದೊಡ್ಡ ಹೋರಾಟ ಇದಾಗಿದೆ,ಉತ್ತರ ಕರ್ನಾಟಕದ ಬೆಳಗಾವಿ, ಬಾಗಲಕೋಟೆ, ವಿಜಯಪುರ, ಕಲಬುರಗಿ, ಧಾರವಾಡ, ಹುಬ್ಬಳ್ಳಿ, ಮಂಡ್ಯ, ಮೈಸೂರು ಸೇರಿದಂತೆ 10 ರಿಂದ 15 ಜಿಲ್ಲೆಗಳಲ್ಲಿ...

ಗಡ್ಕರಿ-ಮೋಶಾ ಆಡಳಿತದಲ್ಲಿ ‘ವೋಟ್‌ ಚೋರಿ’ ಬೆನ್ನಲ್ಲೇ ‘ಪೆಟ್ರೋಲ್ ಚೋರಿ’:...

ದೇಶಾದ್ಯಂತ ಪ್ರಜಾಪ್ರಭುತ್ವದ ಅಡಿಪಾಯವನ್ನೇ ಅಲುಗಾಡಿಸುತ್ತಿರುವ 'ವೋಟ್‌ ಚೋರಿ' ವಿರುದ್ಧ ಬೃಹತ್ ಪ್ರತಿಭಟನೆಗಳು ನಡೆಯುತ್ತಿವೆ. ಬಿಜೆಪಿಗಾಗಿ ನಡೆದ ಮತದಾರರ ಹಕ್ಕು ಹರಣ, ಮತಗಳತನದ ಎಸ್‌ಐಆರ್‌ ರದ್ದಾಗಬೇಕು, ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್‌ ಕುಮಾರ್ ರಾಜೀನಾಮೆ...

​ಯಾತ್ರಾ ಮಾರ್ಗಗಳಲ್ಲಿ ಯಾವುದೇ ರೀತಿಯ ಮಾಂಸ, ಚಿಕನ್, ಮೀನು ಸೇರಿದಂತೆ ಮಾಂಸಾಹಾರವನ್ನು ಮಾರಾಟ ಮಾಡಬಾರದು ಎಂದು ಸ್ಥಳೀಯ ಆಡಳಿತವು ವ್ಯಾಪಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿತ್ತು. ಆದೇಶ ಉಲ್ಲಂಘಿಸಿದರೆ ಕಾನೂನು ಕ್ರಮ ಜರುಗಿಸುವ ಎಚ್ಚರಿಕೆಯನ್ನೂ ನೀಡಲಾಗಿತ್ತು. ಈ ಎಚ್ಚರಿಕೆಯ ನಡುವೆಯೂ ಅಂಗಡಿ ತೆರೆದು ವ್ಯಾಪಾರ ನಡೆಸಲಾಗುತ್ತಿತ್ತು ಎಂದು ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.

​ನಿಯಮ ಉಲ್ಲಂಘಿಸಿದ ಹಿನ್ನೆಲೆಯಲ್ಲಿ ಬಹೇಡಿ ವೃತ್ತಾಧಿಕಾರಿ (ಸರ್ಕಲ್ ಆಫೀಸರ್) ಅರುಣ್ ಕುಮಾರ್ ಸಿಂಗ್ ಅವರ ನೇತೃತ್ವದಲ್ಲಿ ಸ್ಥಳಕ್ಕೆ ಜೆಸಿಬಿ ತರಿಸಿ, ಅಂಗಡಿಯ ಮೇಲ್ಛಾವಣಿ (ಟಿನ್ ಶೆಡ್) ಹಾಗೂ ಕೌಂಟರ್ ಅನ್ನು ತೆರವುಗೊಳಿಸಲಾಗಿದೆ. ಉತ್ತರ ಪ್ರದೇಶದಲ್ಲಿ ಬಿಜೆಪಿ ಸರ್ಕಾರವು ಶ್ರಾವಣ ಮಾಸದ ಕಾವಡ್ ಯಾತ್ರಾ ಮಾರ್ಗಗಳಲ್ಲಿ ಪೊಲೀಸ್ ಹಾಗೂ ಆಡಳಿತಾತ್ಮಕ ಕಣ್ಗಾವಲು ಹೆಚ್ಚಿಸಿರುವ ಬೆನ್ನಲ್ಲೇ ಈ ಕಠಿಣ ಕ್ರಮ ಕೈಗೊಳ್ಳಲಾಗಿದೆ.

​ಈ ಘಟನೆಯ ಬೆನ್ನಲ್ಲೇ, ಬೇಕರಿ ಪ್ರದೇಶದ ಸಮೀಪವಿರುವ ಮತ್ತೊಂದು ಅಂಗಡಿಯ ಮೇಲೂ ದಾಳಿ ನಡೆಸಿದ ಪೊಲೀಸರು, ಮಾಂಸಾಹಾರ ಮಾರಾಟ ಮಾಡುತ್ತಿದ್ದ ಆರೋಪದಡಿ ಇತರೆ ಇಬ್ಬರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ ಎಂದು ‘ಪಿಟಿಐ’ ಸುದ್ದಿ ಸಂಸ್ಥೆ ವರದಿ ಮಾಡಿದೆ.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ಬಿಜೆಪಿ-ಕಾಂಗ್ರೆಸ್‌ ‘ಚಾಕು ರಾಜಕಾರಣ’; ಎಎಪಿ ಕಿಡಿ

ರಾಜ್ಯದಲ್ಲಿ ಆಡಳಿತಾರೂಢ ಕಾಂಗ್ರೆಸ್ ಮತ್ತು ವಿಪಕ್ಷ ಬಿಜೆಪಿ ನಡುವೆ ನಡೆಯುತ್ತಿರುವ ಪರಸ್ಪರ...

ಗಡ್ಕರಿ-ಮೋಶಾ ಆಡಳಿತದಲ್ಲಿ ‘ವೋಟ್‌ ಚೋರಿ’ ಬೆನ್ನಲ್ಲೇ ‘ಪೆಟ್ರೋಲ್ ಚೋರಿ’: ₹62,000 ಕೋಟಿ ದೋಚುವ ಹುನ್ನಾರ!

ದೇಶಾದ್ಯಂತ ಪ್ರಜಾಪ್ರಭುತ್ವದ ಅಡಿಪಾಯವನ್ನೇ ಅಲುಗಾಡಿಸುತ್ತಿರುವ 'ವೋಟ್‌ ಚೋರಿ' ವಿರುದ್ಧ ಬೃಹತ್ ಪ್ರತಿಭಟನೆಗಳು...

ಕರ್ನಾಟಕ SIR | ಒಬ್ಬರಿಗೇ ಹಲವು ‘ವೋಟರ್ ಐಡಿ’ಗಳ ಸೃಷ್ಟಿ: ಲೋಪ ಒಪ್ಪಿಕೊಂಡ ಚುನಾವಣಾ ಕಚೇರಿ!

ಮಹದೇವಪುರ ಕ್ಷೇತ್ರದಲ್ಲಿ ಕೇವಲ 397 ಮಂದಿಯ ಹೆಸರಿನಲ್ಲಿ 803 ಮತದಾರರ ಗುರುತಿನ...