ಉತ್ತರ ಪ್ರದೇಶ | ಎಸ್ಐಆರ್ ಒತ್ತಡ ಆರೋಪಿಸಿ ಆತ್ಮಹತ್ಯೆ ಮಾಡಿಕೊಂಡ ಬಿಎಲ್ಒ

Date:

ಉತ್ತರ ಪ್ರದೇಶದ ಮೊರಾದಾಬಾದ್‌ನಲ್ಲಿ ಎಸ್ಐಆರ್‌ಗೆ ಸಂಬಂಧಿಸಿದ ಕೆಲಸದ ಒತ್ತಡದಿಂದ ಬಿಎಲ್ಒ(ಬೂತ್‌ ಮಟ್ಟದ ಅಧಿಕಾರಿ) ಒಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

- Advertisement -

ಕಳೆದ ಕೆಲವು ವಾರಗಳಲ್ಲಿ ಹಲವಾರು ಬಿಎಲ್ಒಗಳು ಕೆಲಸದ ಹೊರೆ ಮತ್ತು ಹಿರಿಯ ಅಧಿಕಾರಿಗಳ ಒತ್ತಡದಿಂದಾಗಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಆರೋಪಿಸಲಾಗಿದೆ. ಪಶ್ಚಿಮ ಬಂಗಾಳ, ಉತ್ತರ ಪ್ರದೇಶ, ಕೇರಳ, ಛತ್ತೀಸ್‌ಗಢ, ಗೋವಾ, ಗುಜರಾತ್, ಮಧ್ಯಪ್ರದೇಶ, ರಾಜಸ್ಥಾನ ಮತ್ತು ತಮಿಳುನಾಡು ಸೇರಿದಂತೆ 12 ರಾಜ್ಯಗಳಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಮುಂದುವರಿದಿರುವುದರಿಂದ ಇದು ರಾಜಕೀಯ ಬಿರುಗಾಳಿಗೆ ಕಾರಣವಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೌಢ್ಯತೆಯೊಳಗೆ ನಾ ಕಂಡ ಭಾರತ

ಭಾರತವು ಏಕತೆಯಲ್ಲಿ ವೈವಿಧ್ಯತೆಯನ್ನು ಕಂಡ ದೇಶ. ಹಲವು ಭಾಷೆಗಳು, ಧರ್ಮಗಳು, ಸಂಸ್ಕೃತಿಗಳು, ಆಹಾರ ಪದ್ಧತಿಗಳು, ಜೀವನಶೈಲಿಗಳು ಮತ್ತು ಆಚರಣೆಗಳು ಇಲ್ಲಿನ ಸಾಮಾಜಿಕ ಬದುಕಿನ ವೈಶಿಷ್ಟ್ಯ. ಈ ವೈವಿಧ್ಯತೆಯೇ ಭಾರತದ ಶಕ್ತಿ. ಆದರೆ, ವೈವಿಧ್ಯತೆಯನ್ನು...

ಅಂಬಾರಿಯ ಮುಂದೆ ಪೊಲೀಸರು ಸೆಲ್ಫಿ ತೆಗೆದುಕೊಂಡರೆ ಭದ್ರತೆಗೆ ಹೇಗೆ...

ಚಿನ್ನದ ಅಂಬಾರಿಯನ್ನು ಜಂಬೂಸವಾರಿಯ ದಿನ ಬಳಸಿಕೊಳ್ಳಲು ಸರ್ಕಾರ ಅರಸು ಮನೆತನದವರಿಂದ ಪಡೆಯುತ್ತದೆ. ಉಚಿತವಾಗಿ ಅಲ್ಲ; ನಿಗದಿಪಡಿಸಿರುವ ಹಣವನ್ನು ಸಂದಾಯ ಮಾಡಿ. ಅಂಬಾರಿಯ ಭದ್ರತೆಯ ಹೊಣೆ ಸರ್ಕಾರದ ಮೇಲೂ ಇರುತ್ತದೆ. ಪೊಲೀಸರು ಸೆಲ್ಫಿ ತೆಗೆದುಕೊಂಡರೆ...

ಜನತಂತ್ರಕ್ಕೆ ಕುತ್ತು: ‘ಖಾಸಗಿತನ’ದ ನೆಪದಲ್ಲಿ ಪತ್ರಿಕಾ ಸ್ವಾತಂತ್ರ್ಯ ಹತ್ತಿಕ್ಕಲು...

ಮೋದಿ ಸರ್ಕಾರವು ಈ ಕಾಯ್ದೆಯನ್ನು ಏಕಾಏಕಿ ಜಾರಿಗೊಳಿಸದೆ, ಹಂತ ಹಂತವಾಗಿ ಜಾರಿಗೊಳಿಸುತ್ತಾ ಪ್ರಜಾಪ್ರಭುತ್ವದ ಕತ್ತು ಹಿಸುಕುತ್ತಿದೆ. ಆರ್‌ಟಿಐ ಕಾಯ್ದೆಯನ್ನು ದುರ್ಬಲಗೊಳಿಸುವ ತಿದ್ದುಪಡಿಯು ಈಗಾಗಲೇ ನವೆಂಬರ್ 2025ರಿಂದಲೇ ಜಾರಿಯಲ್ಲಿದ್ದರೆ, ಡೇಟಾ ಬಳಕೆಯ ಕಠಿಣ ನಿಯಮಗಳು...

ಸರ್ವೇಶ್ ಸಿಂಗ್(46) ಆತ್ಮಹತ್ಯೆ ಮಾಡಿಕೊಂಡವರು. ಸಹಾಯಕ ಶಿಕ್ಷಕರಾಗಿದ್ದ ಸರ್ವೇಶ್ ಸಿಂಗ್ ಅವರನ್ನು ಅ.7ರಂದು ಬಿಎಲ್ಒ ಕರ್ತವ್ಯಕ್ಕೆ ನಿಯೋಜಿಸಲಾಗಿತ್ತು. ಇದು ಚುನಾವಣಾ ಸಂಬಂಧಿತ ಕರ್ತವ್ಯಕ್ಕೆ ಅವರ ಮೊದಲ ನಿಯೋಜನೆಯಾಗಿತ್ತು.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ‘ಕೊಟ್ಟ ಮಾತು’ ಗದ್ದಲ ಸೃಷ್ಟಿಸಿದ ಬಳಿಕ ಎಚ್ಚೆತ್ತ ಕಾಂಗ್ರೆಸ್

ಸರ್ವೇಶ್ ಸಿಂಗ್ ಆತ್ಮಹತ್ಯೆ ಮಾಡಿಕೊಳ್ಳುವ ಮೊದಲು ರೆಕಾರ್ಡ್ ಮಾಡಿರುವ ವಿಡಿಯೊದಲ್ಲಿ, “ನಾನು ಕಷ್ಟಪಟ್ಟು ಕೆಲಸ ಮಾಡಿದರೂ ತನ್ನ ಕೆಲಸವನ್ನು ಮುಗಿಸಲು ಸಾಧ್ಯವಾಗಲಿಲ್ಲ. ನಾನು ಸಂಕಷ್ಟದಲ್ಲಿದ್ದೇನೆ. ಕಳೆದ 20 ದಿನಗಳಿಂದ ನನಗೆ ನಿದ್ರೆ ಬರುತ್ತಿಲ್ಲ. ಇತರರು ಕೆಲಸವನ್ನು ಪೂರ್ಣಗೊಳಿಸುತ್ತಿದ್ದಾರೆ ಎಂದು ಕಣ್ಣೀರು ಹಾಕುತ್ತಿರುವುದು ಮತ್ತು ನನಗೆ ನಾಲ್ಕು ಚಿಕ್ಕ ಹೆಣ್ಣು ಮಕ್ಕಳಿದ್ದಾರೆ ಅವರನ್ನು ನೋಡಿಕೊಳ್ಳುವಂತೆ ತಾಯಿ ಮತ್ತು ಸಹೋದರಿಯಲ್ಲಿ ಹೇಳುತ್ತಿರುವುದು ಕಂಡು ಬಂದಿದೆ.

ಅಧಿಕಾರಿಗಳ ಪ್ರಕಾರ ಭಾನುವಾರ ಮುಂಜಾನೆ ಸರ್ವೇಶ್ ಸಿಂಗ್ ನೇಣು ಬಿಗಿದ ಸ್ಥಿತಿಯಲ್ಲಿ ಕಂಡು ಬಂದ ಬಗ್ಗೆ ಪತ್ನಿ ಬಬ್ಲಿ ದೇವಿ ಪೊಲೀಸರಿಗೆ ಮಾಹಿತಿ ನೀಡಿದರು. ಸ್ಥಳದಲ್ಲಿ ಎರಡು ಪುಟಗಳ ಕೈಬರಹದ ಆತ್ಮಹತ್ಯೆ ಪತ್ರ ಪತ್ತೆಯಾಗಿದೆ. ಸರ್ವೇಶ್ ಸಿಂಗ್ ಆತ್ಮಹತ್ಯೆಗೆ ಮೊದಲು ಪತ್ರವನ್ನು ಬರೆದಿರುವುದನ್ನು ಹಿರಿಯ ಪೊಲೀಸ್ ಅಧಿಕಾರಿ ಆಶಿಶ್ ಪ್ರತಾಪ್ ಸಿಂಗ್ ದೃಢಪಡಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಪ್ರಾಪ್ತ ಪುತ್ರನಿಂದ ಕಾರು ಅಪಘಾತ: ಕೇರಳದ ಹೆಚ್ಚುವರಿ ಜಿಲ್ಲಾ ನ್ಯಾಯಾಧೀಶರಿಗೆ ಬಂಧನದಿಂದ ಮಧ್ಯಂತರ ರಕ್ಷಣೆ

ಕೊಚ್ಚಿಯಲ್ಲಿ 17 ವರ್ಷದ ಅಪ್ರಾಪ್ತ ಮಗ ಚಲಾಯಿಸುತ್ತಿದ್ದ ಮರ್ಸಿಡಿಸ್-ಬೆಂಜ್ ಕಾರು ಡಿಕ್ಕಿ...

ಯುಪಿಯಲ್ಲಿ ಮುಂದುವರೆದ ಮರ್ಯಾದೆಗೇಡು ಹತ್ಯೆ; ದಲಿತ ಯುವಕನನ್ನು ಇಟ್ಟಿಗೆಯಿಂದ ಹೊಡೆದು ಕೊಲೆ

ಪ್ರೀತಿಸಿ ಮದುವೆಯಾದನೆಂಬ ಕಾರಣಕ್ಕೆ ದಲಿತ ಯುವಕನನ್ನು ಪತ್ನಿಯ ಕುಟುಂಬದವರು ಕೊಲೆ ಮಾಡಿರುವ...

AI ಬಳಸಿ ಒಬ್ಬರೇ 10 ಮಂದಿಯ ಕೆಲಸ ಮಾಡಬಹುದು: ಜೊಹೊ ಸಂಸ್ಥಾಪಕ ಶ್ರೀಧರ್ ವೆಂಬು ಎಚ್ಚರಿಕೆ

AI ತಂತ್ರಜ್ಞಾನವು ಉದ್ಯೋಗ ಮಾರುಕಟ್ಟೆಯಲ್ಲಿ ದೊಡ್ಡ ಮಟ್ಟದ ಬದಲಾವಣೆ ತರುವ ಸಾಧ್ಯತೆಯಿದ್ದು,...

‘ಎಕ್ಸ್‌ಪ್ರೆಸ್‌ವೇ’ಗಳಲ್ಲಿ 120 ಕಿ.ಮೀ ವೇಗದಲ್ಲಿ‌ ವಾಹನ ಚಲಾಯಿಸಿದ್ರೂ ದಂಡವಿಲ್ಲ: ಕೇಂದ್ರ ಸಚಿವ ನಿತಿನ್ ಗಡ್ಕರಿ

ದೇಶದ ಎಕ್ಸ್‌ಪ್ರೆಸ್‌ವೇಗಳಲ್ಲಿ ಗಂಟೆಗೆ 120 ಕಿ.ಮೀ. ವೇಗದಲ್ಲಿ ಸಂಚರಿಸುವ ವಾಹನಗಳಿಗೂ ಯಾವುದೇ...