ಮುಸ್ಲಿಂ ವಿದ್ಯಾರ್ಥಿಗೆ ಕಪಾಳಮೋಕ್ಷ ಪ್ರಕರಣ: ಮುಜಾಫರ್‌ನಗರ ಶಾಲೆ ಮುಚ್ಚಲು ಆದೇಶ

Date:

ಉತ್ತರಪ್ರದೇಶದ ಮುಜಾಫರ್‌ನಗರ ಶಾಲೆಯಲ್ಲಿ ಶಿಕ್ಷಕಿಯೊಬ್ಬರು ಮುಸ್ಲಿಂ ವಿದ್ಯಾರ್ಥಿಗೆ ಕಪಾಳಮೋಕ್ಷ ಮಾಡುವಂತೆ ಇತರ ವಿದ್ಯಾರ್ಥಿಗಳಿಗೆ ಸೂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಲೆಯನ್ನು ಮುಚ್ಚುವಂತೆ ಶಿಕ್ಷಣ ಇಲಾಖೆ ಶಾಲಾ ಸಂಚಾಲಕರಿಗೆ ನೋಟಿಸ್‌ ನೀಡಿದೆ.

ಶಾಲೆಯಲ್ಲಿ ಕಲಿಯುತ್ತಿದ್ದ ಇತರ ಮಕ್ಕಳನ್ನು ಸ್ಥಳೀಯ ಬೇರೆ ಶಾಲೆಗೆ ಸೇರಿಸಲಾಗುವುದು. ಶಾಲೆ ಮುಚ್ಚುವುದರಿಂದ ವಿದ್ಯಾರ್ಥಿಗಳ ಶಿಕ್ಷಣಕ್ಕೆ ಯಾವುದೇ ರೀತಿಯ ಸಮಸ್ಯೆ ಎದುರಾಗುವುದಿಲ್ಲ ಎಂದು ಮುಜಾಫರ್‌ನಗರ ಜಿಲ್ಲಾ ಶಿಕ್ಷಣ ಇಲಾಖೆ ತಿಳಿಸಿದೆ.

ಆರೋಪಿ ಶಿಕ್ಷಕಿ ತ್ರಿಪ್ತಾ ತ್ಯಾಗಿ ಏಳು ವರ್ಷದ ಮುಸ್ಲಿಂ ವಿದ್ಯಾರ್ಥಿಗೆ ಕಪಾಳಮೋಕ್ಷ ಮಾಡುವಂತೆ ಇನ್ನುಳಿದ ವಿದ್ಯಾರ್ಥಿಗಳಿಗೆ ಆದೇಶಿಸಿದ ವಿಡಿಯೋ ಶುಕ್ರವಾರ(ಆಗಸ್ಟ್ 25) ವೈರಲ್ ಆಗಿತ್ತು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ವಿಡಿಯೋ ವೈರಲ್ ಆದ ಬೆನ್ನಲ್ಲೇ ದೇಶಾದ್ಯಂತ ಆಕ್ರೋಶ ವ್ಯಕ್ತವಾಗಿತ್ತು. ವಿರೋಧ ಪಕ್ಷದ ನಾಯಕರು ಘಟನೆಯನ್ನು ಖಂಡಿಸುವುದರ ಜೊತೆ ಉತ್ತರ ಪ್ರದೇಶ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದರು. ಶಿಕ್ಷಕಿಯ ವಿರುದ್ಧ ಕ್ರಮಕ್ಕೆ ಕೂಡ ಆಗ್ರಹಿಸಿದ್ದರು.

ಶಿಕ್ಷಕಿಯ ವಿರುದ್ಧ ಪ್ರಕರಣವನ್ನು ಈಗಾಗಲೇ ದಾಖಲಿಸಲಾಗಿದೆ. ರಾಷ್ಟ್ರೀಯ ಮಕ್ಕಳ ಹಕ್ಕುಗಳ ಆಯೋಗವು ಶಿಕ್ಷಕಿಯ ವಿರುದ್ಧ ತೆಗೆದುಕೊಂಡು ಕ್ರಮಗಳ ಬಗ್ಗೆ ಒಂದು ವಾರದಲ್ಲಿ ವರದಿಯನ್ನು ನೀಡುವಂತೆ ಸೂಚಿಸಿದೆ.

ಈ ಸುದ್ದಿ ಓದಿದ್ದೀರಾ? ದೆಹಲಿ ಮೆಟ್ರೋ ನಿಲ್ದಾಣಗಳ ಗೋಡೆಗಳ ಮೇಲೆ ‘ಖಲಿಸ್ತಾನ್ ಜಿಂದಾಬಾದ್‌’ ಬರಹ

ವೈರಲ್ ಆಗಿರುವ ವಿಡಿಯೋದಲ್ಲಿ, ತರಗತಿಯ ಮುಂದೆ ನಿಂತಿದ್ದ ಮುಸ್ಲಿಂ ಬಾಲಕನನ್ನು ಒಬ್ಬ ವಿದ್ಯಾರ್ಥಿ ಕಪಾಳ ಮೋಕ್ಷ ಮಾಡಿದ ನಂತರ ಶಿಕ್ಷಕಿ ಇತರ ವಿದ್ಯಾರ್ಥಿಗಳಿಗೂ ಹಲ್ಲೆ ನಡೆಸುವಂತೆ ಒತ್ತಾಯಿಸುವುದನ್ನು ನೋಡಬಹುದು.

ಈ ಬಗ್ಗೆ ಬಾಲಕನ ತಾಯಿ ರುಬೀನಾ ಮಾತನಾಡಿ, ಮಗ ಮನೆಗೆ ಬಂದಾಗ ಅಳುತ್ತಿದ್ದನು. ನಾವು ಅದನ್ನು ಗಂಭೀರವಾಗಿ ಪರಿಗಣಿಸಲಿಲ್ಲ. ಹೋಮ್ ವರ್ಕ್ ಮಾಡದಿದ್ದಕ್ಕೆ ಟೀಚರ್ ಶಿಕ್ಷೆ ಕೊಟ್ಟಿರಬೇಕು ಎಂದುಕೊಂಡೆವು. ಆದರೆ ವಿಡಿಯೋವನ್ನು ನೋಡಿದಾಗ ನಮಗೆ ಆಘಾತವಾಯಿತು ಎಂದು ಹೇಳಿದ್ದಾರೆ.

ಬಾಲಕನ ಸೋದರ ಸಂಬಂಧಿ ಮೊಹಮ್ಮದ್ ನದೀಮ್ ಎಂಬಾತ ಈ ವಿಡಿಯೋವನ್ನು ಚಿತ್ರೀಕರಿಸಿದ್ದಾರೆ. ಅವರು ಬೇರೆ ಯಾವುದೋ ಕೆಲಸಕ್ಕೆಂದು ಶಾಲೆಗೆ ಹೋಗಿದ್ದರು ಆ ವೇಳೆ ಈ ಘಟನೆ ನಡೆಯುತ್ತಿದ್ದಾಗ ವಿಡಿಯೋ ಚಿತ್ರೀಕರಿಸಿದ್ದಾರೆ.

ಘಟನೆಯ ಬಗ್ಗೆ ಶಿಕ್ಷಕಿ ತ್ರಿಪ್ತಾ ತ್ಯಾಗಿ ಸಮರ್ಥಿಸಿಕೊಂಡಿದ್ದು, “ತಮ್ಮ ಮಗನೊಂದಿಗೆ ಕಟ್ಟುನಿಟ್ಟಾಗಿ ನೋಡಿಕೊಳ್ಳುವಂತೆ ವಿದ್ಯಾರ್ಥಿ ಪೋಷಕರು ಕೂಡ ಹೇಳಿದ್ದರು. ಆತ ಹೋಮ್‌ವರ್ಕ್‌ ಮಾಡಿರಲಿಲ್ಲ. ತಾನು ಅಂಗವಿಕಲೆಯಾಗಿರುವ ಕಾರಣ ಇತರ ವಿದ್ಯಾರ್ಥಿಗಳಿಂದ ಶಿಕ್ಷೆ ಕೊಡಿಸಿದ್ದೆ. ಇದೊಂದು ಸಣ್ಣ ಘಟನೆ ಅಷ್ಟೆ” ಎಂದಿದ್ದರು.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ನಮ್ಮನ್ನು ಬೆಂಬಲಿಸಿ

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನೀಟ್ ರದ್ದು ಮಾಡಿದರೆ ಲಕ್ಷಾಂತರ ವಿದ್ಯಾರ್ಥಿಗಳ ಮೇಲೆ ಪರಿಣಾಮ: ಶಿಕ್ಷಣ ಸಚಿವ

ನೀಟ್‌ ವಿಚಾರವಾಗಿ ತೀವ್ರ ವಿವಾದ ಮತ್ತು ಪ್ರಶ್ನೆಪತ್ರಿಕೆ ಸೋರಿಕೆ ಬಗ್ಗೆ ತನಿಖೆ...

ಜಗನ್ ರೆಡ್ಡಿ ಅವರ ವೈಎಸ್‌ಆರ್‌ ಕಾಂಗ್ರೆಸ್‌ನ ನಿರ್ಮಾಣ ಹಂತದಲ್ಲಿದ್ದ ಕೇಂದ್ರ ಕಚೇರಿ ಕೆಡವಿದ ಆಂಧ್ರ ಸರ್ಕಾರ

ಆಂಧ್ರಪ್ರದೇಶದ ಗುಂಟೂರು ಜಿಲ್ಲೆಯ ಸೀತಾನಗರಂನಲ್ಲಿ ಮಾಜಿ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ...

ಮಹಿಳೆಯನ್ನು ಸಾರ್ವಜನಿಕವಾಗಿ ಥಳಿಸುತ್ತಿರುವ ವಿಡಿಯೋ ವೈರಲ್; ಓರ್ವನ ಬಂಧನ

ಮಧ್ಯಪ್ರದೇಶದ ಬುಡಕಟ್ಟು ಪ್ರಾಬಲ್ಯದ ಧಾರ್ ಜಿಲ್ಲೆಯಲ್ಲಿ ಪುರುಷರ ಗುಂಪೊಂದು ಮಹಿಳೆಯನ್ನು ಸಾರ್ವಜನಿಕವಾಗಿ...

ಕರ್ನಾಟಕದ ಬೆನ್ನಲ್ಲೇ ಗೋವಾದಲ್ಲೂ ಇಂಧನ ದರ ಏರಿಕೆ; ರಾಜ್ಯ ಬಿಜೆಪಿ ನಾಯಕರಿಗೆ ಶಾಕ್

ಕರ್ನಾಟಕ ಸರ್ಕಾರದ ಇಂಧನ ದರ ಏರಿಕೆಯನ್ನು ಟೀಕಿಸುತ್ತಿದ್ದ ರಾಜ್ಯ ಬಿಜೆಪಿ ನಾಯಕರಿಗೆ...