ಅಧಿಕೃತ ನಿಯತಕಾಲಿಕೆಯಲ್ಲಿ ಅಂಬೇಡ್ಕರ್ ಫೋಟೋ ಉಲ್ಟಾ: ಮಹಾರಾಷ್ಟ್ರ ವಿಧಾನಸಭೆಯಲ್ಲಿ ಗದ್ದಲ

Date:

ಮಹಾರಾಷ್ಟ್ರ ಸರ್ಕಾರದ ಅಧಿಕೃತ ನಿಯತಕಾಲಿಕೆಯಲ್ಲಿ ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಭಾವಚಿತ್ರವನ್ನು ತಲೆಕೆಳಗಾಗಿ (ಉಲ್ಟಾ) ಮುದ್ರಿಸಿರುವ ಗಂಭೀರ ಪ್ರಮಾದವೊಂದು ಬೆಳಕಿಗೆ ಬಂದಿದೆ.

- Advertisement -

ಮಹಾರಾಷ್ಟ್ರ ವಿಧಾನಸಭೆಯಲ್ಲಿ ಪ್ರತಿಪಕ್ಷಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿ ಭಾರಿ ಗದ್ದಲ ಸೃಷ್ಟಿಸಿದ ಘಟನೆ ನಡೆದಿದೆ. ಸರ್ಕಾರದ ಈ ಬೇಜವಾಬ್ದಾರಿತನವನ್ನು ಖಂಡಿಸಿ ಪ್ರತಿಪಕ್ಷಗಳ ಸದಸ್ಯರು ಸದನದ ಬಾವಿಗಿಳಿದು ಪ್ರತಿಭಟನೆ ನಡೆಸಿದ್ದಾರೆ. ಇದರಿಂದಾಗಿಕಲಾಪವನ್ನು ಹಲವು ಬಾರಿ ಮುಂದೂಡಬೇಕಾಯಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಭದ್ರಾವತಿ | ಕಲುಷಿತ ಕುಡಿಯುವ ನೀರು ಸರಬರಾಜು; ರೋಗಭೀತಿಯಲ್ಲಿ...

ಭದ್ರಾವತಿ ತಾಲೂಕಿನ ಶಿವರಾಮನಗರ ಗ್ರಾಮದಲ್ಲಿ ನಗರಸಭೆ ಕಲುಷಿತ ಕುಡಿಯುವ ನೀರನ್ನು ಸರಬರಾಜು ಮಾಡುತ್ತಿರುವುದು ಗ್ರಾಮಸ್ಥರಲ್ಲಿ ತೀವ್ರ ಅಸಮಾಧಾನಕ್ಕೆ ಕಾರಣವಾಗಿದೆ. ಈ ವಿಷಯದಲ್ಲಿ ನಗರಸಭೆ ಆಡಳಿತ ಮತ್ತು ಆರೋಗ್ಯ ಇಲಾಖೆ ಕಣ್ಮುಚ್ಚಿ ಕುಳಿತಿರುವುದಾಗಿ ಸ್ಥಳೀಯರು...

15 ವರ್ಷಗಳಿಂದ ಪ್ಲಾಸ್ಟಿಕ್‌ ದೂರವಿಟ್ಟ ಗ್ರಾಮ; ನಮ್ಮೂರಿಗೂ ಇದು...

ಒಂದು ಗ್ರಾಮವೆಂದರೆ, ಇಂದಿಗೂ ಮಣ್ಣಿನ ರಸ್ತೆಗಳು, ಕಚ್ಚಾ ಮನೆಗಳು, ಹೊಲ-ಗದ್ದೆಗಳು ಮಾತ್ರ ನೆನಪಾಗುತ್ತವೆ. ಅಲ್ಲಿನ ಜನರ ಬದುಕಿನ ಶಿಸ್ತು, ಸಾರ್ವಜನಿಕ ಸ್ಥಳಗಳ ಮೇಲಿನ ಅವರ ಹೊಣೆಗಾರಿಕೆ ಮತ್ತು ಮುಂದಿನ ಪೀಳಿಗೆಯ ಬಗ್ಗೆ ಇರುವ...

ʼಹಿಂದೆ ಸರಿಯುವ ಮಾತೇ ಇಲ್ಲʼ; ದೆಹಲಿ ಬೀದಿಗಳಲ್ಲಿ ಅಬ್ಬರಿಸುತ್ತಿರುವ...

ಚುನಾವಣಾ ಆಯೋಗದ (ECI) ವಿಶೇಷ ತೀವ್ರ ಪರಿಷ್ಕರಣೆ (SIR) ವಿರುದ್ಧ ಮತ್ತು CEC ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ INDIA ಬ್ಲಾಕ್ ಸಂಸತ್ ಸದಸ್ಯರು ದೆಹಲಿ ಬೀದಿಗಳಲ್ಲಿ ಬೃಹತ್‌ ಪ್ರತಿಭಟನೆ ನಡೆಸುತ್ತಿದ್ದಾರೆ. ಯುವಕರು...

ಇದನ್ನೂ ಓದಿ: ಈ ದಿನ ಸಂಪಾದಕೀಯ | ಪ್ರತಿಭಟಿಸಿದರೆ ಸಾಕು ಜೈಲು ಶಿಕ್ಷೆ; ಇದು ಬಿಜೆಪಿಯ ಅಸಲಿ ಮುಖವೇ?

ಮಹಾರಾಷ್ಟ್ರ ಸರ್ಕಾರದ ಮಾಹಿತಿ ಮತ್ತು ಸಾರ್ವಜನಿಕ ಸಂಪರ್ಕ ಮಹಾನಿರ್ದೇಶನಾಲಯ (DGIPR) ನಿಯಮಿತವಾಗಿ ಹೊರತರುವ ಅಧಿಕೃತ ಮಾಸಿಕ ನಿಯತಕಾಲಿಕೆಯಾದ ‘ಲೋಕರಾಜ್ಯ’ದ ಇತ್ತೀಚಿನ ಸಂಚಿಕೆಯಲ್ಲಿ ಈ ಪ್ರಮಾದ ಸಂಭವಿಸಿದೆ.

ಈ ಸಂಚಿಕೆಯ ಒಳಗಿನ ಪುಟವೊಂದರಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಫೋಟೋವನ್ನು ಉಲ್ಟಾ ಮುದ್ರಿಸಲಾಗಿತ್ತು. ಸರ್ಕಾರದ ಅಧಿಕೃತ ಪ್ರಕಟಣೆಯಲ್ಲೇ ಇಂತಹ ಘೋರ ನಿರ್ಲಕ್ಷ್ಯ ನಡೆದಿರುವುದು ಪ್ರತಿಪಕ್ಷಗಳ ಕೈಗೆ ಪ್ರಮುಖ ಅಸ್ತ್ರವಾಗಿ ಸಿಕ್ಕಂತಾಗಿದೆ.

ಸದನ ಸಮಾವೇಶಗೊಳ್ಳುತ್ತಿದ್ದಂತೆ ವಿರೋಧ ಪಕ್ಷದ ನಾಯಕರು ಈ ವಿಷಯವನ್ನು ಪ್ರಸ್ತಾಪಿಸಿದ್ದಾರೆ. “ಇದು ಕೇವಲ ಮುದ್ರಣ ದೋಷವಲ್ಲ, ದೇಶದ ಸಂವಿಧಾನ ಶಿಲ್ಪಿಗೆ ಮತ್ತು ಕೋಟ್ಯಂತರ ಜನರ ಭಾವನೆಗಳಿಗೆ ಮಾಡಿರುವ ಘೋರ ಅವಮಾನ” ಎಂದು ಪ್ರತಿಪಕ್ಷ ಸದಸ್ಯರು ಆಕ್ರೋಶ ಹೊರಹಾಕಿದ್ದಾರೆ.

ಸದನ ಮತ್ತೆ ಸಮಾವೇಶಗೊಂಡಾಗ ಸರ್ಕಾರದ ಪರವಾಗಿ ಮಾತನಾಡಿದ ಸಚಿವರು, ಇದೊಂದು ಅತ್ಯಂತ ದುರದೃಷ್ಟಕರ ಮತ್ತು ಗಂಭೀರವಾದ ತಾಂತ್ರಿಕ ಪ್ರಮಾದ ಎಂದು ಒಪ್ಪಿಕೊಂಡಿದೆ. ವಿವಾದಿತ ನಿಯತಕಾಲಿಕೆಯ ಪ್ರತಿಗಳನ್ನು ಮಾರುಕಟ್ಟೆಯಿಂದ ತಕ್ಷಣವೇ ಹಿಂಪಡೆಯಲು ಸೂಚಿಸಲಾಗಿದೆ ಎಂದು ಸರ್ಕಾರ ಹೇಳಿದೆ.

24 ಗಂಟೆಗಳ ಒಳಗೆ ಈ ಲೋಪಕ್ಕೆ ಸಂಬಂಧಿಸಿದಂತೆ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಹೇಳಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಭದ್ರಾವತಿ | ಕಲುಷಿತ ಕುಡಿಯುವ ನೀರು ಸರಬರಾಜು; ರೋಗಭೀತಿಯಲ್ಲಿ ಗ್ರಾಮಸ್ಥರು

ಭದ್ರಾವತಿ ತಾಲೂಕಿನ ಶಿವರಾಮನಗರ ಗ್ರಾಮದಲ್ಲಿ ನಗರಸಭೆ ಕಲುಷಿತ ಕುಡಿಯುವ ನೀರನ್ನು ಸರಬರಾಜು...

ವಿಜಯಪುರ | ಕೆ-ಸೆಟ್ ಪರೀಕ್ಷೆ ಪಾರದರ್ಶಕತೆಗೆ ಕಟ್ಟುನಿಟ್ಟಿನ ಕ್ರಮ: ಡಾ. ಔದ್ರಾಮ

ಅ. 11ರಂದು ನಡೆಯಲಿರುವ ಕೆ-ಸೆಟ್ ಪರೀಕ್ಷೆಯನ್ನು ಪಾರದರ್ಶಕ ಹಾಗೂ ಅಚ್ಚುಕಟ್ಟಾಗಿ ನಡೆಸಲು...

15 ವರ್ಷಗಳಿಂದ ಪ್ಲಾಸ್ಟಿಕ್‌ ದೂರವಿಟ್ಟ ಗ್ರಾಮ; ನಮ್ಮೂರಿಗೂ ಇದು ಸಾಧ್ಯವಲ್ಲವೇ?

ಒಂದು ಗ್ರಾಮವೆಂದರೆ, ಇಂದಿಗೂ ಮಣ್ಣಿನ ರಸ್ತೆಗಳು, ಕಚ್ಚಾ ಮನೆಗಳು, ಹೊಲ-ಗದ್ದೆಗಳು ಮಾತ್ರ...

ಕ್ಯಾನ್ಸರ್ ರೋಗಿಗಳಿಗೆ ಗುಡ್‌ನ್ಯೂಸ್‌; ದುಬಾರಿ ಔಷಧಗಳ ಬೆಲೆ ಶೇ.70ರವರೆಗೆ ಇಳಿಕೆ?

ದೇಶದಲ್ಲಿ ದುಬಾರಿಯಾಗಿರುವ ಕೆಲವು ಕ್ಯಾನ್ಸರ್ ಔಷಧಗಳ ಬೆಲೆ ಶೀಘ್ರದಲ್ಲೇ ಭಾರಿ ಪ್ರಮಾಣದಲ್ಲಿ...