ʼವೋಟ್‌ ಚೋರಿʼ ಸಂಗ್ರಾಮ; ಸುಪ್ರೀಂ ಕೋರ್ಟ್‌ ಕಡೆಗೆ ಕಾಂಗ್ರೆಸ್ ಮೆರವಣಿಗೆ

Date:

‘ವೋಟ್‌ ಚೋರಿ’ ಆರೋಪದ ಹಿನ್ನೆಲೆಯಲ್ಲಿ, ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಕಾಂಗ್ರೆಸ್ ಸುಪ್ರೀಂ ಕೋರ್ಟ್‌ನತ್ತ ಮೆರವಣಿಗೆ ನಡೆಸುತ್ತಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ಅವರನ್ನು ಭೇಟಿ ಮಾಡಿ ಮನವಿ ಪತ್ರ ಸಲ್ಲಿಸುವುದಾಗಿ ಕಾಂಗ್ರೆಸ್ ಘೋಷಿಸಿದೆ. ಈಗಾಗಲೇ ಸಾವಿರಾರು ಪ್ರತಿಭಟನಾಕಾರರು ರಸ್ತೆಗಿಳಿದು, ಗ್ಯಾನೇಶ್‌ ಕುಮಾರ್‌ ವಿರುದ್ಧ ಘೋಷಣೆ ಕೂಗುತ್ತಾ ರ್ಯಾಲಿಯಲ್ಲಿ ಪಾಲ್ಗೊಂಡಿದ್ದಾರೆ.

- Advertisement -

ಆದರೆ, ಕಾಂಗ್ರೆಸ್ ನಾಯಕರನ್ನು ಭೇಟಿ ಮಾಡಲು ಸಿಜೆಐ ಸೂರ್ಯಕಾಂತ್ ನಿರಾಕರಿಸಿದ್ದಾರೆ. ಮತದಾರರ ಪಟ್ಟಿಯ ಪರಿಷ್ಕರಣೆಗೆ ಸಂಬಂಧಿಸಿದ ಪ್ರಕರಣಗಳು ಈಗಾಗಲೇ ಸುಪ್ರೀಂ ಕೋರ್ಟ್‌ನಲ್ಲಿ ವಿಚಾರಣೆಗೆ ಬಾಕಿ ಇರುವುದರಿಂದ ಪ್ರತ್ಯೇಕ ಭೇಟಿಗೆ ಅವಕಾಶ ನೀಡಲು ಸಾಧ್ಯವಿಲ್ಲ ಎಂದು ಅವರು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

₹2,000 ಕೋಟಿ ಆಸ್ತಿ, 3 ಕೋಟಿಗೆ ಡೀಲ್: ಸಾಲದಾತರಿಗೆ...

ಮುಂಬೈನ BKCಯಲ್ಲಿ ₹2,000 ಕೋಟಿ ಬೆಲೆಬಾಳುವ ಪ್ರಾಜೆಕ್ಟ್ ಕೇವಲ ₹3 ಕೋಟಿಗೆ ಅದಾನಿ ಪಾಲು! ಆಸ್ತಿಯ ಮೌಲ್ಯವನ್ನು ‘ಶೂನ್ಯ’ ಎಂದು ಬಿಂಬಿಸಿದ್ದು ಹೇಗೆ? ಕೊರ್ಬಾ ವೆಸ್ಟ್‌ನಲ್ಲಿ ತನ್ನದೇ ಕಂಪನಿಗೆ ತಾನೇ ಮತ ಹಾಕಿಕೊಂಡ...

ದೆಹಲಿಯ ಬಂಧನಗಳು ಮತ್ತು ಮಹಾತ್ಮ ಗಾಂಧಿ

ವ್ಯವಸ್ಥೆಗಳು ದುರ್ಬಲವಾಗುತ್ತಿರುವ ಇಂದಿನ ಕಾಲದಲ್ಲಿ, ಕೋಪಗೊಂಡ ಯುವಕರ ಬೀದಿ ಪ್ರತಿಭಟನೆಗಳೇ ಒಂದು ಹೊಸ ನಿಯಂತ್ರಣ ವ್ಯವಸ್ಥೆಯಾಗಿ ನಿಲ್ಲುತ್ತಿವೆ ಎಂದೆನಿಸುತ್ತದೆ. ಜನರಿಗೆ ಮತದಾನದ ಹಕ್ಕನ್ನು ಮತ್ತೆ ದೊರಕಿಸಿಕೊಡುವುದಕ್ಕೂ ಇಂತಹ ಹೋರಾಟಗಳತ್ತ ಮುಖ ಮಾಡಬೇಕಾಗಿದೆ. ಸಾರ್ವಜನಿಕರು...

ಶಿಕ್ಷಣ ಮಾರಾಟ ಮಾಡಿದ ಶಾಲೆಗಳೇ ಈಗ ಮಾರಾಟಕ್ಕೆ!

ಕರ್ನಾಟಕದಲ್ಲಿ ಖಾಸಗಿ ಶಾಲೆಗಳು ಮುಚ್ಚುವ ಹಂತಕ್ಕೆ ತಲುಪಿದ್ದು, ಮಾರಾಟಕ್ಕೆ ಸಜ್ಜಾಗಿವೆ. ಕೋವಿಡ್-19 ಆಕ್ರಮಣದ ನಂತರದಲ್ಲಿ ಖಾಸಗಿ ಶಾಲೆಗಳಲ್ಲಿ ದಾಖಲಾತಿಯಲ್ಲಿ ಭಾರೀ ಕುಸಿತ, ಪ್ರತಿಷ್ಠಿತ ಶಾಲೆಗಳ ಜೊತೆಗೆ ಪೈಪೋಟಿ, ಮೂಲಭೂತ ಸೌಕರ್ಯಕ್ಕೆ ತಕ್ಕಂತೆ ಲಾಭದ...

ಈ ಹಿನ್ನೆಲೆಯಲ್ಲಿ, ಕಾಂಗ್ರೆಸ್ ನಾಯಕರು ನೇರವಾಗಿ ಸಿಜೆಐ ಅವರನ್ನು ಭೇಟಿಯಾಗುವ ಬದಲು ನ್ಯಾಯಾಲಯಕ್ಕೆ ಮನವಿ ಸಲ್ಲಿಸುವ ಮೂಲಕ ತಮ್ಮ ಬೇಡಿಕೆಗಳನ್ನು ಮುಂದಿಡಲು ಮುಂದಾಗಿದ್ದಾರೆ.

ಇನ್ನೊಂದೆಡೆ, CJPಯ ನಾಯಕರು ದೆಹಲಿ ಪೊಲೀಸರನ್ನು ಭೇಟಿಯಾಗಿ ಶಾಂತಿಯುತ ಪ್ರತಿಭಟನೆ ನಡೆಸಲು ದಿನಾಂಕ ನಿಗದಿಪಡಿಸುವಂತೆ ಒತ್ತಾಯಿಸಿದ್ದಾರೆ. ಮುಂದಿನ 24 ಗಂಟೆಗಳೊಳಗೆ ಪ್ರತಿಭಟನೆಗೆ ದಿನಾಂಕ ನೀಡದಿದ್ದರೆ ಹೊಸ ಪ್ರತಿಭಟನಾ ಕರೆಯನ್ನು ಪ್ರಕಟಿಸುವುದಾಗಿ ಸಂಘಟನೆ ಎಚ್ಚರಿಕೆ ನೀಡಿದೆ.

ಇದನ್ನೂ ಓದಿ: ರಾಹುಲ್ ಗಾಂಧಿ-ಖರ್ಗೆ ಭೇಟಿ ಮನವಿ ತಿರಸ್ಕರಿಸಿದ CJI ಸೂರ್ಯಕಾಂತ್!

ಕಳೆದ ವಾರಾಂತ್ಯದಲ್ಲಿ ದೆಹಲಿಯಲ್ಲಿ ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ ಪ್ರತಿಭಟನೆಗಳು ನಡೆದಿದ್ದವು. ಈ ವೇಳೆ ಪೊಲೀಸರು ಕ್ರಮ ಕೈಗೊಂಡು ಸಿಜೆಪಿ ನಾಯಕರು ಹಾಗೂ ಎಡಪಂಥೀಯ ವಿದ್ಯಾರ್ಥಿ ಸಂಘಟನೆಗಳ ಮುಖಂಡರು ಸೇರಿದಂತೆ ಸಾವಿರಾರು ಜನರನ್ನು ವಶಕ್ಕೆ ಪಡೆದಿದ್ದಾರೆ ಎಂದು ವರದಿಯಾಗಿದೆ. ಮತದಾರರ ಪಟ್ಟಿ ಪರಿಷ್ಕರಣೆ, ಚುನಾವಣಾ ಆಯೋಗದ ಕಾರ್ಯವೈಖರಿ ಹಾಗೂ ಪ್ರತಿಭಟನೆ ನಡೆಸುವ ಹಕ್ಕಿನ ವಿಚಾರಗಳು ಇದೀಗ ರಾಷ್ಟ್ರ ರಾಜಧಾನಿಯಲ್ಲಿ ಚರ್ಚೆಯ ಕೇಂದ್ರವಾಗಿವೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

₹2,000 ಕೋಟಿ ಆಸ್ತಿ, 3 ಕೋಟಿಗೆ ಡೀಲ್: ಸಾಲದಾತರಿಗೆ ನಾಮ ಹಾಕಿದ ಅದಾನಿ ವೃತ್ತಾಂತ

ಮುಂಬೈನ BKCಯಲ್ಲಿ ₹2,000 ಕೋಟಿ ಬೆಲೆಬಾಳುವ ಪ್ರಾಜೆಕ್ಟ್ ಕೇವಲ ₹3 ಕೋಟಿಗೆ...

ರಾಹುಲ್ ಗಾಂಧಿ-ಖರ್ಗೆ ಭೇಟಿ ಮನವಿ ತಿರಸ್ಕರಿಸಿದ CJI ಸೂರ್ಯಕಾಂತ್!

ಮತದಾರರ ಪಟ್ಟಿ ಅಕ್ರಮ ಹಾಗೂ ‘ವೋಟ್ ಚೋರಿ’ ಆರೋಪಗಳ ಕುರಿತು ಮಾಹಿತಿ...

ನಿಮ್ಮ ಬ್ಯಾಂಕ್ ಖಾತೆಗೆ ದಿಢೀರ್ ಹಣ ಬಂತೇ? ಎಚ್ಚರ, ಇದು ‘ಹಣ ಜಮೆ ಮಾಡುವ’ ವಂಚಕರ ಹೊಸ ಜಾಲ!

ನಿಮ್ಮ ಬ್ಯಾಂಕ್ ಖಾತೆಗೆ ಅಪರಿಚಿತ ಮೂಲಗಳಿಂದ ಆಕಸ್ಮಿಕ ವಾಗಿ ಹಣ ಜಮೆಯಾಗಿದೆಯೆ?...