ಜೂನ್ 16ರಂದು ಯುಪಿಎಸ್‌ಸಿ ಸಿವಿಲ್ ಸರ್ವಿಸಸ್ ಪರೀಕ್ಷೆ; ಅಭ್ಯರ್ಥಿಗಳಿಗೆ ಮಾರ್ಗಸೂಚಿ ವಿವರ

Date:

ಭಾನುವಾರ (ಜೂನ್‌ 16) ಕೇಂದ್ರ ಲೋಕ ಸೇವಾ ಆಯೋಗದ (ಯುಪಿಎಸ್‌ಸಿ) ಸಿವಿಲ್ ಸರ್ವಿಸಸ್ ಪ್ರಿಲಿಮ್ಸ್ ಪರೀಕ್ಷೆ ನಡೆಯಲಿದೆ. ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳಿಗೆ ಅಗತ್ಯ ಯುಪಿಎಸ್‌ಸಿ ಮಾರ್ಗಸೂಚಿ ಹೊರಡಿಸಿದೆ.

ಪರೀಕ್ಷೆಯ ದಿನ ಅಭ್ಯರ್ಥಿಗಳಿಗೆ ಪ್ರಮುಖ ಮಾರ್ಗಸೂಚಿ ವಿವರ ಈ ಕೆಳಗಿದೆ

1. ಪರೀಕ್ಷಾ ಕೇಂದ್ರವನ್ನು ಪ್ರವೇಶಿಸಬೇಕಾದರೆ ಪ್ರವೇಶ ಪತ್ರ ಕಡ್ಡಾಯವಾಗಿದ್ದು, ಪರೀಕ್ಷಾ ಸ್ಥಳದಲ್ಲಿ ಯಾವುದೇ ನಕಲಿ ಕಾರ್ಡ್‌ಗಳನ್ನು ನೀಡಲಾಗುವುದಿಲ್ಲ. ಆದ್ದರಿಂದ ಅಭ್ಯರ್ಥಿಗಳು ತಮ್ಮ ಇ-ಅಡ್ಮಿಟ್ ಕಾರ್ಡ್‌ಗಳನ್ನು ಅಧಿಕೃತ ಯುಪಿಎಸ್‌ಸಿ ವೆಬ್‌ಸೈಟ್‌ನಿಂದ ಡೌನ್‌ಲೋಡ್ ಮಾಡಿಕೊಳ್ಳಬೇಕು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

2. ಅಭ್ಯರ್ಥಿಗಳು ಮುದ್ರಿತ ಇ-ಅಡ್ಮಿಟ್ ಕಾರ್ಡ್, ಫೋಟೋ ಐಡಿ, ಅಡ್ಮಿಟ್ ಕಾರ್ಡ್‌ನಲ್ಲಿರುವ ಛಾಯಾಚಿತ್ರವು ಅಸ್ಪಷ್ಟವಾಗಿದ್ದರೆ ಎರಡು ಪಾಸ್‌ಪೋರ್ಟ್ ಗಾತ್ರದ ಭಾವಚಿತ್ರಗಳನ್ನು ಹೊಂದಿರಬೇಕು.

ಇದನ್ನು ಓದಿದ್ದೀರಾ?  ಯುಪಿಎಸ್‌ಸಿ ಪರೀಕ್ಷೆ | ಭಾನುವಾರ ಬೆಳಗ್ಗೆ 6ರಿಂದಲೇ ಮೆಟ್ರೋ ಸಂಚಾರ

3. ಪರೀಕ್ಷೆ ಆರಂಭವಾಗುವುದಕ್ಕೂ 30 ನಿಮಿಷಕ್ಕೂ ಮುನ್ನ ಪರೀಕ್ಷಾ ಕೊಠಡಿಗೆ ಪ್ರವೇಶಕ್ಕೆ ಅವಕಾಶ ನೀಡಲಾಗುವುದಿಲ್ಲ. ಬೆಳಿಗ್ಗೆ ಪರೀಕ್ಷೆ ಆರಂಭವಾಗುವುದಕ್ಕೂ ಮುನ್ನ 9 ಗಂಟೆಗೆ ಪರೀಕ್ಷಾ ಕೇಂದ್ರದ ಗೇಟ್‌ಗಳನ್ನು ಮುಚ್ಚಲಾಗುತ್ತದೆ. ಮಧ್ಯಾಹ್ನದ ಪರೀಕ್ಷೆ ವೇಳೆ 2 ಗಂಟೆಗೆ ಗೇಟ್ ಮುಚ್ಚಲಾಗುತ್ತದೆ. ಗೇಟ್ ಮುಚ್ಚಿದ ಬಳಿಕ ಬಂದರೆ ಪ್ರವೇಶಕ್ಕೆ ಅವಕಾಶವಿರುವುದಿಲ್ಲ.

4. ಇ-ಅಡ್ಮಿಟ್ ಕಾರ್ಡ್‌ನಲ್ಲಿ ಹೆಸರು, ಛಾಯಾಚಿತ್ರ ಮತ್ತು ಕ್ಯೂಆರ್ ಕೋಡ್ ಸೇರಿದಂತೆ ಇತರೆ ಎಲ್ಲಾ ವಿವರಗಳು ಸರಿಯಾಗಿದೆಯೆ ಎಂದು ಪರಿಶೀಲಿಸಿ. ಯಾವುದೇ ವ್ಯತ್ಯಾಸವಿದ್ದರೆ ಕೂಡಲೇ ಯುಪಿಎಸ್‌ಸಿ ವೆಬ್‌ಸೈಟ್ ಮೂಲಕ ರಿಪೋರ್ಟ್ ಮಾಡಿ.

5. ಅಭ್ಯರ್ಥಿಗಳು ಮೊಬೈಲ್ ಫೋನ್‌ಗಳು, ಸ್ಮಾರ್ಟ್/ಡಿಜಿಟಲ್ ವಾಚ್‌ಗಳು ಅಥವಾ ಯಾವುದೇ ಗ್ಯಾಜೆಟ್‌ಗಳಂತಹ ಬೆಲೆಬಾಳುವ ವಸ್ತುಗಳನ್ನು ಪರೀಕ್ಷಾ ಕೇಂದ್ರಕ್ಕೆ ತರದಂತೆ ತಿಳಿಸಲಾಗಿದೆ. ಪರೀಕ್ಷಾ ಸ್ಥಳದಲ್ಲಿ ಈ ವಸ್ತುಗಳನ್ನು ಸುರಕ್ಷಿತವಾಗಿರಿಸುವ ಶೇಖರಣಾ ಸೌಲಭ್ಯಗಳು ಇರುವುದಿಲ್ಲ ಎಂದು ತಿಳಿಸಲಾಗಿದೆ.

6. ಪರೀಕ್ಷಾ ಕೊಠಡಿಯೊಳಗೆ ಇ-ಅಡ್ಮಿಟ್ ಕಾರ್ಡ್, ಪೆನ್, ಪೆನ್ಸಿಲ್, ಗುರುತಿನ ಪುರಾವೆ, ಎರಡು ಪಾಸ್‌ಪೋರ್ಟ್ ಅಳತೆಯ ಭಾವಚಿತ್ರಗಳನ್ನು ಮಾತ್ರ ಕೊಂಡೊಯ್ಯಲು ಅನುಮತಿಸಲಾಗುತ್ತದೆ.

ಇದನ್ನು ಓದಿದ್ದೀರಾ? ದಾವಣಗೆರೆ | ಯುಪಿಎಸ್‌ಸಿ ಪರೀಕ್ಷೆಯಲ್ಲಿ ಸೌಭಾಗ್ಯ ಬೀಳಗಿಮಠ 101ನೇ ರ್‍ಯಾಂಕ್‌; ಜಿಲ್ಲಾಧಿಕಾರಿಯಿಂದ ಸನ್ಮಾನ

7. ಒಎಂಆರ್ ಉತ್ತರ ಪತ್ರಿಕೆಗಳು ಮತ್ತು ಹಾಜರಾತಿ ಪಟ್ಟಿಯನ್ನು ಭರ್ತಿ ಮಾಡಲು ಅಭ್ಯರ್ಥಿಗಳು ಕಪ್ಪು ಬಾಲ್ ಪಾಯಿಂಟ್ ಪೆನ್ನನ್ನು ಬಳಸಬೇಕು. ಇತರ ಪೆನ್ನುಗಳಲ್ಲಿ ಭರ್ತಿ ಮಾಡಿದರೆ ಉತ್ತರಗಳನ್ನು ಮೌಲ್ಯಮಾಪನ ಮಾಡಲಾಗುವುದಿಲ್ಲ.

8. ಯುಪಿಎಸ್‌ಸಿ ನಾಗರಿಕ ಸೇವೆಗಳ ಪೂರ್ವಭಾವಿ ಪರೀಕ್ಷೆ 2024 ಎರಡು ಅವಧಿಗಳಲ್ಲಿ ನಡೆಸುವ ವಸ್ತುನಿಷ್ಠ ಮಾದರಿಯ ಪರೀಕ್ಷೆಯಾಗಿದೆ:

ಬೆಳಗಿನ ಪಾಳಿ: ಸಾಮಾನ್ಯ ಅಧ್ಯಯನ ಪತ್ರಿಕೆ 1; 9:30ರಿಂದ 11:30ರವರೆಗೆ
ಮಧ್ಯಾಹ್ನ ಶಿಫ್ಟ್: ಸಾಮಾನ್ಯ ಅಧ್ಯಯನ ಪತ್ರಿಕೆ 2 (ಸಿಎಸ್‌ಎಟಿ) ಮಧ್ಯಾಹ್ನ 2:30ರಿಂದ 4:30ರವರೆಗೆ

ಪ್ರಿಲಿಮ್ಸ್‌ ಪರೀಕ್ಷೆಯಲ್ಲಿ ಉತ್ತೀರ್ಣರಾದ ಅಭ್ಯರ್ಥಿಗಳು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮುಂದಿನ ಹಂತದ ಯುಪಿಎಸ್‌ಸಿ ಸಿಎಸ್‌ಇ ಮೇನ್ಸ್‌ಗೆ ಆಯ್ಕೆಯಾಗಲಿದ್ದಾರೆ.

ಇನ್ನು ಮಾರ್ಗಸೂಚಿಯನ್ನು ಅನುಸರಿಸದಿದ್ದರೆ ಪರೀಕ್ಷೆ ಬರೆಯಲು ಅವಕಾಶ ಸಿಗದು. ಹಾಗೆಯೇ ಒಎಂಆರ್ ಶೀಟ್‌ನಲ್ಲಿ ರೋಲ್‌ ಸಂಖ್ಯೆ, ಪರೀಕ್ಷಾ ಬುಕ್‌ಲೆಟ್ ಸರಣಿ ಕೋಡ್‌ ತಪ್ಪಾಗಿದ್ದರೆ ಉತ್ತರ ಪತ್ರಿಕೆ ನಿರಾಕರಿಸಲಾಗುತ್ತದೆ.

ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳು ಇನ್ನೂ ಹೆಚ್ಚಿನ ಮಾಹಿತಿಗಾಗಿ ಅಧಿಕೃತ ಯುಪಿಎಸ್‌ಸಿ ವೆಬ್‌ಸೈಟ್, upsc.gov.in ಮತ್ತು upsconline.nic.in ನಲ್ಲಿ ಮಾರ್ಗಸೂಚಿಗಳನ್ನು ಪರಿಶೀಲಿಸಬಹುದು.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ನಮ್ಮನ್ನು ಬೆಂಬಲಿಸಿ

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರಕ್ಕೆ ವಿಶೇಷ ಸ್ಥಾನಮಾನದ ಬೇಡಿಕೆ; ‘ಚಾನ್ಸೇ ಇಲ್ಲ’ ಎಂದ ಕೇಂದ್ರ ಸಚಿವ ಮಾಂಝಿ

ಬಿಹಾರಕ್ಕೆ ವಿಶೇಷ ಸ್ಥಾನಮಾನ ನೀಡಬೇಕೆಂದು ಎನ್‌ಡಿಎ ಸರ್ಕಾರದ ಪಾಲುದಾರ ಜೆಡಿಯು ಕೇಂದ್ರ...

ಅಕ್ರಮವಾಗಿ ‘ಕೆಂಪು ಬೀಕನ್’ ಅಳವಡಿಸಿದ್ದ ಐಎಎಸ್ ಅಧಿಕಾರಿಯ ಆಡಿ ಕಾರು ವಶ

ತಮ್ಮ ಐಷಾರಾಮಿ ಕಾರಿಗೆ ಅಕ್ರಮವಾಗಿ 'ಕೆಂಪು ಬೀಕನ್' ದೀಪವನ್ನು ಅಳವಡಿಸಿದ ಆರೋಪದ...

ತಮಿಳುನಾಡು ಬಿಎಸ್‌ಪಿ ಮುಖ್ಯಸ್ಥ ಆರ್ಮ್‌ಸ್ಟ್ರಾಂಗ್ ಹತ್ಯೆ ಆರೋಪಿ ಎನ್‌ಕೌಂಟರ್‌ಗೆ ಬಲಿ

ತಮಿಳುನಾಡಿನ ಬಹುಜನ ಸಮಾಜ ಪಕ್ಷದ (ಬಿಎಸ್‌ಪಿ) ಮುಖ್ಯಸ್ಥ ಕೆ ಆರ್ಮ್‌ಸ್ಟ್ರಾಂಗ್ ಹತ್ಯೆಯ...

ಟ್ರಂಪ್ ಮೇಲೆ ಗುಂಡಿನ ದಾಳಿ: ಸ್ನೇಹಿತನ ಬಗ್ಗೆ ಕಳವಳಗೊಂಡಿದ್ದೇನೆ ಎಂದ ಮೋದಿಗೆ ನೆಟ್ಟಿಗರ ಪಾಠ

ಅಮೆರಿಕ ಅಧ್ಯಕ್ಷೀಯ ಚುನಾವಣಾ ಪ್ರಚಾರದ ವೇಳೆ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್...