ನೇಪಾಳ ಗಡಿಯಲ್ಲಿ ಪಾಸ್‌ಪೋರ್ಟ್‌ ಇಲ್ಲದೆ ಸಿಕ್ಕಿಬಿದ್ದ ಅಮೆರಿಕ ಪ್ರಜೆ

Date:

ಸೂಕ್ತ ಪ್ರಯಾಣ ದಾಖಲೆಗಳಿಲ್ಲದೆ ಭಾರತದಿಂದ ನೇಪಾಳಕ್ಕೆ ನುಸುಳಲು ಯತ್ನಿಸುತ್ತಿದ್ದ 36 ವರ್ಷದ ಅಮೆರಿಕ ಪ್ರಜೆಯೊಬ್ಬನನ್ನು ಉತ್ತರ ಪ್ರದೇಶದ ಮಹಾರಾಜ್‌ಗಂಜ್‌ ಜಿಲ್ಲೆಯಲ್ಲಿ ಸಶಸ್ತ್ರ ಸೀಮಾ ಬಲದ (ಎಸ್‌ಎಸ್‌ಬಿ) ಯೋಧರು ಬಂಧಿಸಿದ್ದಾರೆ. ಬಂಧಿತನನ್ನು ಕ್ಯಾಲಿಫೋರ್ನಿಯಾ ನಿವಾಸಿ ಜೋರ್ಡನ್ ಬ್ರೌನ್ ಎಂದು ಗುರುತಿಸಲಾಗಿದ್ದು, ವಿಚಾರಣೆ ವೇಳೆ ಆತ ತಾನು ಅಮೆರಿಕ ನೌಕಾಪಡೆಯ (ಯುಎಸ್ ನೇವಿ) ಮಾಜಿ ಅಧಿಕಾರಿ ಎಂದು ಹೇಳಿಕೊಂಡಿದ್ದಾನೆ.

- Advertisement -

ಭಾನುವಾರ ಸೋನೌಲಿ ಪೊಲೀಸ್ ಠಾಣಾ ವ್ಯಾಪ್ತಿಯ ಮೈನಿಹ್ವಾ ಪ್ರದೇಶದ ಗಡಿ ಪಿಲ್ಲರ್ ಸಂಖ್ಯೆ 516ರ ಬಳಿ ಎಸ್‌ಎಸ್‌ಬಿಯ 22ನೇ ಬೆಟಾಲಿಯನ್ ಯೋಧರು ಗಸ್ತು ತಿರುಗುತ್ತಿದ್ದಾಗ ಈತ ಸಿಕ್ಕಿಬಿದ್ದಿದ್ದಾನೆ. ಗಡಿಯಲ್ಲಿ ನಿಲ್ಲುವಂತೆ ಸೂಚಿಸಿದಾಗ ಆರೋಪಿ ಪರಾರಿಯಾಗಲು ಯತ್ನಿಸಿದ್ದಾನೆ. ಆದರೆ, ಭದ್ರತಾ ಪಡೆಗಳು ಆತನನ್ನು ಬೆನ್ನಟ್ಟಿ ಹಿಡಿಯುವಲ್ಲಿ ಯಶಸ್ವಿಯಾದವು. ಈ ವೇಳೆ ಆತನ ಬಳಿ ಯಾವುದೇ ಪಾಸ್‌ಪೋರ್ಟ್ ಅಥವಾ ವೀಸಾ ಇರಲಿಲ್ಲ ಎಂದು ಮಹಾರಾಜ್‌ಗಂಜ್‌ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಿದ್ಧಾರ್ಥ್ ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಲೈಂಗಿಕ ಕಿರುಕುಳ ಆರೋಪಕ್ಕೆ ಜಾತಿದೌರ್ಜನ್ಯ ಗುರಾಣಿಯೇ? ಸಂತ್ರಸ್ತೆಯ ವಿರುದ್ಧ...

ಸಿಇಸಿ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್ ಸಮೀಪ ನಡೆದ ಪ್ರತಿಭಟನೆಯಲ್ಲಿ ಮೂವರು ಮಹಿಳಾ ಪತ್ರಕರ್ತೆಯರಿಗೆ ಲೈಂಗಿಕ ಕಿರುಕುಳ ನೀಡಿದ ಗಂಭೀರ ಆರೋಪ ಎದುರಿಸುತ್ತಿರುವ ದೆಹಲಿ ಪೊಲೀಸ್ ಸಹಾಯಕ ಆಯುಕ್ತ (ಎಸಿಪಿ)...

ಚಿಕ್ಕಬಳ್ಳಾಪುರ ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಫೋಟ: ಶಾಸಕ ಪ್ರದೀಪ್ ಈಶ್ವರ್...

ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರು ತಾವು ರಾಜಕೀಯಕ್ಕೆ ಬರಲು ಮತ್ತು ಟಿಕೆಟ್ ಪಡೆಯಲು ಚಿಂತಾಮಣಿ ಶಾಸಕ ಹಾಗೂ ಮಾಜಿ ಸಚಿವ ಡಾ. ಎಂ.ಸಿ. ಸುಧಾಕರ್ ಅವರೇ ಕಾರಣ ಎಂದು ಬಹಿರಂಗವಾಗಿ ಹಲವಾರು...

ಬೆವರಿನ ಹಣಕ್ಕೆ ಮೋದಿ ಸರ್ಕಾರದ ಕಂಟಕ: ಹೊಸ ಪಿಎಫ್...

ತಮ್ಮದೇ ಬೆವರಿನ ಗಳಿಕೆ, ತುರ್ತು ಬದುಕಿನ ಆಸರೆ ಪಿಎಫ್. ಆದರೆ ಇಂದು ಆ ಹಣವನ್ನು ಪಡೆಯಲಾಗದೆ ಗಾರ್ಮೆಂಟ್ಸ್ ಕಾರ್ಮಿಕರು ಕಣ್ಣೀರು ಹಾಕುವಂತಾಗಿದೆ. ಬಟ್ಟೆ ಕಾರ್ಖಾನೆಗಳ ಶ್ರಮಿಕರ ಬದುಕಿಗೆ ಕೇಂದ್ರದ ಮೋದಿ ಸರ್ಕಾರದ ಹೊಸ...

7 ತಿಂಗಳಿಂದ ಭಾರತದಲ್ಲಿ ಅಕ್ರಮ ವಾಸ್ತವ್ಯ:ವಿಚಾರಣೆ ವೇಳೆ ಆರೋಪಿಯು ತನ್ನ ಪ್ರಯಾಣದ ಬಗ್ಗೆ ಅಚ್ಚರಿಯ ಮಾಹಿತಿ ನೀಡಿದ್ದಾನೆ. ಪ್ರವಾಸಿ ವೀಸಾದ ಮೇಲೆ ಥೈಲ್ಯಾಂಡ್‌ಗೆ ತೆರಳಿದ್ದಾಗ ಅಲ್ಲಿ ತನ್ನ ಪಾಸ್‌ಪೋರ್ಟ್ ಕಳೆದುಹೋಗಿತ್ತು. ಬಳಿಕ ಸಮುದ್ರ ಮಾರ್ಗದ ಮೂಲಕ ಶ್ರೀಲಂಕಾಗೆ ತಲುಪಿ, ಅಲ್ಲಿಂದ 2025ರ ನವೆಂಬರ್ 2ರಂದು ಸಮುದ್ರ ಮಾರ್ಗವಾಗಿಯೇ ಭಾರತದ ಗೋವಾಕ್ಕೆ ಬಂದಿದ್ದಾಗಿ ಆತ ತಿಳಿಸಿದ್ದಾನೆ. ಅಂದಿನಿಂದ ಆತ ಗೋವಾದಲ್ಲೇ ನೆಲೆಸಿದ್ದ. ಪಾಸ್‌ಪೋರ್ಟ್ ಇಲ್ಲದೆ ಆತ ಸುಮಾರು ಏಳು ತಿಂಗಳ ಕಾಲ ಭಾರತದಲ್ಲಿ ಅಕ್ರಮವಾಗಿ ವಾಸ್ತವ್ಯ ಹೂಡಿದ್ದ ಎಂಬುದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ.

ಗೋವಾದಿಂದ ಬೆಂಗಳೂರಿಗೆ ಬಂದಿದ್ದ ಬ್ರೌನ್, ಅಲ್ಲಿಂದ ನೇಪಾಳ ಪ್ರವೇಶಿಸುವ ಉದ್ದೇಶದಿಂದ ಸೋನೌಲಿ ಗಡಿಗೆ ಬಂದಿದ್ದ ಎಂದು ಅಧಿಕಾರಿಗಳು ವಿವರಿಸಿದ್ದಾರೆ. ತಪಾಸಣೆ ವೇಳೆ ಆತನ ಬಳಿ ₹31,460 ನಗದು ಹಾಗೂ ಎರಡು ಮೊಬೈಲ್ ಫೋನ್‌ಗಳು ಪತ್ತೆಯಾಗಿವೆ. ಆದರೆ, ಆತ ಯಾವುದೇ ಅಧಿಕೃತ ಪ್ರಯಾಣ ದಾಖಲೆಗಳನ್ನು ಒದಗಿಸುವಲ್ಲಿ ವಿಫಲನಾಗಿದ್ದಾನೆ.

ಎಸ್‌ಎಸ್‌ಬಿ ಮತ್ತು ಇತರ ಭದ್ರತಾ ಸಂಸ್ಥೆಗಳು ಆರೋಪಿಯನ್ನು ವಿಚಾರಣೆ ನಡೆಸಿದ ಬಳಿಕ, ಮುಂದಿನ ಕಾನೂನು ಕ್ರಮಕ್ಕಾಗಿ ಸೋನೌಲಿಯ ಸ್ಥಳೀಯ ಪೊಲೀಸರಿಗೆ ಹಸ್ತಾಂತರಿಸಿವೆ ಎಂದು ಎಸ್‌ಎಸ್‌ಬಿ ಸಹಾಯಕ ಕಮಾಂಡೆಂಟ್ ಪ್ರಿಯಾ ಯಾದವ್ ತಿಳಿಸಿದ್ದಾರೆ. ಆರೋಪಿಯ ಹೇಳಿಕೆಗಳ ಸತ್ಯಾಸತ್ಯತೆಯನ್ನು ಪೊಲೀಸರು ಪರಿಶೀಲಿಸುತ್ತಿದ್ದಾರೆ. ಸೂಕ್ತ ದಾಖಲೆಗಳಿಲ್ಲದೆ ಭಾರತದ ಗಡಿ ಪ್ರವೇಶಿಸಿದ ಆರೋಪದ ಮೇಲೆ ವಲಸೆ ಮತ್ತು ವಿದೇಶಿಯರ ಕಾಯ್ದೆಯ ಸೆಕ್ಷನ್ 21 ಮತ್ತು 23 ರ ಅಡಿಯಲ್ಲಿ ಸೋನೌಲಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.

ಇದೇ ವೇಳೆ ವರದಿಯಾಗಿರುವ ಮತ್ತೊಂದು ಪ್ರತ್ಯೇಕ ಪ್ರಕರಣದಲ್ಲಿ, ಮ್ಯಾನ್ಮಾರ್‌ನಲ್ಲಿ ಜನಾಂಗೀಯ ಸಶಸ್ತ್ರ ಗುಂಪುಗಳಿಗೆ ಡ್ರೋನ್ ಯುದ್ಧ ಹಾಗೂ ಸೇನಾ ತರಬೇತಿ ನೀಡಿದ ಆರೋಪದ ಮೇಲೆ ಐವರು ಉಕ್ರೇನ್ ಪ್ರಜೆಗಳು ಮತ್ತು ಓರ್ವ ಅಮೆರಿಕನ್ ಪ್ರಜೆಯನ್ನು ರಾಷ್ಟ್ರೀಯ ತನಿಖಾ ದಳ (ಎನ್‌ಐಎ) ಬಂಧಿಸಿದೆ.

ಪ್ರವಾಸಿ ವೀಸಾದಡಿ ಭಾರತಕ್ಕೆ ಬಂದಿದ್ದ ಇವರು, ಮಿಜೋರಾಂ ಮೂಲಕ ಮ್ಯಾನ್ಮಾರ್‌ಗೆ ನುಸುಳಿದ್ದರು. ಭಾರತದ ರಾಷ್ಟ್ರೀಯ ಭದ್ರತೆಗೆ ಆತಂಕ ಒಡ್ಡುವಂತಹ ಈ ಕೃತ್ಯದ ಹಿನ್ನೆಲೆಯಲ್ಲಿ ಬಂಧಿತರಾಗಿರುವ ಆರೋಪಿಗಳನ್ನು ಜುಲೈ 3ರಂದು ಪಟಿಯಾಲ ಹೌಸ್ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಸದ್ಯ ಅವರು ನ್ಯಾಯಾಂಗ ಬಂಧನದಲ್ಲಿದ್ದಾರೆ ಹಾಗೂ ತನಿಖೆ ಮುಂದುವರಿದಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿದ್ದರಾಮಯ್ಯ ‘ಸ್ಟಿಂಗ್’ ವಿವಾದದ ಅಸಲಿ ವೃತ್ತಾಂತವೇನು? ‘ಸತ್ಯಕ್ಕೇ ಜಯ’ ಎಂದು ಮಾಜಿ ಸಿಎಂ ಹೇಳಿದ್ದೇಕೆ?

ಕರ್ನಾಟಕ ರಾಜಕಾರಣದಲ್ಲಿ ಇದೀಗ ‘ಸ್ಟಿಂಗ್ ಆಪರೇಷನ್’ ಹೆಸರಿನಲ್ಲಿ ಹೊಸ ವಿವಾದ ಭುಗಿಲೆದ್ದಿದೆ....

ಐಡಿಬಿಐ ಬ್ಯಾಂಕ್ ಮಾರಾಟಕ್ಕೆ ಕೇಂದ್ರ ಸಂಪುಟ ಅಸ್ತು: ₹52,878 ಕೋಟಿಗೆ ಫೇರ್‌ಫ್ಯಾಕ್ಸ್ ತೆಕ್ಕೆಗೆ

ಐಡಿಬಿಐ (IDBI) ಬ್ಯಾಂಕ್‌ನ ‘ಕಾರ್ಯತಂತ್ರದ ಪುನರ್‌ರಚನೆ’ಗೆ (Strategic Restructuring) ಕೇಂದ್ರ ಸಚಿವ...

ಬೀದರ್‌ | ಜಿಪಂ, ತಾಪಂ ಚುನಾವಣೆ: ಸಾಮಾಜಿಕ ಜಾಲತಾಣದಲ್ಲಿ ಆಕಾಂಕ್ಷಿಗಳ ಪ್ರಚಾರ ಜೋರು!

ರಾಜ್ಯದಲ್ಲಿ ಜಿಲ್ಲಾ ಹಾಗೂ ತಾಲ್ಲೂಕು ಪಂಚಾಯಿತಿ ಕ್ಷೇತ್ರವಾರು ಮೀಸಲಾತಿ ಪ್ರಕಟವಾಗುತ್ತಿದ್ದಂತೆ, ಬೀದರ್‌...