ಅಮೆರಿಕ-ಭಾರತ ವ್ಯಾಪಾರ ಒಪ್ಪಂದ: ಸುಂಕದಲ್ಲಿ ಭಾರತಕ್ಕೆ ವಿಶೇಷ ರಿಯಾಯಿತಿ ನೀಡಲಿದೆ ಅಮೆರಿಕ; ಕೇಂದ್ರ ಸರ್ಕಾರ ಹೇಳಿಕೆ

Date:

ಭಾರತ ಮತ್ತು ಅಮೆರಿಕ ನಡುವಿನ ಮಧ್ಯಂತರ ವ್ಯಾಪಾರ ಒಪ್ಪಂದವನ್ನು ಅಂತಿಮಗೊಳಿಸುವ ನಿಟ್ಟಿನಲ್ಲಿ ಮಹತ್ವದ ಬೆಳವಣಿಗೆಯೊಂದು ನಡೆದಿದೆ. ತನ್ನ ಸುಂಕದ ರಚನೆಯನ್ನು ಅಂತಿಮಗೊಳಿಸಿದ ಬಳಿಕ, ಪ್ರತಿಸ್ಪರ್ಧಿ ರಾಷ್ಟ್ರಗಳಿಗಿಂತ ಭಾರತಕ್ಕೆ ವಿಶೇಷ ರಿಯಾಯಿತಿ ಕಲ್ಪಿಸುವುದಾಗಿ ಅಮೆರಿಕ ಭರವಸೆ ನೀಡಿದೆ ಎಂದು ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕಾ ಸಚಿವಾಲಯದ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಪ್ರಸಕ್ತ ಹಣಕಾಸು ವರ್ಷದ ಅಂತ್ಯದೊಳಗೆ ಈ ಒಪ್ಪಂದವನ್ನು ಪೂರ್ಣಗೊಳಿಸಲು ಉಭಯ ದೇಶಗಳು ಶ್ರಮಿಸುತ್ತಿವೆ ಎಂದು ಅವರು ಹೇಳಿದ್ದಾರೆ.

- Advertisement -

2026ರ ಫೆಬ್ರವರಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ನಡುವಿನ ಜಂಟಿ ಹೇಳಿಕೆಯಲ್ಲಿ ಒಪ್ಪಿಕೊಂಡಂತೆ, ಅಮೆರಿಕವು ಭಾರತಕ್ಕೆ ವಿಶೇಷ ರಿಯಾಯಿತಿ  ಭರವಸೆ ನೀಡಿದರೆ ಮಾತ್ರ ಒಪ್ಪಂದದೊಂದಿಗೆ ಮುಂದುವರಿಯುವುದಾಗಿ ಭಾರತೀಯ ಅಧಿಕಾರಿಗಳು ನಿರಂತರವಾಗಿ ಪ್ರತಿಪಾದಿಸುತ್ತಿದ್ದರು. ಇದಕ್ಕೆ ಪೂರಕವಾಗಿ, ಈ ತಿಂಗಳ ಆರಂಭದಲ್ಲಿ ಅಮೆರಿಕದ ಇಬ್ಬರು ಸದಸ್ಯರ ನಿಯೋಗವೊಂದು ಭಾರತಕ್ಕೆ ಭೇಟಿ ನೀಡಿತ್ತು. ಈ ವೇಳೆ ಒಪ್ಪಂದದ ಕರಡು ಪ್ರತಿಯನ್ನು ಅಂತಿಮಗೊಳಿಸುವ ನಿಟ್ಟಿನಲ್ಲಿ ಗಮನಾರ್ಹ ಪ್ರಗತಿ ಸಾಧಿಸಲಾಗಿದೆ ಎಂದು ವಾಣಿಜ್ಯ ಕಾರ್ಯದರ್ಶಿ ರಾಜೇಶ್ ಅಗರ್ವಾಲ್ ದೃಢಪಡಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬಿತ್ತನೆ ಗುರಿ ಅರ್ಧದಷ್ಟೂ ಮುಟ್ಟದ ಕೃಷಿ ಚಟುವಟಿಕೆ; ಜೋಳದ...

ಮುಂಗಾರು ಮಳೆ ಕೈಕೊಟ್ಟು ಬೆಳೆ ನಷ್ಟದಿಂದ ಕಂಗೆಟ್ಟ ಅನ್ನದಾತರಿಗೆ ಹಿಂಗಾರು ಹಂಗಾಮಿನಲ್ಲಾದರೂ ಮಳೆ ಆಸರೆಯಾಗಬಹುದು ಎಂಬ ನಿರೀಕ್ಷೆಯಿತ್ತು. ಆದರೆ ರೈತರ ಆ ನಿರೀಕ್ಷೆಯೂ ಹುಸಿಯಾಗಿದೆ. ಮುಂಗಾರಿನ ಬೆನ್ನಲ್ಲೇ ಹಿಂಗಾರು ಹಂಗಾಮಿನಲ್ಲೂ ಮಳೆ ಕೈಕೊಟ್ಟಿರುವುದರಿಂದ...

ಧಾರವಾಡದ ‘ಲಲಿತಕಲಾ ಅಕಾಡೆಮಿ’ಗೆ ದುಸ್ಥಿತಿ: ಕಲಾವಿದರಿಂದಲೇ ದೂರವಾದ ಪ್ರಾದೇಶಿಕ...

ಕಲಾವಿದರ ಬಹುದಿನಗಳ ಬೇಡಿಕೆಯಂತೆ ಸ್ಥಾಪನೆಯಾದ ಕೇಂದ್ರಕ್ಕೆ ಮೂರೇ ವರ್ಷಗಳಲ್ಲಿ ದುಸ್ಥಿತಿ; ಸಂಚಾಲಕರ ಏಕಪಕ್ಷೀಯ ಧೋರಣೆ, ಕಲಾವಿದರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದಿರುವುದು ಹಾಗೂ ಕಲಾ ಚಟುವಟಿಕೆಗಳ ಕೊರತೆಯ ವಿರುದ್ಧ ಹಿರಿಯ ಕಲಾವಿದರ ಆಕ್ರೋಶ. ಸಲಹಾ ಸಮಿತಿ...

ಗದಗ | ವರದಕ್ಷಿಣೆ ಮುಟ್ಟದ, ಒಗ್ಗಟ್ಟು ಬಿಡದ ತುಂಬು...

ಆಧುನಿಕತೆ ಬೆಳೆದಂತೆಲ್ಲ ಸಮಾಜದಲ್ಲಿ ಅವಿಭಕ್ತ ಕುಟುಂಬಗಳು ಕಣ್ಮರೆಯಾಗಿ ವಿಭಕ್ತ ಕುಟುಂಬಗಳ ಸಂಖ್ಯೆಗಳು ಹೆಚ್ಚಾಗುತ್ತಿವೆ. ನಾವು ನಮ್ಮವರು ಎನ್ನುವ ಭಾವನೆಗಳು ಮರೆಯಾಗುತ್ತಿರುವ ಹೊತ್ತಿನಲ್ಲಿ ನಂಬಿಕೆ, ವಿಶ್ವಾಸ, ಪ್ರೀತಿಯ ತಳಗಹದಿಯ ಮೇಲೆ ಇಂದಿಗೂ ಜಾಲವಾಡಗಿ ಅವಿಭಕ್ತ...

“ಭಾರತ ಮತ್ತು ಅಮೆರಿಕ ನಡುವೆ ಮಾತುಕತೆಗಳು ನಡೆಯುತ್ತಿವೆ. ನಮ್ಮ ಪ್ರತಿಸ್ಪರ್ಧಿ ದೇಶಗಳಿಗಿಂತ ನಮಗೆ ವಿಶೇಷ ರಿಯಾಯಿತಿ ನೀಡುವುದಾಗಿ ಅಮೆರಿಕ ಭರವಸೆ ನೀಡಿದೆ,” ಎಂದು ಮತ್ತೋರ್ವ ಅಧಿಕಾರಿ ಹೇಳಿರುವುದಾಗಿ ವರದಿಯಾಗಿದೆ.

ವಾಣಿಜ್ಯ ಸಚಿವ ಪಿಯೂಷ್ ಗೋಯಲ್ ಸೇರಿದಂತೆ ಭಾರತೀಯ ಅಧಿಕಾರಿಗಳು, ಪ್ರತಿಸ್ಪರ್ಧಿಗಳಿಗಿಂತ ಹೆಚ್ಚಿನ ಆದ್ಯತೆ ದೊರೆತರೆ ಮಾತ್ರ ಅಮೆರಿಕದೊಂದಿಗೆ ವ್ಯಾಪಾರ ಒಪ್ಪಂದ ಮಾಡಿಕೊಳ್ಳುವುದಾಗಿ ಸ್ಪಷ್ಟಪಡಿಸಿದ್ದರು. ಈ ಹಿನ್ನೆಲೆಯಲ್ಲಿ ಅಮೆರಿಕದ ಈ ಭರವಸೆ ಅತ್ಯಂತ ಮಹತ್ವ ಪಡೆದುಕೊಂಡಿದೆ. ಪರಸ್ಪರ ಹಿತಾಸಕ್ತಿಯ ಕ್ಷೇತ್ರಗಳಲ್ಲಿ ನಿರಂತರವಾಗಿ ಆದ್ಯತೆಯ ಮಾರುಕಟ್ಟೆ ಪ್ರವೇಶವನ್ನು ಒದಗಿಸಲು ಉಭಯ ದೇಶಗಳು ಬದ್ಧವಾಗಿವೆ ಎಂದು ಫೆಬ್ರವರಿಯ ಜಂಟಿ ಹೇಳಿಕೆಯಲ್ಲಿ ತಿಳಿಸಲಾಗಿತ್ತು.

ಫೆಬ್ರವರಿ ಹೇಳಿಕೆಯ ನಂತರ, ಇಂಡೋನೇಷ್ಯಾ, ಮಲೇಷ್ಯಾ, ಪಾಕಿಸ್ತಾನ ಮತ್ತು ಶ್ರೀಲಂಕಾದಂತಹ ಪ್ರತಿಸ್ಪರ್ಧಿ ರಾಷ್ಟ್ರಗಳ ಮೇಲೆ ವಿಧಿಸಿದಂತೆಯೇ ಭಾರತದ ಮೇಲೂ ಅಮೆರಿಕ ಹೆಚ್ಚುವರಿಯಾಗಿ ಶೇ. 10ರಷ್ಟು ‘ಬಲವಂತದ ಕಾರ್ಮಿಕ’ ಸುಂಕವನ್ನು ವಿಧಿಸಿತ್ತು. ಅಲ್ಲದೆ, ಹೆಚ್ಚುವರಿ ಸಾಮರ್ಥ್ಯಕ್ಕೆ ಸಂಬಂಧಿಸಿದಂತೆ ಭಾರತ ಮತ್ತು ಇತರ ಹಲವು ದೇಶಗಳ ವಿರುದ್ಧ ಅಮೆರಿಕ ಪ್ರಸ್ತುತ ತನಿಖೆ ನಡೆಸುತ್ತಿದ್ದು, ಇದರಿಂದ ಮತ್ತಷ್ಟು ಸುಂಕ ವಿಧಿಸುವ ಸಾಧ್ಯತೆಯೂ ಇದೆ.

ಆದಾಗ್ಯೂ, ಮುಂದೆ ವಿಧಿಸಬಹುದಾದ ಈ ಸುಂಕಗಳನ್ನೂ ಗಮನದಲ್ಲಿಟ್ಟುಕೊಂಡೇ ಭಾರತಕ್ಕೆ ವಿಶೇಷ ರಿಯಾಯಿತಿ ನೀಡುವ ಭರವಸೆಯನ್ನು ಅಮೆರಿಕ ನೀಡಿದೆ ಎಂದು ಅಧಿಕಾರಿ ಸ್ಪಷ್ಟಪಡಿಸಿರೋದಾಗಿ ದಿ ಹಿಂದೂ ಪತ್ರಿಕೆ ವರದಿ ಮಾಡಿದೆ. 

“ಈ ಹಣಕಾಸು ವರ್ಷದ ಅಂತ್ಯದೊಳಗೆ ಒಪ್ಪಂದವನ್ನು ಪೂರ್ಣಗೊಳಿಸಲು ಎರಡೂ ಕಡೆಯಿಂದ ಪ್ರಯತ್ನಗಳು ನಡೆಯುತ್ತಿವೆ. ಒಂದು ವೇಳೆ ಯಾವುದೇ ಒಂದು ದೇಶವು ಇನ್ನೊಂದು ದೇಶದ ಮೇಲಿನ ಸುಂಕವನ್ನು ಬದಲಾಯಿಸಿದರೆ, ಎರಡನೇ ದೇಶವೂ ಒಪ್ಪಂದದ ಅಡಿಯಲ್ಲಿ ತನ್ನ ಬದ್ಧತೆಗಳನ್ನು ಮಾರ್ಪಡಿಸಿಕೊಳ್ಳಬಹುದು ಎಂಬ ವಿಶೇಷ ನಿಯಮಕ್ಕೆ ನಾವು ಒಪ್ಪಿಕೊಂಡಿದ್ದೇವೆ. ಇದು ಫೆಬ್ರವರಿ ಜಂಟಿ ಹೇಳಿಕೆಯ ಭಾಗವೂ ಆಗಿತ್ತು,” ಎಂದು ಅಧಿಕಾರಿ ವಿವರಿಸಿದ್ದಾರೆ. ಸಾಮಾನ್ಯವಾಗಿ ಭಾರತ ಮಾಡಿಕೊಳ್ಳುವ ವ್ಯಾಪಾರ ಒಪ್ಪಂದಗಳಲ್ಲಿ ಇಂತಹ ನಿಯಮ ಇರುವುದಿಲ್ಲ, ಆದರೆ ಅಮೆರಿಕದೊಂದಿಗಿನ ಈ ಒಪ್ಪಂದದಲ್ಲಿ ಇದನ್ನು ವಿಶೇಷವಾಗಿ ಸೇರಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಉಭಯ ದೇಶಗಳ ನಡುವಿನ ಮಾತುಕತೆಗಳು “ಸರಿಯಾದ ಹಾದಿಯಲ್ಲಿವೆ” ಮತ್ತು ಎರಡೂ ತಂಡಗಳು ನೇರವಾಗಿ ಹಾಗೂ ವರ್ಚುವಲ್ ಮೂಲಕ ನಿರಂತರ ಸಂಪರ್ಕದಲ್ಲಿವೆ ಎಂದು ವಾಣಿಜ್ಯ ಕಾರ್ಯದರ್ಶಿ ರಾಜೇಶ್ ಅಗರ್ವಾಲ್ ತಿಳಿಸಿದ್ದಾರೆ.

“ನವೆಂಬರ್ ಮೊದಲ ವಾರದಲ್ಲಿ ಕಸ್ಟಮ್ಸ್ ಮತ್ತು ವ್ಯಾಪಾರ ಸುಗಮಗೊಳಿಸುವಿಕೆ ಕುರಿತು ಚರ್ಚಿಸಲು ಅಮೆರಿಕದ ಸಣ್ಣ ತಂಡವೊಂದು ಭಾರತಕ್ಕೆ ಭೇಟಿ ನೀಡಿತ್ತು. ಈ ಚರ್ಚೆಗಳು ಅತ್ಯಂತ ಸಕಾರಾತ್ಮಕ ದಿಕ್ಕಿನಲ್ಲಿ ಸಾಗಿದ್ದು, ಹಲವು ಸಮಸ್ಯೆಗಳನ್ನು ಬಗೆಹರಿಸಲಾಗಿದೆ ಮತ್ತು ಅನೇಕ ಕ್ಷೇತ್ರಗಳಲ್ಲಿ ಒಮ್ಮತ ಮೂಡಿದೆ” ಎಂದು ಅವರು ಹೇಳಿದ್ದಾರೆ.

ಇದರ ಜೊತೆಗೆ, ಉಭಯ ದೇಶಗಳ ಮುಖ್ಯ ಸಂಧಾನಕಾರರು ನಿಯಮಿತವಾಗಿ ವರ್ಚುವಲ್ ಮೂಲಕ ಮಾತುಕತೆ ನಡೆಸುತ್ತಿದ್ದು, ಒಪ್ಪಂದದಲ್ಲಿ ಉಳಿದಿರುವ ಭಾಷಾ ತೊಡಕುಗಳು ಮತ್ತು ಸಣ್ಣಪುಟ್ಟ ತಿದ್ದುಪಡಿಗಳನ್ನು ಸರಿಪಡಿಸುವ ಕಾರ್ಯದಲ್ಲಿ ತೊಡಗಿದ್ದಾರೆ ಎಂದು ಅಗರ್ವಾಲ್ ಮಾಹಿತಿ ನೀಡಿದ್ದಾರೆ.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಜಯಪುರ | ನ.15ರಂದು ಕೆಪಿಎಸ್‌ಸಿ ಪರೀಕ್ಷೆ; ಪಾರದರ್ಶಕತೆಗೆ ಆದ್ಯತೆ: ಡಿಸಿ ಆನಂದ್‌ ಕೆ

ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ಗೆಜೆಟೆಡ್ ಪ್ರೊಬೇಷನರ್ಸ್ ಗ್ರೂಪ್‌ ಎ ಮತ್ತು...

ಪ್ರಧಾನಿ ಮೋದಿ ‘ದಿಮಾಗಿ ನಕ್ಸಲ್’ ರಾಹುಲ್ ಗಾಂಧಿಯವರೊಂದಿಗೆ ಚರ್ಚೆಗೆ ಏಕೆ ಹಿಂದೇಟು ಹಾಕುತ್ತಿದ್ದಾರೆ?

ಪ್ರಧಾನಿ ನರೇಂದ್ರ ಮೋದಿಯವರು ಮತ್ತೊಮ್ಮೆ "ದಿಮಾಗಿ ನಕ್ಸಲ್" (ಬೌದ್ಧಿಕ ನಕ್ಸಲರು ಅಥವಾ...

ಕನ್ನಡ ಬೌದ್ಧಿಕ ಲೋಕದ ‘ಪರಸ್ಪರ ಮೆಚ್ಚುಗೆ ಸಮಾಜ’ಕ್ಕೆ ಸವಾಲಾಗಿದ್ದ ಕೆವಿಎನ್

ರಾಜಕೀಯ, ಸಂಸ್ಕೃತಿ, ಜನಪದ, ಭಾಷೆ, ಕಾವ್ಯ, ಸಾಹಿತ್ಯ, ಸಿನಿಮಾ ಹೀಗೆ ಯಾವುದೇ...

ಸತತ ಹೋರಾಟದಿಂದ ಕಬ್ಬಿಗೆ ರೂ. 3,800 ದರ ನಿಗದಿ; ಏರಿಕೆಯ ನಿರೀಕ್ಷೆ: ಬಸವಂತಪ್ಪ ಕಾಂಬಳೆ

ರೈತರ ಸಂಘಟನೆಯ ಒಗ್ಗಟ್ಟು, ಪಕ್ಷಾತೀತ ಹೋರಾಟ ಮತ್ತು ಸಂಘಟನಾತ್ಮಕ ಶಿಸ್ತಿಗೆ ಸಕ್ಕರೆ...