ತಿರುಪತಿ ಲಾಡು ತಯಾರಿಕೆಗೆ ಪ್ರಾಣಿಗಳ ಕೊಬ್ಬಿನಾಂಶ ಬಳಕೆ, ಸಿಬಿಐನಿಂದ ನಾಲ್ವರ ಬಂಧನ

Date:

Advertisements

ತಿರುಪತಿಯ ಲಾಡು ಪ್ರಸಾದದ ತಯಾರಿಕೆಯಲ್ಲಿ ಪ್ರಾಣಿಗಳ ಕೊಬ್ಬಿನಾಂಶವನ್ನು ತುಪ್ಪದಲ್ಲಿ ಕಲಬೆರಕೆ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ನಾಲ್ವರನ್ನು ಬಂಧಿಸಲಾಗಿದೆ.

ಸುಪ್ರೀಂಕೋರ್ಟ್ ಆದೇಶದ ಮೇರೆಗೆ ರಚನೆಯಾದ ಸಿಬಿಐ ವಿಶೇಷ ತನಿಖಾ ತಂಡವು ಲಡ್ಡು ತಯಾರಿಸಲು ತುಪ್ಪ ಪೂರೈಸಿದ ಕಂಪನಿಗಳ ನಾಲ್ವರನ್ನು ಬಂಧಿಸಿದೆ. ಬಂಧಿತರನ್ನು ಭೋಲೆ ಬಾಬಾ ಡೈರಿಯ ಮಾಜಿ ನಿರ್ದೇಶಕರಾದ ವಿಪಿನ್ ಜೈನ್ ಮತ್ತು ಪೋಮಿಲ್ ಜೈನ್, ವೈಷ್ಣವಿ ಡೈರಿಯ ಅಪೂರ್ವ ಚಾವ್ಡಾ ಮತ್ತು ಎಆರ್ ಡೈರಿಯ ರಾಜು ರಾಜಶೇಖರನ್ ಎಂದು ಗುರುತಿಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

“ನಾಲ್ಕು ಜನರನ್ನು ಬಂಧಿಸಲಾಗಿದೆ. ಅವರಲ್ಲಿ ಬಿಪಿನ್ ಜೈನ್ ಮತ್ತು ಪೋಮಿ ಜೈನ್ ಎಂಬವರು ಭೋಲೆ ಬಾಬಾ ಡೈರಿಯವರು. ವೈಷ್ಣವಿ ಡೈರಿಯ ಅಪೂರ್ವ ಚಾವ್ಡಾ ಮತ್ತು ಎಆರ್ ಡೈರಿಯ (ರಾಜು) ರಾಜಶೇಖರನ್” ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ ಎಂದು ಇಂಗ್ಲಿಷ್ ಮಾಧ್ಯಮಗಳಲ್ಲಿ ವರದಿಯಾಗಿದೆ.

Advertisements

ತುಪ್ಪ ಪೂರೈಕೆಯ ಪ್ರತಿ ಹಂತದಲ್ಲೂ ಗಂಭೀರ ನಿಯಮ ಉಲ್ಲಂಘನೆಯು ಎಸ್​​ಐಟಿ ತನಿಖೆ ವೇಳೆ ಬಹಿರಂಗವಾಗಿದೆ. ಹೀಗಾಗಿ, ನಾಲ್ವರನ್ನು ಬಂಧಿಸಲಾಗಿದೆ. ವೈಷ್ಣವಿ ಡೈರಿ ಅಧಿಕಾರಿಗಳು ದೇವಸ್ಥಾನಕ್ಕೆ ತುಪ್ಪ ಪೂರೈಸಲು ಎಆರ್ ಡೈರಿ ಹೆಸರಿನಲ್ಲಿ ಟೆಂಡರ್‌ಗಳನ್ನು ಪಡೆದುಕೊಂಡಿದ್ದಾರೆ. ಜೊತೆಗೆ, ಟೆಂಡರ್ ಪ್ರಕ್ರಿಯೆಯನ್ನು ತಿರುಚಲು ನಕಲಿ ದಾಖಲೆಗಳನ್ನು ಸೃಷ್ಟಿಸಿದ್ದರು ಎಂದು ಅಧಿಕಾರಿಗಳು ಆರೋಪಿಸಿದ್ದಾರೆ.

ಬಂಧನʼ

ವೈಷ್ಣವಿ ಡೈರಿಯು ಭೋಲೆ ಬಾಬಾ ಡೈರಿಯಿಂದ ತುಪ್ಪವನ್ನು ಪಡೆಯಲಾಗಿದೆ ಎಂದು ಸುಳ್ಳು ಹೇಳಿದೆ. ಆದರೆ ತಿರುಪತಿ ದೇವಸ್ಥಾನಕ್ಕೆ ಅಗತ್ಯ ತುಪ್ಪದ ಬೇಡಿಕೆಯನ್ನು ಪೂರೈಸುವ ಸಾಮರ್ಥ್ಯವನ್ನು ಅದು ಹೊಂದಿಲ್ಲ ಎಂಬ ಅಂಶಗಳು ತನಿಖೆ ವೇಳೆ ಗೊತ್ತಾಗಿದೆ.

ತಿರುಪತಿ ಲಡ್ಡು ತಯಾರಿಕೆಯಲ್ಲಿ ಪ್ರಾಣಿಗಳ ಕೊಬ್ಬಿನ ಅಂಶ ಬಳಸಲಾಗಿದೆ ಎಂಬ ಆರೋಪದ ತನಿಖೆಗಾಗಿ ಸುಪ್ರೀಂಕೋರ್ಟ್ ಆದೇಶದ ಮೇರೆಗೆ ಕಳೆದ ವರ್ಷ ನವೆಂಬರ್‌ನಲ್ಲಿ ಐವರು ಅಧಿಕಾರಿಗಳ ಸಿಬಿಐ ವಿಶೇಷ ತನಿಖಾ ತಂಡ (ಎಸ್‌ಐಟಿ) ರಚಿಸಲಾಗಿತ್ತು. ತಂಡದಲ್ಲಿ ಕೇಂದ್ರ ಸಂಸ್ಥೆಯ ಇಬ್ಬರು ಅಧಿಕಾರಿಗಳು, ಆಂಧ್ರಪ್ರದೇಶದ ಇಬ್ಬರು ಪೊಲೀಸರು ಮತ್ತು ಭಾರತೀಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರದ (ಎಫ್‌ಎಸ್‌ಎಸ್‌ಎಐ) ಓರ್ವ ಅಧಿಕಾರಿ ಇದ್ದಾರೆ.

ಆಂಧ್ರಪ್ರದೇಶದ ಮುಖ್ಯಮಂತ್ರಿ ಎನ್.ಚಂದ್ರಬಾಬು ನಾಯ್ಡು ಅವರು 2024ರ ಸೆಪ್ಟೆಂಬರ್‌ನಲ್ಲಿ ರಾಜ್ಯದಲ್ಲಿ ಹಿಂದಿನ ವೈ.ಎಸ್. ಜಗನ್ ಮೋಹನ್ ರೆಡ್ಡಿ ನೇತೃತ್ವದ ಆಡಳಿತದ ಅವಧಿಯಲ್ಲಿ, ತಿರುಪತಿ ಲಡ್ಡುಗಳನ್ನು ತಯಾರಿಸಲು ಪ್ರಾಣಿಗಳ ಕೊಬ್ಬನ್ನು ಬಳಸಲಾಗಿದೆ ಎಂದು ಆರೋಪ ಮಾಡಿದ್ದರು. ಆ ಬಳಿಕ ಈ ವಿಚಾರವು ದೇಶಾದ್ಯಂತ ಭಾರಿ ಚರ್ಚೆ, ವಿವಾದಕ್ಕೆ ಕಾರಣವಾಗಿತ್ತು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

Download Eedina App Android / iOS

X