ಚುನಾವಣಾ ಪ್ರಚಾರದಲ್ಲಿ ಅಪ್ರಾಪ್ತನ ಬಳಕೆ ಮಾಡಿರುವ ಉದಯನಿಧಿ ಸ್ಟ್ಯಾಲಿನ್ ವಿರುದ್ಧ ಎಫ್‌ಐಆರ್ ದಾಖಲು

Date:

ತಮಿಳುನಾಡಿನ ಧರಪುರಂ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಪ್ರಚಾರದ ವೇಳೆ ಅಪ್ರಾಪ್ತ ಬಾಲಕನನ್ನು ಪ್ರಚಾರ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದಾರೆ ಎಂಬ ಆರೋಪದ ಮೇಲೆ ಡಿಎಂಕೆ ನಾಯಕ ಹಾಗೂ ರಾಜ್ಯ ವಿಧಾನಸಭೆಯ ಪ್ರತಿಪಕ್ಷ ನಾಯಕ ಉದಯನಿಧಿ ಸ್ಟ್ಯಾಲಿನ್ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

- Advertisement -

ಧರಪುರಂ ಪಟ್ಟಣದ ಪೆರಿಯಾರ್ ಪ್ರತಿಮೆ ಸಮೀಪ ಆಯೋಜಿಸಲಾಗಿದ್ದ ಚುನಾವಣಾ ಪ್ರಚಾರ ಸಭೆಯಲ್ಲಿ, ಉದಯನಿಧಿ ಸ್ಟ್ಯಾಲಿನ್ ಅಪ್ರಾಪ್ತ ಬಾಲಕನೊಬ್ಬನನ್ನು ತಮ್ಮ ಪ್ರಚಾರ ವಾಹನದ ಮೇಲೆ ಕರೆಸಿಕೊಂಡು ಆತನಿಂದ ಭಾಷಣ ಮಾಡಿಸಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಇದನ್ನೂ ಓದಿ: ತಮಿಳುನಾಡು | ಕಷ್ಟದ ಸಮಯದಲ್ಲಿಯೂ ನಿಮ್ಮ ಬೆನ್ನಿಗೆ ನಿಲ್ಲುತ್ತೇನೆ: ಸ್ಟ್ಯಾಲಿನ್ ಭೇಟಿ ಮಾಡಿದ ರಜನಿಕಾಂತ್

ಚುನಾವಣಾ ಪ್ರಚಾರಗಳಲ್ಲಿ ಮಕ್ಕಳನ್ನು ಮತ್ತು ಅಪ್ರಾಪ್ತರನ್ನು ಬಳಸಿಕೊಳ್ಳಬಾರದು ಎಂಬ ಚುನಾವಣಾ ಆಯೋಗದ ಕಟ್ಟುನಿಟ್ಟಿನ ಮಾರ್ಗಸೂಚಿಗಳು ಹಾಗೂ ಕಾಯ್ದೆಗಳ ಆಧಾರದ ಮೇಲೆ ತಿರುಪ್ಪುರ್ ಜಿಲ್ಲಾ ಪೊಲೀಸರು ಭಾನುವಾರ ಈ ಕ್ರಮ ಕೈಗೊಂಡಿದ್ದಾರೆ.
ಉದಯನಿಧಿ ಸ್ಟ್ಯಾಲಿನ್ ವಿರುದ್ಧ ಜನಪ್ರತಿನಿಧಿ ಕಾಯ್ದೆ (ಹಾಗೂ ಬಾಲನ್ಯಾಯ (ಮಕ್ಕಳ ಆರೈಕೆ ಮತ್ತು ರಕ್ಷಣೆ) ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ.

ತಮಿಳುನಾಡಿನಲ್ಲಿ ನಡೆಯುತ್ತಿರುವ ಧರಪುರಂ ಉಪಚುನಾವಣೆಯು ರಾಜಕೀಯವಾಗಿ ತೀವ್ರ ಕುತೂಹಲ ಕೆರಳಿಸಿದ್ದು, ಈ ಘಟನೆಯು ರಾಜ್ಯ ರಾಜಕಾರಣದಲ್ಲಿ ಪ್ರಮುಖ ಚರ್ಚೆಗೆ ಗ್ರಾಸವಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಂಗಳೂರು | ಅಕ್ರಮವಾಗಿ ಮನೆ ನೆಲಸಮ: 5 ಲಕ್ಷ ನಗದು, ಆಭರಣ ಕಳವು; ಇಬ್ಬರ ವಿರುದ್ಧ ಎಫ್‌ಐಆರ್

67 ವರ್ಷದ ವೃದ್ಧ ವ್ಯಾಪಾರಿಯೊಬ್ಬರ ಮನೆಯನ್ನು ಅಕ್ರಮವಾಗಿ ಧ್ವಂಸಗೊಳಿಸಿ, ರೂ. 5...

ಉತ್ತರಾಖಂಡ | ₹135.95 ಕೋಟಿ ಸಂಸದರ ನಿಧಿಯಲ್ಲಿ ಬಳಕೆಯಾಗಿದ್ದು ಕೇವಲ ಶೇ.18 ಮಾತ್ರ

ಉತ್ತರಾಖಂಡದ ಲೋಕಸಭೆ ಮತ್ತು ರಾಜ್ಯಸಭೆಯ ಹಾಲಿ ಸಂಸದರು ತಮಗೆ ಅಭಿವೃದ್ಧಿ ಕಾಮಗಾರಿಗಳಿಗಾಗಿ...

ಬೀದರ್‌ | ಚಾಕುವಿನಿಂದ ಇರಿದು ಮಾವನನ್ನೆ ಕೊಂದ ಅಳಿಯ

ಹಣ ನೀಡುವ ವಿಚಾರಕ್ಕೆ ಹಲವು ದಿನಗಳಿಂದ ನಡೆಯುತ್ತಿದ್ದ ಗಲಾಟೆ ವಿಕೋಪಕ್ಕೆ ತಿರುಗಿ,...