ಉತ್ತರ ಪ್ರದೇಶ: 25 ಲಕ್ಷ ಸರ್ಕಾರಿ ಉದ್ಯೋಗ, ಪದವೀಧರರಿಗೆ ಭತ್ಯೆ; ಅಖಿಲೇಶ್ ಯಾದವ್ ‘ಪಿಡಿಎ ಪ್ರಣಾಳಿಕೆ’ ಬಿಡುಗಡೆ

Date:

ಮುಂಬರುವ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಗೆ ಪೂರ್ವಭಾವಿಯಾಗಿ ಸಮಾಜವಾದಿ ಪಕ್ಷದ (ಎಸ್‌ಪಿ) ಮುಖ್ಯಸ್ಥ ಅಖಿಲೇಶ್ ಯಾದವ್ ಅವರು ಸಂವಿಧಾನ ದಿನವಾದ ಗುರುವಾರ ಪಕ್ಷದ ‘ಪಿಡಿಎ ಪ್ರಣಾಳಿಕೆ’ಯನ್ನು ಬಿಡುಗಡೆ ಮಾಡಿದ್ದಾರೆ. ಹಿಂದುಳಿದ ವರ್ಗಗಳು (ಪಿಚ್ಡೆ), ದಲಿತರು ಮತ್ತು ಅಲ್ಪಸಂಖ್ಯಾತರನ್ನು (ಅಲ್ಪಸಂಖ್ಯಕ್) ಒಳಗೊಂಡ ‘ಪಿಡಿಎ’ ಎಂಬುದು ಅಖಿಲೇಶ್ ಯಾದವ್ ಪ್ರತಿಪಾದಿಸುತ್ತಿರುವ ರಾಜಕೀಯ ಸೂತ್ರವಾಗಿದೆ. ಚುನಾವಣೆಗೆ ಕೆಲವು ತಿಂಗಳು ಮುಂಚಿತವಾಗಿಯೇ ಪ್ರಣಾಳಿಕೆ ಬಿಡುಗಡೆ ಮಾಡುವುದರಿಂದ ಪ್ರಚಾರ ಆರಂಭವಾಗುವ ಮುನ್ನವೇ ಪಕ್ಷದ ಪ್ರಸ್ತಾವಗಳನ್ನು ಜನರಿಗೆ ತಲುಪಿಸಲು ಸಾಧ್ಯವಾಗಲಿದೆ ಎಂದು ಎಸ್‌ಪಿ ತಿಳಿಸಿದೆ.

- Advertisement -

ಸಂವಿಧಾನ ದಿನದಂದೇ ಪ್ರಣಾಳಿಕೆ ಬಿಡುಗಡೆ ಮಾಡುವ ಮೂಲಕ ಪಕ್ಷವು ತನ್ನ ಚುನಾವಣಾ ಕಾರ್ಯಕ್ರಮವನ್ನು ಸಂವಿಧಾನದ ಮೌಲ್ಯಗಳು ಹಾಗೂ ಪ್ರಜಾಸತ್ತಾತ್ಮಕ ಸಂಸ್ಥೆಗಳೊಂದಿಗೆ ಜೋಡಿಸಿದೆ.ಪ್ರಣಾಳಿಕೆಯಲ್ಲಿ ಪ್ರಕಟಿಸಲಾದ ಪ್ರಮುಖ ಭರವಸೆಗಳ ಪ್ರಕಾರ, ಪಿಡಿಎ ಯುವಜನರಿಗೆ ಉನ್ನತ ಶಿಕ್ಷಣ ದೊರಕಿಸಲು ವಿಶೇಷ ರಾಜ್ಯ ಶಿಕ್ಷಣ ನೀತಿಯನ್ನು ರೂಪಿಸಲಾಗುವುದು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಯುಪಿ ಚುನಾವಣೆ: ಆಡಳಿತ ಯಂತ್ರ, ಜಾತಿ ಸಮೀಕರಣ ಮತ್ತು...

2027ರ ಉತ್ತರ ಪ್ರದೇಶ ಚುನಾವಣೆಗೆ ಮುನ್ನ ಮತದಾರರ ಪಟ್ಟಿಯಲ್ಲಿನ ಲಿಂಗ ಅಂತರ, ಜಾತಿ ಸಮೀಕರಣ ಹಾಗೂ ಮೈತ್ರಿ ಪಕ್ಷಗಳ ಸೀಟು ಹಂಚಿಕೆಯ ಚೌಕಾಸಿ ಹೊಸ ಪ್ರಶ್ನೆಗಳನ್ನು ಹುಟ್ಟುಹಾಕಿವೆ. ಸಾಮಾಜಿಕ ನ್ಯಾಯದ ಹೆಸರಿನಲ್ಲಿ ನಡೆಯುತ್ತಿರುವ...

ಯುಪಿ ಚುನಾವಣೆ | ಯುದ್ಧಕ್ಕೆ ಮೊದಲೇ ಉಡುಗಿ ಹೋಯಿತೇ...

ಉತ್ತರ ಪ್ರದೇಶದಲ್ಲಿ 2024ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯ ನಾಗಾಲೋಟಕ್ಕೆ ಬ್ರೇಕ್ ಹಾಕಿ ದೇಶದ ರಾಜಕಾರಣದಲ್ಲೇ ಸಂಚಲನ ಮೂಡಿಸಿತ್ತು ಸಮಾಜವಾದಿ ಪಕ್ಷ (ಎಸ್‌ಪಿ) ಮತ್ತು ಕಾಂಗ್ರೆಸ್ ಮೈತ್ರಿ. ಆದರೀಗ, 2027ರ ಉತ್ತರ ಪ್ರದೇಶ ವಿಧಾನಸಭಾ...

ಬಂಡವಾಳಶಾಹಿಯ ನಾಲ್ಕು ಕಟ್ಟುಕಥೆಗಳು ಮತ್ತು ನಮ್ಮ ಬದುಕಿನ ಬೆಲೆ

ನಮ್ಮ ಸುತ್ತಮುತ್ತಲಿನ ಪ್ರಪಂಚವನ್ನು ಒಮ್ಮೆ ಗಮನಿಸಿ ನೋಡಿ. ಒಂದು ಕಡೆ, 2025ರ ಒಂದೇ ವರ್ಷದಲ್ಲಿ ಜಗತ್ತಿನ ಅತ್ಯಂತ ಶ್ರೀಮಂತ 500 ವ್ಯಕ್ತಿಗಳ ಸಂಪತ್ತು ಸುಮಾರು 2.2 ಟ್ರಿಲಿಯನ್ ಡಾಲರ್‌ಗಳಷ್ಟು ಹೆಚ್ಚಾಗಿದೆ. ಇನ್ನೊಂದು ಕಡೆ,...

ಪ್ರಶ್ನೆಪತ್ರಿಕೆ ಸೋರಿಕೆ ಸಮಸ್ಯೆಯನ್ನು ಪರಿಹರಿಸಿ, ಎಲ್ಲಾ ಪರೀಕ್ಷೆಗಳನ್ನು ನಿಗದಿತ ವೇಳಾಪಟ್ಟಿಯಂತೆ ನಡೆಸಿ, ಸಂಪೂರ್ಣ ಪಾರದರ್ಶಕತೆಯೊಂದಿಗೆ ಫಲಿತಾಂಶ ಪ್ರಕಟಿಸಲಾಗುವುದು ಎಂದು ಅಖಿಲೇಶ್ ಯಾದವ್ ಘೋಷಿಸಿದ್ದಾರೆ. ಪದವೀಧರರಿಗೆ ಉದ್ಯೋಗಾವಕಾಶಗಳನ್ನು ಒದಗಿಸುವುದರ ಜತೆಗೆ, ನಿರುದ್ಯೋಗಿಗಳಾಗಿ ಉಳಿಯುವ ಪದವೀಧರರಿಗೆ ತಿಂಗಳಿಗೆ ₹5,000 ಭತ್ಯೆ ನೀಡಲಾಗುವುದು. 25 ಲಕ್ಷ ಯುವಜನರಿಗೆ ಸರ್ಕಾರಿ ಉದ್ಯೋಗ ಒದಗಿಸಲಾಗುವುದು ಹಾಗೂ ಇತರ ವಲಯಗಳಲ್ಲೂ ಉದ್ಯೋಗ ಸೃಷ್ಟಿಸಲಾಗುವುದು. ನಿರ್ದಿಷ್ಟ ವರ್ಗಗಳ ಏಳಿಗೆಗಾಗಿ ನೀತಿಗಳನ್ನು ರೂಪಿಸಲು ರಾಜ್ಯಾದ್ಯಂತ ಜಾತಿ ಗಣತಿ ಆರಂಭಿಸಲಾಗುವುದು ಮತ್ತು ಪ್ರತಿ ಪ್ಲೇಟ್‌ಗೆ ₹5 ದರದಲ್ಲಿ ಊಟ ಲಭ್ಯವಾಗುವ ‘ಸಮಾಜವಾದಿ ಕ್ಯಾಂಟೀನ್‌’ಗಳನ್ನು ಸ್ಥಾಪಿಸಲಾಗುವುದು ಎಂದು ಪ್ರಣಾಳಿಕೆಯಲ್ಲಿ ತಿಳಿಸಲಾಗಿದೆ.

ಇದರೊಂದಿಗೆ, ವೃದ್ಧ ಮಹಿಳೆಯರಿಗೆ ₹40,000 ಪಿಂಚಣಿಯನ್ನು ನೇರವಾಗಿ ಅವರ ಬ್ಯಾಂಕ್ ಖಾತೆಗಳಿಗೆ ಜಮಾ ಮಾಡಲಾಗುವುದು ಹಾಗೂ ನಿಗದಿತ ವಯಸ್ಸಿನ ಮೇಲ್ಪಟ್ಟ ಮಹಿಳಾ ಕಾರ್ಮಿಕರಿಗೂ ₹40,000 ನೆರವು ನೀಡಲಾಗುವುದು ಎಂದು ಎಸ್‌ಪಿ ಭರವಸೆ ನೀಡಿದೆ. ₹50 ಕೋಟಿವರೆಗಿನ ಸರ್ಕಾರಿ ಗುತ್ತಿಗೆಗಳಲ್ಲಿ ಪಿಡಿಎ ಸಮುದಾಯದ ಸದಸ್ಯರಿಗೆ ಶೇ 50ರಷ್ಟು ಮೀಸಲಾತಿ ಕಲ್ಪಿಸುವುದಾಗಿಯೂ ಘೋಷಿಸಲಾಗಿದೆ. ಮುಂದಿನ ದಿನಗಳಲ್ಲಿ ಜಿಲ್ಲಾ ಮಟ್ಟದ, ನಗರ ಕೇಂದ್ರಿತ ಹಾಗೂ ಮಹಿಳಾ ಕೇಂದ್ರಿತವಾದ ಇನ್ನೂ ಮೂರು ವಿವರವಾದ ಪ್ರಣಾಳಿಕೆಗಳನ್ನು ಪಕ್ಷ ಬಿಡುಗಡೆ ಮಾಡುವ ನಿರೀಕ್ಷೆಯಿದೆ.

ಪ್ರಣಾಳಿಕೆ ಬಿಡುಗಡೆ ಸಂದರ್ಭದಲ್ಲಿ ಪ್ರತಿಸ್ಪರ್ಧಿ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ ಅಖಿಲೇಶ್ ಯಾದವ್, “ಕೆಲವೇ ಪ್ರಬಲ, ಮೇಲ್ಮೆಯ ಮನೋಭಾವದ ಮತ್ತು ಸ್ವಾರ್ಥಿ ಜನರು ತಮ್ಮ ಸಾವಿರಾರು ವರ್ಷಗಳ ಅಧಿಕಾರವನ್ನು ಉಳಿಸಿಕೊಳ್ಳಲು ಸಂವಿಧಾನವನ್ನು ತಿದ್ದುಪಡಿ ಮಾಡುವ ಮತ್ತು ಬದಲಿಸುವುದಷ್ಟೇ ಅಲ್ಲದೆ, ಅದನ್ನು ಅಳಿಸಿಹಾಕಲು ಪ್ರಯತ್ನಿಸುತ್ತಿರುವಾಗ, ಸಂವಿಧಾನವನ್ನು ಪ್ರೀತಿಸುವ ನಾವೆಲ್ಲರೂ ಒಗ್ಗೂಡಿ ಸಂವಿಧಾನ ತಿದ್ದುಪಡಿಯ ಎಲ್ಲಾ ಸಂಚುಗಳನ್ನು ವಿಫಲಗೊಳಿಸುವುದನ್ನು ರಾಷ್ಟ್ರೀಯ ಮತ್ತು ಸಾಮಾಜಿಕ ಕರ್ತವ್ಯವಾಗಿ ಸ್ವೀಕರಿಸಬೇಕು” ಎಂದು ಹೇಳಿದ್ದಾರೆ.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್ | ವಿಶ್ವದ ಶ್ರೇಷ್ಠ ಸಂವಿಧಾನ ನಮ್ಮ ದೇಶಕ್ಕೆ ಭದ್ರ ಬುನಾದಿ: ಈಶ್ವರ ಖಂಡ್ರೆ

ನಮ್ಮ ದೇಶಕ್ಕೆ ಭದ್ರ ಬುನಾದಿ ಹಾಕಿಕೊಟ್ಟಿರುವ ವಿಶ್ವದ ಅತ್ಯಂತ ಶ್ರೇಷ್ಠ ಹಾಗೂ...

ಹಸೀನಾ ಮರಳುವಿಕೆಯ ಘೋಷಣೆ ಬೆನ್ನಲ್ಲೇ ಬಾಂಗ್ಲಾದೇಶದಲ್ಲಿ ಭುಗಿಲೆದ್ದ ಹಿಂಸಾಚಾರ ಹೆದ್ದೆರೆಗಳು

ಬಾಂಗ್ಲಾದೇಶದಲ್ಲಿ 2024ರ ಆಗಸ್ಟ್‌ನಲ್ಲಿ ತೀವ್ರ ಹಿಂಸಾಚಾರ ನಡೆದಿತ್ತು. ಈ ವಿದ್ಯಾರ್ಥಿ ದಂಗೆಯ...

ಯುಪಿ ಚುನಾವಣೆ | ಯುದ್ಧಕ್ಕೆ ಮೊದಲೇ ಉಡುಗಿ ಹೋಯಿತೇ ಎಸ್‌ಪಿ–ಕಾಂಗ್ರೆಸ್ ಮೈತ್ರಿ ಉತ್ಸಾಹ?

ಉತ್ತರ ಪ್ರದೇಶದಲ್ಲಿ 2024ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯ ನಾಗಾಲೋಟಕ್ಕೆ ಬ್ರೇಕ್ ಹಾಕಿ...