ಉತ್ತರ ಪ್ರದೇಶ | ಅಮೇಥಿಯಲ್ಲಿ ಅಡ್ಡಗೋಡೆಯಿಲ್ಲದೆ ಶೌಚಾಲಯ ನಿರ್ಮಾಣ; ವಿಡಿಯೋ ವೈರಲ್

Date:

Advertisements

ಕೇಂದ್ರ ಸಚಿವೆ ಸ್ಮೃತಿ ಇರಾನಿ ಅವರ ಲೋಕಸಭಾ ಕ್ಷೇತ್ರವಾದ ಅಮೇಥಿಯಲ್ಲಿ ಯಾವುದೇ ಅಡ್ಡ ಗೋಡೆ ನಿರ್ಮಿಸದೆ ಒಂದರ ಪಕ್ಕ ಒಂದರ ಹಾಗೆ ನಾಲ್ಕು ಸಾರ್ವಜನಿಕ ಶೌಚಾಲಯ ನಿರ್ಮಿಸಿರುವ ವಿಡಿಯೋ ವೈರಲ್ ಆಗಿದೆ.

ಈ ಘಟನೆಯು ಅಮೇಥಿಯ ಜಗದೀಶು‌ ಬ್ಲಾಕ್‌ನ ಕಟೇ ಗ್ರಾಮದಿಂದ ವರದಿಯಾಗಿದ್ದು, ಇಲ್ಲಿನ ಸಾರ್ವಜನಿಕ ಶೌಚಾಲಯವನ್ನು ಭಾರೀ ಮೊತ್ತ ವ್ಯಯಿಸಿ ನಿರ್ಮಿಸಲಾಗಿದೆ. ಈ ಸಾರ್ವಜನಿಕ ಶೌಚಾಲಯವನ್ನು ಗ್ರಾಮಸ್ಥರ ಅನುಕೂಲಕ್ಕಾಗಿ ನಿರ್ಮಿಸಲಾಗಿದ್ದರೂ, ಈ ಶೌಚಾಲಯಕ್ಕೆ ಬೀಗ ಹಾಕಲಾಗಿದೆ. ಶೌಚಾಲಯದಲ್ಲಿನ ಎಲ್ಲ ನಾಲ್ಕು ಶೌಚಾಸನಗಳಲ್ಲಿ ಕಸ ಮೆತ್ತಿಕೊಂಡಿದೆ.

ಈ ವಿಡಿಯೋವನ್ನು ಟ್ವಿಟರ್‌ನಲ್ಲಿ ಹಂಚಿಕೊಂಡಿರುವ ಉತ್ತರ ಪ್ರದೇಶ ಕಾಂಗ್ರೆಸ್ ಘಟಕ, ಈ ವಿಚಿತ್ರ ಸಾರ್ವಜನಿಕ ಶೌಚಾಲಯವನ್ನು ಯಾಕೆ ವಿಶ್ವದ 8ನೇ ಅದ್ಭುತವೆಂದು ಘೋಷಿಸಬಾರದು ಎಂದು ಅಮೇಥಿ ಸಂಸದೆ ಹಾಗೂ ಕೇಂದ್ರ ಸಚಿವೆ ಸ್ಮೃತಿ ಇರಾನಿಯನ್ನು ಗುರಿಯಾಗಿಸಿಕೊಂಡು ವ್ಯಂಗ್ಯವಾಡಿದೆ. ಈ ಘಟನೆಗೆ ಉತ್ತರದಾಯಿತ್ವವನ್ನು ಆಗ್ರಹಿಸಿರುವ ಕಾಂಗ್ರೆಸ್ ಈ ಲೋಪಕ್ಕೆ ಗುತ್ತಿಗೆದಾರ, ಅಧಿಕಾರಿಗಳು ಅಥವಾ ಕೇಂದ್ರ ಸಚಿವರೇ ಕಾರಣವೇ ಎಂದು ಪ್ರಶ್ನಿಸಿದೆ.

Advertisements

ಈ ಸುದ್ದಿ ಓದಿದ್ದೀರಾ? ಹೈದರಾಬಾದ್‌ನಲ್ಲಿ ಇಂದು ಕಾಂಗ್ರೆಸ್ ಉನ್ನತ ಸಮಿತಿ ಸಭೆ: 5 ರಾಜ್ಯಗಳ ಚುನಾವಣೆಯ ಬಗ್ಗೆ ಚರ್ಚೆ

ಇದಕ್ಕೆ ಪ್ರತಿಕ್ರಿಯಿಸಿರುವ ಜಿಲ್ಲಾ ಸಾರ್ವಜನಿಕ ಸಂಪರ್ಕಾಧಿಕಾರಿ ಶ್ರೀಕಾಂತ್ ಯಾದವ್, ಈ ಸಾರ್ವಜನಿಕ ಶೌಚಾಲಯಗಳು ಹಳತಾಗಿದ್ದು, ಹೊಸ ಸಾರ್ವಜನಿಕ ಶೌಚಾಲಯವನ್ನು ಗ್ರಾಮದ ಬೇರೆ ಕಡೆ ನಿರ್ಮಿಸಲಾಗಿದೆ ಎಂದು ಹೇಳಿದ್ದಾರೆ.

ಹಳತಾದ ಸಾರ್ವಜನಿಕ ಶೌಚಾಲಯದಿಂದ ಶೌಚಾಸನಗಳನ್ನು ತೆಗೆದು ಹಾಕುವಂತೆ ಆದೇಶಿಸಲಾಗಿದ್ದರೂ, ಯೋಜನೆಯಂತೆ ಈ ಆದೇಶ ಕಾರ್ಯಗತವಾಗಿಲ್ಲ. ಈ ಬಗ್ಗೆ ತನಿಖೆ ನಡೆಸಲಾಗುವುದು ಎಂದು ಅವರು ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

Download Eedina App Android / iOS

X