ಉತ್ತರ ಪ್ರದೇಶ | ಚಪ್ಪಲಿ ಹಾರ ಹಾಕಿಕೊಂಡು ಮತಯಾಚಿಸಿದ ಅಭ್ಯರ್ಥಿ

Date:

ಲೋಕಸಭಾ ಚುನಾವಣೆಗೆ ಇನ್ನೇನು ಕೆಲವೇ ದಿನಗಳು ಬಾಕಿ ಉಳಿದಿವೆ. ಈ ನಡುವೆ, ಅಭ್ಯರ್ಥಿಗಳು ತಮ್ಮ ಪ್ರಚಾರ ಕಾರ್ಯ ಆರಂಭಿಸಿದ್ದಾರೆ. ನಾನಾ ವೇಶಗಳನ್ನು ಧರಿಸಿ ಮತದಾರರನ್ನು ಒಲಿಸಲು ಅಭ್ಯರ್ಥಿಗಳು ಮುಂದಾಗಿದ್ದಾರೆ. ಹೂವಿನ ಹಾರ ಹಾಕಿಕೊಂಡು ಅಭ್ಯರ್ಥಿಗಳು ರಸ್ತೆಗಿಳಿದು ಮತದಾರರಿಗೆ ಕೈ ಮುಗಿದು ಮತ ಕೇಳುವುದು ಸರ್ವೇ ಸಾಮಾನ್ಯ. ಆದರೆ, ಸ್ವತಂತ್ರ ಪಕ್ಷದ ಅಭ್ಯರ್ಥಿಯೊಬ್ಬರು ಹೂವಿನ ಹಾರದ ಬದಲು ಚಪ್ಪಲಿ ಹಾರ ಹಾಕಿಕೊಂಡು ಮತ ಯಾಚಿಸಿದ ಘಟನೆ ಉತ್ತರ ಪ್ರದೇಶದ ಅಲಿಘರ್‌ನಲ್ಲಿ ನಡೆದಿದೆ.

- Advertisement -

ಅಲಿಗಢದ ಸ್ವತಂತ್ರ ಅಭ್ಯರ್ಥಿ ಪಂಡಿತ್ ಕೇಶವ್ ದೇವ್ ಗೌತಮ್ ಅವರು ಚಪ್ಪಲಿ ಹಾರ ಹಾಕಿಕೊಂಡು ಚುನಾವಣಾ ಪ್ರಚಾರ ಆರಂಭಿಸಿದ್ದಾರೆ. ಹೂವಿನ ಹಾರದ ಬದಲು ಚಪ್ಪಲಿ ಹಾರ ಹಾಕಿಕೊಂಡು ಮತ ಯಾಚಿಸಿದ್ದನ್ನು ಕಂಡು ಜನರು ಅಚ್ಚರಿ ವ್ಯಕ್ತಪಡಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಉತ್ತರ ಪ್ರದೇಶದ ಅಲಿಘರ್‌ನ ಪಂಡಿತ್ ಕೇಶವ್ ದೇವ್ ಅವರು ಸ್ವತಂತ್ರ ಅಭ್ಯರ್ಥಿಯಾಗಿ ಚುನಾವಣಾ ಕಣಕ್ಕೆ ಇಳಿದಿದ್ದಾರೆ. ಸ್ವತಃ ಕೇಶವ್ ದೇವ್ ಅವರೇ ಚಪ್ಪಲಿಯನ್ನು ಚುನಾವಣಾ ಚಿಹ್ನೆಗೆ ಬೇಕೆಂದು ಅರ್ಜಿ ಸಲ್ಲಿಸಿದ್ದಾರೆ. ಅದರಂತೆ, ಚುನಾವಣಾ ಆಯೋಗವು ಅವರಿಗೆ ಚುನಾವಣಾ ಚಿಹ್ನೆಯಾಗಿ ಚಪ್ಪಲಿಯನ್ನು ನಿಗದಿಪಡಿಸಿದೆ. ಚಿಹ್ನೆ ದೊರೆತ ಬಳಿಕ ಕೊರಳಿಗೆ 7 ಚಪ್ಪಲಿಗಳನ್ನು ಹಾರ ಮಾಡಿ ಹಾಕಿಕೊಂಡು ಪ್ರಚಾರ ನಡೆಸುತ್ತಿದ್ದಾರೆ.

ಈ ಸುದ್ದಿ ಓದಿದ್ದೀರಾ? ಉತ್ತರ ಪ್ರದೇಶ | ಚಪ್ಪಲಿ ಹಾರ ಹಾಕಿಕೊಂಡು ಮತಯಾಚಿಸಿದ ಅಭ್ಯರ್ಥಿ

ಲೋಕಸಭೆ ಚುನಾವಣೆಯು ಏಪ್ರಿಲ್ 19 ರಿಂದ ಏಳು ಹಂತಗಳಲ್ಲಿ ನಡೆಯಲಿದೆ. ಉತ್ತರ ಪ್ರದೇಶವು 80 ಗರಿಷ್ಠ ಸಂಖ್ಯೆಯ ಸಂಸದರನ್ನು ಸಂಸತ್ತಿಗೆ ಕಳುಹಿಸುತ್ತದೆ. ಅಲಿಗಢ ಎರಡನೇ ಹಂತದಲ್ಲಿ ಏಪ್ರಿಲ್ 26 ರಂದು ಮತದಾನ ನಡೆಯಲಿದೆ. ಮತಗಳ ಎಣಿಕೆ ಜೂನ್ 4 ರಂದು ನಡೆಯಲಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಾಲಾ ಸಮಸ್ಯೆಗಳ ಕುರಿತು ಗ್ರಾಮ ಸಭೆಯಲ್ಲಿ ಧ್ವನಿ ಎತ್ತಿದ ವಿದ್ಯಾರ್ಥಿಗಳು; ಅಧಿಕಾರಿಗಳ ಮೆಚ್ಚುಗೆ-ಭರವಸೆ

ಸರ್ಕಾರಿ ಶಾಲಾ ವಿದ್ಯಾರ್ಥಿಗಳು ‘ವಿಶೇಷ ಗ್ರಾಮ ಸಭೆ’ಗಳಲ್ಲಿ ಪಾಲ್ಗೊಂಡು, ಪಂಚಾಯತ್ ಪ್ರತಿನಿಧಿಗಳು...

ಉತ್ತರಾಖಂಡ SIR ಅಂತಿಮ ಮತದಾರರ ಪಟ್ಟಿ ಪ್ರಕಟ: ಆದರೆ ಮುಗಿದಿಲ್ಲ ನೋಂದಣಿ ಪ್ರಕ್ರಿಯೆ

ಉತ್ತರಾಖಂಡ ರಾಜ್ಯದಲ್ಲಿ ನಡೆದ 'ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ' (ಎಸ್‌ಐಆರ್)...

ವಾಹನ ದಟ್ಟಣೆಯ ಸುಳಿಯಲ್ಲಿ ಮನಾಲಿ; ಪ್ರವಾಸೋದ್ಯಮದ ಒತ್ತಡಕ್ಕೆ ನಲುಗುತ್ತಿವೆಯೇ ಬೆಟ್ಟಗಳು?

ಮುಂಗಾರು ಮಳೆ ಕಡಿಮೆಯಾಗುತ್ತಿದ್ದಂತೆ ಹಿಮಾಚಲ ಪ್ರದೇಶದ ಪ್ರವಾಸಿ ತಾಣಗಳಿಗೆ ಪ್ರವಾಸಿಗರ ಆಗಮನ...