ಉತ್ತರ ಪ್ರದೇಶ | ಆಸ್ಪತ್ರೆಯಲ್ಲಿ ಅಗ್ನಿ ಅವಘಡ, 10 ನವಜಾತ ಶಿಶುಗಳ ಸಜೀವ ದಹನ

Date:

ಉತ್ತರ ಪ್ರದೇಶದ ಝಾನ್ಸಿಯ ಮಹಾರಾಣಿ ಲಕ್ಷ್ಮೀಬಾಯಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ನವಜಾತ ಶಿಶುಗಳ ತೀವ್ರನಿಗಾ ಘಟಕದಲ್ಲಿ ಶುಕ್ರವಾರ ರಾತ್ರಿ ಅಗ್ನಿ ಅವಘಡ ಸಂಭವಿಸಿದ್ದು, ಕನಿಷ್ಠ 10 ನವಜಾತ ಶಿಶುಗಳು ಸುಟ್ಟು ಕರಕಲಾಗಿವೆ.

- Advertisement -

ರಾತ್ರಿ 10.45ರ ವೇಳೆಗೆ ಬೆಂಕಿ ಅವಘಡ ಸಂಭವಿಸಿದೆ. 37 ಮಕ್ಕಳನ್ನು ರಕ್ಷಿಸಲಾಗಿದೆ. ಸಾವಿನ ಸಂಖ್ಯೆ ಹೆಚ್ಚುವ ಸಾಧ್ಯತೆ ಇದೆ. ಶಾರ್ಟ್ ಸರ್ಕಿಟ್‌ನಿಂದಾಗಿ ಬೆಂಕಿ ಹೊತ್ತಿಕೊಂಡಿರುವ ಸಾಧ್ಯತೆ ಇದೆ ಸದ್ಯಕ್ಕೆ ತಿಳಿದು ಬಂದಿದೆ. ಈ ಕುರಿತು ತನಿಖೆ ನಡೆಸುವುದಕ್ಕಾಗಿ ಸಮಿತಿ ರಚಿಸಲಾಗಿದೆ ಎಂದು ಜಿಲ್ಲಾಧಿಕಾರಿ ಅವಿನಾಶ್ ಕುಮಾರ್ ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ವಾರ್ಡ್‌ನಲ್ಲಿ ದಟ್ಟ ಹೊಗೆ ತುಂಬಿತ್ತು. ವೈದ್ಯರು ಹಾಗೂ ಆಸ್ಪತ್ರೆ ಸಿಬ್ಬಂದಿ, ಕಿಟಕಿ ಗಾಜುಗಳನ್ನು ಒಡೆದು ರೋಗಿಗಳನ್ನು ಪಾರು ಮಾಡಲು ಪ್ರಯತ್ನಿಸಿದರು. ರೋಗಿಗಳು ಹಾಗೂ ಅವರ ಆರೈಕೆ ಮಾಡುವವರು ಆತಂಕಕ್ಕೆ ಒಳಗಾಗಿರುವುದು, ಪೊಲೀಸರು ಅವರ ರಕ್ಷಣೆಗೆ ಪ್ರಯತ್ನಿಸುತ್ತಿದ್ದರು ಎನ್ನಲಾದ ದೃಶ್ಯಗಳಿರುವ ವಿಡಿಯೊಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿವೆ. ಜಿಲ್ಲಾಡಳಿತ ಹಾಗೂ ಅಗ್ನಿ ಶಾಮಕ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿದ್ದು, ರಕ್ಷಣಾ ಕಾರ್ಯ ಕೈಗೊಂಡಿದ್ದರು.

ಈ ಸುದ್ದಿ ಓದಿದ್ದೀರಾ? ಮಣಿಪುರ ಜನಾಂಗೀಯ ದ್ವೇಷ: ಜೀರಿ ನದಿಯಲ್ಲಿ ಶವಗಳಾಗಿ ತೇಲಿದ ಮಹಿಳೆ – ಮಕ್ಕಳು

ದುರಂತದಲ್ಲಿ ಮಕ್ಕಳು ಮೃತ ಪಟ್ಟಿರುವ ಕುರಿತು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರೂ ‘ಎಕ್ಸ್’ನಲ್ಲಿ ಪೋಸ್ಟ್ ಮಾಡಿದ್ದಾರೆ. ಸುಟ್ಟು ಕರಕಲಾದ ದೇಹಗಳಿರುವ ವಿಡಿಯೊಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿವೆ. ಜೀವ ರಕ್ಷಿಸಿಕೊಳ್ಳಲು ಅಲ್ಲಿದ್ದವರು ಪ್ರಯತ್ನಿಸಿದ ಕಾರಣ, ಆಸ್ಪತ್ರೆಯಲ್ಲಿ ಕಾಲ್ತುಳಿತದಂತಹ ಸನ್ನಿವೇಶ ನಿರ್ಮಾಣ ವಾಗಿತ್ತು.

ಘಟನೆಯ ವೇಳೆ ಎನ್‌ಐಸಿಯುನಲ್ಲಿ ಒಟ್ಟು 54 ಮಕ್ಕಳನ್ನು ದಾಖಲಿಸಲಾಗಿದ್ದು, 44 ಮಕ್ಕಳನ್ನು ರಕ್ಷಿಸಲಾಗಿದೆ. ಬಲಿಯಾದವರ ಪೈಕಿ ಏಳು ಮಕ್ಕಳನ್ನು ಗುರುತಿಸಲಾಗಿದೆ ಎಂದು ಉತ್ತರ ಪ್ರದೇಶದ ಉಪ ಮುಖ್ಯಮಂತ್ರಿ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಬ್ರಜೇಶ್ ಪಾಠಕ್ ತಿಳಿಸಿದ್ದಾರೆ. 

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೆಹಲಿ ಪ್ರತಿಭಟನೆ ವೇಳೆ ಪೊಲೀಸರಿಂದ ಲೈಂಗಿಕ ಕಿರುಕುಳ: ಮೂವರು ಪತ್ರಕರ್ತೆಯರ ಆರೋಪ

ದೇಶದ ರಾಜಧಾನಿ ದೆಹಲಿಯ ಜಂತರ್ ಮಂತರ್ ಬಳಿ ನಡೆದ ಪ್ರತಿಭಟನೆಯ ವರದಿಗಾರಿಕೆಯಲ್ಲಿ...

ಹಳೆಯ ಪ್ರಕರಣ: ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ವಿರುದ್ಧ ವಿಜಿಲೆನ್ಸ್ ತನಿಖೆಗೆ ಕೇರಳ ಸರ್ಕಾರ ಆದೇಶ

20೦6ರ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಹಾಲಿ ಮುಖ್ಯ ಚುನಾವಣಾ ಆಯುಕ್ತ (CEC) ಗ್ಯಾನೇಶ್...

ಗಣೇಶ ವಿಸರ್ಜನೆ ಮುಗಿಯಿತು, ಇನ್ನು ಸಿಇಸಿ ಗ್ಯಾನೇಶ್ ಕುಮಾರ್ ವಿಸರ್ಜನೆ ಬಾಕಿ: ನಟ ಪ್ರಕಾಶ್ ರಾಜ್

ದೇಶಾದ್ಯಂತ ಗಣೇಶ ವಿಸರ್ಜನೆ ಪ್ರಕ್ರಿಯೆ ಪೂರ್ಣಗೊಂಡಿದ್ದು, ಈಗ ಮುಖ್ಯ ಚುನಾವಣಾ ಆಯುಕ್ತ...

ಜಿಎಸ್‌ಟಿ ದಸ್ತಗಿರಿ ಅಧಿಕಾರ ಹಿಂಪಡೆಯುವ ಪ್ರಸ್ತಾಪ: ಆಡಂಬರದ ಜಾರಿಯೂ ಇಂದಿನ ಭ್ರಮನಿರಸನವೂ….

2017ರ ಜೂನ್ 30ರ ಮಧ್ಯರಾತ್ರಿ ಭಾರತದ ಸಂಸತ್ತಿನಲ್ಲಿ ವಿಶೇಷ ಅಧಿವೇಶನ ಕರೆಯಾಗಿತ್ತು....