ಉತ್ತರ ಪ್ರದೇಶ | ಏಷ್ಯನ್ ಗೇಮ್ಸ್‌ಗೆ ಅರ್ಹತೆ ಪಡೆದ ಪ್ಯಾರಾ ಅಥ್ಲೀಟ್ ಕೊಲೆ; ಪ್ರತಿಸ್ಪರ್ಧಿ ಬಂಧನ

Date:

ಇದೇ ವರ್ಷದ ಅಕ್ಟೋಬರ್‌ನಲ್ಲಿ ಜಪಾನ್‌ನಲ್ಲಿ ನಡೆಯಲಿರುವ ಪ್ಯಾರಾ ಏಷ್ಯನ್ ಗೇಮ್ಸ್‌ ಕ್ರೀಡಾಕೂಟಕ್ಕೆ ಅರ್ಹತೆ ಪಡೆದಿದ್ದ ರಾಷ್ಟ್ರೀಯ ಮಟ್ಟದ ಪ್ಯಾರಾ ಅಥ್ಲೀಟ್‌ನನ್ನು ಗುಂಡಿಕ್ಕಿ ಕೊಲೆ ಮಾಡಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಪ್ರಕರಣದಲ್ಲಿ ಮೃತನ ಪ್ರತಿಸ್ಪರ್ಧಿಯನ್ನು ಬಂಧಿಸಲಾಗಿದೆ.

- Advertisement -

ಘಟನೆಯು ಉತ್ತರ ಪ್ರದೇಶದ ಗಾಜಿಯಾಬಾದ್‌ನಲ್ಲಿ ನಡೆದಿದೆ. ಹತ್ಯೆಯಾದ ಪ್ಯಾರಾ ಅಥ್ಲೀಟ್‌ನನ್ನು ಚಿರಾಗ್ ತ್ಯಾಗಿ ಎಂದು ಹೆಸರಿಸಲಾಗಿದೆ. ಅವರ ಹತ್ಯೆ ಪ್ರಕರಣದಲ್ಲಿ ಪ್ರತಿಸ್ಪರ್ಧಿ ಯಶ್‌ ಖತಿಕ್‌ನನ್ನು ಪೊಲೀಸರು ಬಂಧಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಲೈಂಗಿಕ ಕಿರುಕುಳ ಆರೋಪಕ್ಕೆ ಜಾತಿದೌರ್ಜನ್ಯ ಗುರಾಣಿಯೇ? ಸಂತ್ರಸ್ತೆಯ ವಿರುದ್ಧ...

ಸಿಇಸಿ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್ ಸಮೀಪ ನಡೆದ ಪ್ರತಿಭಟನೆಯಲ್ಲಿ ಮೂವರು ಮಹಿಳಾ ಪತ್ರಕರ್ತೆಯರಿಗೆ ಲೈಂಗಿಕ ಕಿರುಕುಳ ನೀಡಿದ ಗಂಭೀರ ಆರೋಪ ಎದುರಿಸುತ್ತಿರುವ ದೆಹಲಿ ಪೊಲೀಸ್ ಸಹಾಯಕ ಆಯುಕ್ತ (ಎಸಿಪಿ)...

ಚಿಕ್ಕಬಳ್ಳಾಪುರ ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಫೋಟ: ಶಾಸಕ ಪ್ರದೀಪ್ ಈಶ್ವರ್...

ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರು ತಾವು ರಾಜಕೀಯಕ್ಕೆ ಬರಲು ಮತ್ತು ಟಿಕೆಟ್ ಪಡೆಯಲು ಚಿಂತಾಮಣಿ ಶಾಸಕ ಹಾಗೂ ಮಾಜಿ ಸಚಿವ ಡಾ. ಎಂ.ಸಿ. ಸುಧಾಕರ್ ಅವರೇ ಕಾರಣ ಎಂದು ಬಹಿರಂಗವಾಗಿ ಹಲವಾರು...

ಬೆವರಿನ ಹಣಕ್ಕೆ ಮೋದಿ ಸರ್ಕಾರದ ಕಂಟಕ: ಹೊಸ ಪಿಎಫ್...

ತಮ್ಮದೇ ಬೆವರಿನ ಗಳಿಕೆ, ತುರ್ತು ಬದುಕಿನ ಆಸರೆ ಪಿಎಫ್. ಆದರೆ ಇಂದು ಆ ಹಣವನ್ನು ಪಡೆಯಲಾಗದೆ ಗಾರ್ಮೆಂಟ್ಸ್ ಕಾರ್ಮಿಕರು ಕಣ್ಣೀರು ಹಾಕುವಂತಾಗಿದೆ. ಬಟ್ಟೆ ಕಾರ್ಖಾನೆಗಳ ಶ್ರಮಿಕರ ಬದುಕಿಗೆ ಕೇಂದ್ರದ ಮೋದಿ ಸರ್ಕಾರದ ಹೊಸ...

ಇತ್ತೀಚೆಗಷ್ಟೇ, ಚಿರಾಗ್‌ ತ್ಯಾಗಿ ಅವರು ಬೆಂಗಳೂರಿನಲ್ಲಿ ನಡೆದ ರಾಷ್ಟ್ರೀಯ ಪ್ಯಾರಾ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್‌ನ 400 ಮೀಟರ್ ಓಟದ ಸ್ಪರ್ಧೆಯಲ್ಲಿ ಚಿನ್ನದ ಪದಕ ಗೆದ್ದಿದ್ದರು. ಅವರು ದೇಶದ ಅತ್ಯಂತ ಭರವಸೆಯ ಉದಯೋನ್ಮುಖ ಪ್ಯಾರಾ ಅಥ್ಲೀಟ್‌ಗಳಲ್ಲಿ ಒಬ್ಬರೆನಿಸಿಕೊಂಡಿದ್ದರು.

“ಬುಧವಾರ ಮುಂಜಾನೆ, ತ್ಯಾಗಿ ತಮ್ಮ ಹಾಸ್ಟೆಲ್‌ಗೆ ಹೋಗಲು ಮನೆಯಿಂದ ಹೊರಟಿದ್ದರು. ಆದರೆ, ಮನೆಯಿಂದ ಹೊರಟ ಬಳಿಕ ದೀರ್ಘಕಾಲದವರೆಗೆ ಅವರನ್ನು ಸಂಪರ್ಕಿಸಲು ಸಾಧ್ಯವಾಗಲಿಲ್ಲ” ಎಂದು ಅವರ ಕುಟುಂಬಸ್ಥರು ಹೇಳಿದ್ದಾರೆ. ಆತಂಕಗೊಂಡು ಪೊಲೀಸರಿಗೆ ದೂರು ನೀಡಿದ್ದಾರೆ.

ಶನಿವಾರ ಮಧ್ಯಾಹ್ನ ಗಾಜಿಯಾಬಾದ್‌ನ ಸಾಯಿ ಕುಂಜ್ ಪ್ರದೇಶದಲ್ಲಿ ಅವರ ಮೃತದೇಹ ಪತ್ತೆಯಾಗಿದೆ. ಪ್ರಾಥಮಿಕ ತಪಾಸಣೆಯ ವೇಳೆ ಅವರನ್ನು ಗುಂಡಿಕ್ಕಿ ಕೊಲೆ ಮಾಡಿರುವುದು ಮೇಲ್ನೋಟಕ್ಕೆ ಕಂಡುಬಂದಿದೆ. ಸಿಸಿಟಿವಿ ದೃಶ್ಯಾವಳಿಗಳ ಆಧಾರದ ಮೇಲೆ ಪೊಲೀಸರು ಮತ್ತೊಬ್ಬ ಪ್ಯಾರಾ ಅಥ್ಲೀಟ್ ಆಗಿರುವ ಯಶ್ ಖತಿಕ್‌ನನ್ನು ಬಂಧಿಸಿದ್ದಾರೆ.

ಪೊಲೀಸರ ಪ್ರಕಾರ, ಖತಿಕ್ ಈ ಹಿಂದೆ ತ್ಯಾಗಿ ಅವರೊಂದಿಗೆ ತರಬೇತಿ ಪಡೆದಿದ್ದರು. ಅವರಿಬ್ಬರೂ ‘ಅಂಧರ’ (Blind) ವಿಭಾಗದ ಅಡಿಯಲ್ಲಿ ಅಥ್ಲೆಟಿಕ್ಸ್‌ನಲ್ಲಿ ಪರಸ್ಪರ ಪ್ರತಿಸ್ಪರ್ಧಿಗಳಾಗಿ ಸ್ಪರ್ಧಿಸುತ್ತಿದ್ದರು. ವಿಚಾರಣೆಯ ವೇಳೆ, ಖತಿಕ್‌ನ ದಾಖಲೆಗಳ ಪರಿಶೀಲನೆಗೆ ಸಂಬಂಧಿಸಿದಂತೆ ತ್ಯಾಗಿ ಈ ಹಿಂದೆ ದೂರು ನೀಡಿದ್ದರು, ಇದರಿಂದಾಗಿ ಆತ ಸ್ಪರ್ಧೆಯಿಂದ ಅನರ್ಹಗೊಂಡಿದ್ದರು ಎಂಬ ವಿಷಯ ಬೆಳಕಿಗೆ ಬಂದಿದೆ. ಇದೇ ದ್ವೇಷದ ಹಿನ್ನೆಲೆಯಲ್ಲಿ ಖತಿಕ್ ಪಿಸ್ತೂಲ್‌ನಿಂದ ತನ್ನ ಪ್ರತಿಸ್ಪರ್ಧಿಗೆ ಗುಂಡಿಕ್ಕಿ ಕೊಂದಿದ್ದಾರೆ ಎನ್ನಲಾಗಿದೆ.

ಈ ಲೇಖನ ಓದಿದ್ದೀರಾ?: ಹಸುವನ್ನು ರಾಷ್ಟ್ರೀಯ ಪ್ರಾಣಿ ಎಂದು ಘೋಷಿಸಲ್ಲ, ಗೋಹತ್ಯೆ ನಿಷೇಧಿಸುವ ಪ್ರಸ್ತಾಪವಿಲ್ಲ: ಕೇಂದ್ರ ಸಚಿವ

“ವೃತ್ತಿಪರ ದ್ವೇಷವೇ ಈ ಕೊಲೆಗೆ ಪ್ರಮುಖ ಕಾರಣವಾಗಿದೆ. ಯಶ್ ಖತಿಕ್, ತ್ಯಾಗಿ ಅವರನ್ನು ನಿರ್ಜನ ಪ್ರದೇಶಕ್ಕೆ ಕರೆದೊಯ್ದು, ಹಳೆಯ ದ್ವೇಷವನ್ನು ತೀರಿಸಿಕೊಳ್ಳಲು ಅವರ ಬೆನ್ನಿಗೆ ಶೂಟ್‌ ಮಾಡಿದ್ದಾನೆ” ಎಂದು ಡಿಸಿಪಿ ಧವಳ್ ಜೈಸ್ವಾಲ್ ತಿಳಿಸಿದ್ದಾರೆ.

ಈ ಘಟನೆಯಲ್ಲಿ ಬೇರೆ ಯಾರಾದರೂ ಭಾಗಿಯಾಗಿದ್ದಾರೆಯೇ ಎಂದು ಪತ್ತೆ ಹಚ್ಚಲು ತನಿಖೆ ಮುಂದುವರಿದಿದೆ. ಮರಣೋತ್ತರ ಪರೀಕ್ಷೆಯ ವರದಿ ಬಂದ ನಂತರ ಸಾವಿನ ನಿಖರವಾದ ಕಾರಣ ಮತ್ತು ಕೊಲೆಯ ನಿರ್ದಿಷ್ಟ ವಿಧಾನದ ಬಗ್ಗೆ ಹೆಚ್ಚಿನ ಸ್ಪಷ್ಟತೆ ಸಿಗಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಐಡಿಬಿಐ ಬ್ಯಾಂಕ್ ಮಾರಾಟಕ್ಕೆ ಕೇಂದ್ರ ಸಂಪುಟ ಅಸ್ತು: ₹52,878 ಕೋಟಿಗೆ ಫೇರ್‌ಫ್ಯಾಕ್ಸ್ ತೆಕ್ಕೆಗೆ

ಐಡಿಬಿಐ (IDBI) ಬ್ಯಾಂಕ್‌ನ ‘ಕಾರ್ಯತಂತ್ರದ ಪುನರ್‌ರಚನೆ’ಗೆ (Strategic Restructuring) ಕೇಂದ್ರ ಸಚಿವ...

ಬೀದರ್‌ | ಜಿಪಂ, ತಾಪಂ ಚುನಾವಣೆ: ಸಾಮಾಜಿಕ ಜಾಲತಾಣದಲ್ಲಿ ಆಕಾಂಕ್ಷಿಗಳ ಪ್ರಚಾರ ಜೋರು!

ರಾಜ್ಯದಲ್ಲಿ ಜಿಲ್ಲಾ ಹಾಗೂ ತಾಲ್ಲೂಕು ಪಂಚಾಯಿತಿ ಕ್ಷೇತ್ರವಾರು ಮೀಸಲಾತಿ ಪ್ರಕಟವಾಗುತ್ತಿದ್ದಂತೆ, ಬೀದರ್‌...

ಸಿಜೆಪಿ ನಾಯಕರ ಬಂಧನಕ್ಕೆ ತೀವ್ರ ಖಂಡನೆ: ತಕ್ಷಣ ರಾಂಕಾ, ಸೌರವ್ ಬಿಡುಗಡೆಗೆ ವಿಪಕ್ಷಗಳ ಆಗ್ರಹ

ಏಕಪಕ್ಷೀಯ ನಿರ್ಧಾರ ಕೈಗೊಂಡ ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್...

ಪತಿಯನ್ನು ಕೊಂದು ಕಾಂಕ್ರೀಟ್ ಡ್ರಮ್‌ನಲ್ಲಿ ಹೂತಿಟ್ಟ ಪ್ರಕರಣ: ಪತ್ನಿ, ಪ್ರಿಯಕರನಿಗೆ ಗಲ್ಲು ಶಿಕ್ಷೆ

ಮರ್ಚೆಂಟ್ ನೇವಿ ಅಧಿಕಾರಿ ಸೌರಭ್ ರಜಪೂತ್ ಅವರನ್ನು ಬರ್ಬರವಾಗಿ ಹತ್ಯೆಗೈದು, ಮೃತದೇಹವನ್ನು...