ಉತ್ತರ ಪ್ರದೇಶ | 3.5 ಕೋಟಿ ಹೊಸ ಮತದಾರರನ್ನು ಸೇರಿಸುವ ಬಿಜೆಪಿ ಗುರಿ; ಬಹಿರಂಗ ‘ವೋಟ್‌ ಚೋರಿ’?

Date:

ಉತ್ತರ ಪ್ರದೇಶದಲ್ಲಿ ಚುನಾವಣಾ ಆಯೋಗವು ‘ಎಸ್‌ಐಆರ್‌’ ಪ್ರಕ್ರಿಯೆ ಪೂರ್ಣಗೊಳಿಸಿದೆ. ಕರಡು ಮತಪಟ್ಟಿಯನ್ನು ಬಿಡುಗಡೆ ಮಾಡಿದೆ. ಕರಡು ಪಟ್ಟಿಯಲ್ಲಿ ಬರೋಬ್ಬರಿ 2.89 ಕೋಟಿ, ಒಟ್ಟು ಮತದಾರರಲ್ಲಿ 18.70% ಮತದಾರರನ್ನು ಹೊರಹಾಕಲಾಗಿದೆ. ಇದು, ಬಹುತೇಕ ಪಂಜಾಬ್ ಅಥವಾ ಜಾರ್ಖಂಡ್‌ ರಾಜ್ಯದ ಜನಸಂಖ್ಯೆಯಷ್ಟು ಮತದಾರರು ಉತ್ತರ ಪ್ರದೇಶದಲ್ಲಿ ಮತದಾನದ ಹಕ್ಕು ಕಳೆದುಕೊಂಡಿದ್ದಾರೆ. ಅವರಲ್ಲಿ, ಬಹುಸಂಖ್ಯಾತರು – ಬಡವರು, ದಲಿತರು, ಹಿಂದುಳಿದ ವರ್ಗದವರು ಹಾಗೂ ಅಲ್ಪಸಂಖ್ಯಾತರೇ ಆಗಿದ್ದಾರೆ. ಮುಖ್ಯವಾಗಿ, ವಿಪಕ್ಷಗಳಿಗೆ ಮತ ಚಲಾಯಿಸುವವರೇ ಆಗಿರಲಿದ್ದಾರೆ ಎಂದು ಹೇಳಲಾಗುತ್ತಿದೆ.

- Advertisement -

ಉತ್ತರ ಪ್ರದೇಶದಲ್ಲಿ ಒಟ್ಟು 12.55 ಕೋಟಿ ಮತದಾರರು ಇದ್ದರು. ಆದರೆ, ಈಗ 2.89 ಕೋಟಿ ಮತದಾರರನ್ನು ಆಯೋಗ ಹೊರದೂಡಿದೆ. ಇಡೀ ದೇಶದಲ್ಲೇ ಅತೀ ಹೆಚ್ಚು ಮತದಾರರನ್ನು ಹೊರಹಾಕುವಲ್ಲಿ ಉತ್ತರ ಪ್ರದೇಶ ಅಗ್ರಸ್ಥಾನದಲ್ಲಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ...

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ ಶಿವಮೊಗ್ಗ ನಿರ್ಮಿತಿ ಕೇಂದ್ರ ದಾಖಲೆ ಪ್ರಕಾರ ಕಾಮಗಾರಿ ಸಂಪೂರ್ಣವಾಗಿದೆ ಎಂದು ದಾಖಲೆಗಳಲ್ಲಿ. ಈ ಸಂಬಂಧ ಲಂಚಮುಕ್ತ ಕರ್ನಾಟಕ ಮತ್ತು KRS ಪಕ್ಷದ...

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

ದಿವಾಳಿ ಕಂಪನಿಗಳ ಬಿಡ್‌ನಲ್ಲಿ ಅದಾನಿಯದ್ದೇ ಮೇಲುಗೈ; ಸಾಲಗಾರರಿಗೆ ₹97,700...

ಭಾರತದ ದಿವಾಳಿ ಹಂತದಲ್ಲಿದ್ದ ಕಂಪನಿಗಳ ಬಿಡ್‌ ಪ್ರಕ್ರಿಯೆಗಳಲ್ಲಿ ಅದಾನಿ ಗ್ರೂಪ್‌ನ ಅಸಾಧಾರಣ ಯಶಸ್ಸಿನ ಹಿಂದೆ ರಹಸ್ಯವೊಂದಿದೆ! ಪ್ರತಿ ಐದರಲ್ಲಿ ಮೂರು ಬಿಡ್‌ಗಳನ್ನು ಗೆದ್ದು, ದೇಶದ ಅತಿ ದೊಡ್ಡ ಕಾರ್ಪೊರೇಟ್ ಸ್ವಾಧೀನದಾರನಾಗಿ ಹೊರಹೊಮ್ಮಿರುವ ಅದಾನಿ...

ಒಂದೆಡೆ, ಬೃಹತ್ ಸಂಖ್ಯೆಯ ಮತದಾರ ಮತದಾನದ ಹಕ್ಕನ್ನು ಚುನಾವಣಾ ಆಯೋಗ ಕಸಿದುಕೊಂಡಿದೆ. ಮತ್ತೊಂದೆಡೆ, ಮತಪಟ್ಟಿಯಿಂದ ಹೊರಗಿಡಲಾದ ಸಂಖ್ಯೆಯನ್ನು ಸರಿದೂಗಿಸಲು ರಾಜ್ಯದ ಎಲ್ಲ 1.77 ಮತಗಟ್ಟೆಗಳಲ್ಲಿ ತಲಾ 200 ಮಂದಿಯನ್ನು ಹೊಸದಾಗಿ ಮತಪಟ್ಟಿಗೆ ಸೇರಿಸಲು ಬಿಜೆಪಿ ನಾಯಕರು ತೀರ್ಮಾನಿಸಿದ್ದಾರೆ.

ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮತ್ತು ಬಿಜೆಪಿ ರಾಜ್ಯಾಧ್ಯಕ್ಷ ಪಂಕಜ್ ಚೌಧರಿ ತಮ್ಮ ಎಲ್ಲ ರಾಜ್ಯ ಸಚಿವರು, ಪಕ್ಷದ ಸಂಸದರು, ಶಾಸಕರು, ಎಂಎಲ್‌ಸಿಗಳು, ಪದಾಧಿಕಾರಿಗಳು ಹಾಗೂ ಜಿಲ್ಲಾ ಅಧ್ಯಕ್ಷರೊಂದಿಗೆ ವರ್ಚುವಲ್ ಸಭೆ ನಡೆಸಿದ್ದಾರೆ. ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರಿಗೆ ಮತದಾರರ ಸೇರ್ಪಡೆಯ ಗುರಿ ನೀಡಿದ್ದಾರೆ.

“ಪ್ರತಿ ಬೂತ್‌ನಲ್ಲಿ ಕನಿಷ್ಠ 200 ಮತದಾರರನ್ನು ಹೊಸದಾಗಿ ಪಟ್ಟಿಗೆ ಸೇರಿಸಲು ಬಿಜೆಪಿ ನಾಯಕರು ಸೇರಿಸಿದ್ದಾರೆ. ಎಲ್ಲ 1.77 ಲಕ್ಷ ಮತಗಟ್ಟೆಗಳಲ್ಲಿ ತಲಾ 200ರಂತೆ 3.5 ಕೋಟಿ ರೂ. ಅಧಿಕ ಮತದಾರನ್ನು ನೋಂದಾಯಿಸುವ ಗುರಿ ಬಿಜೆಪಿಗಿದೆ” ಎಂದು ಬಿಜೆಪಿ ನಾಯರೊಬ್ಬರು ಹೇಳಿರುವುದಾಗಿ ‘ಇಂಡಿಯನ್ ಎಕ್ಸ್‌ಪ್ರೆಸ್‌’ ವರದಿ ಮಾಡಿದೆ.

ರಾಜ್ಯದಲ್ಲಿ 15.5 ಕೋಟಿ ಅರ್ಹ ಮತದಾರರು ಇರಲಿದ್ದಾರೆ ಎಂದು ಬಿಜೆಪಿ ಅಂದಾಜಿಸಿದ್ದು, ಅದಕ್ಕೆ ಅನುಗುಣವಾಗಿ ಈ ಗುರಿ ನಿಗದಿ ಮಾಡಿದೆ ಎಂದು ವರದಿ ಹೇಳಿದೆ.

ಚುನಾವಣಾ ಆಯೋಗದ ಟೈಮ್‌ಟೇಬಲ್ ಪ್ರಕಾರ, ಮತದಾನದಿಂದ ವಂಚಿತರಾದವರು ತಮ್ಮ ಆಕ್ಷೇಪಣೆಗಳನ್ನು ಸಲ್ಲಿಸಲು ಮತ್ತು ಹೊಸ ಮತದಾರರು ಸೇರ್ಪಡೆಗೆ ಅರ್ಜಿ ಸಲ್ಲಿಸಲು ಫೆಬ್ರವರಿ 6ರವರೆಗೆ ಅವಕಾಶವಿದೆ. ಈ ಒಂದು ತಿಂಗಳ ಅವಧಿಯೊಳಗೆ 3.5 ಕೋಟಿ ಮತದಾರರನ್ನು ಸೇರಿಸಲು ಬಿಜೆಪಿ ತಯಾರಿ ನಡೆಸುತ್ತಿದೆ.

ಬಿಜೆಪಿಯ ಈ ಹೊಸ ಗುರಿಯು ‘ವೋಟ್‌ ಚೋರಿ’ಯ ಮುಂದುವರಿದ ಭಾಗವೆಂದು ವಿಪಕ್ಷಗಳು ಆರೋಪಿಸುತ್ತಿವೆ. ರಾಜ್ಯದಲ್ಲಿರುವ ಮತದಾರರನ್ನು ಉದ್ದೇಶಪೂರ್ವಕವಾಗಿ ತೆಗೆದುಹಾಕುವುದು ಮತ್ತು ಯಾರನ್ನೋ ಕರೆತಂದು ಸೇರ್ಪಡೆಗೊಳಿಸುವುದು, ಅವರಿಗೆ ಆಮಿಷವೊಡ್ಡಿ ಬಿಜೆಪಿಗೆ ಮತಹಾಕುವಂತೆ ಮಾಡುವುದು ಬಿಜೆಪಿಯ ಕುತಂತ್ರವಾಗಿದೆ ಎಂದು ಹೇಳಲಾಗುತ್ತಿದೆ.

ಮತಪಟ್ಟಿಯಿಂದ ತೆಗೆದುಹಾಕಿರುವವರಲ್ಲಿ ನಿರ್ದಿಷ್ಟವಾಗಿ ಮುಸ್ಲಿಂ, ದಲಿತ ಅಥವಾ ವಿಪಕ್ಷಗಳ ಬೆಂಬಲಿಗರೇ ಹೆಚ್ಚಿದ್ದಾರೆ. ಬಿಜೆಪಿಯ ಸೇರ್ಪಡೆ ಯೋಜನೆಯು ತಮ್ಮ ಬೆಂಬಲಿಗರನ್ನು ಹೆಚ್ಚಿಸುವ ಉದ್ದೇಶವನ್ನು ಹೊಂದಿದೆ. ಇದು ಚುನಾವಣಾ ಫಲಿತಾಂಶದ ಮೇಲೆ ನೇರಪರಿಣಾಮ ಬೀರುತ್ತದೆ ಎಂದು ವಿಶ್ಲೇಷಕರು ಹೇಳುತ್ತಾರೆ.

“ಉತ್ತರ ಪ್ರದೇಶದ ಮೂಲದವರಾಗಿದ್ದು, ಇತರ ರಾಜ್ಯಗಳಿಗೆ ವಲಸೆ ಹೋಗಿರುವವರು ಮತ್ತು ಆ ರಾಜ್ಯಗಳ ಮತಪಟ್ಟಿಯಲ್ಲಿ ನೋಂದಣಿ ಮಾಡಿಕೊಂಡಿರುವವರನ್ನು ಹುಡುಕಿ, ಉತ್ತರ ಪ್ರದೇಶದ ಮತಪಟ್ಟಿಯಲ್ಲಿ ಸೇರಿಸಲಾಗುತ್ತದೆ ಎಂದು ಬಿಜೆಪಿಗರೇ ಹೇಳಿರುವುದಾಗಿ ‘ಇಂಡಿಯನ್‌ ಎಕ್ಸ್‌ಪ್ರೆಸ್‌’ ವರದಿ ಮಾಡಿದೆ.

ಹೀಗೆ ಮಾಡಿದಲ್ಲಿ, ಇತರ ರಾಜ್ಯಗಳಲ್ಲಿರುವ ಜನರಿಗೆ ಬಿಜೆಪಿ ಹಣ-ಆಮಿಷವೊಡ್ಡಿ ಉತ್ತರ ಪ್ರದೇಶಕ್ಕೆ ಕರೆತರಬಹುದು. ತಮ್ಮ ಅಭ್ಯರ್ಥಿಗಳಿಗೆ ಮತ ಚಲಾಯಿಸುವಂತೆ ಪ್ರಭಾವ ಬೀರಬಹುದು. ಇದು, ಒಂದು ರೀತಿಯ ‘ಮತ ಕಳ್ಳತನ’ವೇ ಆಗಿದೆ. ಮಾತ್ರವಲ್ಲದೆ, ಉತ್ತರ ಪ್ರದೇಶದ ವ್ಯಕ್ತಿಯೊಬ್ಬ ಬಿಹಾರದ ಮತಪಟ್ಟಿಯಲ್ಲಿ ನೋಂದಾಯಿಸಿಕೊಂಡಿದ್ದರೆ, ಅವರನ್ನು ಉತ್ತರ ಪ್ರದೇಶಕ್ಕೆ ಕರೆತಂದು, ಇಲ್ಲಿನ ಪಟ್ಟಿಯಲ್ಲಿ ಸೇರಿಸಲಾಗುತ್ತದೆ. ಈಗಾಗಲೇ, ಬಿಹಾರ ಚುನಾವಣೆಯಲ್ಲಿ ಮತ ಚಲಾಯಿಸಿರುವ ಆ ವ್ಯಕ್ತಿ, ಮತ್ತೆ ಉತ್ತರ ಪ್ರದೇಶದಲ್ಲೂ ಮತ ಚಲಾಯಿಸುತ್ತಾರೆ. ಓರ್ವ ವ್ಯಕ್ತಿ ಒಂದು ವರ್ಷದ ಅವಧಿಯಲ್ಲಿ ಎರಡು ರಾಜ್ಯಗಳ ವಿಧಾನಸಭಾ ಚುನಾವಣೆಗಳಲ್ಲಿ ಮತ ಚಲಾಯಿಸುವಂತೆ ಮಾಡುವುದು ಕೂಡ ಬಹಿರಂಗ ‘ಮತಗಳತನ’ವೇ ಆಗಿರಲಿದೆ ಎಂಬ ಅಭಿಪ್ರಾಯಗಳು ಕೇಳಿಬರುತ್ತಿವೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೆಹಲಿ ಪ್ರತಿಭಟನೆ | ವಶಕ್ಕೆ ಪಡೆದ ನೂರಾರು ಪ್ರತಿಭಟನಾಕಾರರನ್ನು ಸ್ಟೇಡಿಯಂಗೆ ದಬ್ಬಿದ ಪೊಲೀಸರು

ದೆಹಲಿಯ ವಿವಿಧ ಪ್ರದೇಶಗಳಿಂದ CJP ನೂರಾರು ಕಾರ್ಯಕರ್ತರು ಸೇರಿದಂತೆ ಹಲವು ನಾಗರಿಕರು...

ಸಿಜೆಪಿ ಪ್ರತಿಭಟನೆ – ಹೆದರಿದ ಮೋದಿ: ದೆಹಲಿಯಲ್ಲಿ ಮೂವರು ಮಾಜಿ ಸಿಎಂ – ಮಮತಾ, ಪಿಣರಾಯಿ, ಕೇಜ್ರಿವಾಲ್ – ಬಂಧನ

ಚುನಾವಣಾ ಆಯುಕ್ತ ಗ್ಯಾನೇಶ್‌ ಕುಮಾರ್ ರಾಜೀನಾಮೆ ಮತ್ತು ಎಸ್‌ಐಆರ್‌ ರದ್ದತಿಗೆ ಆಗ್ರಹಿಸಿ...

ಅ.12ರಂದು ದೆಹಲಿಯಲ್ಲಿ ಇಂಡಿಯಾ ಒಕ್ಕೂಟದ ಪ್ರತಿಭಟನೆ: ಕೆ.ಸಿ. ವೇಣುಗೋಪಾಲ್

ಜನರ ಮತದಾನದ ಹಕ್ಕನ್ನು ರಕ್ಷಿಸುವ ಉದ್ದೇಶದಿಂದ ಇಂಡಿಯಾ ಮೈತ್ರಿಕೂಟವು ಸೋಮವಾರ ನವದೆಹಲಿಯಲ್ಲಿ...

ಸಿಜೆಪಿ ಪ್ರತಿಭಟನೆ – ಹೆದರಿದ ಮೋದಿ: ದೀಪ್ಕೆ ಬಂಧನ ಬಳಿಕ, ಹೋರಾಟಕ್ಕೆ ಅಜಿಂಕ್ಯ ಶಿಂಧೆ ಉಸ್ತುವಾರಿ; ಯಾರು ಈ ಹೊಸ ನಾಯಕ?

ಗ್ಯಾನೇಶ್‌ ಕುಮಾರ್ ವಿರುದ್ಧದ ಪ್ರತಿಭಟನೆ ಆರಂಭಕ್ಕೂ ಮುನ್ನವೇ ಸಿಜೆಪಿ ಸಂಸ್ಥಾಪಕ ಅಭಿಜಿತ್...