ಉತ್ತರ ಪ್ರದೇಶ | ಕ್ರಿಕೆಟ್ ಪಂದ್ಯದ ಬಗ್ಗೆ ವಾಗ್ವಾದ: ಪೊಲೀಸ್ ಅಧಿಕಾರಿಗೆ ಗುಂಡಿಕ್ಕಿ ಕೊಂದ ಸರ್ಕಾರಿ ಶಾಲಾ ಶಿಕ್ಷಕ

Date:

ಕ್ರಿಕೆಟ್ ಪಂದ್ಯದ ಬಗ್ಗೆ ವಿವಾದ ಉಂಟಾಗಿ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕರೊಬ್ಬರು ಪೊಲೀಸ್ ಅಧಿಕಾರಿಗೆ ಗುಂಡಿಕ್ಕಿ ಕೊಂದ ಘಟನೆ ಉತ್ತರ ಪ್ರದೇಶದ ಬಾಗ್‌ಪತ್ ಜಿಲ್ಲೆಯಲ್ಲಿ ಸುನ್ಹೇಡಾ ಗ್ರಾಮದಲ್ಲಿ ನಡೆದಿದೆ.

- Advertisement -

ಆರೋಪಿಯನ್ನು ಹೆಡ್ ಕಾನ್‌ಸ್ಟೆಬಲ್ ಅಜಯ್ ಪನ್ವರ್ ಎಂದು ಗುರುತಿಸಲಾಗಿದೆ. ಅಜಯ್ ಸಹರಾನ್‌ಪುರದಲ್ಲಿ ಪೊಲೀಸ್ ಅಧಿಕಾರಿಯಾಗಿದ್ದರು. ಒಂದು ತಿಂಗಳ ರಜೆಯಲ್ಲಿದ್ದರು. ಸದ್ಯ ಪೊಲೀಸರು ಎನ್‌ಕೌಂಟರ್ ನಡೆಸಿ ಆರೋಪಿ, ಶಾಲಾ ಶಿಕ್ಷಕ ಮೋಹಿತ್‌ನ ಬಂಧನ ಮಾಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಇದನ್ನು ಓದಿದ್ದೀರಾ? ಉತ್ತರ ಪ್ರದೇಶ: ಪಾಕ್ ಮಾಜಿ ಅಧ್ಯಕ್ಷ ಪರ್ವೇಜ್​ ಮುಷರಫ್ ಪೂರ್ವಜರ ಆಸ್ತಿ ಹರಾಜು

ಕೆಲವು ದಿನಗಳ ಹಿಂದೆ ಸ್ಥಳೀಯ ಕ್ರಿಕೆಟ್ ಪಂದ್ಯದ ಸಮಯದಲ್ಲಿ ಅಜಯ್ ಅದೇ ಗ್ರಾಮದ ಸರ್ಕಾರಿ ಶಾಲಾ ಶಿಕ್ಷಕ ಮೋಹಿತ್ ಎಂಬ ಆರೋಪಿಯೊಂದಿಗೆ ವಾಗ್ವಾದ ನಡೆಸಿದ್ದ ಎಂದು ಪೊಲೀಸರು ತಿಳಿಸಿದ್ದಾರೆ. ಸೋಮವಾರ ಸಂಜೆ, ಅಜಯ್ ವಾಕಿಂಗ್‌ಗೆ ಹೋಗಿದ್ದಾಗ ಮೋಹಿತ್ ಜೊತೆ ಮತ್ತೊಮ್ಮೆ ತೀವ್ರ ವಾಗ್ವಾದ ನಡೆದಿದೆ. ಈ ವೇಳೆ ಮೋಹಿತ್ ಗುಂಡು ಹಾರಿಸಿದ್ದು ಅಜಯ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.

ಈ ಕೊಲೆಯ ನಂತರ ಬಾಗ್‌ಪತ್ ಪೊಲೀಸ್ ವರಿಷ್ಠಾಧಿಕಾರಿ ಸೂರಜ್ ರೈ ಆರೋಪಿಯ ಪತ್ತೆಗಾಗಿ ನಾಲ್ಕು ತಂಡಗಳನ್ನು ರಚಿಸಿದರು. ಸುಳಿವು ದೊರೆತ ನಂತರ, ಪೊಲೀಸರು ಮೋಹಿತ್‌ನನ್ನು ಗ್ರಾಮದ ಬಳಿಯ ಮೈದಾನದಲ್ಲಿ ಪತ್ತೆಹಚ್ಚಿದರು. ಈ ವೇಳೆ ಮೋಹಿತ್ ಪೊಲೀಸರ ಮೇಲೆ ಗುಂಡು ಹಾರಿಸಿದ್ದಾನೆ ಎಂದು ಆರೋಪಿಸಲಾಗಿದೆ. ಪೊಲೀಸರೂ ಪ್ರತಿ ದಾಳಿ ನಡೆಸಿದ್ದು, ಮೋಹಿತ್ ಕಾಲಿಗೆ ಗುಂಡೇಟು ತಗುಲಿದೆ. ಬಳಿಕ ಬಂಧಿಸಲಾಗಿದೆ ಎಂದು ವರದಿಯಾಗಿದೆ.

ಗಾಯಗೊಂಡ ಆರೋಪಿಯನ್ನು ಜಿಲ್ಲಾ ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು, ಈ ಪ್ರಕರಣದ ಬಗ್ಗೆ ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ದಿಮಾಗಿ ನಕ್ಸಲ್’ ಟೀಕೆಗಳಿಗೆ ಬಗ್ಗದಿರಿ, ಹೋರಾಟ ಮುಂದುವರಿಸಿ: ಪರಿಸರವಾದಿಗಳಿಗೆ ನಿವೃತ್ತ ಸುಪ್ರೀಂ ನ್ಯಾಯಮೂರ್ತಿ ಓಕಾ ಕರೆ

ಪರಿಸರ ರಕ್ಷಣೆ ಮತ್ತು ಸಾಂವಿಧಾನಿಕ ಹಕ್ಕುಗಳಿಗಾಗಿ ಧ್ವನಿ ಎತ್ತುವ ಹೋರಾಟಗಾರರನ್ನು ‘ದಿಮಾಗಿ...

ಮುಂಬೈ ಪ್ರತಿಭಟನೆ: ಸಿಜೆಪಿ ಆಯೋಜಕರು, 500ಕ್ಕೂ ಹೆಚ್ಚು ಜನರ ವಿರುದ್ಧ ಎಫ್‌ಐಆರ್ ದಾಖಲು

ಮುಂಬೈನ ಪ್ರಸಿದ್ಧ ಶಿವಾಜಿ ಪಾರ್ಕ್‌ನಲ್ಲಿ ಅನುಮತಿಯಿಲ್ಲದೆ ಪ್ರತಿಭಟನೆ ನಡೆಸಿದ ಆರೋಪದ ಮೇಲೆ...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್ ದೀಪ್ಕೆ ಕುರಿತು ನಡೆದಿದೆ ಚರ್ಚೆ!

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ...

ಅಸ್ಸಾಂ ಉಪಚುನಾವಣೆ ಅಖಾಡ: ಸಿಎಂ ಶರ್ಮಾ ಮತ್ತು ಕಾಂಗ್ರೆಸ್ ಸಂಸದರ ನಡುವೆ ‘ಬಿರಿಯಾನಿ vs ರಸ್ಕ್’ ವಾಕ್ಸಮರ!

ಅಸ್ಸಾಂನ ನಗಾಂವ್ ಲೋಕಸಭಾ ಕ್ಷೇತ್ರಕ್ಕೆ ನಡೆಯಲಿರುವ ಉಪಚುನಾವಣೆಯ ಪ್ರಚಾರ ಕಣದಲ್ಲಿ ರಾಜಕೀಯ...