ಉತ್ತರ ಪ್ರದೇಶ | ಅಗ್ನಿ ಅವಘಡ; ಒಂದೇ ಕುಟುಂಬದ ನಾಲ್ಕು ಮಕ್ಕಳು ಸಾವು

Date:

ಉತ್ತರ ಪ್ರದೇಶದ ಪಲ್ಲವಪುರಂ ಪ್ರದೇಶದ ಮನೆಯೊಂದರಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಒಂದೇ ಕುಟುಂಬದ ನಾಲ್ವರು ಮಕ್ಕಳು ಮೃತಪಟ್ಟಿದ್ದಾರೆ. ಘಟನೆಯಲ್ಲಿ ಪೋಷಕರು ಗಾಯಗೊಂಡಿದ್ದಾರೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ.

- Advertisement -

ಮೃತರನ್ನು ಸಾರಿಕಾ (10), ನಿಹಾರಿಕಾ (8), ಸಂಸ್ಕಾರ್ ಅಲಿಯಾಸ್ ಗೋಲು (6) ಮತ್ತು ಕಲು (4) ಎಂದು ಗುರುತಿಸಲಾಗಿದೆ. ಮಕ್ಕಳ ಪೋಷಕರಾದ ಜಾನಿ (41) ಮತ್ತು ಬಬಿತಾ (37) ಗಾಯಗೊಂಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗ್ರಾಮೀಣ ಜಾನಪದ ಪರಂಪರೆಯನ್ನು ಜೀವಂತವಾಗಿರಿಸಿದ ಚಾಮರಾಜನಗರದ ಗೌರಮ್ಮ

ಹಳ್ಳಿಗಳ ಮಣ್ಣಿನ ಸೊಗಡು, ಮಹಿಳೆಯರ ಬದುಕಿನ ಅನುಭವ, ಕುಟುಂಬದ ಸಂಪ್ರದಾಯ ಮತ್ತು ಸಾಂಸ್ಕೃತಿಕ ಪರಂಪರೆಯನ್ನು ಹಾಡಿನ ಮೂಲಕ ಅಭಿವ್ಯಕ್ತಿಸುವ ಸೋಬಾನೆ ಪದಗಳ ಗಾಯನಕ್ಕೆ ದಶಕಗಳಿಂದ ತಮ್ಮ ಬದುಕನ್ನೇ ಮುಡಿಪಾಗಿಟ್ಟಿರುವ ಚಾಮರಾಜನಗರದ ಹಿರಿಯ ಜಾನಪದ...

ನವೆಂಬರ್ 1 | ಕರ್ನಾಟಕ ರಾಜ್ಯೋತ್ಸವ ಮಾತ್ರವಲ್ಲ; ಭಾರತದ...

ನವೆಂಬರ್ 1 ಕನ್ನಡಿಗರ ಹೆಮ್ಮೆಯ ಕರ್ನಾಟಕ ರಾಜ್ಯೋತ್ಸವ. ಇದೇ ದಿನ ದೇಶದ ಎಂಟು ರಾಜ್ಯಗಳು ಮತ್ತು ಐದು ಕೇಂದ್ರಾಡಳಿತ ಪ್ರದೇಶಗಳ ರಚನೆ, ಮರುರಚನೆ ಹಾಗೂ ವಿಮೋಚನೆಯ ಇತಿಹಾಸವೂ ಇದೆ. ಭಾಷಾವಾರು ರಾಜ್ಯಗಳಿಗಾಗಿ ನಡೆದ...

ರಾಜ್ಯೋತ್ಸವ ವಿಶೇಷ | ಕನ್ನಡಕ್ಕೊಂದು ವಿಜ್ಞಾನದ ಓದು

ವಿಜ್ಞಾನ ಓದು ಎಂದರೇನು? ಕನ್ನಡಕ್ಕಾಗಿ ಅಂತಹದೊಂದು ಬೇಕಾ? ಇಂತಹದ್ದೊಂದರ ಚರ್ಚೆ ಇಂದಿನ ಅಗತ್ಯಗಳಲ್ಲೊಂದು. ಏಕೆಂದರೆ ನಮ್ಮಲ್ಲಿ ಓದು ಎನ್ನುವುದು ಬಹುಪಾಲು ಸಾಹಿತ್ಯಕವಾದ ಓದೇ ಆಗಿದೆ. ಸಾಹಿತ್ಯದಲ್ಲಿ ಸಹಜವಾಗಿ ಕಾಣಬರುವ ಒಂದು ಬಗೆಯ ಎಲ್ಲವೂ...

“ಪಲ್ಲವಪುರಂನ ಜನತಾ ಕಾಲೋನಿಯಲ್ಲಿ ಶನಿವಾರ ತಡರಾತ್ರಿ ಘಟನೆ ನಡೆದಿದೆ. ಮೊಬೈಲ್‌ಅನ್ನು ಚಾರ್ಜ್‌ಗೆ ಹಾಕಿದ್ದ ಸಮಯದಲ್ಲಿ ಉಂಟಾದ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಹೊತ್ತಿಹೊಂದಿದೆ” ಎಂದು ಪೊಲೀಸರು ಹೇಳಿದ್ದಾರೆ.

“ಗಂಭೀರವಾಗಿ ಗಾಯಗೊಂಡಿದ್ದ ಎಲ್ಲರನ್ನೂ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆಗೆ ಸ್ಪಂದಿಸದೆ ನಾಲ್ಕು ಮಕ್ಕಳು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಬಬಿತಾ ಅವರ ಸ್ಥಿತಿ ಗಂಭೀರವಾಗಿದೆ. ಜಾನಿ ಅವರು ಚೇತರಿಸಿಕೊಳ್ಳುತ್ತಿದ್ದಾರೆ” ಎಂದು ಪೊಲೀಸರು ತಿಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ನ್ಯಾಯಾಂಗದಲ್ಲಿ ಮಹಿಳಾ ನೇಮಕಾತಿ | ಕರ್ನಾಟಕದಿಂದ ಸಾಮಾಜಿಕ ಪರಿವರ್ತನೆ: ಸಿಜೆಐ ಚಂದ್ರಚೂಡ್‌

“ಮೊಬೈಲ್ ಫೋನ್ ಚಾರ್ಜ್ ಮಾಡುವಾಗ ಶಾರ್ಟ್‌ ಸರ್ಕ್ಯೂಟ್‌ನಿಂದ ಬೆಂಕಿ ಕಾಣಿಸಿಕೊಂಡಿದೆ. ಬಳಿಕ, ಬೆಡ್ ಶೀಟ್‌ಗೆ ಬೆಂಕಿ ಹೊತ್ತಿಕೊಂಡಿತೆಂದು ಜಾನಿ ತಿಳಿಸಿದ್ದಾರೆ. ತನಿಖೆ ನಡೆಯುತ್ತಿದೆ” ಎಂದು ಪೊಲೀಸರು ತಿಳಿಸಿದ್ದಾರೆ.

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಟಿಕೆಟ್ ಕೈತಪ್ಪಿದ ಬೆನ್ನಲ್ಲೇ ಪಂಜಾಬ್‌ನಲ್ಲಿ ಆಪ್‌ಗೆ ಇಬ್ಬರು ಶಾಸಕರ ರಾಜೀನಾಮೆ

2027ರ ಪಂಜಾಬ್ ವಿಧಾನಸಭಾ ಚುನಾವಣೆಗೆ ಮುನ್ನವೇ ಆಡಳಿತಾರೂಢ ಆಮ್ ಆದ್ಮಿ ಪಕ್ಷಕ್ಕೆ...

ಪ್ರತಿ ಅಂಗಡಿಯನ್ನೂ BJP ಬಲವಂತವಾಗಿ ಮುಚ್ಚಿಸಿದೆ, ಕನ್ನಾಟ್ ಪ್ಲೇಸ್ ವ್ಯಾಪಾರಿಗಳ ನಷ್ಟಕ್ಕೆ ಬಿಜೆಪಿಯೇ ಕಾರಣ: ರಾಹುಲ್ ಗಾಂಧಿ ಕಿಡಿ

ದೆಹಲಿಯ ಕನ್ನಾಟ್ ಪ್ಲೇಸ್‌ನ ಪ್ರತಿಯೊಂದು ಅಂಗಡಿಯನ್ನೂ ಬಿಜೆಪಿ ಬಲವಂತವಾಗಿ ಮುಚ್ಚಿಸಲಾಗಿದೆ. ಸ್ಥಳೀಯ...

‘ಮತ ಕಳ್ಳರೆ ಅಧಿಕಾರ ಬಿಟ್ಟು ತೊಲಗಿ’: SIR ವಿರುದ್ಧ ಸಾಮಾಜಿಕ ಕಾರ್ಯಕರ್ತೆ ಅಂಜಲಿ ಭಾರದ್ವಾಜ್ ಆಕ್ರೋಶ

ಪ್ರಜಾಪ್ರಭುತ್ವದ ಜೀವಾಳವಾಗಿರುವ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದ್ದು, "ಮತ ಕಳ್ಳರೆ ಅಧಿಕಾರ ಬಿಟ್ಟು...