ಉತ್ತರಪ್ರದೇಶ | ಹೋಳಿ ಆಚರಣೆ ವೇಳೆ ಮುಸ್ಲಿಂ ಮಹಿಳೆಯರಿಗೆ ಕಿರುಕುಳ; ನಾಲ್ವರ ಬಂಧನ

Date:

ಮಾರ್ಚ್‌ 25ರಂದು ಹೋಳಿ ಹಬ್ಬ ನಡೆಯುತ್ತಿದ್ದು, ಎಲ್ಲೆಡೆ ಜನರು ಬಣ್ಣ ಎರಚಿ ಸಂಭ್ರಮಿಸುತ್ತಿದ್ದಾರೆ. ಆದರೆ, ಉತ್ತರ ಪ್ರದೇಶದ ಬಿಜ್ನೋರ್‌ನಲ್ಲಿ ಹೋಳಿ ಸಂಭ್ರಮಾಚರಣೆ ವೇಳೆ ಗುಂಪೊಂದು ಮುಸ್ಲಿಂ ಯುವಕ ಮತ್ತು ಇಬ್ಬರು ಮುಸ್ಲಿಂ ಮಹಿಳೆಯರಿಗೆ ಕಿರುಕುಳ ನೀಡಿರುವ ಘಟನೆ ನಡೆದಿದೆ.

ಘಟನೆಗೆ ಸಂಬಂಧಿಸಿದಂತೆ, ಬಿಜ್ನೋರ್‌ ಪೊಲೀಸರು ಮೂವರು ಅಪ್ರಾಪ್ತರು ಸೇರಿದಂತೆ ನಾಲ್ವರನ್ನು ಬಂಧಿಸಿದ್ದಾರೆ. ಅಲ್ಲದೆ, ‘ಹೋಳಿ ಆಚರಣೆ ವೇಳೆ ಯಾರಿಗೂ ಕಿರುಕುಳ ನೀಡಬೇಡಿ’ ಎಂದು ಬಿಜ್ನೋರ್ ಪೊಲೀಸರು ಜನರಲ್ಲಿ ಮನವಿ ಮಾಡಿದ್ದಾರೆ.

ಮುಸ್ಲಿಂ ಸಮುದಾಯದ ಮೂವರು ಬೈಕ್‌ನಲ್ಲಿ ತೆರಳುತ್ತಿದ್ದಾಗ, ಹೋಳಿ ಆಡುತ್ತಿದ್ದ ಯುವಕರ ಗುಂಪೊಂದು ಅವರನ್ನು ಸುತ್ತಿವರಿದಿದೆ. ಬಳಿಕ, ಮಹಿಳೆಯರ ಮೇಲೆ ಪೈಪ್‌ ಹಾಗೂ ಬಕೆಟ್‌ಗಳ ಮೂಲಕ ನೀರು ಎರಚಿದ್ದಾರೆ. ಬಲವಂತವಾಗಿ ಮೂವರ ಮೇಲೆ ಬಣ್ಣ ಎರಚಿದ್ದಾರೆ. ಇದಕ್ಕೆ ಮಹಿಳೆಯರು ಪ್ರತಿರೋಧ ವ್ಯಕ್ತಪಡಿಸದ್ದಾರೆ. ಆದರೂ ಆ ಗುಂಪು ಕಿರುಕುಳ ನೀಡುವುದನ್ನು ಮುಂದುವರೆಸಿದೆ. ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ವಿಡಿಯೋ ವೈರಲ್ ಆದ ಕೂಡಲೇ ಬಿಜ್ನೋರ್ ಪೊಲೀಸ್ ಮುಖ್ಯಸ್ಥ ನೀರಜ್ ಕುಮಾರ್ ಜದೌನ್ ಸ್ಥಳೀಯ ಪೊಲೀಸರಿಗೆ ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದಾರೆ.

ಧಂಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿರುವುದು ತನಿಖೆಯಿಂದ ತಿಳಿದುಬಂದಿದೆ. ಪೊಲೀಸರು ವೈರಲ್ ವಿಡಿಯೋವನ್ನು ಸ್ಕ್ಯಾನ್ ಮಾಡಿ ಅದರಲ್ಲಿ ಭಾಗಿಯಾದವರನ್ನು ಗುರುತಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಇಬ್ಬರು ಹೈಕೋರ್ಟ್ ನ್ಯಾಯಮೂರ್ತಿಗಳಿಗೆ ಬೆದರಿಕೆ ಕರೆ: ದೂರು ದಾಖಲು

ದುರ್ವರ್ತನೆ, ಸ್ವಯಂಪ್ರೇರಣೆಯಿಂದ ಮಹಿಳೆಗೆ ನೋವುಂಟು ಮಾಡುವುದು ಹಾಗೂ ಹಲ್ಲೆ ಸೇರಿದಂತೆ ಹಲವು ಐಪಿಸಿ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಪ್ರಕರಣ ಸಂಬಂಧ ಪೊಲೀಸರು ಪ್ರಮುಖ ಆರೋಪಿ ಅನಿರುದ್ಧ್ ಹಾಗೂ ಮೂವರು ಅಪ್ರಾಪ್ತರನ್ನು ಬಂಧಿಸಿದ್ದಾರೆ.

ಬಿಜ್ನೋರ್ ಹಿರಿಯ ಪೊಲೀಸ್ ಅಧಿಕಾರಿ ನೀರಜ್ ಜಾದೌನ್ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದು, “ಹೋಳಿ ಸಮಯದಲ್ಲಿ ಜನರು ಯಾರಿಗೂ ಕಿರುಕುಳ ನೀಡಬಾರದು. ದಯವಿಟ್ಟು ಬಲವಂತವಾಗಿ ಜನರಿಗೆ ಬಣ್ಣ ಹಚ್ಚಬೇಡಿ. ಯಾರೇ ಕಾನೂನನ್ನು ಉಲ್ಲಂಘಿಸಿದರೂ ಪೊಲೀಸರು ಕ್ರಮ ಕೈಗೊಳ್ಳುತ್ತಾರೆ” ಎಂದು ತಿಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೇಜ್ರಿವಾಲ್ ಜಾಮೀನು ವಿಸ್ತರಣೆ ಅರ್ಜಿ ತುರ್ತು ವಿಚಾರಣೆಗೆ ಸುಪ್ರೀಂ ನಕಾರ

ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಜಾಮೀನು ಅರ್ಜಿ ವಿಸ್ತರಣೆ ಅರ್ಜಿಯ...

ಅಂತ್ಯಗೊಳ್ಳುತ್ತಿದೆ ಮೋದಿ-ಶಾ ‘ಬ್ರಾಂಡ್’ ರಾಜಕಾರಣ; ಅದಕ್ಕೆ ಮಹಾರಾಷ್ಟ್ರವೇ ಸಾಕ್ಷಿ

ನರೇಂದ್ರ ಮೋದಿ ಮತ್ತು ಅಮಿತ್ ಶಾ – ಇಬ್ಬರಿಗೂ ದಿನನಿತ್ಯ ಒಂದಲ್ಲೊಂದು...

ಅಸ್ಸಾಂ| ಮನೆಯ ಬಾತ್‌ರೂಮ್‌ನಲ್ಲಿತ್ತು 35 ಹಾವುಗಳು; ವಿಡಿಯೋ ವೈರಲ್

ಅಸ್ಸಾಂನಲ್ಲಿ ನಾಗಾಂವ್ ಜಿಲ್ಲೆಯಲ್ಲಿ ಹೊಸದಾಗಿ ನಿರ್ಮಿಸಲಾಗುತ್ತಿರುವ ಮನೆಯೊಂದರ ಬಾತ್‌ರೂಮ್‌ನಲ್ಲಿ ಬರೋಬ್ಬರಿ 35...

ಜೂನ್‌ನಲ್ಲಿ ದೇಶಾದ್ಯಂತ ಬ್ಯಾಂಕುಗಳಿಗೆ ಒಟ್ಟು 13 ದಿನ ರಜೆ

ಈ ವರ್ಷದ ಆರಂಭದಲ್ಲಿ ಭಾರತೀಯ ರಿಸರ್ವ್‌ ಬ್ಯಾಂಕ್‌ (ಆರ್‌ಬಿಐ) ಬ್ಯಾಂಕ್ ರಜಾದಿನಗಳ...