ಉತ್ತರ ಪ್ರದೇಶ | ದಲಿತ ಬಾಲಕಿ ಮೇಲೆ ಭೀಕರ ಸಾಮೂಹಿಕ ಅತ್ಯಾಚಾರ; ಸಂತ್ರಸ್ತೆ ಸಾವು

Date:

ಉತ್ತರ ಪ್ರದೇಶದ ಫಿರೋಜಾಬಾದ್ ಜಿಲ್ಲೆಯಲ್ಲಿ ಭೀಕರ ಸಾಮೂಹಿಕ ಅತ್ಯಾಚಾರ ಮತ್ತು ದೈಹಿಕ ಹಲ್ಲೆಗೆ ಒಳಗಾಗಿದ್ದ 17 ವರ್ಷದ ದಲಿತ ಬಾಲಕಿ ಸಾವನ್ನಪ್ಪಿದ್ದಾರೆ. ಆಸ್ಪತ್ರೆಯಲ್ಲಿ ಆರು ದಿನಗಳ ಕಾಲ ಸಾವು-ಬದುಕಿನ ನಡುವೆ ಹೋರಾಡಿದ ಆಕೆ ಚಿಕಿತ್ಸೆ ಫಲಿಸದೆ ಕೊನೆಯುಸಿರೆಳೆದಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಲಕಿಯ ಪರಿಚಿತ ಎನ್ನಲಾದ ಯುವಕ ಮತ್ತು ಆತನ ಸಹೋದರ ಸೇರಿದಂತೆ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

- Advertisement -

ಅಕ್ಟೋಬರ್ 31ರ ಸಂಜೆ ತನ್ನ ಮನೆಯಿಂದ ಶೌಚಕ್ಕಾಗಿ ಹೊರಹೋದ ಸಂತ್ರಸ್ತ ಬಾಲಕಿ ರಾತ್ರಿಯಾದರೂ ಮನೆಗೆ ಮರಳಿರಲಿಲ್ಲ. ಆಕೆಯ ಕುಟುಂಬಸ್ಥರು ತಮ್ಮ ಸಂಬಂಧಿಗಳು ಮತ್ತು ಗೆಳತಿಯರ ಮನೆಗಳಲ್ಲಿ ಹುಡುಕಾಟ ನಡೆಸಿದರೂ ಆಕೆಯ ಸುಳಿವು ಸಿಕ್ಕಿರಲಿಲ್ಲ. ಮಾರನೇ ದಿನ (ನವೆಂಬರ್ 1), ಮನೆಯಿಂದ ಸುಮಾರು ಒಂದು ಕಿಲೋಮೀಟರ್ ದೂರದಲ್ಲಿದ್ದ ಹೊಲವೊಂದರಲ್ಲಿ ಬಾಲಕಿ ತೀವ್ರ ಗಾಯಗೊಂಡು ಪ್ರಜ್ಞಾಹೀನ ಸ್ಥಿತಿಯಲ್ಲಿ ಬಿದ್ದಿರುವುದನ್ನು ಸ್ಥಳೀಯರೊಬ್ಬರು ಗಮನಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಳಕಿನ ಹಬ್ಬಕ್ಕೆ ಮಾಲಿನ್ಯದ ಕತ್ತಲು; ದೆಹಲಿ ಜನ ಪಾಠ...

ವರ್ಷಕ್ಕೊಮ್ಮೆ ಬರುವ ದೀಪಾವಳಿ ಹಬ್ಬವನ್ನು ಕೇವಲ ದೀಪಗಳ ಹಬ್ಬವೆಂದು ನೋಡದೆ, ಬೆಳಕಿನ ಸಂಭ್ರಮದ ಪ್ರತೀಕವಾಗಿಯೂ ಪರಿಗಣಿಸಲಾಗಿದೆ. ಆದರೆ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಈ ಹಬ್ಬ ಪ್ರತಿವರ್ಷವೂ 'ಉಸಿರುಗಟ್ಟಿಸುವ ನರಕಯಾತನೆ'ಯಾಗಿ ಬದಲಾಗುತ್ತಿರುವುದು ಕಟು ಸತ್ಯ....

NCPಯನ್ನು ಒಡೆದಿದ್ದ ಬಿಜೆಪಿಯೇ ಅದನ್ನು ಕೂಡಿಸಲು ಹೊರಟಿದೆ; ರಾಜಕೀಯ...

ವಿರೋಧ ಪಕ್ಷಗಳ ಸಾಲಿನಲ್ಲಿದ್ದರೂ ಪ್ರಧಾನಿ ನರೇಂದ್ರ ಮೋದಿ ಮತ್ತು ಶರದ್ ಪವಾರ್ ನಡುವಿನ ಸೌಹಾರ್ದ ಸಂಬಂಧ ಮುಂದುವರಿದಿದೆ. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಪವಾರ್ ಅವರ ಆರೋಗ್ಯ ವಿಚಾರಿಸಿದ ಪ್ರಧಾನಿ ಮೋದಿ ಮತ್ತು ದೆಹಲಿಯಲ್ಲಿ...

ಇಸ್ರೇಲ್ ಚುಕ್ಕಾಣಿ ಹಿಡಿಯಲು ಮುಂದಾದ ‘ಗಾಡಿ ಐಸೆನ್‌ಕೋಟ್’; ಗಾಜಾ...

ಇಡೀ ಜಗತ್ತು ಕಾತರದಿಂದ ಕೇಳುತ್ತಿರುವ ಅತಿದೊಡ್ಡ ಪ್ರಶ್ನೆಯೆಂದರೆ, ಐಸೆನ್‌ಕೋಟ್‌ ಆಡಳಿತದಲ್ಲಿ ಗಾಜಾ ಬಿಕ್ಕಟ್ಟು ಶಾಶ್ವತವಾಗಿ ಪರಿಹಾರವಾಗುತ್ತದೆಯೇ ಎಂಬುದು. ಆದರೆ, ಇದು ವಾಸ್ತವಕ್ಕೆ ತೀರಾ ದೂರವಾದ ನಿರೀಕ್ಷೆಯಾಗಿದೆ. ಐಸೆನ್‌ಕೋಟ್‌ ಅವರು ವಾಸ್ತವಿಕವಾದಿ ನಾಯಕನೇ ಹೊರತು,...

ಬಾಲಕಿಯ ಕುತ್ತಿಗೆ ಮತ್ತು ದೇಹದ ಮೇಲೆ ತೀವ್ರ ಗಾಯದ ಗುರುತುಗಳಿದ್ದವು. ತಕ್ಷಣ ಆಕೆಯನ್ನು ಸ್ಥಳೀಯ ಆಸ್ಪತ್ರೆಗೆ ಸೇರಿಸಲಾಯಿತಾದರೂ, ಪರಿಸ್ಥಿತಿ ಚಿಂತಾಜನಕವಾಗಿದ್ದರಿಂದ ವೈದ್ಯರ ಸಲಹೆಯಂತೆ ಆಗ್ರಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ನವೆಂಬರ್ 6 ರಂದು ಬಾಲಕಿ ಮೃತಪಟ್ಟಿದ್ದಾಳೆ.

ಪ್ರಕರಣದ ತನಿಖೆ ಕೈಗೆತ್ತಿಕೊಂಡ ಪೊಲೀಸರು ಕಾಲ್ ಡಿಟೇಲ್ಸ್ (CDR) ಮತ್ತು ತಾಂತ್ರಿಕ ಕಣ್ಗಾವಲಿನ ಆಧಾರದ ಮೇಲೆ ಆರೋಪಿಗಳನ್ನು ಗುರುತಿಸಿದ್ದು, ಅವರ ಬಂಧನಕ್ಕೆ ನವೆಂಬರ್ 2ರಂದು ಕಾರ್ಯಾಚರಣೆ ನಡೆಸಿದ್ದಾರೆ. ಈ ವೇಳೆ, ಪ್ರಮುಖ ಆರೋಪಿ 21 ವರ್ಷದ ಋಷಿ ಯಾದವ್ ಮತ್ತು ಆತನ ಸಹೋದರ 28 ವರ್ಷದ ಜಗತ್ ಯಾದವ್ ಕಾಲಿಗೆ ಗುಂಡು ಹಾರಿಸಿ, ಇಬ್ಬರನ್ನೂ ಬಂಧಿಸಿದ್ದಾರೆ. ಮರುದಿನ ಮೂರನೇ ಆರೋಪಿ 24 ವರ್ಷದ ಆಶಿಕ್ ಅಲಿಯಾಸ್ ಶಿವಂಶು ಎಂಬಾತನನ್ನು ಬಂಧಿಸಿದ್ದಾರೆ. ಬಂಧಿತ ಮೂವರೂ ಹಿಂದುಳಿದ ವರ್ಗಕ್ಕೆ (OBC) ಸೇರಿದವರಾಗಿದ್ದು, ಟ್ರ್ಯಾಕ್ಟರ್ ಚಾಲನೆ ಮತ್ತು ಸಣ್ಣಪುಟ್ಟ ಕೆಲಸಗಳನ್ನು ಮಾಡಿಕೊಂಡು ಜೀವನ ನಡೆಸುತ್ತಿದ್ದರು ಎಂದು ಹೇಳಲಾಗಿದೆ.

ಈ ಲೇಖನ ಓದಿದ್ದೀರಾ?: ಟ್ರಂಪ್‌ ತಿರಸ್ಕರಿಸಿದ ಯುವಜನರು; 2029ರಲ್ಲಿ ಭಾರತದ ಯುವ ಮತದಾರರ ರಾಜಕೀಯ ನಿಲುವು ಯಾವ ದಿಕ್ಕಿಗೆ?

ಪೊಲೀಸರ ವಿಚಾರಣೆ ವೇಳೆ, ಪ್ರಮುಖ ಆರೋಪಿ ಋಷಿ ಯಾದವ್ ತನಗೆ ಬಾಲಕಿಯೊಂದಿಗೆ ಕಳೆದ ಆರು ತಿಂಗಳಿನಿಂದ ಪರಿಚಯವಿತ್ತು ಎಂದು ಒಪ್ಪಿಕೊಂಡಿದ್ದಾನೆ. ಅಕ್ಟೋಬರ್‌ 31ರ ರಾತ್ರಿ ಆಕೆ ಮನೆಯಿಂದ ಹೊರಬಂದಾಗ, ಹೊಲ ಕರೆದೊಯ್ದು, ಆಕೆಯ ಮೇಲೆ ಅತ್ಯಾಚಾರ ಎಸಗಿರುವುದಾಗಿ ಹೇಳಿದ್ದಾನೆ. ಬಾಲಕಿ ಪ್ರತಿರೋಧ ಒಡ್ಡಿದಾಗ, ಆಕೆಯ ಮೇಲೆ ಭೀಕರವಾಗಿ ಹಲ್ಲೆ ನಡೆಸಿ, ಕುತ್ತಿಗೆ ಹಿಸುಕಿ ಕೊಲ್ಲಲು ಯತ್ನಿಸಿ, ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಆಕೆಯನ್ನು ಬಿಟ್ಟು ಪರಾರಿಯಾಗಿದ್ದಾಗಿ ಒಪ್ಪಿಕೊಂಡಿದ್ದಾನೆ.

ಆದಾಗ್ಯೂ, ಆರೋಪಿಯ ಭಾಗಶಃ ಹೇಳಿಕೆಯನ್ನು ಬಾಲಕಿಯ ಸಹೋದರ ನಿರಾಕರಿಸಿದ್ದಾರೆ. “ಆರೋಪಿಗಳು ಕರೆದ ಕಾರಣಕ್ಕೆ ಆಕೆ ಹೋಗಿರಲಿಲ್ಲ. ಆಕೆ, ಶೌಚಕ್ಕಾಗಿ ಹೊರಹೋದಾಗ, ಆಕೆಯನ್ನು ಬಲವಂತವಾಗಿ ಎಳೆದೊಯ್ದು ಕೃತ್ಯ ಎಸಗಲಾಗಿದೆ” ಎಂದು ದೂರಿದ್ದಾರೆ.

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಇಸ್ರೇಲ್ ಚುಕ್ಕಾಣಿ ಹಿಡಿಯಲು ಮುಂದಾದ ‘ಗಾಡಿ ಐಸೆನ್‌ಕೋಟ್’; ಗಾಜಾ ಬಿಕ್ಕಟ್ಟಿಗೆ ಸಿಗಲಿದೆಯೇ ಶಾಶ್ವತ ಮುಕ್ತಿ?

ಇಡೀ ಜಗತ್ತು ಕಾತರದಿಂದ ಕೇಳುತ್ತಿರುವ ಅತಿದೊಡ್ಡ ಪ್ರಶ್ನೆಯೆಂದರೆ, ಐಸೆನ್‌ಕೋಟ್‌ ಆಡಳಿತದಲ್ಲಿ ಗಾಜಾ...

ವಿಜಯಪುರ | ಸ್ಥಳೀಯ ಸಂಸ್ಥೆಗಳ ಚುನಾವಣೆ ಗೊಂದಲಕ್ಕೆ ತೆರೆ ಎಳೆಯಿರಿ: ಗ್ರಾಮ ಸ್ವರಾಜ್ಯ ಕರ್ನಾಟಕ ಆಗ್ರಹ

ಜಿಲ್ಲಾ, ತಾಲೂಕು ಹಾಗೂ ಗ್ರಾಮ ಪಂಚಾಯಿತಿ ಚುನಾವಣೆಗಳ ದಿನಾಂಕ ಮತ್ತು ಮತದಾರರ...

‘ಮೋದಿಯ ಸುಳ್ಳುಗಳನ್ನು ಯೋಧರು ನಂಬಲಿಲ್ಲ’: ‘ದಿಮಾಗಿ ನಕ್ಸಲರು’ ಹೇಳಿಕೆಗೆ ರಾಹುಲ್ ತಿರುಗೇಟು

ಪ್ರಧಾನಿ ನರೇಂದ್ರ ಮೋದಿ ಅವರ ‘ದಿಮಾಗಿ ನಕ್ಸಲರು’ ಹೇಳಿಕೆಗೆ ಲೋಕಸಭೆಯ ವಿರೋಧ...

ದಕ್ಷಿಣ ಕನ್ನಡ | ಅಂಗನವಾಡಿ ನೌಕರರ ಬಾಕಿ ವೇತನಕ್ಕೆ ಆಗ್ರಹ; ಹೋರಾಟದ ಎಚ್ಚರಿಕೆ

ಅಂಗನವಾಡಿ ನೌಕರರ ದ.ಕ. ಜಿಲ್ಲಾ ಸಮಿತಿ ಸಭೆಯು ಬಿಸಿರೋಡ್ ರಿಕ್ಷಾ ಭವನದಲ್ಲಿ...