15 ವರ್ಷದ ಬಾಲಕನ ಮೇಲೆ ಆತನ ಸ್ನೇಹಿತರು ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಉತ್ತರ ಪ್ರದೇಶದ ದೇವರಿಯಾ ಪ್ರದೇಶದಲ್ಲಿ ನಡೆದಿದೆ.
ದೇವರಿಯಾದ ರುದ್ರಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಬಾಲಕನ ಮೇಲೆ ಇಬ್ಬರು ಕಾಮುಕ ಆರೋಪಿಗಳು ಅಸ್ವಾಭಾವಿಕವಾಗಿ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಆರೋಪಿಗಳಲ್ಲಿ ಓರ್ವ ಅಪ್ರಾಪ್ತನೆಂದು ಪೊಲೀಸರು ತಿಳಿಸಿದ್ದಾರೆ.
ಸಂತ್ರಸ್ತ ಬಾಲಕ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿಗಳನ್ನು ಬಂಧಿಸಲು ಶೋಧ ನಡೆಸುತ್ತಿದ್ದಾರೆ ಎಂದು ಪೊಲೀಸ್ ವರಿಷ್ಠಾಧಿಕಾರಿ ವಿಕ್ರಾಂತ್ ವೀರ್ ಅವರು ಹೇಳಿದ್ದಾರೆ.
ಆರೋಪಿಗಳು ಕೆಲಸ ಕೊಡಿಸುವುದಾಗಿ ಕರೆದೊಯ್ದು, ಅತ್ಯಾಚಾರ ಎಗಸಿದ್ದಾರೆ. ಅಸ್ವಾಭಾವಿಕ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ. ಬಾಲಕನನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ ಎಂದು ವರದಿಯಾಗಿದೆ.