ಉತ್ತರ ಪ್ರದೇಶ | ಅತ್ಯಾಚಾರಕ್ಕೊಳಗಾದ ಬಾಲಕಿಯನ್ನು ತನ್ನ ಮಕ್ಕಳೊಂದಿಗೆ ಸೇರಿ ಕೊಂದ ತಾಯಿ!

Date:

ಅತ್ಯಾಚಾರಕ್ಕೊಳಗಾದ 17 ವರ್ಷದ ಬಾಲಕಿಯನ್ನು ತಾಯಿಯೇ ತನ್ನ ಇಬ್ಬರು ಪುತ್ರರೊಂದಿಗೆ ಸೇರಿ ಕೊಲೆ ಮಾಡಿರುವ ಘಟನೆ ಉತ್ತರ ಪ್ರದೇಶದ ಗಾಜಿಯಾಬಾದ್‌ನಲ್ಲಿ ನಡೆದಿದೆ. ಪೊಲೀಸರು ಮಹಿಳೆ ಮತ್ತು ಆಕೆಯ ಇಬ್ಬರು ಪುತ್ರರನ್ನು ಬಂಧಿಸಿದ್ದಾರೆ.

- Advertisement -

ಅತ್ಯಾಚಾರ ಪ್ರಕರಣದಲ್ಲಿ ತಮ್ಮ ಮಗಳು ಸಂತ್ರಸ್ತೆಯಾಗಿರುವುದು ತಮ್ಮ ಕುಟುಂಬಕ್ಕೆ ಕಳಂಕವಾಗಲಿದೆ, ಕುಟುಂಬಕ್ಕೆ ಅಪಖ್ಯಾತಿ ತರಬಹುದು ಎಂಬ ಭಯದಿಂದ ಮೂವರು ಸೇರಿ ಕೊಲೆ ಮಾಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕೋಲಾರ ಕಾಂಗ್ರೆಸ್‌ಗೆ ಹೊಸ ಸಾರಥಿ: ಬಣ ರಾಜಕೀಯಕ್ಕೆ ಬೀಳುವುದೇ ತೆರೆ?

ಕೋಲಾರದ ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಮೈಕೆಲ್ ನಾರಾಯಣಸ್ವಾಮಿ ಆಯ್ಕೆಯಾಗಿರುವುದು ಕಾಂಗ್ರೆಸ್ ಪಕ್ಷಕ್ಕೆ ಒಂದು ಪ್ರಮುಖ ಘಟ್ಟವಾಗಿದೆ. ಸಾರ್ವಜನಿಕ ವಲಯದಲ್ಲಿ 'ರಮೇಶ್ ಕುಮಾರ್ ಬಣ'ದ ಬೆಂಬಲದೊಂದಿಗೆ ಬಂದಿದ್ದಾರೆಂಬ ಚರ್ಚೆಗಳಿದ್ದರೂ, ಎಲ್ಲರನ್ನೂ ಒಗ್ಗೂಡಿಸಿ ಬೂತ್ ಮಟ್ಟದಿಂದ...

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ...

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ, ವಿದ್ಯಾರ್ಥಿ ಎಲ್ಲಿ ಕುತೂಹಲದಿಂದ ಇರುತ್ತಾನೋ, ಅಲ್ಲಿ ಅಂಧಭಕ್ತ ಭ್ರಮೆಯಲ್ಲಿ, ತನ್ನದೇ ಲೋಕದಲ್ಲಿ ವಾಸಿಸುತ್ತಾನೆ. ವಿದ್ಯಾರ್ಥಿ ಎಲ್ಲಿ ಪ್ರೀತಿಯಿಂದ ಮಾತನಾಡುತ್ತಾನೋ, ಗೌರವದಿಂದ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ:...

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು ಕಾಮಗಾರಿಗಳು ನೆಲಮಟ್ಟದಲ್ಲಿ ಆರಂಭವಾಗಬೇಕು. ಕೆಲಸ ವಿಳಂಬವಾದರೆ ಜನರಲ್ಲಿ ನಿರಾಸೆ ಮೂಡುವುದು ಖಂಡಿತ. ಈ ರಾಜಕೀಯ ಲಾಭವು ಚುನಾವಣೆಯಲ್ಲಿ ಮತಗಳಾಗಿ ಬದಲಾಗಬೇಕಾದರೆ,...

20 ವರ್ಷದ ರಿಂಕು ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ್ದ. ಫೆಬ್ರವರಿಯಲ್ಲಿ ಆತನ ವಿರುದ್ಧ ಗಾಜಿಯಾಬಾದ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ತಿಂಗಳ ಆರಂಭದಲ್ಲಿ ಜಾಮೀನಿನ ಮೇಲೆ ಹೊರಬಂದಿದ್ದ.

ಸೆಪ್ಟೆಂಬರ್ 18ರಂದು ಬಾಲಕಿ ತನ್ನ ಸಹೋದರ ಮತ್ತು ತಾಯಿಯೊಂದಿಗೆ ಬೈಕ್‌ನಲ್ಲಿ ಹೋಗುತ್ತಿದ್ದಾಗ ಗುಂಡಿಕ್ಕಿ ಕೊಲೆ ಮಾಡಲಾಗಿದೆ. ಜಾಮೀನಿನ ಮೇಲೆ ಹೊರ ಬಂದ ಅತ್ಯಾಚಾರ ಆರೋಪಿ ರಿಂಕು ತನ್ನ ಮತ್ತೊಬ್ಬ ಸಹಚರನೊಂದಿಗೆ ಸೇಡು ತೀರಿಸಲು ಈ ಕೊಲೆಯನ್ನು ಮಾಡಿದ್ದಾನೆ ಎಂದು ತಾಯಿ ಮತ್ತು ಕುಟುಂಬ ಆರೋಪಿಸಿತ್ತು.

ಇದನ್ನು ಓದಿದ್ದೀರಾ? ಅತ್ಯಾಚಾರ ಪ್ರಕರಣ | ಜಾಮೀನಿನ ಮೇಲೆ ಹೊರಬಂದು ಸಂತ್ರಸ್ತೆಯನ್ನು ಗುಂಡಿಕ್ಕಿ ಕೊಂದ ಆರೋಪಿ

ಈ ಹಿನ್ನೆಲೆಯಲ್ಲಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ರಿಂಕು ಮತ್ತು ಆತನ ಸಹಚರನನ್ನು ವಶಕ್ಕೆ ಪಡೆದಿದ್ದಾರೆ. ಆದರೆ ತನಿಖೆಯ ವೇಳೆ ಕುಟುಂಬಕ್ಕೆ ಅಪಖ್ಯಾತಿ ಬರಬಹುದೆಂಬ ಭಯದಿಂದ ಬಾಲಕಿಯ ತಾಯಿ ಮತ್ತು ಆಕೆಯ ಇಬ್ಬರು ಸಹೋದರರು ಆಕೆಯನ್ನು ಕೊಲ್ಲುವ ಸಂಚು ರೂಪಿಸಿದ್ದರು ಎಂಬುದು ಪೊಲೀಸರಿಗೆ ತಿಳಿದುಬಂದಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಕೃಷ್ಣಕುಮಾರ್ ತಿಳಿಸಿದ್ದರು.

ಸಂತ್ರಸ್ತೆಯ ಸಹೋದರ ವಿನೀತ್ ತನ್ನ ತಾಯಿಯ ಚಿಕ್ಕಪ್ಪ ಮಹಾವೀರ್ ಜೊತೆಗೂಡಿ ತನ್ನ ಇನ್ನೊಬ್ಬ ಸಹೋದರ ನೀರಜ್ ಮತ್ತು ತಾಯಿ ಬ್ರಿಜ್ವತಿಯೊಂದಿಗೆ ಬೈಕ್‌ನಲ್ಲಿ ಬಂದ ತನ್ನ ಸಹೋದರಿಯನ್ನು ಗುಂಡಿಕ್ಕಿ ಕೊಂದಿದ್ದಾನೆ. ತಾಯಿ ಇದಕ್ಕೆ ಸಹಕಾರ ನೀಡಿದ್ದಾರೆ ಎಂದು ಕುಮಾರ್ ಹೇಳಿದ್ದಾರೆ.

ನೀರಜ್, ವಿನೀತ್ ಮತ್ತು ಬ್ರಿಜ್ವತಿಯನ್ನು ಪೊಲೀಸರು ಬಂಧಿಸಿದ್ದು, ಮಹಾವೀರ್ ಪ್ರಸ್ತುತ ತಲೆಮರೆಸಿಕೊಂಡಿದ್ದಾನೆ. ಅಪರಾಧಕ್ಕೆ ಬಳಸಿದ ಬೈಕ್, ದೇಸಿ ಪಿಸ್ತೂಲ್ ಅನ್ನು ವಶಪಡಿಸಿಕೊಳ್ಳಲಾಗಿದೆ. ಅಧಿಕ ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರ MLC ಚುನಾವಣೆ: 5 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಿಸಿದ ಪ್ರಶಾಂತ್ ಕಿಶೋರ್ ಜನ ಸುರಾಜ್ ಪಾರ್ಟಿ

ಬಿಹಾರ ವಿಧಾನ ಪರಿಷತ್ತಿನ (ಎಂಎಲ್‌ಸಿ) ಮುಂಬರುವ ಶಿಕ್ಷಕರ ಮತ್ತು ಪದವೀಧರ ಕ್ಷೇತ್ರಗಳ...

ರಾಜಸ್ಥಾನದ ಬುಡಕಟ್ಟು ಶಾಲೆಗಳ ದುಸ್ಥಿತಿ: ‘ಖಾಲಿ ಜಾಗ, ಕುಡಿಯುವ ನೀರಿಲ್ಲ’ – ಸಿಜೆಪಿ ಆಕ್ರೋಶ

ರಾಜಸ್ಥಾನದ ಬುಡಕಟ್ಟು (ಆದಿವಾಸಿ) ಪ್ರದೇಶಗಳಲ್ಲಿರುವ ಸರ್ಕಾರಿ ಶಾಲೆಗಳ ಶೋಚನೀಯ ಸ್ಥಿತಿಯನ್ನು ಖಂಡಿಸಿ...

ಜಾತಿ ಕಿರುಕುಳ | ಐಐಟಿ-ಬಾಂಬೆ ವಿದ್ಯಾರ್ಥಿ ಆತ್ಮಹತ್ಯೆ ಪ್ರಕರಣ: ಪ್ರೊಫೆಸರ್ ವಿರುದ್ಧ ಎಫ್‌ಐಆರ್ ದಾಖಲು

ಮುಂಬೈನ ಐಐಟಿ ಕ್ಯಾಂಪಸ್‌ನಲ್ಲಿ ಎರಡನೇ ವರ್ಷದ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆಗೆ...