ಉತ್ತರ ಪ್ರದೇಶ | ಧಾರ್ಮಿಕ ಕಾರ್ಯಕ್ರಮದ ವೇಳೆ ವೇದಿಕೆ ಕುಸಿತ; 7 ಮಂದಿ ದುರ್ಮರಣ

Date:

ಜೈನ ಸಮುದಾಯದ ಧಾರ್ಮಿಕ ಕಾರ್ಯಕ್ರಮ ನಡೆಯುತ್ತಿದ್ದ ವೇಳೆ ವೇದಿಕೆ ಕುಸಿದು ಬಿದ್ದಿರುವ ಘಟನೆ ಉತ್ತರ ಪ್ರದೇಶದ ಬಾಗ್‌ಪತ್‌ನಲ್ಲಿ ನಡೆದಿದೆ. ದುರ್ಘಟನೆಯಲ್ಲಿ 7 ಮಂದಿ ಸಾವನ್ನಪ್ಪಿದ್ದು, 40ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.

- Advertisement -

ಜೈನ ಧರ್ಮದ ಮೊದಲ ತೀರ್ಥಂಕರ ಭಗವಾನ್ ಆದಿನಾಥ ಅವರ ಸ್ಮರಣೆಗಾಗಿ ‘ನಿರ್ವಾಣ ಲಡ್ಡು ಪರ್ವ್’ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಕಾರ್ಯಕ್ರಮದಲ್ಲಿ ತೀರ್ಥಂಕರ ಆದಿನಾಥರಿಗೆ ಲಡ್ಡು ನೈವೇದ್ಯ ಮಾಡಲು ಬಿದಿರಿನಿಂದ 65 ಅಡಿಯುಳ್ಳ ತಾತ್ಕಾಲಿಕ ವೇದಿಕೆ ನಿರ್ಮಾಣ ಮಾಡಲಾಗಿತ್ತು ಎಂದು ತಿಳಿದುಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಹಲವಾರು ಮಂದಿ ವೇದಿಕೆಯ ಬಳಿಯಿದ್ದ ಮರದ ಮೆಟ್ಟಿಲುಗಳ ಮೇಲೆ ಹತ್ತಿದ್ದರಿಂದಾಗಿ, ವೇದಿಕೆ ಕುಸಿದುಬಿದ್ದಿದೆ ಎಂದು ವರದಿಯಾಗಿದೆ.

ಸ್ಥಳಕ್ಕೆ ಧಾವಿಸಿದ ಪೊಲೀಸ್‌ ಅದಿಕಾರಿಗಳು ವೇದಿಕೆಯ ಅವಶೇಷಗಳಡಿ ಸಿಲುಕಿದ್ದವರನ್ನು ರಕ್ಷಣೆ ಮಾಡಿದ್ದಾರೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದ್ದಾರೆ.

ಘಟನೆ ಬಗ್ಗೆ ಪ್ರತಿಕ್ರಿಯಿಸಿರುವ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, “ಗಾಯಾಳುಗಳಿಗೆ ತ್ವರಿತ ನೆರವು ನೀಡುವಂತೆ ಸ್ಥಳೀಯ ಅಧಿಕಾರಿಗಳಿಗೆ ಸೂಚಿಸಿದ್ದೇನೆ. ಅಪಘಾತದಲ್ಲಿ ಗಾಯಗೊಂಡವರು ಶೀಘ್ರವೇ ಗುಣಮುಖರಾಗಲಿ ಎಂದು ಹಾರೈಸುತ್ತೇನೆ” ಎಂದಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಸ್ಸಾಂ ಉಪಚುನಾವಣೆ ಅಖಾಡ: ಸಿಎಂ ಶರ್ಮಾ ಮತ್ತು ಕಾಂಗ್ರೆಸ್ ಸಂಸದರ ನಡುವೆ ‘ಬಿರಿಯಾನಿ vs ರಸ್ಕ್’ ವಾಕ್ಸಮರ!

ಅಸ್ಸಾಂನ ನಗಾಂವ್ ಲೋಕಸಭಾ ಕ್ಷೇತ್ರಕ್ಕೆ ನಡೆಯಲಿರುವ ಉಪಚುನಾವಣೆಯ ಪ್ರಚಾರ ಕಣದಲ್ಲಿ ರಾಜಕೀಯ...

ಶಾಲಾ ಸಮಸ್ಯೆಗಳ ಕುರಿತು ಗ್ರಾಮ ಸಭೆಯಲ್ಲಿ ಧ್ವನಿ ಎತ್ತಿದ ವಿದ್ಯಾರ್ಥಿಗಳು; ಅಧಿಕಾರಿಗಳ ಮೆಚ್ಚುಗೆ-ಭರವಸೆ

ಸರ್ಕಾರಿ ಶಾಲಾ ವಿದ್ಯಾರ್ಥಿಗಳು ‘ವಿಶೇಷ ಗ್ರಾಮ ಸಭೆ’ಗಳಲ್ಲಿ ಪಾಲ್ಗೊಂಡು, ಪಂಚಾಯತ್ ಪ್ರತಿನಿಧಿಗಳು...

ಉತ್ತರಾಖಂಡ SIR ಅಂತಿಮ ಮತದಾರರ ಪಟ್ಟಿ ಪ್ರಕಟ: ಆದರೆ ಮುಗಿದಿಲ್ಲ ನೋಂದಣಿ ಪ್ರಕ್ರಿಯೆ

ಉತ್ತರಾಖಂಡ ರಾಜ್ಯದಲ್ಲಿ ನಡೆದ 'ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ' (ಎಸ್‌ಐಆರ್)...