ಉತ್ತರ ಪ್ರದೇಶ | ಮರಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಇಬ್ಬರು ಬಾಲಕಿಯರು ಪತ್ತೆ; ಸಾಮೂಹಿಕ ಅತ್ಯಾಚಾರದ ಆರೋಪ

Date:

ಉತ್ತರ ಪ್ರದೇಶದ ಕಾನ್ಪುರ ಜಿಲ್ಲೆಯಲ್ಲಿ ಇಬ್ಬರು ಅಪ್ರಾಪ್ತ ಬಾಲಕಿಯರು ಮರಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಅವರ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿದೆ ಎಂದು ಮೃತ ಬಾಲಕಿಯರ ಕುಟುಂಬ ಆರೋಪಿಸಿದೆ.

- Advertisement -

ಕಾನ್ಲುರ ಜಿಲ್ಲೆಯ ಘಟಂಪುರ ಪ್ರದೇಶದ ಹಳ್ಳಿಯೊಂದರ ಇಟ್ಟಿಗೆ ಗೂಡಿನಲ್ಲಿ ಅವರು ಕೆಲಸ ಮಾಡುತ್ತಿದ್ದರು. ಆ ಇಟ್ಟಿಗೆ ಗೂಡಿನ ಬಳಿಯ ಹೊಲದಲ್ಲಿ ಮರಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಇಬ್ಬರು ಬಾಲಕಿಯ ಮೃತದೇಹಗಳು ಪತ್ತೆಯಾಗಿವೆ. ಅವರ ಮೇಲೆ ಕೆಲ ದಿನಗಳ ಹಿಂದೆ ಅತ್ಯಾಚಾರ ಎಸಗಲಾಗಿತ್ತು ಎಂದು ಕುಂಬಸ್ಥರು ಆರೋಪಿಸಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಭದ್ರಾವತಿ | ಕಲುಷಿತ ಕುಡಿಯುವ ನೀರು ಸರಬರಾಜು; ರೋಗಭೀತಿಯಲ್ಲಿ...

ಭದ್ರಾವತಿ ತಾಲೂಕಿನ ಶಿವರಾಮನಗರ ಗ್ರಾಮದಲ್ಲಿ ನಗರಸಭೆ ಕಲುಷಿತ ಕುಡಿಯುವ ನೀರನ್ನು ಸರಬರಾಜು ಮಾಡುತ್ತಿರುವುದು ಗ್ರಾಮಸ್ಥರಲ್ಲಿ ತೀವ್ರ ಅಸಮಾಧಾನಕ್ಕೆ ಕಾರಣವಾಗಿದೆ. ಈ ವಿಷಯದಲ್ಲಿ ನಗರಸಭೆ ಆಡಳಿತ ಮತ್ತು ಆರೋಗ್ಯ ಇಲಾಖೆ ಕಣ್ಮುಚ್ಚಿ ಕುಳಿತಿರುವುದಾಗಿ ಸ್ಥಳೀಯರು...

15 ವರ್ಷಗಳಿಂದ ಪ್ಲಾಸ್ಟಿಕ್‌ ದೂರವಿಟ್ಟ ಗ್ರಾಮ; ನಮ್ಮೂರಿಗೂ ಇದು...

ಒಂದು ಗ್ರಾಮವೆಂದರೆ, ಇಂದಿಗೂ ಮಣ್ಣಿನ ರಸ್ತೆಗಳು, ಕಚ್ಚಾ ಮನೆಗಳು, ಹೊಲ-ಗದ್ದೆಗಳು ಮಾತ್ರ ನೆನಪಾಗುತ್ತವೆ. ಅಲ್ಲಿನ ಜನರ ಬದುಕಿನ ಶಿಸ್ತು, ಸಾರ್ವಜನಿಕ ಸ್ಥಳಗಳ ಮೇಲಿನ ಅವರ ಹೊಣೆಗಾರಿಕೆ ಮತ್ತು ಮುಂದಿನ ಪೀಳಿಗೆಯ ಬಗ್ಗೆ ಇರುವ...

ʼಹಿಂದೆ ಸರಿಯುವ ಮಾತೇ ಇಲ್ಲʼ; ದೆಹಲಿ ಬೀದಿಗಳಲ್ಲಿ ಅಬ್ಬರಿಸುತ್ತಿರುವ...

ಚುನಾವಣಾ ಆಯೋಗದ (ECI) ವಿಶೇಷ ತೀವ್ರ ಪರಿಷ್ಕರಣೆ (SIR) ವಿರುದ್ಧ ಮತ್ತು CEC ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ INDIA ಬ್ಲಾಕ್ ಸಂಸತ್ ಸದಸ್ಯರು ದೆಹಲಿ ಬೀದಿಗಳಲ್ಲಿ ಬೃಹತ್‌ ಪ್ರತಿಭಟನೆ ನಡೆಸುತ್ತಿದ್ದಾರೆ. ಯುವಕರು...

ಕೆಲವು ದಿನಗಳ ಹಿಂದೆ ಅಪ್ರಾಪ್ತ ಬಾಲಕಿಯರ ಮೇಲೆ ಇಟ್ಟಿಗೆ ಭಟ್ಟಿಯ ಗುತ್ತಿಗೆದಾರ ರಾಮರೂಪ್ ನಿಶಾದ್ (48), ಅವರ ಮಗ ರಾಜು (18) ಮತ್ತು ಸೋದರಳಿಯ ಸಂಜಯ್ (19) ಅತ್ಯಾಚಾರ ಎಸಗಿದ್ದಾರೆ ಎಂದು ಆರೋಫಿಸಲಾಗಿದೆ. ಈ ಮೂವರು ಆರೋಪಿಗಳನ್ನೂ ಬಂಧಿಸಲಾಗಿದೆ ಎಂದು ಎಸಿಪಿ (ಕಾನೂನು ಮತ್ತು ಸುವ್ಯವಸ್ಥೆ) ಹರೀಶ್ ಚಂದ್ರು ಹೇಳಿದ್ದಾರೆ.

“ಕುಟುಂಬಗಳ ಪ್ರಕಾರ, ಆರೋಪಿಗಳು ಕೃತ್ಯವನ್ನ ವಿಡಿಯೋ ಮಾಡಿಕೊಂಡಿದ್ದರು. ಆ ವಿಡಿಯೋ ಇಟ್ಟುಕೊಂಡು ಹುಡುಗಿಯರನ್ನು ಬ್ಲ್ಯಾಕ್‌ಮೇಲ್ ಮಾಡುತ್ತಿದ್ದರು. ಇದರಿಂದಾಗಿ, ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ” ಎಂದು ಎಂದು ಚಂದ್ರು ಹೇಳಿದ್ದಾರೆ.

“ಸಂತ್ರಸ್ತೆಯರು ಬುಧವಾರ ನಾಪತ್ತೆಯಾಗಿದ್ದರು. ಸಂಜೆ ವೇಳೆಗೆ, ಇಟ್ಟಿಗೆ ಗೂಡಿನಿಂದ 400 ಮೀಟರ್ ದೂರದಲ್ಲಿ ಅವರ ಮೃತದೇಹಗಳು ಪತ್ತೆಯಾಗಿವೆ” ಎಂದು ಎಸಿಪಿ ತಿಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ?: ಸಂದೇಶ್‌ಖಾಲಿ ಪ್ರಕರಣ | ಟಿಎಂಸಿ ವಿರುದ್ಧ ಮತ ಚಲಾಯಿಸಿದ್ದಕ್ಕೆ ಆದಿವಾಸಿಗಳಿಗೆ ಚಿತ್ರಹಿಂಸೆ; ಎನ್‌ಸಿಎಸ್‌ಟಿ ವಿವರ

“ನಾವು ಆರೋಪಿಗಳ ಮೊಬೈಲ್‌ಗಳಿಂದ ಹುಡುಗಿಯರ ವೀಡಿಯೊಗಳು ಮತ್ತು ಫೋಟೋಗಳನ್ನು ವಶಪಡಿಸಿಕೊಂಡಿದ್ದೇವೆ. ಅದನ್ನು ವಿಧಿವಿಜ್ಞಾನ ಪರೀಕ್ಷೆಗೆ ಕಳುಹಿಸಲಾಗುವುದು” ಎಂದು ಅವರು ಹೇಳಿದ್ದಾರೆ.

ಆರೋಪಿಗಳ ವಿರುದ್ಧ ಐಪಿಸಿ ಸೆಕ್ಷನ್ 376ಡಿ (ಗ್ಯಾಂಗ್ ಅತ್ಯಾಚಾರ), 306 (ಆತ್ಮಹತ್ಯೆಗೆ ಪ್ರಚೋದನೆ) ಮತ್ತು ಪೋಕ್ಸೋ ಆಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ ಎಂದು ಚಂದ್ರು ತಿಳಿಸಿದ್ದಾರೆ.

ಸಾವಿಗೆ ನಿಖರವಾದ ಕಾರಣ ಕಂಡುಹಿಡಿಯಲು ಮತ್ತು ಸಾಮೂಹಿಕ ಅತ್ಯಾಚಾರದ ಆರೋಪಗಳನ್ನು ಪರಿಶೀಲಿಸಲು ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ಅವರು ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಎಐ ದುರ್ಬಳಕೆ; ಅಶ್ಲೀಲ ವಿಡಿಯೋ, ಫೋಟೋ ವೈರಲ್: ದೆಹಲಿ ಹೈಕೋರ್ಟ್ ಮೆಟ್ಟಿಲೇರಿದ ಕಂಗನಾ

ಸಾಮಾಜಿಕ ಜಾಲತಾಣಗಳಲ್ಲಿ ಎಐ ತಂತ್ರಜ್ಞಾನ ಬಳಸಿ ರಚಿಸಲಾದ ಅಶ್ಲೀಲ ಮತ್ತು ನಕಲಿ...

ಬಡತನದ ಸರಪಳಿ ಮುರಿಯಲು ಸೀರೆಯಲ್ಲೇ ಓಟ: ಹೋಮ್ ಗಾರ್ಡ್ ಉದ್ಯೋಗಾಕಾಂಕ್ಷಿಯ ಸಾಹಸಕ್ಕೆ ಪ್ರಶಂಸೆ

ಹೋಮ್ ಗಾರ್ಡ್ (ಗೃಹ ರಕ್ಷಕ ಸಿಬ್ಬಂದಿ) ನೇಮಕಾತಿಯ ದೈಹಿಕ ದಾರ್ಢ್ಯ ಪರೀಕ್ಷೆಯ...

CEC ನೇಮಕ ಬಲು ದೊಡ್ಡ ತಲೆನೋವು ಎಂದಿದ್ದ ಸಂವಿಧಾನ ರಚನಾ ಸಭೆ; ಯಾಕೆ ಗೊತ್ತೇ?

ಚುನಾವಣಾ ಆಯುಕ್ತರ ನೇಮಕಾತಿ ಮತ್ತು ಸ್ವಾಯತ್ತತೆಯ ವಿವಾದ ಇಂದು ನಿನ್ನೆಯದಲ್ಲ. ಇದು...